ವಿಮೋಚನಕಾಂಡ 22:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಒಬ್ಬನು ಹಣವನ್ನಾಗಲಿ, ಒಡವೆಗಳನ್ನಾಗಲಿ ಕಾಪಾಡುವುದಕ್ಕೆ ಮತ್ತೊಬ್ಬನಿಗೆ ಒಪ್ಪಿಸಿದಾಗ ಅದು ಆ ಮನುಷ್ಯನ ಮನೆಯಲ್ಲಿ ಕಳ್ಳತನವಾಗಿ, ಕಳ್ಳನು ಸಿಕ್ಕಿಕೊಂಡರೆ ಎರಡರಷ್ಟು ದಂಡವನ್ನು ಕೊಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 “ಒಬ್ಬನು ಹಣವನ್ನಾಗಲಿ, ಒಡವೆಗಳನ್ನಾಗಲಿ ಸುರಕ್ಷಿತವಾಗಿಡಲು ಮತ್ತೊಬ್ಬನಿಗೆ ಒಪ್ಪಿಸಿದಾಗ ಅದು ಆ ವ್ಯಕ್ತಿಯ ಮನೆಯಲ್ಲಿ ಕಳುವಾಗಿ ಹೋದರೆ ಕಳ್ಳನು ಸಿಕ್ಕಿಕೊಂಡರೆ, ಎರಡರಷ್ಟು ದಂಡ ಕೊಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಒಬ್ಬನು ಹಣವನ್ನಾದರೂ ಒಡವೆಗಳನ್ನಾದರೂ ಕಾಪಾಡುವದಕ್ಕೆ ಮತ್ತೊಬ್ಬನಿಗೆ ಒಪ್ಪಿಸಿದಾಗ ಅದು ಆ ಮನುಷ್ಯನ ಮನೆಯಲ್ಲಿ ಕಳವಾಗಿ ಹೋದರೆ ಕಳ್ಳನು ಸಿಕ್ಕುವ ಪಕ್ಷಕ್ಕೆ ಎರಡರಷ್ಟು ಕೊಡಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 “ಒಬ್ಬನು ತನ್ನ ನೆರೆಯವನ ಮನೆಯಲ್ಲಿ ಸ್ವಲ್ಪ ಹಣವನ್ನಾಗಲಿ ವಸ್ತುಗಳನ್ನಾಗಲಿ ಇಟ್ಟಿದ್ದು, ಆ ಹಣವಾಗಲಿ ವಸ್ತುಗಳಾಗಲಿ ಕಳುವಾದರೆ ಕಳ್ಳನನ್ನು ಕಂಡುಹಿಡಿಯಲು ನೀವು ಪ್ರಯತ್ನಿಸಬೇಕು. ನೀವು ಕಳ್ಳನನ್ನು ಕಂಡುಹಿಡಿದರೆ, ಆಗ ಅವನು ತಾನು ಕದ್ದವಸ್ತುಗಳ ಬೆಲೆಯ ಎರಡರಷ್ಟನ್ನು ಕೊಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 “ಒಬ್ಬನು ತನ್ನ ನೆರೆಯವನಿಗೆ ತನ್ನ ಹಣವನ್ನಾಗಲಿ, ವಸ್ತುಗಳನ್ನಾಗಲಿ ಇಟ್ಟುಕೊಳ್ಳುವುದಕ್ಕೆ ಕೊಟ್ಟಾಗ, ಅದು ಅವನ ಮನೆಯಿಂದ ಕಳ್ಳತನವಾದರೆ, ಕಳ್ಳತನ ಮಾಡಿದವನು ಸಿಕ್ಕಿದರೆ, ಅವನು ಎರಡರಷ್ಟು ಕೊಡಬೇಕು. ಅಧ್ಯಾಯವನ್ನು ನೋಡಿ |