Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 23:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ನಾನು ನಿಮಗೆ ಹೇಳಿದ್ದನ್ನೆಲ್ಲಾ ಜಾಗರೂಕತೆಯಿಂದ ಕೈಕೊಳ್ಳಬೇಕು. ಅನ್ಯ ದೇವರುಗಳ ಹೆಸರುಗಳನ್ನು ಸ್ಮರಿಸಬಾರದು, ಅವುಗಳನ್ನು ಉಚ್ಚರಿಸಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 “ನಾನು ನಿಮಗೆ ವಿಧಿಸಿದ್ದನ್ನೆಲ್ಲ ಜಾಗರೂಕತೆಯಿಂದ ಅನುಸರಿಸಿ ನಡೆಯಿರಿ. ಬೇರೆ ಯಾವ ದೇವರ ಹೆಸರನ್ನು ಸ್ಮರಿಸಬೇಡಿ, ಉಚ್ಚರಿಸಲೂ ಬೇಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ನಾನು ನಿಮಗೆ ಹೇಳಿದ್ದನ್ನೆಲ್ಲಾ ಜಾಗರೂಕತೆಯಾಗಿ ಕೈಕೊಳ್ಳಬೇಕು. ಬೇರೆ ಯಾವ ದೇವರ ಹೆಸರನ್ನು ಸ್ಮರಿಸಲೂ ಕೂಡದು; ಉಚ್ಚರಿಸಲೂ ಕೂಡದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 “ನೀವು ಈ ಆಜ್ಞೆಗಳಿಗೆಲ್ಲಾ ಜಾಗರೂಕತೆಯಿಂದ ವಿಧೇಯರಾಗಬೇಕು. ಸುಳ್ಳುದೇವರುಗಳನ್ನು ಆರಾಧಿಸಬೇಡಿರಿ. ನೀವು ಅವುಗಳ ಹೆಸರುಗಳನ್ನು ಉಚ್ಚರಿಸಲೂ ಕೂಡದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 “ನಾನು ನಿಮಗೆ ಆಜ್ಞಾಪಿಸಿದ್ದನ್ನೆಲ್ಲಾ ಜಾಗರೂಕತೆಯಿಂದ ಕೈಗೊಳ್ಳಬೇಕು. ಬೇರೆ ದೇವರುಗಳ ಹೆಸರನ್ನು ಎತ್ತಬೇಡ. ಅದನ್ನು ಉಚ್ಚರಿಸಲೂ ಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 23:13
21 ತಿಳಿವುಗಳ ಹೋಲಿಕೆ  

ಉಳಿದಿರುವ ಈ ಅನ್ಯಜನಾಂಗಗಳ ಜೊತೆಯಲ್ಲಿ ಇಜ್ಜೋಡಾಗಬೇಡಿರಿ. ಅವರ ದೇವತೆಗಳ ಹೆಸರನ್ನು ಹೇಳಿ ಆರಾಧಿಸಲೂ ಬಾರದು ಪ್ರಮಾಣಮಾಡಲೂ ಬಾರದು. ಅವುಗಳಿಗೆ ಅಡ್ಡ ಬಿದ್ದು ಸೇವಿಸಲೂ ಬಾರದು.


ನಿನ್ನ ವಿಷಯದಲ್ಲಿಯೂ ನಿನ್ನ ಉಪದೇಶದ ವಿಷಯದಲ್ಲಿಯೂ ಎಚ್ಚರಿಕೆಯಾಗಿರು. ನೀನು ಈ ಕಾರ್ಯಗಳಲ್ಲಿ ನಿರತನಾಗಿರು, ಆಗ ನೀನು ನಿನ್ನನ್ನೂ ಮತ್ತು ನಿನ್ನ ಉಪದೇಶ ಕೇಳುವವರನ್ನೂ ರಕ್ಷಿಸುವಿ.


ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ಆ ದಿನದಲ್ಲಿ ನಾನು ವಿಗ್ರಹಗಳನ್ನು ದೇಶದೊಳಗಿಂದ ನಿರ್ನಾಮಮಾಡುವೆನು, ಅವು ಇನ್ನು ಯಾರ ನೆನಪಿಗೂ ಬರುವುದಿಲ್ಲ; ಅಲ್ಲದೆ ಸುಳ್ಳು ಪ್ರವಾದಿಗಳನ್ನೂ, ದುರಾತ್ಮವನ್ನೂ ದೇಶದೊಳಗಿಂದ ತೊಲಗಿಸಿಬಿಡುವೆನು.


ಹೀಗಿರುವುದರಿಂದ ನೀವು ಬಹು ಜಾಗರೂಕತೆಯಿಂದ ನಿಮ್ಮ ನಿಮ್ಮ ಮನಸ್ಸುಗಳನ್ನು ಕಾಪಾಡಿಕೊಳ್ಳುವವರಾಗಿ, ನೀವು ನೋಡಿದ ಸಂಗತಿಗಳನ್ನು ಎಷ್ಟು ಮಾತ್ರವೂ ಮರೆಯದೆ ಜೀವದಿಂದಿರುವ ವರೆಗೂ ಅವುಗಳನ್ನು ನೆನಪಿನಲ್ಲಿಟ್ಟುಕೊಂಡು ನಿಮ್ಮ ಮಕ್ಕಳಿಗೂ ಮತ್ತು ಮೊಮ್ಮಕ್ಕಳಿಗೂ ತಿಳಿಸುತ್ತಾ ಹೋಗಬೇಕು.


ನಾನು ಬಾಳ್ ದೇವತೆಗಳ ಹೆಸರುಗಳನ್ನು ನಿನ್ನ ಬಾಯೊಳಗಿಂದ ತೊಲಗಿಸುವೆನು; ಅವುಗಳನ್ನು ಇನ್ನು ಹೆಸರಿಸದಿರುವಿ.


ಅವರ ಬಲಿಪೀಠಗಳನ್ನು ಕೆಡವಿ, ಅದರ ಪವಿತ್ರವಾದ ಕಲ್ಲುಕಂಬಗಳನ್ನು ಒಡೆದು, ಅಶೇರವೆಂಬ ವಿಗ್ರಹಸ್ತಂಭಗಳನ್ನು ಸುಟ್ಟು, ಅವರ ದೇವತಾಪ್ರತಿಮೆಗಳನ್ನು ಕಡಿದುಬಿಟ್ಟು ಆ ದೇವರುಗಳ ಹೆಸರೇ ಉಳಿಯದಂತೆ ಮಾಡಬೇಕು.


ನಿಮ್ಮಲ್ಲಿ ಯಾವನೂ ದೇವರ ಕೃಪೆಯಿಂದ ತಪ್ಪಿ ಹಿಂಜಾರಿ ಹೋಗದಂತೆಯೂ, ಯಾವ ಕಹಿಯಾದ ಬೇರೂ ನಿಮ್ಮಲ್ಲಿ ಚಿಗುರಿ ಅಸಮಾಧಾನವನ್ನು ಹುಟ್ಟಿಸಿ ಅನೇಕರನ್ನು ಮಲಿನಪಡಿಸದಂತೆ ನೋಡಿಕೊಳ್ಳಿರಿ.


ಆದಕಾರಣ ನೀವು ನಡೆದುಕೊಳ್ಳುವ ರೀತಿಯನ್ನು ಕುರಿತು ಚೆನ್ನಾಗಿ ನೋಡಿಕೊಳ್ಳಿರಿ. ಅಜ್ಞಾನಿಗಳಾಗಿರದೆ ಜ್ಞಾನವಂತರಾಗಿರಿ.


ನೀವು ಅವುಗಳಿಗೆ, “ಭೂಮ್ಯಾಕಾಶಗಳನ್ನು ಸೃಷ್ಟಿಸದಿರುವ ದೇವರುಗಳು ಭೂಮಿಯ ಮೇಲಿನಿಂದ, ಆಕಾಶದ ಕೆಳಗಿನಿಂದ, ಅಳಿದುಹೋಗುವವು” ಎಂದು ಹೇಳಿರಿ.


ಇತರ ದೇವರುಗಳನ್ನು ಅವಲಂಬಿಸಿದವರಿಗೆ ಬಹಳ ಕಷ್ಟನಷ್ಟಗಳು ಉಂಟಾಗುವವು. ಅವರಂತೆ ನಾನು ರಕ್ತವನ್ನು ಪಾನದ್ರವ್ಯವಾಗಿ ಸಮರ್ಪಿಸುವುದೇ ಇಲ್ಲ; ಅವರ ನಾಮಗಳನ್ನಾದರೂ ಉಚ್ಚರಿಸುವುದಿಲ್ಲ.


ಹೀಗಿರುವುದರಿಂದ ನಿಮ್ಮ ನಿಮ್ಮ ಮನಸ್ಸುಗಳನ್ನು ಬಹು ಜಾಗರೂಕತೆಯಿಂದ ಕಾಪಾಡಿಕೊಂಡು ನಿಮ್ಮ ದೇವರಾದ ಯೆಹೋವನನ್ನೇ ಪ್ರೀತಿಸಿರಿ.


ಆದರೆ ಯೆಹೋವನ ಸೇವಕನಾದ ಮೋಶೆಯು ನಿಮಗೆ ಕೊಟ್ಟ ಧರ್ಮೋಪದೇಶದ ವಿಧಿಗಳನ್ನು ಜಾಗರೂಕತೆಯಿಂದ ಪಾಲಿಸಿರಿ; ಹಾಗೆಯೇ ನಿಮ್ಮ ದೇವರಾದ ಯೆಹೋವನನ್ನು ಪ್ರೀತಿಸಿ ಆತನ ಮಾರ್ಗದಲ್ಲೇ ನಡೆದು, ಆತನ ಆಜ್ಞೆಗಳನ್ನು ಕೈಕೊಂಡು ಆತನೊಂದಿಗೆ ಸೇರಿಕೊಂಡು ಪೂರ್ಣಮನಸ್ಸಿನಿಂದಲೂ, ಪೂರ್ಣಹೃದಯದಿಂದಲೂ ಆತನನ್ನು ಸೇವಿಸಿರಿ,” ಎಂದು ಹೇಳಿ


ಆ ಜನರು ರಹಸ್ಯವಾಗಿ ನಡಿಸುವ ಕೆಲಸಗಳನ್ನು ಕುರಿತು ಹೇಳುವುದಕ್ಕೂ ಅವಮಾನಕರವಾಗಿದೆ.


“ನನ್ನ ನಾಲಿಗೆ ಪಾಪಕ್ಕೆ ಹೋಗದಂತೆ ಜಾಗರೂಕನಾಗಿರುವೆನು, ದುಷ್ಟರು ನನ್ನ ಮುಂದೆ ಇರುವಾಗ ಬಾಯಿಗೆ ಕಡಿವಾಣ ಹಾಕಿಕೊಂಡಿರುವೆನು” ಅಂದುಕೊಂಡೆನು.


ಹೋರೇಬಿನಲ್ಲಿ ಯೆಹೋವನು ಬೆಂಕಿಯ ಜ್ವಾಲೆಯೊಳಗಿಂದ ನಿಮ್ಮ ಸಂಗಡ ಮಾತನಾಡಿದಾಗ ನಿಮಗೆ ಯಾವ ಆಕಾರವೂ ಕಾಣಿಸಲಿಲ್ಲ. ಆದುದರಿಂದ ನೀವು ನಿಮ್ಮ ನಿಮ್ಮ ಮನಸ್ಸುಗಳನ್ನು ಬಹು ಜಾಗರೂಕತೆಯಿಂದ ಕಾಪಾಡಿಕೊಳ್ಳಬೇಕು.


ಸಿಬ್ಮಾ ಎಂಬ ಊರುಗಳನ್ನೂ, ಬೇರೆ ಹೆಸರಿನಿಂದ ಉಚ್ಚರಿಸತಕ್ಕ ನೆಬೋ, ಬಾಳ್ಮೆಯೋನ್ ಎಂಬವುಗಳನ್ನೂ ಹೊಸದಾಗಿ ಕಟ್ಟಿ ಅವುಗಳಿಗೆ ಬೇರೆ ಹೆಸರುಗಳನ್ನು ಇಟ್ಟರು.


ಅವರ ದೇವತೆಗಳಿಗೆ ನೀವು ಅಡ್ಡಬಿದ್ದು ನಮಸ್ಕರಿಸಲೂ ಬಾರದು, ಅವರ ಆಚರಣೆಗಳನ್ನು ಅನುಸರಿಸಲೇ ಬಾರದು. ಆ ಜನಗಳನ್ನು ನಿರ್ಮೂಲಮಾಡಿ ವಿಗ್ರಹಸ್ತಂಭಗಳನ್ನು ನಾಶಮಾಡಬೇಕು.


ನೀವು ಅವರೊಡನೆ ಅವರ ದೇವತೆಗಳೊಡನೆ ಆಗಲಿ ಯಾವುದೇ ವಿಧವಾದ ಒಡಂಬಡಿಕೆಯನ್ನೂ ಮಾಡಿಕೊಳ್ಳಬಾರದು.


ಎಚ್ಚರಿಕೆಯಾಗಿರಿ, ನಿಮ್ಮ ದೇವರಾದ ಯೆಹೋವನು ನಿಮ್ಮ ಸಂಗಡ ಮಾಡಿದ ನಿಬಂಧನೆಯನ್ನು ನೀವು ಮರೆತು, ಪೂಜಿಸಬೇಡಿರೆಂದು ಆತನು ನಿಷೇಧಿಸಿದ ಯಾವ ವಸ್ತುವಿನ ವಿಗ್ರಹವನ್ನೂ ಮಾಡಿಕೊಳ್ಳಬಾರದು.


ನೀವು ಯೊರ್ದನ್ ನದಿ ದಾಟಿ ಸ್ವತಂತ್ರಿಸಿಕೊಳ್ಳುವ ದೇಶದಲ್ಲಿ ಅನುಸರಿಸುವುದಕ್ಕಾಗಿ ನಿಮಗೆ ಬೋಧಿಸಬೇಕೆಂದು ನಿಮ್ಮ ದೇವರಾದ ಯೆಹೋವನು ನನಗೆ ಆಜ್ಞಾಪಿಸಿದ ಧರ್ಮೋಪದೇಶವೂ ಮತ್ತು ವಿಧಿನಿಯಮಗಳೂ ಇವೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು