Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 24:18 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಮೋಶೆಯು ಆ ಮೇಘದೊಳಗೆ ಪ್ರವೇಶಿಸಿ ಬೆಟ್ಟವನ್ನೇರಿದನು. ಅವನು ಆ ಬೆಟ್ಟದಲ್ಲಿ ನಲ್ವತ್ತು ದಿನ ಹಗಲಿರುಳು ಆ ಬೆಟ್ಟದಲ್ಲಿಯೇ ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಮೋಶೆ ಆ ಮೇಘದೊಳಗೆ ಪ್ರವೇಶಿಸಿ ಬೆಟ್ಟವನ್ನೇರಿದನು. ಅವನು ಆ ಬೆಟ್ಟದಲ್ಲಿ ನಾಲ್ವತ್ತು ದಿವಸ ಹಗಲಿರುಳು ತಂಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಮೋಶೆ ಆ ಮೇಘದೊಳಗೆ ಪ್ರವೇಶಿಸಿ ಬೆಟ್ಟವನ್ನೇರಿದನು. ಅವನು ಆ ಬೆಟ್ಟದಲ್ಲಿ ಹಗಲಿರುಳು ನಾಲ್ವತ್ತು ದಿವಸ ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಬಳಿಕ ಮೋಶೆಯು ಮೋಡದಲ್ಲಿ ಬೆಟ್ಟದ ಮೇಲೆ ಇನ್ನೂ ಎತ್ತರಕ್ಕೆ ಹೋದನು. ಮೋಶೆಯು ಬೆಟ್ಟದಲ್ಲಿ ಹಗಲಿರುಳು ನಲವತ್ತು ದಿವಸ ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಆಗ ಮೋಶೆಯು ಮೇಘದ ಮಧ್ಯಕ್ಕೆ ಬಂದು ಬೆಟ್ಟವನ್ನೇರಿದನು. ಅವನು ಹಗಲಿರುಳು ನಲವತ್ತು ದಿವಸ ಪರ್ವತದ ಮೇಲಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 24:18
18 ತಿಳಿವುಗಳ ಹೋಲಿಕೆ  

ಯೆಹೋವನು ನಿಮ್ಮ ಸಂಗಡ ಮಾಡಿದ ನಿಬಂಧನೆಯನ್ನು ಬರೆದ ಆ ಕಲ್ಲಿನ ಹಲಿಗೆಗಳನ್ನು ತೆಗೆದುಕೊಳ್ಳುವುದಕ್ಕೆ ನಾನು ಬೆಟ್ಟವನ್ನು ಹತ್ತಿದ್ದಾಗ ನಾನು ಅನ್ನ ಪಾನಗಳನ್ನು ಬಿಟ್ಟು ಹಗಲಿರುಳು ನಲ್ವತ್ತು ದಿನ ಆ ಬೆಟ್ಟದಲ್ಲಿದ್ದೆನು.


ನಾನು ಮೊದಲಿನಂತೆ ಹಗಲಿರುಳು ನಲ್ವತ್ತು ದಿನವೂ ಬೆಟ್ಟದ ಮೇಲೆ ಇರಲಾಗಿ ಯೆಹೋವನು ಆ ಕಾಲದಲ್ಲಿಯೂ ನನ್ನ ಪ್ರಾರ್ಥನೆಯನ್ನು ಕೇಳಿ ನಿಮ್ಮನ್ನು ನಾಶಮಾಡಬೇಕೆಂಬ ಆಲೋಚನೆಯನ್ನು ಬಿಟ್ಟುಬಿಟ್ಟನು.


ಮೋಶೆಯು ಆ ಬೆಟ್ಟದಲ್ಲಿ ಯೆಹೋವನ ಸನ್ನಿಧಿಯಲ್ಲಿ ಹಗಲಿರುಳು ನಲ್ವತ್ತು ದಿನ ಇದ್ದನು. ಆ ದಿನಗಳಲ್ಲಿ ಅವನು ಏನೂ ತಿನ್ನಲಿಲ್ಲ, ಏನೂ ಕುಡಿಯಲಿಲ್ಲ. ಆತನು ಒಡಂಬಡಿಕೆಯ ವಾಕ್ಯಗಳನ್ನು ಅಂದರೆ ಹತ್ತು ಆಜ್ಞೆಗಳನ್ನು ಆ ಕಲ್ಲಿನ ಹಲಗೆಗಳ ಮೇಲೆ ಬರೆದನು.


ಯೆಹೋವನು ನಿಮ್ಮನ್ನು ನಾಶಮಾಡಬೇಕೆಂದಿದ್ದರಿಂದ ನಾನು ಆ ನಲ್ವತ್ತು ದಿನವೂ ಹಗಲಿರುಳು ಆತನ ಸನ್ನಿಧಿಯಲ್ಲಿ ಬಿದ್ದಿದ್ದೆನು.


ನೀವು ಹೀಗೆ ಅಪರಾಧಮಾಡಿ ಯೆಹೋವನ ದೃಷ್ಟಿಯಲ್ಲಿ ಕೆಟ್ಟದ್ದನ್ನು ನಡಿಸಿ ಆತನನ್ನು ಕೋಪಗೊಳಿಸಿದ ಕಾರಣ ನಾನು ಮೊದಲಿನಂತೆ ಅನ್ನ ಪಾನಗಳನ್ನು ಬಿಟ್ಟು ನಲ್ವತ್ತು ದಿನಗಳು ಹಗಲಿರುಳು ಯೆಹೋವನ ಸನ್ನಿಧಿಯಲ್ಲೇ ಬಿದ್ದಿದ್ದೆನು.


ನಲವತ್ತು ದಿನ ಮರುಭೂಮಿಯಲ್ಲಿ ನಡಿಸಲ್ಪಡುತ್ತಾ, ಸೈತಾನನಿಂದ ಶೋಧಿಸಲ್ಪಟ್ಟನು. ಆ ದಿನಗಳಲ್ಲಿ ಆತನು ಏನನ್ನೂ ತಿನ್ನಲಿಲ್ಲ. ಆ ದಿನಗಳು ಮುಗಿದ ಮೇಲೆ ಆತನಿಗೆ ಹಸಿವಾಯಿತು.


ಆತನು ನಲವತ್ತು ದಿನ ಅಡವಿಯಲ್ಲಿ ಕಾಡುಮೃಗಗಳೊಂದಿಗೆ ಇದ್ದು ಸೈತಾನನಿಂದ ಶೋಧಿಸಲ್ಪಟ್ಟನು ಮತ್ತು ದೇವದೂತರು ಯೇಸುವಿಗೆ ಉಪಚಾರ ಮಾಡಿದರು.


ಆತನು ನಲವತ್ತು ದಿನ ಹಗಲಿರುಳು ಉಪವಾಸವಿದ್ದ ತರುವಾಯ ಆತನಿಗೆ ಹಸಿವಾಯಿತು.


ಅವನು ಎದ್ದು ತಿಂದು, ಕುಡಿದು ಅದರ ಬಲದಿಂದ ನಲ್ವತ್ತು ದಿನ ಹಗಲಿರುಳು ಪ್ರಯಾಣ ಮಾಡಿ ದೇವಗಿರಿಯಾದ


ಯೆಹೋವನ ತೇಜಸ್ಸು ಬೆಟ್ಟದ ತುದಿಯಲ್ಲಿ ದಹಿಸುವ ಬೆಂಕಿಯಂತೆ ಇಸ್ರಾಯೇಲರಿಗೆ ಕಾಣಿಸಿತು.


ಯೆಹೋವನು ಸೀನಾಯಿ ಬೆಟ್ಟದ ಶಿಖರಕ್ಕೆ ಇಳಿದು ಬಂದನು. ಆತನು ಬೆಟ್ಟದ ತುದಿಗೆ ಬಾ ಎಂದು ಮೋಶೆಯನ್ನು ಕರೆಯಲು ಅವನು ಬೆಟ್ಟವನ್ನೇರಿದನು.


ಮೋಶೆಯು ಫರೋಹನನ್ನು ಬಿಟ್ಟು ಪಟ್ಟಣದಿಂದ ಹೊರಕ್ಕೆ ಬಂದು ಕೈಯನ್ನೆತ್ತಿ ಯೆಹೋವನನ್ನು ಪ್ರಾರ್ಥಿಸಿದನು. ಗುಡುಗೂ, ಆನೆಕಲ್ಲಿನ ಮಳೆಯೂ ನಿಂತುಹೋದವು.


ಅದಕ್ಕೆ ಮೋಶೆ, “ನಾನು ಈ ಪಟ್ಟಣದಿಂದಾಚೆಗೆ ಹೋದ ಕೂಡಲೇ ಕೈಯೆತ್ತಿ ಯೆಹೋವನನ್ನು ಪ್ರಾರ್ಥಿಸುವೆನು. ಆಗ ಗುಡುಗು ಮತ್ತು ಆನೆಕಲ್ಲಿನ ಮಳೆಯು ನಿಂತುಹೋಗುವದು. ಇದರಿಂದ ಸಮಸ್ತ ಭೂಲೋಕವು ಯೆಹೋವನ ಅಧೀನದಲ್ಲಿದೆ ಎಂದು ನೀನು ತಿಳಿದುಕೊಳ್ಳುವಿ.


ಹಿಂದಟ್ಟದಿದ್ದರೂ ದುಷ್ಟನು ಹೆದರಿ ಓಡುವನು, ಶಿಷ್ಟನು ಸಿಂಹದಂತೆ ಧೈರ್ಯದಿಂದಿರುವನು.


ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ,


ಮೋಶೆಯು ಬೆಟ್ಟದಿಂದ ಇಳಿದು ಬರುವುದರಲ್ಲಿ ತಡವಾದುದನ್ನು ಇಸ್ರಾಯೇಲರು ನೋಡಿ, ಆರೋನನ ಬಳಿಗೆ ಒಟ್ಟಾಗಿ ಸೇರಿ ಬಂದು ಆತನಿಗೆ, “ಏಳು, ನಮ್ಮನ್ನು ಮುನ್ನಡೆಸಿಕೊಂಡು ಹೋಗುವುದಕ್ಕೆ ನಮಗೊಬ್ಬ ದೇವರನ್ನು ಮಾಡಿಕೊಡು ಏಕೆಂದರೆ ಐಗುಪ್ತದೇಶದಿಂದ ನಮ್ಮನ್ನು ಕರೆದುಕೊಂಡು ಬಂದ ಆ ಮೋಶೆಯು ಏನಾದನೋ ಗೊತ್ತಿಲ್ಲ” ಎಂದು ಹೇಳಿದರು.


ಆಗ ಪುನಃ, “ನೀನು ಹೊರಗೆ ಬಂದು ಬೆಟ್ಟದ ಮೇಲೆ ಯೆಹೋವನ ಮುಂದೆ ನಿಲ್ಲು” ಎಂಬ ವಾಣಿಯಾಯಿತು. ಆಹಾ ಯೆಹೋವನು ಅಲ್ಲಿ ಹಾದು ಹೋದನು. ಆತನ ಮುಂದೆ ಪರ್ವತಗಳು ಭೇದಿಸಿ ಬಂಡೆಗಳನ್ನು ಪುಡಿ ಪುಡಿಮಾಡುವಂಥ ದೊಡ್ಡ ಬಿರುಗಾಳಿಯು ಬೀಸಿತು. ಯೆಹೋವನು ಅದರಲ್ಲಿ ಇರಲಿಲ್ಲ. ತರುವಾಯ ಭೂಕಂಪವಾಯಿತು, ಅದರಲ್ಲಿಯೂ ಆತನಿರಲಿಲ್ಲ.


ನೀನಾದರೋ ಇಲ್ಲೇ ನನ್ನ ಹತ್ತಿರ ನಿಂತಿರು; ನಾನು ಅವರಿಗೆ ಬೋಧಿಸಬೇಕಾದ ಎಲ್ಲಾ ಧರ್ಮೋಪದೇಶವನ್ನು ಮತ್ತು ವಿಧಿನಿಯಮಗಳನ್ನೂ ನಿನಗೆ ತಿಳಿಸುತ್ತೇನೆ. ನಾನು ಅವರಿಗೆ ಸ್ವಂತಕ್ಕಾಗಿ ಕೊಡುವ ದೇಶದಲ್ಲಿ ಅವರು ಇವುಗಳನ್ನು ಅನುಸರಿಸಬೇಕು” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು