Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 25:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಚೊಕ್ಕ ಬಂಗಾರದ ಕೃಪಾಸನವನ್ನು ಮಾಡಿಸಬೇಕು. ಅದು ಎರಡುವರೆ ಮೊಳ ಉದ್ದವು, ಒಂದುವರೆ ಮೊಳ ಅಗಲವೂ ಆಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 “ಇದೂ ಅಲ್ಲದೆ, ಅಪ್ಪಟ ಬಂಗಾರದ ಒಂದು ಕೃಪಾಸನವನ್ನು ಮಾಡಿಸಬೇಕು. ಅದು ಎರಡುವರೆ ಮೊಳ ಉದ್ದ ಹಾಗು ಒಂದುವರೆ ಮೊಳ ಅಗಲದ್ದಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಅದಲ್ಲದೆ ಚೊಕ್ಕ ಬಂಗಾರದ ಕೃಪಾಸನವನ್ನು ಮಾಡಿಸಬೇಕು. ಅದು ಎರಡುವರೆ ಮೊಳ ಉದ್ದವೂ ಒಂದುವರೆ ಮೊಳ ಅಗಲವೂ ಆಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಇದಲ್ಲದೆ ದೇವರು ಮೋಶೆಗೆ, “ಅಪ್ಪಟ ಬಂಗಾರದಿಂದ ಕೃಪಾಸನವನ್ನು ಮಾಡಿಸಬೇಕು. ಅದು ಎರಡೂವರೆ ಮೊಳ ಉದ್ದವಾಗಿರಬೇಕು. ಒಂದೂವರೆ ಮೊಳ ಅಗಲವಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 “ಸುಮಾರು ನೂರಹತ್ತು ಸೆಂಟಿಮೀಟರ್ ಉದ್ದವೂ ಎಪ್ಪತ್ತು ಸೆಂಟಿಮೀಟರ್ ಅಗಲವೂ ಇರುವ ಕರುಣಾಸನವನ್ನು ಶುದ್ಧ ಬಂಗಾರದಿಂದ ಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 25:17
12 ತಿಳಿವುಗಳ ಹೋಲಿಕೆ  

ಅದರ ಮೇಲೆ ಕೃಪಾಸನವನ್ನು ಮುಚ್ಚುವ ತೇಜಸ್ಸಿನ ಕೆರೂಬಿಗಳೂ ಇದ್ದವು. ಅದನ್ನು ಈಗ ಒಂದೊಂದಾಗಿ ವಿವರಿಸಲು ಸಾಧ್ಯವಿಲ್ಲ.


ಇದಲ್ಲದೆ ಚೊಕ್ಕಬಂಗಾರದಿಂದ ಕೃಪಾಸನವನ್ನು ಮಾಡಿದನು. ಅದು ಎರಡುವರೆ ಮೊಳ ಉದ್ದವು, ಒಂದುವರೆ ಮೊಳ ಅಗಲವೂ ಆಗಿತ್ತು.


ಆದುದರಿಂದ ನಾವು ತಕ್ಕ ಸಮಯದಲ್ಲಿ ಕರುಣೆಯನ್ನು ಹೊಂದುವಂತೆಯೂ ಆತನ ಕೃಪೆಯಿಂದ ಸಮಯೋಚಿತವಾದ ಸಹಾಯವು ನಮಗೆ ದೊರೆಯುವಂತೆಯೂ ಧೈರ್ಯದಿಂದ ಆತನ ಕೃಪಾಸನದ ಮುಂದೆ ಬರೋಣ.


ಪೂರ್ವ ಕಾಲದಲ್ಲಿ ಮಾನವರ ಪಾಪವನ್ನು ದಂಡಿಸದೆ ತಾಳ್ಮೆಯಿಂದಿದ್ದ ದೇವರು, ನಂಬಿಕೆಯುಳ್ಳವರಿಗೆ ಪಾಪಕ್ಷಮೆಯನ್ನು ತರುವ ಸಲುವಾಗಿ ಯೇಸುಕ್ರಿಸ್ತನನ್ನು ರಕ್ತಧಾರೆ ಎರೆಯುವಂತೆ ಮಾಡಿದನು.


ತರುವಾಯ ದಾವೀದನು ತನ್ನ ಮಗನಾದ ಸೊಲೊಮೋನನಿಗೆ ದೇವಾಲಯದ ಮಂಟಪ, ಕಟ್ಟಡಗಳು, ಭಂಡಾರಗಳು, ಮೇಲುಪ್ಪರಿಗೆಗಳು, ಒಳಗಣ ಕೋಣೆಗಳು, ಕೃಪಾಸನ ಮಂದಿರ ಇವುಗಳ ನಕ್ಷೆಯನ್ನು ಕೊಟ್ಟನು.


ಅವನು ಆಜ್ಞಾಶಾಸನಗಳನ್ನು ಮಂಜೂಷದಲ್ಲಿಟ್ಟು ಮಂಜೂಷಕ್ಕೆ ಕೋಲುಗಳನ್ನು ಹಾಕಿ ಕೃಪಾಸನವನ್ನು ಇರಿಸಿದನು.


ಆತನು ನಮ್ಮ ಪಾಪಗಳಿಗಾಗಿ ಪ್ರಾಯಶ್ಚಿತ್ತ ಯಜ್ಞವಾಗಿದ್ದಾನೆ. ನಮ್ಮ ಪಾಪಗಳಿಗೆ ಮಾತ್ರವಲ್ಲದೆ ಸಮಸ್ತ ಲೋಕದ ಪಾಪಗಳಿಗೂ ಪ್ರಾಯಶ್ಚಿತ್ತವಾಗಿದ್ದಾನೆ.


ಮಹಾಪವಿತ್ರಸ್ಥಾನದಲ್ಲಿ ಆಜ್ಞಾಶಾಸನಗಳ ಮಂಜೂಷದ ಮೇಲೆ ಕೃಪಾಸನವನ್ನು ತಂದಿರಿಸಬೇಕು.


ಕೃಪಾಸನದ ಎರಡು ಕೊನೆಗಳಲ್ಲಿ ಎರಡು ಬಂಗಾರದ ಕೆರೂಬಿಗಳನ್ನು ಕೆತ್ತನೆ ಕೆಲಸದಿಂದ ಮಾಡಿಸಬೇಕು.


“‘ನೀನು ರೆಕ್ಕೆತೆರೆದು ನೆರಳು ನೀಡುವ ಕೆರೂಬಿಯಾಗಿದ್ದೆ; ನಾನು ನಿನ್ನನ್ನು ದೇವರ ಪರಿಶುದ್ಧ ಪರ್ವತದಲ್ಲಿ ನೆಲೆಗೊಳಿಸಿದೆನು; ನೀನು ಅಮೂಲ್ಯ ರತ್ನಗಳ ಕೆಂಡದ ಮಧ್ಯದಲ್ಲಿ ವಿಹಾರ ಮಾಡುತ್ತಿದ್ದೆ.


ಆಜ್ಞಾಶಾಸನಗಳ ಮಂಜೂಷ, ಅದನ್ನು ಹೊರುವ ಕಂಬಗಳು, ಕೃಪಾಸನ, ಅದನ್ನು ಮರೆಮಾಡುವ ಪರದೆ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು