Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 23:18 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ನನಗೆ ಯಜ್ಞವನ್ನು ಮಾಡುವಾಗ ಆ ಯಜ್ಞಪಶುವಿನ ರಕ್ತದೊಡನೆ ಹುಳಿಯಾದ ಹಿಟ್ಟನ್ನು ಸಮರ್ಪಿಸಬಾರದು. ನನ್ನ ಹಬ್ಬದಲ್ಲಿ ನೀವು ನನಗೆ ಸಮರ್ಪಿಸಬೇಕಾದ ಪಶುವಿನ ಕೊಬ್ಬನ್ನು ಮರುದಿನದವರೆಗೆ ಇಡಲೇಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 “ನನಗೆ ಬಲಿಯನ್ನು ಅರ್ಪಿಸುವಾಗ ಆ ಬಲಿ ಪ್ರಾಣಿಯ ರಕ್ತದೊಡನೆ ಹುಳಿಯಾದ ಹಿಟ್ಟನ್ನು ಸಮರ್ಪಿಸಬಾರದು. ನನ್ನ ಹಬ್ಬದಲ್ಲಿ ನೀವು ನನಗೆ ಸಮರ್ಪಿಸಬೇಕಾದ ಪ್ರಾಣಿಯ ಕೊಬ್ಬನ್ನು ಮಾರನೆಯ ದಿನದವರೆಗೂ ಇಡಲೇಕೂಡದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ನನಗೆ ಯಜ್ಞವನ್ನು ಮಾಡುವಾಗ ಆ ಯಜ್ಞಪಶುವಿನ ರಕ್ತದೊಡನೆ ಹುಳಿಯಾದ ಹಿಟ್ಟನ್ನು ಸಮರ್ಪಿಸಬಾರದು. ನನ್ನ ಜಾತ್ರೆಯಲ್ಲಿ ನೀವು ನನಗೆ ಸಮರ್ಪಿಸಬೇಕಾದ ಪಶುವಿನ ವಪೆಯನ್ನು ಮಾರಣೆ ದಿನದವರೆಗೂ ಇಡಲೇಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 “ನೀವು ನನಗೆ ಯಜ್ಞವನ್ನು ಅರ್ಪಿಸುವಾಗ ಯಜ್ಞಪಶುವಿನ ರಕ್ತದೊಡನೆ ಹುಳಿಬೆರಸಿದ ಏನನ್ನೂ ಸಮರ್ಪಿಸಬಾರದು. ಅಲ್ಲದೆ ಅದರ ಮಾಂಸವನ್ನು ಒಂದೇ ದಿನದಲ್ಲಿ ತಿಂದು ಮುಗಿಸಬೇಕು; ಮರುದಿನದವರೆಗೂ ಇಟ್ಟುಕೊಳ್ಳಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 “ಬಲಿ ಅರ್ಪಣೆಯ ರಕ್ತವನ್ನು ಹುಳಿಯಿರುವ ರೊಟ್ಟಿಯ ಸಂಗಡ ಅರ್ಪಿಸಬಾರದು. “ಯಾವುದೇ ಹಬ್ಬದ ಅರ್ಪಣೆಯಲ್ಲಿ ಕೊಬ್ಬನ್ನು ಬೆಳಗಿನವರೆಗೆ ಇಟ್ಟುಕೊಳ್ಳಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 23:18
10 ತಿಳಿವುಗಳ ಹೋಲಿಕೆ  

“‘ನೀವು ಯೆಹೋವನಿಗೆ ಧಾನ್ಯ ನೈವೇದ್ಯವಾಗಿ ಸಮರ್ಪಿಸುವ ಯಾವ ಪದಾರ್ಥವನ್ನು ಹುಳಿಹಿಟ್ಟಿನಿಂದ ಮಾಡಬಾರದು. ಯಾವ ಹುಳಿಪದಾರ್ಥವನ್ನಾಗಲಿ ಅಥವಾ ಜೇನುತುಪ್ಪವನ್ನಾಗಲಿ ಯೆಹೋವನಿಗೆ ಹೋಮಮಾಡಬಾರದು.


“ನನಗೆ ಯಜ್ಞವನ್ನು ಮಾಡುವಾಗ ಆ ಯಜ್ಞಪಶುವಿನ ರಕ್ತದೊಡನೆ ಹುಳಿಹಿಟ್ಟನ್ನು ಸಮರ್ಪಿಸಕೂಡದು. ಪಸ್ಕದಲ್ಲಿ ನೀವು ಸಮರ್ಪಿಸಿದ ಯಜ್ಞಮಾಂಸವನ್ನು ಮರುದಿನದ ಸೂರ್ಯೋದಯದವರೆಗೂ ಉಳಿಸಿಕೊಳ್ಳಬಾರದು.


ಆ ಏಳು ದಿನಗಳು ನಿಮ್ಮ ದೇಶದಲ್ಲೆಲ್ಲಾ ಹುಳಿಬೆರೆತ ಯಾವ ಪದಾರ್ಥವೂ ನಿಮ್ಮ ಬಳಿಯಲ್ಲಿ ಇರಲೇಬಾರದು. ಮೊದಲನೆಯ ದಿನದ ಸಂಜೆಯಲ್ಲಿ ನೀವು ವಧಿಸಿದ ಪಶುಮಾಂಸದಲ್ಲಿ ಸ್ವಲ್ಪವನ್ನೂ ಮರುದಿನದ ವರೆಗೆ ಉಳಿಸಬಾರದು.


ಮರುದಿನದ ಬೆಳಗಿನವರೆಗೆ ಅದರಲ್ಲಿ ಸ್ವಲ್ಪವನ್ನಾದರೂ ಉಳಿಸಕೂಡದು, ಬೆಳಗಿನವರೆಗೆ ಉಳಿದದ್ದನ್ನು ಬೆಂಕಿಯಿಂದ ಸುಟ್ಟುಬಿಡಬೇಕು.


ಕೃತಜ್ಞತೆಯ ಯಜ್ಞಪಶುವಿನ ಮಾಂಸವನ್ನು ಯಜ್ಞವು ನಡೆದ ದಿನದಲ್ಲೇ ಭೋಜನ ಮಾಡಬೇಕು; ಮರುದಿನದ ವರೆಗೆ ಸ್ವಲ್ಪವನ್ನಾದರೂ ಉಳಿಸಬಾರದು.


ಆ ರಾತ್ರಿಯಲ್ಲಿಯೇ ಆ ಮಾಂಸವನ್ನು ಭೋಜನಮಾಡಬೇಕು. ಅದನ್ನು ಬೆಂಕಿಯಲ್ಲಿ ಸುಟ್ಟು ಹುಳಿಯಿಲ್ಲದ ರೊಟ್ಟಿಗಳ ಮತ್ತು ಕಹಿಯಾದ ಸೊಪ್ಪಿನ ಪಲ್ಯಗಳ ಸಂಗಡ ಊಟಮಾಡಬೇಕು.


ಯಾರಾದರೂ ಕೃತಜ್ಞತೆಯನ್ನು ತೋರಿಸುವುದಕ್ಕಾಗಿ ಸಮಾಧಾನಯಜ್ಞವನ್ನು ಯೆಹೋವನಿಗೆ ಮಾಡುವುದಾದರೆ ಅದರೊಡನೆ ಎಣ್ಣೆ ಮಿಶ್ರವಾದ ಹುಳಿಯಿಲ್ಲದ ಕಡುಬುಗಳನ್ನು ಮತ್ತು ಎಣ್ಣೆಯಿಂದ ಪೂರಾ ನೆನಸಿದ ಗೋದಿ ಹಿಟ್ಟಿನ ಹೋಳಿಗೆಗಳನ್ನು ಸಮರ್ಪಿಸಬೇಕು.


“‘ಏಳು ದಿನಗಳವರೆಗೆ ನೀವು ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. ಮೊದಲನೆಯ ದಿನದಲ್ಲಿಯೇ ಹುಳಿಹಿಟ್ಟನ್ನು ನಿಮ್ಮ ಮನೆಯೊಳಗಿಂದ ತೆಗೆದುಬಿಡಬೇಕು. ಏಕೆಂದರೆ ಮೊದಲನೆಯ ದಿನದಿಂದ ಏಳನೆಯ ದಿನದವರೆಗೆ ಹುಳಿರೊಟ್ಟಿಯನ್ನು ತಿನ್ನುವವನು ಇಸ್ರಾಯೇಲಿನೊಳಗಿಂದ ತೆಗೆದುಹಾಕಲ್ಪಡಬೇಕು.


ಅದಲ್ಲದೆ ಮೋಶೆ ಅವರಿಗೆ, “ಇದನ್ನು ಯಾರೂ ಮರು ದಿನದವರೆಗೆ ಇಟ್ಟುಕೊಳ್ಳಬಾರದು” ಎಂದು ಹೇಳಿದನು.


ಪ್ರತಿಷ್ಠೆಗೆ ಸಂಬಂಧಪಟ್ಟ ಮಾಂಸದಲ್ಲಾಗಲಿ, ರೊಟ್ಟಿಯಲ್ಲಾಗಲಿ ಏನಾದರೂ ಮರುದಿನದ ಉದಯದ ವರೆಗೆ ಉಳಿದರೆ ಅದನ್ನು ಸುಟ್ಟುಬಿಡಬೇಕು. ಅದು ಪವಿತ್ರವಾದುದರಿಂದ ಯಾರೂ ಅದನ್ನು ತಿನ್ನಬಾರದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು