Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 25:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಆ ಮಂಜೂಷವನ್ನು ಹೊರುವುದಕ್ಕಾಗಿ ನೀನು ಜಾಲೀಮರದ ಕಂಬಗಳನ್ನು ಮಾಡಿಸಿ ಅವುಗಳಿಗೆ ಚಿನ್ನದ ತಗಡುಗಳನ್ನು ಹೊದಿಸಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಆ ಮಂಜೂಷವನ್ನು ಹೊರುವುದಕ್ಕಾಗಿ ಜಾಲೀಮರದ ದೊಣ್ಣೆಗಳನ್ನು ಮಾಡಿಸಿ, ಅವುಗಳಿಗೆ ಚಿನ್ನದ ತಗಡುಗಳನ್ನು ಹೊದಿಸಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಆ ಮಂಜೂಷವನ್ನು ಹೊರುವದಕ್ಕಾಗಿ ನೀನು ಜಾಲೀಮರದ ಕೋಲುಗಳನ್ನು ಮಾಡಿಸಿ ಅವುಗಳಿಗೆ ಚಿನ್ನದ ತಗಡುಗಳನ್ನು ಹೊದಿಸಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಬಳಿಕ ಪೆಟ್ಟಿಗೆಯನ್ನು ಹೊತ್ತುಕೊಂಡು ಹೋಗಲು ಅನುಕೂಲವಾಗುವಂತೆ ಕಂಬಗಳನ್ನು ಮಾಡಬೇಕು. ಈ ಕಂಬಗಳನ್ನು ಜಾಲೀಮರದಿಂದ ಮಾಡಿ ಬಂಗಾರದಿಂದ ಹೊದಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಆಮೇಲೆ ಜಾಲಿ ಮರದ ಕೋಲುಗಳನ್ನು ಮಾಡಿಸಿ, ಅವುಗಳಿಗೆ ಬಂಗಾರದಿಂದ ಹೊದಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 25:13
14 ತಿಳಿವುಗಳ ಹೋಲಿಕೆ  

ಮೋಶೆಯ ಮುಖಾಂತರವಾಗಿ ಕೊಡಲ್ಪಟ್ಟ ಯೆಹೋವನ ಆಜ್ಞಾನುಸಾರವಾಗಿ ಲೇವಿಯರು ದೇವರ ಮಂಜೂಷವನ್ನು ಹೆಗಲ ಮೇಲೆ ಹೊತ್ತುಕೊಂಡು ನಡೆದರು.


ಅದಕ್ಕೆ ಸಂಬಂಧಪಟ್ಟ ಅಗ್ಗಿಷ್ಟಿಕೆಗಳು, ಮುಳ್ಳುಗಳು, ಸಲಿಕೆಗಳು, ಬೋಗುಣಿಗಳು ಮುಂತಾದ ಉಪಕರಣಗಳನ್ನೆಲ್ಲಾ ಮೇಲೆ ಇಟ್ಟು ಹಸನಾದ ತೊಗಲನ್ನು ಹೊದಿಸಿ ಹೊರುವ ಕೋಲುಗಳನ್ನು ಹಾಕಬೇಕು.


ತರುವಾಯ ಅವರು ಬಂಗಾರದ ಯಜ್ಞವೇದಿಯ ಮೇಲೆ ನೀಲಿಬಟ್ಟೆಯನ್ನು ಹಾಸಿ, ಹಸನಾದ ತೊಗಲನ್ನು ಹೊದಿಸಿ ಹೊರುವ ಕೋಲುಗಳನ್ನು ಅಡ್ಡ ದಂಡಕ್ಕೆ ಕಟ್ಟಬೇಕು.


ಇವೆಲ್ಲವುಗಳ ಮೇಲೆ ಅವರು ಕಡುಗೆಂಪಾದ ಬಟ್ಟೆಯನ್ನು ಹಾಸಿ, ಹಸನಾದ ತೊಗಲನ್ನು ಹೊದಿಸಿ ಹೊರುವ ಕೋಲುಗಳನ್ನು ಸೇರಿಸಬೇಕು.


ಅದರ ಮೇಲೆ ಹಸನಾದ ತೊಗಲನ್ನೂ ಮತ್ತು ನೀಲಿ ಬಟ್ಟೆಯನ್ನೂ ಹೊದಿಸಿ, ಮಂಜೂಷದ ಬಳೆಗಳಲ್ಲಿ ಹೊರುವ ಕೋಲುಗಳನ್ನು ಸೇರಿಸಬೇಕು.


ಅವನು ಆಜ್ಞಾಶಾಸನಗಳನ್ನು ಮಂಜೂಷದಲ್ಲಿಟ್ಟು ಮಂಜೂಷಕ್ಕೆ ಕೋಲುಗಳನ್ನು ಹಾಕಿ ಕೃಪಾಸನವನ್ನು ಇರಿಸಿದನು.


ಮತ್ತು ಜಾಲೀಮರದ ಕಂಬಗಳನ್ನು ಮಾಡಿ ಅವುಗಳಿಗೆ ಚಿನ್ನದ ತಗಡುಗಳನ್ನು ಹೊದಿಸಿದನು.


ಆ ಕಂಬಗಳನ್ನು ಜಾಲೀಮರದಿಂದ ಮಾಡಿಸಿ ಅವುಗಳಿಗೆ ಚಿನ್ನದ ತಗಡುಗಳನ್ನು ಹೊದಿಸಬೇಕು.


ಯಜ್ಞವೇದಿಯನ್ನು ಹೊರುವ ಕೋಲುಗಳನ್ನು ಜಾಲೀಮರದಿಂದ ಮಾಡಿಸಿ, ತಾಮ್ರದ ತಗಡುಗಳನ್ನು ಹೊದಿಸಬೇಕು.


ಆ ಕೋಲುಗಳನ್ನು ಜಾಲೀಮರದಿಂದ ಮಾಡಿಸಿ ಅವುಗಳಿಗೆ ಚಿನ್ನದ ತಗಡುಗಳನ್ನು ಹೊದಿಸಬೇಕು. ಅವುಗಳಿಂದಲೇ ಮೇಜನ್ನು ಎತ್ತಬೇಕು.


ಹದಮಾಡಿರುವ ಕೆಂಪುಬಣ್ಣದ ಟಗರಿನ ತೊಗಲುಗಳು, ಕಡಲಪ್ರಾಣಿಯ ತೊಗಲುಗಳೂ, ಜಾಲೀಮರವೂ,


ನಾಲ್ಕು ಬಂಗಾರದ ಬಳೆಗಳನ್ನು ಅದರ ನಾಲ್ಕು ಮೂಲೆಗಳಲ್ಲಿರುವ ಒಂದೊಂದು ಕಾಲಿಗೂ ಎರಡೆರಡು ಬಳೆಗಳನ್ನು ಹಾಕಬೇಕು.


ಮಂಜೂಷದ ಎರಡು ಕಡೆಗಳಲ್ಲಿರುವ ಬಳೆಗಳಲ್ಲಿ ಸೇರಿಸಬೇಕು.


ಆ ಕೋಲುಗಳು ಬಹಳ ಉದ್ದವಾಗಿದ್ದುದರಿಂದ ಅವುಗಳ ತುದಿಗಳು ಗರ್ಭಗೃಹದ ಎದುರಿನಲ್ಲಿರುವ ಪರಿಶುದ್ಧ ಸ್ಥಳದಲ್ಲಿ ನಿಂತವರಿಗೆ ಕಾಣಿಸಿದರೂ ಹೊರಗೆ ನಿಂತವರಿಗೆ ಕಾಣಿಸುತ್ತಿರಲಿಲ್ಲ. ಅವು ಇಂದಿನವರೆಗೂ ಅಲ್ಲೇ ಇವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು