ವಿಮೋಚನಕಾಂಡ 22:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಒಬ್ಬನು ಹೊತ್ತಿಸಿದ ಬೆಂಕಿ ಆಕಸ್ಮಾತ್ತಾಗಿ ಮುಳ್ಳಿನ ಗಿಡಗಳಿಗೆ ಬೆಂಕಿ ಹತ್ತಿಕೊಂಡು ಮತ್ತೊಬ್ಬನ ದವಸದ ರಾಶಿಗಳಾಗಲಿ, ಬೆಳೆಯಾಗಲಿ, ಹೊಲವಾಗಲಿ ಸುಟ್ಟು ಹೋದರೆ ಬೆಂಕಿ ಹೊತ್ತಿಸಿದವನು ಅದಕ್ಕೆ ಈಡುಕೊಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 “ಒಬ್ಬನು ಹೊತ್ತಿಸಿದ ಬೆಂಕಿ ಆಕಸ್ಮಿಕವಾಗಿ ಮುಳ್ಳಿನ ಗಿಡಗಳಿಗೆ ಹತ್ತಿ ಅಲ್ಲಿಂದ ಮತ್ತೊಬ್ಬನ ದವಸದ ರಾಶಿಗಳಾಗಲಿ, ಬೆಳೆಯಾಗಲಿ, ಹೊಲವಾಗಲಿ ಸುಟ್ಟುಹೋದರೆ, ಬೆಂಕಿ ಹೊತ್ತಿಸಿದವನು ಈಡುಕೊಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಒಬ್ಬನು ಹೊತ್ತಿಸಿದ ಬೆಂಕಿ ಅಕಸ್ಮಾತ್ತಾಗಿ ಮುಳ್ಳಿನ ಗಿಡಗಳಿಗೆ ಹತ್ತಿದ್ದರಿಂದ ಮತ್ತೊಬ್ಬನ ದವಸದ ರಾಶಿಗಳಾಗಲಿ ಬೆಳೆಯಾಗಲಿ ಹೊಲವಾಗಲಿ ಸುಟ್ಟುಹೋದರೆ, ಬೆಂಕಿಹೊತ್ತಿಸಿದವನು ಈಡುಕೊಡಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 “ಒಬ್ಬನು ತನ್ನ ಹೊಲದಲ್ಲಿರುವ ಮುಳ್ಳಿನ ಪೊದೆಗಳನ್ನು ಸುಟ್ಟುಹಾಕಲು ಬೆಂಕಿಯನ್ನು ಹೊತ್ತಿಸಬಹುದು. ಆದರೆ ಬೆಂಕಿಯು ಹೆಚ್ಚಾಗಿ ಅವನ ನೆರೆಯವನ ಬೆಳೆಯನ್ನಾಗಲಿ ಬೆಳೆಯುತ್ತಿರುವ ಧಾನ್ಯಗಳನ್ನಾಗಲಿ ಸುಟ್ಟುಹಾಕಿದರೆ ಬೆಂಕಿಯನ್ನು ಹೊತ್ತಿಸಿದವನು ತಾನು ಸುಟ್ಟುಹಾಕಿದ ವಸ್ತುಗಳಿಗೆ ಪ್ರತಿಯಾಗಿ ಈಡುಕೊಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 “ಬೆಂಕಿಹತ್ತಿ ಅದು ಮುಳ್ಳಿನ ಕೊಂಪೆಗೆ ತಗುಲಿ, ಸಿವುಡುಗಳ ಬಣವೆಗಳನ್ನಾಗಲಿ, ನಿಂತ ಬೆಳೆಯನ್ನಾಗಲಿ, ಹೊಲವನ್ನಾಗಲಿ ಸುಟ್ಟುಬಿಟ್ಟರೆ, ಆ ಬೆಂಕಿಯನ್ನು ಹಚ್ಚಿದವನು ಖಂಡಿತವಾಗಿ ಈಡು ಕೊಡಬೇಕು. ಅಧ್ಯಾಯವನ್ನು ನೋಡಿ |