ವಿಮೋಚನಕಾಂಡ 23:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಆದರೆ ಏಳನೆಯ ವರ್ಷದಲ್ಲಿ ಆ ಭೂಮಿಯನ್ನು ಉಳದೆ ಬೀಳುಬಿಡಬೇಕು. ನಿಮ್ಮ ದೇಶದ ಬಡವರು ಅದರಲ್ಲಿ ಬೆಳೆಯುವುದನ್ನು ತಿನ್ನಲಿ. ಮಿಕ್ಕದ್ದನ್ನು ಕಾಡುಮೃಗಗಳು ಮೇಯಲಿ. ನಿಮ್ಮ ದ್ರಾಕ್ಷಿತೋಟಗಳ ಮತ್ತು ಎಣ್ಣೇ ಮರಗಳ ತೋಪುಗಳ ವಿಷಯದಲ್ಲಿಯೂ ಇದೇ ರೀತಿಯಲ್ಲಿ ಮಾಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 “ಆದರೆ ಏಳನೆಯ ವರ್ಷ ಆ ಭೂಮಿಯನ್ನು ಬೀಳುಬಿಡಿ. ನಿಮ್ಮ ನಾಡಿನ ಬಡವರು ಅದರಲ್ಲಿ ತಾನಾಗಿ ಬೆಳೆಯುವುದನ್ನು ತಿನ್ನಲಿ. ಮಿಕ್ಕದ್ದನ್ನು ಕಾಡುಮೃಗಗಳು ಮೇಯಲಿ. ನಿಮ್ಮ ದ್ರಾಕ್ಷಿತೋಟಗಳಲ್ಲಿ ಹಾಗೂ ಎಣ್ಣೇ ಮರ ತೋಪುಗಳ ವಿಷಯದಲ್ಲೂ ಅದೇ ರೀತಿಯಾಗಿ ಮಾಡಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ನಿಮ್ಮ ದೇಶದ ಬಡವರು ಅದರಲ್ಲಿ ಬೆಳೆಯುವದನ್ನು ತಿನ್ನಲಿ; ವಿುಕ್ಕದ್ದನ್ನು ಕಾಡುಮೃಗಗಳು ಮೇಯಲಿ. ನಿಮ್ಮ ದ್ರಾಕ್ಷೇತೋಟಗಳ ವಿಷಯದಲ್ಲಿಯೂ ಎಣ್ಣೇ ಮರಗಳ ತೋಪುಗಳ ವಿಷಯದಲ್ಲಿಯೂ ಅದೇ ರೀತಿಯಲ್ಲಿ ಮಾಡಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಆದರೆ ಏಳನೆಯ ವರ್ಷದಲ್ಲಿ ನಿಮ್ಮ ಭೂಮಿಯನ್ನು ಬೀಳುಬಿಡಿರಿ; ಬೀಜಬಿತ್ತಬೇಡಿರಿ. ಏಳನೆಯ ವರ್ಷ ನೀವು ಏನನ್ನೂ ಬೆಳೆಸಬಾರದು. ನಿಮ್ಮ ಭೂಮಿಯಲ್ಲಿ ಏನಾದರೂ ಬೆಳೆದರೆ ಅದನ್ನು ಬಡವರು ತಿನ್ನಲಿ. ಉಳಿದದ್ದನ್ನು ಪ್ರಾಣಿಗಳು ಮೇಯಲಿ. ನಿಮ್ಮ ದ್ರಾಕ್ಷಿತೋಟಗಳ ವಿಷಯದಲ್ಲಿಯೂ ಆಲಿವ್ ಮರಗಳ ತೋಪಿನ ವಿಷಯದಲ್ಲಿಯೂ ಇದೇ ನಿಯಮವನ್ನು ಪಾಲಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಆದರೆ ಏಳನೆಯ ವರುಷದಲ್ಲಿ ಅದಕ್ಕೆ ವಿಶ್ರಾಂತಿಯನ್ನು ಕೊಟ್ಟು, ಅದನ್ನು ಬೀಳುಬಿಡಬೇಕು. ಆಗ ನಿಮ್ಮ ಜನರಲ್ಲಿರುವ ಬಡವರು ಅದರಲ್ಲಿ ಬೆಳೆದದ್ದನ್ನು ತಿನ್ನಲಿ. ಅವರು ಬಿಟ್ಟದ್ದನ್ನು ಕಾಡುಮೃಗಗಳು ತಿನ್ನಲಿ. ನಿಮ್ಮ ದ್ರಾಕ್ಷಿತೋಟದ, ಓಲಿವ್ ಮರಗಳ ವಿಷಯದಲ್ಲಿಯೂ ಹಾಗೆಯೇ ಮಾಡಬೇಕು. ಅಧ್ಯಾಯವನ್ನು ನೋಡಿ |