Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 24:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಮೋಶೆಯು ಬೆಟ್ಟವನ್ನು ಹತ್ತಿದನು ಮತ್ತು ಮೇಘವು ಬೆಟ್ಟವನ್ನು ಆವರಿಸಿಕೊಂಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಬಳಿಕ ಮೋಶೆ ಬೆಟ್ಟವನ್ನು ಹತ್ತಿದನು. ಮೇಘವೊಂದು ಅದನ್ನು ಮುಚ್ಚಿಕೊಂಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಮೋಶೆ ಬೆಟ್ಟವನ್ನು ಹತ್ತಿದಾಗ ಮೇಘವು ಅದನ್ನು ಮುಚ್ಚಿಕೊಂಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಬಳಿಕ ಮೋಶೆ ಬೆಟ್ಟದ ಮೇಲಕ್ಕೆ ಹೋದನು. ಮೋಡವು ಬೆಟ್ಟವನ್ನು ಕವಿದುಕೊಂಡಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಮೋಶೆ ಬೆಟ್ಟವನ್ನೇರಿ ಹೋದಾಗ ಮೇಘವು ಬೆಟ್ಟವನ್ನು ಮುಚ್ಚಿಕೊಂಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 24:15
6 ತಿಳಿವುಗಳ ಹೋಲಿಕೆ  

ಯೆಹೋವನು ಮೋಶೆಗೆ, “ಇಗೋ, ನಾನು ನಿನ್ನ ಸಂಗಡ ಮಾತನಾಡುವಾಗ, ಜನರು ಕೇಳಿ ಯಾವಾಗಲೂ ನಿನ್ನನ್ನು ನಂಬುವಂತೆ ನಾನು ಮೇಘದೊಳಗಿನಿಂದ ನಿನ್ನ ಬಳಿಗೆ ಬರುತ್ತೇನೆ” ಎಂದು ಹೇಳಿದನು. ಮೋಶೆ ಜನರ ಮಾತುಗಳನ್ನು ಯೆಹೋವನಿಗೆ ತಿಳಿಸಿದನು.


ಆತನು ಇನ್ನೂ ಮಾತನಾಡುತ್ತಿರುವಾಗಲೇ ಪ್ರಕಾಶಮಾನವಾದ ಮೋಡವು ಬಂದು ಅವರ ಮೇಲೆ ಕವಿಯಿತು. ಇದಲ್ಲದೆ ಆ ಮೋಡದೊಳಗಿನಿಂದ “ಈತನು ಪ್ರಿಯನಾಗಿರುವ ನನ್ನ ಮಗನು ಈತನನ್ನು ನಾನು ಮೆಚ್ಚಿದ್ದೇನೆ ಈತನಿಗೆ ಕಿವಿಗೊಡಿರಿ” ಎಂದು ಹೇಳುವ ವಾಣಿವುಂಟಾಯಿತು.


ಮೂರನೆಯ ದಿನದಲ್ಲಿ ಸೂರ್ಯೋದಯವಾಗಲು ಆ ಬೆಟ್ಟದ ಮೇಲೆ ಗುಡುಗು, ಮಿಂಚೂ, ಕಾರ್ಮುಗಿಲೂ, ತುತ್ತೂರಿಯ ಮಹಾಧ್ವನಿಯೂ ಉಂಟಾಗಲು ಪಾಳೆಯಲ್ಲಿದ್ದ ಜನರೆಲ್ಲರೂ ನಡುಗಿದರು.


ತರುವಾಯ ಸೊಲೊಮೋನನು, ಯೆಹೋವನೇ “ಕಾರ್ಗತ್ತಲಲ್ಲಿ ವಾಸಿಸುತ್ತೇನೆಂದು ಹೇಳಿದ್ದೀ;


ಯೆಹೋವನ ತೇಜಸ್ಸು ಸೀನಾಯಿಬೆಟ್ಟದ ಮೇಲೆ ನೆಲೆಗೊಂಡಿತ್ತು ಮತ್ತು ಆ ಮೇಘವು ಆರು ದಿನಗಳ ವರೆಗೂ ಬೆಟ್ಟವನ್ನು ಆವರಿಸಿಕೊಂಡಿತ್ತು. ಏಳನೆಯ ದಿನದಲ್ಲಿ ಯೆಹೋವನು ಮೇಘದೊಳಗಿನಿಂದ ಮೋಶೆಯನ್ನು ಕೂಗಿ ಕರೆದನು.


ಯೆಹೋವನು ಸೀನಾಯಿ ಬೆಟ್ಟದ ಶಿಖರಕ್ಕೆ ಇಳಿದು ಬಂದನು. ಆತನು ಬೆಟ್ಟದ ತುದಿಗೆ ಬಾ ಎಂದು ಮೋಶೆಯನ್ನು ಕರೆಯಲು ಅವನು ಬೆಟ್ಟವನ್ನೇರಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು