Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 25:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಚೊಕ್ಕ ಬಂಗಾರದ ತಗಡುಗಳನ್ನು ಅದರ ಹೊರಗಡೆಯೂ ಹಾಗೂ ಒಳಗಡೆಯೂ ಹೊದಿಸಬೇಕು. ಅದರ ಮೇಲೆ ಸುತ್ತಲೂ ಚಿನ್ನದ ತೋರಣ ಕಟ್ಟಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಅಪ್ಪಟ ಬಂಗಾರದ ತಗಡುಗಳನ್ನು ಅದರ ಹೊರಗಡೆ ಮತ್ತು ಒಳಗಡೆ ಹೊದಿಸಿರಬೇಕು. ಅದರ ಮೇಲೆ ಸುತ್ತಲೂ ಚಿನ್ನದ ತೋರಣ ಕಟ್ಟಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಚೊಕ್ಕಬಂಗಾರದ ತಗಡುಗಳನ್ನು ಅದರ ಹೊರಗಡೆಯೂ ಒಳಗಡೆಯೂ ಹೊದಿಸಬೇಕು. ಅದರ ಮೇಲೆ ಸುತ್ತಲೂ ಚಿನ್ನದ ಗೋಟು ಕಟ್ಟಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಅದರ ಹೊರಮೈಯನ್ನು ಮತ್ತು ಒಳಮೈಯನ್ನು ಅಪ್ಪಟ ಬಂಗಾರದಿಂದ ಹೊದಿಸಬೇಕು. ಪೆಟ್ಟಿಗೆಯ ಅಂಚುಗಳ ಸುತ್ತಲೂ ಚಿನ್ನದ ಗೋಟು ಕಟ್ಟಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಅದನ್ನು ಶುದ್ಧ ಬಂಗಾರದಿಂದ ಒಳಗೂ ಹೊರಗೂ ಹೊದಿಸಬೇಕು. ಅದರ ಸುತ್ತಲೂ ಬಂಗಾರದ ತೋರಣವನ್ನು ಮಾಡಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 25:11
7 ತಿಳಿವುಗಳ ಹೋಲಿಕೆ  

ಅದಕ್ಕೆ ಚೊಕ್ಕ ಬಂಗಾರದ ತಗಡುಗಳನ್ನು ಹೊದಿಸಿ, ಸುತ್ತಲೂ ಚಿನ್ನದ ತೋರಣ ಕಟ್ಟಿಸಬೇಕು.


ದೇವಾಲಯದ ಮುಂಭಾಗದಲ್ಲಿದ್ದ ಮಂಟಪದ ಉದ್ದವು ಆಲಯದ ಅಗಲಕ್ಕೆ ಸರಿಯಾಗಿ ಇಪ್ಪತ್ತು ಮೊಳ, ಎತ್ತರವು ಇಪ್ಪತ್ತು ಮೊಳ ಆಗಿತ್ತು. ಸೊಲೊಮೋನನು ಅದರ ಒಳಭಾಗವನ್ನು ಶುದ್ಧ ಬಂಗಾರದ ತಗಡಿನಿಂದ ಹೊದಿಸಿದನು.


ಆ ಗರ್ಭಗೃಹವು ಇಪ್ಪತ್ತು ಮೊಳ ಉದ್ದವೂ, ಇಪ್ಪತ್ತು ಮೊಳ ಅಗಲವೂ, ಇಪ್ಪತ್ತು ಮೊಳ ಎತ್ತರವೂ ಆಗಿತ್ತು. ಅದನ್ನು ಚೊಕ್ಕ ಬಂಗಾರದ ತಗಡಿನಿಂದಲೂ, ಧೂಪವೇದಿಯನ್ನು ದೇವದಾರು ಮರದಿಂದಲೂ ಹೊದಿಸಿದನು.


ಅದರ ಮೇಲ್ಭಾಗಕ್ಕೆ, ನಾಲ್ಕು ಬದಿಗಳಿಗೆ ಹಾಗೂ ಕೊಂಬುಗಳಿಗೆ, ಚೊಕ್ಕ ಬಂಗಾರದ ತಗಡುಗಳನ್ನು ಹೊದಿಸಬೇಕು. ಸುತ್ತಲೂ ಚಿನ್ನದ ಅರುಗನ್ನು (ಅಂಚು) ಕಟ್ಟಿಸಬೇಕು.


ಅದರಲ್ಲಿ ಚಿನ್ನದ ಧೂಪಾರತಿಯು ಮತ್ತು ಚಿನ್ನದ ತಗಡಿನಿಂದ ಹೊದಿಸಿದ ಒಡಂಬಡಿಕೆಯ ಮಂಜೂಷಗಳಿದ್ದವು. ಆ ಮಂಜೂಷದೊಳಗೆ ಮನ್ನ ಇಟ್ಟಿದ್ದ ಚಿನ್ನದ ಪಾತ್ರೆಯೂ, ಆರೋನನ ಚಿಗುರಿದ ಕೋಲೂ, ಒಡಂಬಡಿಕೆಯ ಕಲ್ಲಿನ ಹಲಿಗೆಗಳೂ ಇದ್ದವು.


ನಾಲ್ಕು ಬಂಗಾರದ ಬಳೆಗಳನ್ನು ಅದರ ನಾಲ್ಕು ಮೂಲೆಗಳಲ್ಲಿರುವ ಒಂದೊಂದು ಕಾಲಿಗೂ ಎರಡೆರಡು ಬಳೆಗಳನ್ನು ಹಾಕಬೇಕು.


ಎರಡು ಚಿನ್ನದ ಕೊಂಡಿಗಳನ್ನು ಮಾಡಿಸಿ ಎದೆಯ ಪದಕದ ಕವಚದ ಎರಡು ಮೂಲೆಗಳಿಗೆ ಜೋಡಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು