ವಿಮೋಚನಕಾಂಡ 24:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಯೆಹೋವನ ತೇಜಸ್ಸು ಸೀನಾಯಿಬೆಟ್ಟದ ಮೇಲೆ ನೆಲೆಗೊಂಡಿತ್ತು ಮತ್ತು ಆ ಮೇಘವು ಆರು ದಿನಗಳ ವರೆಗೂ ಬೆಟ್ಟವನ್ನು ಆವರಿಸಿಕೊಂಡಿತ್ತು. ಏಳನೆಯ ದಿನದಲ್ಲಿ ಯೆಹೋವನು ಮೇಘದೊಳಗಿನಿಂದ ಮೋಶೆಯನ್ನು ಕೂಗಿ ಕರೆದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಸರ್ವೇಶ್ವರ ತೇಜಸ್ಸು ಸೀನಾಯಿ ಬೆಟ್ಟದ ಮೇಲೆ ನಿಂತಿತು. ಆ ಮೇಘವು ಆರು ದಿನಗಳವರೆಗೂ ಬೆಟ್ಟವನ್ನು ಆವರಿಸಿತ್ತು. ಏಳನೆಯ ದಿನ ಸರ್ವೇಶ್ವರ ಮೇಘ ಮಧ್ಯೆಯಿಂದ ಮೋಶೆಯನ್ನು ಕೂಗಿ ಕರೆದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಯೆಹೋವನ ತೇಜಸ್ಸು ಸೀನಾಯಿ ಬೆಟ್ಟದ ಮೇಲೆ ನಿಂತಿತು, ಮತ್ತು ಆ ಮೇಘವು ಆರು ದಿನಗಳವರೆಗೂ ಬೆಟ್ಟವನ್ನು ಮುಚ್ಚಿಕೊಂಡಿತ್ತು. ಏಳನೆಯ ದಿನದಲ್ಲಿ ಯೆಹೋವನು ಮೇಘದೊಳಗಿಂದ ಕೂಗಿ ಮೋಶೆಯನ್ನು ಕರೆದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಸೀನಾಯಿ ಬೆಟ್ಟದ ಮೇಲೆ ಯೆಹೋವನ ಮಹಿಮೆಯು ಇಳಿದು ಬಂದಿತು. ಮೋಡವು ಆರುದಿನಗಳವರೆಗೆ ಬೆಟ್ಟವನ್ನು ಕವಿದುಕೊಂಡಿತ್ತು. ಏಳನೆಯ ದಿನದಲ್ಲಿ, ಮೋಡದೊಳಗಿಂದ ಯೆಹೋವನು ಮೋಶೆಯೊಡನೆ ಮಾತಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಇದಲ್ಲದೆ ಯೆಹೋವ ದೇವರ ಮಹಿಮೆಯು ಸೀನಾಯಿ ಬೆಟ್ಟದ ಮೇಲೆ ನೆಲೆಯಾಗಿದ್ದುದರಿಂದ ಮೇಘವು ಅದನ್ನು ಆರು ದಿನಗಳವರೆಗೆ ಮುಚ್ಚಿಕೊಂಡಿತು. ಏಳನೆಯ ದಿನದಲ್ಲಿ ಆತನು ಮೇಘದೊಳಗಿಂದ ಮೋಶೆಯನ್ನು ಕರೆದರು. ಅಧ್ಯಾಯವನ್ನು ನೋಡಿ |