Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 23:21 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ನೀವು ಆತನಲ್ಲಿ ಲಕ್ಷ್ಯವಿಟ್ಟು ಆತನ ಮಾತಿಗೆ ವಿಧೇಯರಾಗಿರಬೇಕು. ಆತನನ್ನು ಧಿಕ್ಕರಿಸಿದರೆ ನಿಮ್ಮ ಅಪರಾಧವನ್ನು ಕ್ಷಮಿಸಲಾರನು. ನನ್ನ ನಾಮಮಹಿಮೆ ಆತನಲ್ಲಿ ಇರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ನೀವು ಆತನಲ್ಲಿ ಲಕ್ಷ್ಯವಿಟ್ಟು ಮಾತಿಗೆ ಕಿವಿಗೊಡಬೇಕು. ಆತನಿಗೆ ಅವಿಧೇಯರಾಗಿ ಇರಬಾರದು. ಏಕೆಂದರೆ ಆತ ಬರುವುದು ನನ್ನ ಹೆಸರಿನಲ್ಲಿ. ನೀವು ಅವಿಧೇಯರಾದರೆ ಆತ ನಿಮ್ಮನ್ನು ಕ್ಷಮಿಸಲಾರನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ನೀವು ಆತನಲ್ಲಿ ಲಕ್ಷ್ಯವಿಟ್ಟು ಆತನ ಮಾತಿಗೆ ಕಿವಿಗೊಡಬೇಕು; ಆತನಿಗೆ ಅವಿಧೇಯರಾಗಿರಬಾರದು; ಅವಿಧೇಯರಾದರೆ ನಿಮ್ಮನ್ನು ಕ್ಷವಿುಸಲಾರನು; ನನ್ನ ನಾಮಮಹಿಮೆ ಆತನಲ್ಲಿ ಇರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ದೂತನಿಗೆ ವಿಧೇಯರಾಗಿ ಆತನನ್ನು ಹಿಂಬಾಲಿಸಿರಿ. ಆತನಿಗೆ ವಿರೋಧವಾಗಿ ದಂಗೆಯೇಳಬೇಡಿರಿ. ನೀವು ಅವಿಧೇಯರಾದರೆ ಆತನು ನಿಮ್ಮನ್ನು ಕ್ಷಮಿಸುವುದಿಲ್ಲ. ಆತನಲ್ಲಿ ನನ್ನ ಶಕ್ತಿಯು ಇರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಅವನ ವಿಷಯದಲ್ಲಿ ಜಾಗ್ರತೆಯಾಗಿದ್ದು, ಅವನ ಮಾತಿಗೆ ವಿಧೇಯರಾಗಿರಿ. ಅವನಿಗೆ ಕೋಪವನ್ನೆಬ್ಬಿಸಬೇಡಿರಿ. ಏಕೆಂದರೆ ನನ್ನ ಹೆಸರು ಅವನಲ್ಲಿ ಇರುವುದರಿಂದ ಅವನು ನಿಮ್ಮ ದ್ರೋಹಗಳನ್ನು ಮನ್ನಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 23:21
41 ತಿಳಿವುಗಳ ಹೋಲಿಕೆ  

ಆದರೂ ಅವರು ಪರಾತ್ಪರನಾದ ದೇವರನ್ನು ಪರೀಕ್ಷಿಸಿ ಅವಿಧೇಯರಾದರು. ಆತನ ವಿಧಿಗಳನ್ನು ಕೈಗೊಳ್ಳದೆ,


ಅರಣ್ಯದಲ್ಲಿ ಅವರು ಎಷ್ಟೋ ಸಾರಿ ಅವಿಧೇಯರಾಗಿ, ಅಲ್ಲಿ ಆತನನ್ನು ನೋಯಿಸಿದರು.


ಮಾತನಾಡುತ್ತಿರುವಾತನನ್ನು ನೀವು ಅಸಡ್ಡೆ ಮಾಡದಂತೆ ನೋಡಿಕೊಳ್ಳಿರಿ. ಏಕೆಂದರೆ ಭೂಮಿಯ ಮೇಲೆ ದೈವೋಕ್ತಿಗಳನ್ನಾಡಿದವನನ್ನು ಅಸಡ್ಡೆಮಾಡಿದವರು ದಂಡನೆಗೆ ತಪ್ಪಿಸಿಕೊಳ್ಳಲಾಗದಿದ್ದರೆ, ಪರಲೋಕದಿಂದ ಮಾತನಾಡುವಾತನನ್ನು ಬಿಟ್ಟು ದೂರವಾಗಿ ನಾವು ಹೋದರೆ ದಂಡನೆಯಿಂದ ಹೇಗೆ ತಪ್ಪಿಸಿಕೊಂಡೆವು?


ನಾನು ಮಾಡಿದ್ದರಿಂದ ನೀವು ನನ್ನನ್ನು ನಂಬದೆ ಇದ್ದರೂ, ಈ ಕಾರ್ಯಗಳನ್ನಾದರೂ ನಂಬಿರಿ. ಆಗ ನನ್ನಲ್ಲಿ ತಂದೆಯು ಇದ್ದಾನೆಂತಲೂ, ತಂದೆಯಲ್ಲಿ ನಾನು ಇದ್ದೇನೆಂತಲೂ ನಿಮಗೆ ತಿಳಿಯುವುದು ಮತ್ತು ಮನದಟ್ಟಾಗುವುದು” ಎಂದನು.


ನಾನೂ ಮತ್ತು ನನ್ನ ತಂದೆಯೂ ಒಂದಾಗಿದ್ದೇವೆ” ಎಂದನು.


ಆಗ ಯೆಹೋಶುವನು ಅವರಿಗೆ, “ನೀವು ಯೆಹೋವನನ್ನು ಸೇವಿಸಲು ಶಕ್ತರಲ್ಲ. ಯೆಹೋವನು ಪರಿಶುದ್ಧನು; ತನಗೆ ಸಲ್ಲಿಸಬೇಕಾದ ಗೌರವವನ್ನು ಮತ್ತೊಬ್ಬರಿಗೆ ಸಲ್ಲಗೊಡಿಸದ ದೇವರು; ಆತನು ನಿಮ್ಮ ಪಾಪ, ಅಪರಾಧಗಳನ್ನೂ, ಕ್ಷಮಿಸುವುದಿಲ್ಲ.


ದೇವರು ಮೋಶೆಗೆ, “ಇರುವಾತನೇ ಆಗಿದ್ದೇನೆ” ಎಂದು ಹೇಳಿದನು. “ಮತ್ತು ನೀನು ಇಸ್ರಾಯೇಲರಿಗೆ, ಇರುವಾತನೆಂಬುವವನು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾನೆ ಎಂದು ಹೇಳಬೇಕು” ಅಂದನು.


ದೇವರ ಸರ್ವಸಂಪೂರ್ಣತೆಯು ಕ್ರಿಸ್ತನ ದೇಹದಲ್ಲಿ ವಾಸಮಾಡುತ್ತಿದೆ,


ದೇವರ ಪವಿತ್ರಾತ್ಮನನ್ನು ದುಃಖಪಡಿಸಬೇಡಿರಿ. ಆತನಲ್ಲಿಯೇ ವಿಮೋಚನೆಯ ದಿನಕ್ಕಾಗಿ ಮುದ್ರೆ ಹೊಂದಿದ್ದೀರಲ್ಲಾ.


ಅವನು ನನ್ನ ಹೆಸರಿನಲ್ಲಿ ಹೇಳಿದ ಮಾತುಗಳಿಗೆ ಯಾರು ಕಿವಿಗೊಡುವದಿಲ್ಲವೋ ಅಂಥವರನ್ನು ನಾನು ಶಿಕ್ಷಿಸುವೆನು.


ಯೆಹೋವನು ಮೋಶೆಗೆ, “ಈ ಜನರು ಇನ್ನು ಎಷ್ಟರವರೆಗೆ ನನ್ನನ್ನು ಅಲಕ್ಷ್ಯಮಾಡುವರು? ನಾನು ನಡೆಸಿದ ಎಲ್ಲಾ ಮಹತ್ಕಾರ್ಯಗಳನ್ನು ಇವರು ಪ್ರತ್ಯಕ್ಷವಾಗಿ ನೋಡಿದಾಗ್ಯೂ ಇನ್ನು ಎಷ್ಟು ದಿನ ನನ್ನನ್ನು ನಂಬದೆ ಇರುವರು?


ಎಲ್ಲರೂ ತಂದೆಯನ್ನು ಯಾವ ರೀತಿಯಲ್ಲಿ ಗೌರವಿಸುವರೋ ಅದೇ ರೀತಿಯಲ್ಲಿ ಮಗನನ್ನೂ ಗೌರವಿಸಬೇಕೆಂದು ಹಾಗೆ ಮಾಡಿದ್ದಾನೆ. ಮಗನನ್ನು ಗೌರವಿಸದವನು ಆತನನ್ನು ಕಳುಹಿಸಿದ ತಂದೆಯನ್ನು ಗೌರವಿಸಲಾರನು.


ಇದು ಯೆಹೋವನೆಂಬ ನಾನೇ ಹೇಳಿದ ಮಾತು. ನನಗೆ ವಿರುದ್ಧವಾಗಿ ಸೇರಿರುವ ಈ ದುಷ್ಟ ಸಮೂಹದವರೆಲ್ಲರಿಗೆ ಈ ಮಾತಿನ ಪ್ರಕಾರವೇ ಮಾಡುತ್ತೇನೆ. ಈ ಅರಣ್ಯದಲ್ಲಿಯೇ ಇವರೆಲ್ಲರೂ ಸಾಯಬೇಕು’” ಎಂದು ಹೇಳಿದನು.


ನೀನು ಇಲ್ಲಿಂದ ಹೊರಟು ನಾನು ನಿನಗೆ ಹೇಳಿದ ದೇಶಕ್ಕೆ ಈ ಜನರನ್ನು ನಡೆಸಿಕೊಂಡು ಹೋಗು. ನೋಡು, ನನ್ನ ದೂತನು ನಿನ್ನ ಮುಂದೆ ನಡೆದು ಮುನ್ನಡೆಸುವನು, ಆದರೂ ನನ್ನ ನ್ಯಾಯತೀರ್ಪಿನ ದಿನದಲ್ಲಿ ನಾನು ಅವರ ಪಾಪಕ್ಕೆ ತಕ್ಕಂತೆ ಅವರನ್ನು ದಂಡಿಸುವೆನು.”


ನಾನು ಅಬ್ರಹಾಮನಿಗೂ, ಇಸಾಕನಿಗೂ, ಯಾಕೋಬನಿಗೂ ಸರ್ವಶಕ್ತನಾದ ದೇವರಾಗಿ ಕಾಣಿಸಿಕೊಂಡಿದ್ದೆನು. ಆದರೆ ಯೆಹೋವನೆಂಬ ನನ್ನ ಹೆಸರಿನಲ್ಲಿ ಅವರಿಗೆ ಗೋಚರವಾಗಿರಲಿಲ್ಲ.


ಅವಳ ಮಕ್ಕಳನ್ನು ಕೊಲ್ಲುವೆನು. ಆಗ ನಾನು ಮನುಷ್ಯರ ಅಂತರಿಂದ್ರಿಯಗಳನ್ನೂ, ಹೃದಯಗಳನ್ನೂ ಪರೀಕ್ಷಿಸುವವನಾಗಿದ್ದೇನೆಂಬುದು ಎಲ್ಲಾ ಸಭೆಗಳಿಗೆ ಗೊತ್ತಾಗುವುದು. ನಿಮ್ಮಲ್ಲಿ ಪ್ರತಿಯೊಬ್ಬನಿಗೂ ಅವನವನ ಕ್ರಿಯೆಗಳಿಗೆ ತಕ್ಕ ಹಾಗೆ ಪ್ರತಿಫಲವನ್ನು ಕೊಡುವೆನು.


“ಸ್ಮುರ್ನದಲ್ಲಿರುವ ಸಭೆಯ ದೂತನಿಗೆ ಬರೆ, ಆದಿಯು, ಅಂತ್ಯವೂ ಆಗಿರುವಾತನು, ಸತ್ತವನಾಗಿದ್ದು ಜೀವಿತನಾಗಿ ಎದ್ದು ಬಂದಾತನೂ ಹೇಳುವುದೇನಂದರೆ,


“ನಾನೇ ಆದಿಯೂ ಅಂತ್ಯವೂ, ಇರುವಾತನೂ, ಇದ್ದಾತನೂ, ಬರುವಾತನೂ, ಸರ್ವಶಕ್ತನೂ” ಎಂದು ದೇವರಾದ ಕರ್ತನು ಹೇಳುತ್ತಾನೆ.


ಆತನ ಮಗನಿಗೆ ಮುದ್ದಿಡಿರಿ; ಇಲ್ಲವಾದರೆ ಯೆಹೋವನ ಕೋಪವು ಬೇಗನೆ ಪ್ರಜ್ವಲಿಸಲು ನೀವು ದಾರಿಯಲ್ಲೇ ನಾಶವಾದೀರಿ. ಯೆಹೋವನನ್ನು ಆಶ್ರಯಿಸುವವರೆಲ್ಲರು ಧನ್ಯರು.


“ಫಿಲದೆಲ್ಫಿಯದಲ್ಲಿರುವ ಸಭೆಯ ದೂತನಿಗೆ ಬರೆ, ಪರಿಶುದ್ಧನೂ, ಸತ್ಯವಂತನೂ, ದಾವೀದನ ಬೀಗದಕೈಯುಳ್ಳವನೂ, ಯಾರಿಂದಲೂ ಮುಚ್ಚಲಾಗದಂತೆ ತೆರೆಯುವವನೂ, ಯಾರಿಂದಲೂ ತೆರೆಯಲಾಗದಂತೆ ಮುಚ್ಚುವವನೂ ಆಗಿರುವಾತನು ಹೇಳುವುದೇನಂದರೆ,


ಯಾವನಾದರೂ ತನ್ನ ಸಹೋದರನು ಮರಣಕರವಲ್ಲದ ಪಾಪಮಾಡುವುದನ್ನು ಕಂಡರೆ ಅವನು ದೇವರನ್ನು ಬೇಡಿಕೊಳ್ಳಲಿ. ಆಗ ದೇವರು ಮರಣಕರವಲ್ಲದ ಪಾಪಮಾಡುವವರಿಗೆ ಜೀವವನ್ನು ದಯಪಾಲಿಸುವನು. ಮರಣಕರವಾದ ಪಾಪವುಂಟು ಈ ಪಾಪದ ವಿಷಯವಾಗಿ ಅವನು ಬೇಡಿಕೊಳ್ಳಬೇಕೆಂದು ನಾನು ಹೇಳುವುದಿಲ್ಲ.


ಆತನು ನುಡಿದದ್ದನ್ನು ಕೇಳಿ ವಿರೋಧಿಸಿದವರು ಯಾರು? ಮೋಶೆಯ ಮೂಲಕ ಐಗುಪ್ತದೊಳಗಿಂದ ಹೊರಗೆ ಕರೆತರಲ್ಪಟ್ಟವರೆಲ್ಲರೂ ಅಲ್ಲವೇ?


ಆತನು ಇನ್ನೂ ಮಾತನಾಡುತ್ತಿರುವಾಗಲೇ ಪ್ರಕಾಶಮಾನವಾದ ಮೋಡವು ಬಂದು ಅವರ ಮೇಲೆ ಕವಿಯಿತು. ಇದಲ್ಲದೆ ಆ ಮೋಡದೊಳಗಿನಿಂದ “ಈತನು ಪ್ರಿಯನಾಗಿರುವ ನನ್ನ ಮಗನು ಈತನನ್ನು ನಾನು ಮೆಚ್ಚಿದ್ದೇನೆ ಈತನಿಗೆ ಕಿವಿಗೊಡಿರಿ” ಎಂದು ಹೇಳುವ ವಾಣಿವುಂಟಾಯಿತು.


“ಇಗೋ, ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಮಗನನ್ನು ಹೆರುವಳು; ಆತನಿಗೆ ಇಮ್ಮಾನುವೇಲ್ ಎಂದು ಹೆಸರಿಡುವರು. ‘ದೇವರು ನಮ್ಮ ಕೂಡ ಇದ್ದಾನೆಂದು’ ಈ ಹೆಸರಿನ ಅರ್ಥ.”


ಅವನ ಕಾಲದಲ್ಲಿ ಯೆಹೂದ್ಯರು ಸುರಕ್ಷಿತರಾಗಿರುವರು, ಇಸ್ರಾಯೇಲರು ನೆಮ್ಮದಿಯಾಗಿ ವಾಸಿಸುವರು; ‘ಯೆಹೋವ ಚಿದ್ಕೇನು’ ಅಂದರೆ ಯೆಹೋವನೇ ನಮ್ಮ ಸದ್ಧರ್ಮ ಎಂಬ ಹೆಸರು ಅವನಿಗಾಗುವುದು” ಎಂದು ನುಡಿಯುತ್ತಾನೆ.


ಯೆಹೋವನು, “ನಾನು ನಿನ್ನನ್ನು ಹೇಗೆ ಕ್ಷಮಿಸಲಿ? ನಿನ್ನ ಜನರು ನನ್ನನ್ನು ಬಿಟ್ಟು ದೇವರಲ್ಲದವುಗಳ ಮೇಲೆ ಆಣೆಯಿಟ್ಟಿದ್ದಾರೆ. ನಾನು ಅವರಿಗೆ ಹೊಟ್ಟೆ ತುಂಬಾ ಆಹಾರಕೊಟ್ಟ ಮೇಲೂ ಅವರು ವ್ಯಭಿಚಾರ ಮಾಡಿದರು, ವ್ಯಭಿಚಾರಿಣಿಯರ ಮನೆಗಳಲ್ಲಿ ಗುಂಪುಕೂಡಿದರು.


ಸದಮಲನೆನಿಸಿಕೊಂಡು ಶಾಶ್ವತಲೋಕದಲ್ಲಿ ನಿತ್ಯನಿವಾಸಿಯಾದ ಮಹೋನ್ನತನು ಹೀಗೆನ್ನುತ್ತಾನೆ, “ಉನ್ನತಲೋಕವೆಂಬ ಪವಿತ್ರಾಲಯದಲ್ಲಿ ವಾಸಿಸುವ ನಾನು, ಜಜ್ಜಿಹೋದ ದೀನಮನದೊಂದಿಗೆ ಇದ್ದುಕೊಂಡು, ದೀನನ ಆತ್ಮವನ್ನೂ ಜಜ್ಜಿಹೋದವನ ಮನಸ್ಸನ್ನೂ ಉಜ್ಜೀವಿಸುವವನಾಗಿದ್ದೇನೆ.


ಪೂರ್ವದಿಂದ ಪಶ್ಚಿಮದ ತನಕ ಇರುವವರೆಲ್ಲರೂ ಇದನ್ನು ನೋಡಿ, ನನ್ನ ಹೊರತು ಯಾರೂ ಇಲ್ಲ, ನಾನೇ ಯೆಹೋವನು.


ನಾನೇ ಯೆಹೋವನು; ಇದೇ ನನ್ನ ನಾಮವು; ನನ್ನ ಮಹಿಮೆಯನ್ನು ಮತ್ತೊಬ್ಬನಿಗೆ ಸಲ್ಲಗೊಡಿಸೆನು, ನನ್ನ ಸ್ತೋತ್ರವನ್ನು ವಿಗ್ರಹಗಳ ಪಾಲು ಮಾಡೆನು.


ಒಂದು ಮಗು ನಮಗಾಗಿ ಹುಟ್ಟಿದೆಯಷ್ಟೆ, ವರದ ಮಗನು ನಮಗೆ ದೊರೆತನು; ಆಡಳಿತವು ಅವನ ಬಾಹುವಿನ ಮೇಲಿರುವುದು; ಅದ್ಭುತ ಸ್ವರೂಪನು, ಆಲೋಚನಾ ಕರ್ತನು, ಪರಾಕ್ರಮಿಯಾದ ದೇವರೂ, ನಿತ್ಯನಾದ ತಂದೆ, ಸಮಾಧಾನದ ಪ್ರಭು ಎಂಬುದು ಆತನ ಹೆಸರು.


ಆದಕಾರಣ ಕರ್ತನು ತಾನೇ ನಿಮಗೆ ಒಂದು ಗುರುತನ್ನು ಕೊಡುವನು. ಇಗೋ ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಒಬ್ಬ ಮಗನನ್ನು ಹಡೆದು ಅವನಿಗೆ ಇಮ್ಮಾನುವೇಲ್ ಎಂದು ಹೆಸರಿಡುವರು.


ಆಗ ಯೆಹೋವನ ನಾಮದಿಂದ ಪ್ರಸಿದ್ಧನಾದ ನೀನೊಬ್ಬನೇ ಭೂಲೋಕದಲ್ಲೆಲ್ಲಾ ಸರ್ವೋನ್ನತನೆಂದು ಗ್ರಹಿಸುವರು.


ಆತನ ಪ್ರಭಾವವುಳ್ಳ ನಾಮಕ್ಕೆ ಸದಾಕಾಲಕ್ಕೂ ಸ್ತುತಿ ಇರಲಿ; ಭೂಮಂಡಲವೆಲ್ಲಾ ಆತನ ಪ್ರಭಾವದಿಂದ ತುಂಬಿರಲಿ. ಆಮೆನ್. ಆಮೆನ್.


ನೀವು ಅರಣ್ಯದಲ್ಲಿ ನಿಮ್ಮ ದೇವರಾದ ಯೆಹೋವನಿಗೆ ಕೋಪಹುಟ್ಟಿಸಿದ್ದನ್ನು ನೆನಪುಮಾಡಿಕೊಳ್ಳಿರಿ; ಅದನ್ನು ಮರೆಯಬೇಡಿರಿ. ನೀವು ಐಗುಪ್ತದೇಶವನ್ನು ಬಿಟ್ಟಂದಿನಿಂದ ಈ ಸ್ಥಳಕ್ಕೆ ಬಂದ ದಿನದವರೆಗೂ ಯೆಹೋವನ ಆಜ್ಞೆಗಳನ್ನು ಧಿಕ್ಕರಿಸುವವರಾಗಿದ್ದೀರಿ.


ಯೆಹೋವನ ದೂತನು, “ನನ್ನ ಹೆಸರನ್ನು ಕೇಳುವುದೇಕೆ? ಅದು ಆಶ್ಚರ್ಯಕರವಾದದ್ದು” ಅಂದನು.


ಯುದ್ಧದ ಗದ್ದಲದಲ್ಲಿ ತುಳಿದಾಡಿದವರೆಲ್ಲರ ಪಾದರಕ್ಷೆಗಳೂ, ರಕ್ತದಲ್ಲಿ ಅದ್ದಿದ ಉಡುಪುಗಳೂ, ಅಗ್ನಿಗೆ ಆಹಾರವಾಗಿ ಸುಟ್ಟುಹೋಗುವವು.


“ಇಗೋ, ನನ್ನ ದೂತನನ್ನು ಕಳುಹಿಸುತ್ತೇನೆ, ಆತನು ನನ್ನ ಮುಂದೆ ದಾರಿಯನ್ನು ಸರಿಮಾಡುವನು; ನೀವು ಹಂಬಲಿಸುವ ಕರ್ತನು ತನ್ನ ಆಲಯಕ್ಕೆ ಪಕ್ಕನೇ ಬರುವನು; ಆಹಾ, ನಿಮಗೆ ಇಷ್ಟನಾದ ಒಡಂಬಡಿಕೆಯ ದೂತನು ಬರುತ್ತಾನೆ” ಇದು ಸೇನಾಧೀಶ್ವರನಾದ ಯೆಹೋವನ ನುಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು