Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 24:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಮೋಶೆ, ಆರೋನ್, ನಾದಾಬ್, ಅಬೀಹೂ ಹಾಗೂ ಇಸ್ರಾಯೇಲರ ಹಿರಿಯರಲ್ಲಿ ಎಪ್ಪತ್ತು ಜನರು ಬೆಟ್ಟವನ್ನು ಹತ್ತಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಮೋಶೆ, ಆರೋನ್, ನಾದಾಬ್ ಹಾಗೂ ಅಬೀಹು ಮತ್ತು ಇಸ್ರಯೇಲರಲ್ಲಿ ಎಪ್ಪತ್ತು ಮಂದಿ ಬೆಟ್ಟವನ್ನು ಹತ್ತಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಮೋಶೆ ಆರೋನ್ ನಾದಾಬ್ ಅಬೀಹೂ ಎಂಬವರೂ ಇಸ್ರಾಯೇಲ್ಯರ ಹಿರಿಯರಲ್ಲಿ ಎಪ್ಪತ್ತು ಮಂದಿಯೂ ಬೆಟ್ಟವನ್ನು ಹತ್ತಿದರು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಬಳಿಕ ಮೋಶೆ, ಆರೋನ, ನಾದಾಬ, ಅಬೀಹೂ ಮತ್ತು ಇಸ್ರೇಲರ ಎಪ್ಪತ್ತು ಮಂದಿ ಹಿರಿಯರು ಬೆಟ್ಟವನ್ನೇರಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಆಗ ಮೋಶೆ, ಆರೋನ್, ನಾದಾಬ್, ಅಬೀಹೂ ಮತ್ತು ಇಸ್ರಾಯೇಲಿನ ಹಿರಿಯರಲ್ಲಿ ಎಪ್ಪತ್ತು ಮಂದಿಯೂ ಮೇಲಕ್ಕೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 24:9
10 ತಿಳಿವುಗಳ ಹೋಲಿಕೆ  

ಯೆಹೋವನು ಮೋಶೆಗೆ, “ನೀನು, ಆರೋನ್, ನಾದಾಬ್, ಅಬೀಹೂ ಹಾಗೂ ಇಸ್ರಾಯೇಲರ ಹಿರಿಯರಲ್ಲಿ ಎಪ್ಪತ್ತು ಮಂದಿ ಈ ಬೆಟ್ಟವನ್ನು ಹತ್ತಿ ಯೆಹೋವನ ಬಳಿಗೆ ಬಂದು ದೂರದಲ್ಲಿ ನಿಂತು ಅಡ್ಡಬಿದ್ದು ಆರಾಧಿಸಬೇಕು.


ಯೆಹೋವನು ಮೋಶೆಗೆ, “ನೀನು ಇಳಿದುಹೋಗಿ ಆರೋನನ್ನು ನಿನ್ನ ಸಂಗಡ ಕರೆದುಕೊಂಡು ಮೇಲಕ್ಕೆ ಬಾ. ಆದರೆ ಯಾಜಕರೂ, ಜನರೂ ಆ ಗಡಿಯನ್ನು ದಾಟಿ ಯೆಹೋವನ ಹತ್ತಿರ ಬರಬಾರದು. ದಾಟಿ ಬಂದರೆ ನಾನು ಅವರನ್ನು ಪಕ್ಕನೇ ಸಂಹಾರ ಮಾಡುವೆನು” ಎಂದು ಹೇಳಿದನು.


ನನಗೆ ಯಾಜಕನ ಸೇವೆ ಮಾಡುವುದಕ್ಕೆ ನೀನು ನಿನ್ನ ಅಣ್ಣನಾದ ಆರೋನನನ್ನೂ, ಅವನ ಮಕ್ಕಳಾದ ನಾದಾಬ್, ಅಬೀಹೂ, ಎಲ್ಲಾಜಾರ್, ಈತಾಮಾರ್ ಎಂಬುವರನ್ನೂ ಇಸ್ರಾಯೇಲ್ಯರಿಂದ ನಿನ್ನ ಹತ್ತಿರಕ್ಕೆ ಕರೆದುಕೊಂಡು ಬಾ.


ಆರೋನನ ಮಕ್ಕಳಲ್ಲಿ ನಾದಾಬ್ ಹಾಗೂ ಅಬೀಹೂ ಎಂಬ ಇಬ್ಬರು ತಮ್ಮ ತಮ್ಮ ಧೂಪಾರತಿಗಳಲ್ಲಿ ಯೆಹೋವನು ಆಜ್ಞಾಪಿಸದೆ ಇದ್ದ ಬೇರೆ ಬೆಂಕಿಯನ್ನಿಟ್ಟು ಅದರ ಮೇಲೆ ಧೂಪದ್ರವ್ಯವನ್ನು ಹಾಕಿ ಅದನ್ನು ಯೆಹೋವನ ಸನ್ನಿಧಿಯಲ್ಲಿ ಸಮರ್ಪಿಸಿದರು.


ಆಗ ಯೆಹೋವನು ಮೋಶೆಗೆ ಹೇಳಿದ್ದೇನೇಂದರೆ, “ಇಸ್ರಾಯೇಲರಲ್ಲಿ ಹಿರಿಯರೆಂದೂ ಮತ್ತು ಅಧಿಪತಿಗಳೆಂದೂ ನೀನು ತಿಳಿದುಕೊಂಡಿರುವ ಎಪ್ಪತ್ತು ಮಂದಿಯನ್ನು ದೇವದರ್ಶನದ ಗುಡಾರದ ಬಾಗಿಲಿಗೆ ಕರೆದು ಅಲ್ಲಿ ನಿನ್ನೊಡನೆ ನಿಲ್ಲಿಸಿಕೋ.


ಇಸ್ರಾಯೇಲಿನ ಪ್ರಭುವೋ ಯೆಹೋವನ ಸನ್ನಿಧಿಯಲ್ಲಿ ಊಟ ಮಾಡುವುದಕ್ಕಾಗಿ ಇಲ್ಲಿ ಕುಳಿತುಕೊಳ್ಳಬಹುದು. ಅವನು ಹೆಬ್ಬಾಗಿಲ ಪಡಸಾಲೆಯ ಮಾರ್ಗವಾಗಿ ಪ್ರವೇಶಿಸಿ, ಅದೇ ಮಾರ್ಗವಾಗಿ ಹೊರಗೆ ಹೋಗಬೇಕು” ಎಂದು ಹೇಳಿದನು.


ಆದರೆ ಆತನು ಅವನಿಗೆ, “ನೀನು ನನ್ನ ಮುಖವನ್ನು ನೋಡುವುದಕ್ಕೆ ಸಾಧ್ಯವಿಲ್ಲ. ಏಕೆಂದರೆ ಮನುಷ್ಯರಲ್ಲಿ ಯಾರೂ ನನ್ನನ್ನು ನೋಡಿ ಬದುಕಿರಲಾರನು” ಎಂದು ಹೇಳಿದನು.


ತನ್ನ ಹೆಂಡತಿಗೆ, “ನಾವು ಸಾಯುವುದು ನಿಜ, ದೇವರನ್ನು ಕಣ್ಣಾರೆ ಕಂಡೆವಲ್ಲಾ” ಅಂದನು.


ಅದಕ್ಕೆ ಮೀಕಾಯೆಹುವು “ಅದಿರಲಿ, ಈಗ ಯೆಹೋವನ ವಾಕ್ಯವನ್ನು ಕೇಳು, ಯೆಹೋವನು ತನ್ನ ಸಿಂಹಾಸನದ ಮೇಲೆ ಕುಳಿತುಕೊಂಡದ್ದನ್ನೂ ಪರಲೋಕಸೈನ್ಯಗಳು ಆತನ ಎಡಬಲಗಳಲ್ಲಿ ನಿಂತಿದ್ದನ್ನೂ ಕಂಡೆನು.


ಅರಸನಾದ ಉಜ್ಜೀಯನು ಮರಣಹೊಂದಿದ ವರ್ಷದಲ್ಲಿ ಕರ್ತನು ಉನ್ನತೋನ್ನತವಾಗಿ ಸಿಂಹಾಸನಾರೂಢನಾಗಿರುವುದನ್ನು ಕಂಡೆನು. ಆತನ ವಸ್ತ್ರದ ನೆರಿಗೆಯು ಆಲಯದಲ್ಲೆಲ್ಲಾ ಹರಡಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು