Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 25:23 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 “ನೀನು ಜಾಲೀಮರದಿಂದ ಒಂದು ಮೇಜನ್ನು ಮಾಡಿಸಬೇಕು. ಅದು ಎರಡು ಮೊಳ ಉದ್ದವಾಗಿಯೂ, ಒಂದು ಮೊಳ ಅಗಲವಾಗಿಯೂ, ಒಂದುವರೆ ಮೊಳ ಎತ್ತರವಾಗಿಯೂ ಇರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 “ಜಾಲೀ ಮರದಿಂದ ಒಂದು ಮೇಜನ್ನು ಮಾಡಿಸು. ಅದು ಎರಡು ಮೊಳ ಉದ್ದ ಒಂದು ಮೊಳ ಅಗಲ ಹಾಗು ಒಂದುವರೆ ಮೊಳ ಎತ್ತರವಾಗಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ನೀನು ಜಾಲೀಮರದಿಂದ ಮೇಜನ್ನು ಮಾಡಿಸಬೇಕು. ಅದು ಎರಡು ಮೊಳ ಉದ್ದವಾಗಿಯೂ ಒಂದು ಮೊಳ ಅಗಲವಾಗಿಯೂ ಒಂದುವರೆ ಮೊಳ ಎತ್ತರವಾಗಿಯೂ ಇರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 “ನೀನು ಜಾಲೀಮರದಿಂದ ಮೇಜನ್ನು ಮಾಡಬೇಕು. ಮೇಜು ಎರಡು ಮೊಳ ಉದ್ದ, ಒಂದು ಮೊಳ ಅಗಲ ಮತ್ತು ಒಂದೂವರೆ ಮೊಳ ಎತ್ತರ ಇರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 “ಸುಮಾರು ತೊಂಬತ್ತು ಸೆಂಟಿಮೀಟರ್ ಉದ್ದ, ನಲವತ್ತೈದು ಸೆಂಟಿಮೀಟರ್ ಅಗಲ ಮತ್ತು ಅರವತ್ತೆಂಟು ಸೆಂಟಿಮೀಟರ್ ಎತ್ತರ ಇರುವ ಮೇಜನ್ನು ಜಾಲಿ ಮರದಿಂದ ಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 25:23
15 ತಿಳಿವುಗಳ ಹೋಲಿಕೆ  

ಒಂದು ದೇವದರ್ಶನ ಗುಡಾರವು ಕಟ್ಟಲ್ಪಟ್ಟು, ಅದರ ಮೊದಲನೆಯ ಭಾಗದಲ್ಲಿ ದೀಪಸ್ತಂಭ, ಮೇಜು, ಮತ್ತು ಸಮರ್ಪಿಸಿದ ರೊಟ್ಟಿ ಇವುಗಳಿದ್ದವು. ಅದನ್ನು ಪವಿತ್ರಸ್ಥಳ ಎಂದು ಕರೆಯಲಾಗುತ್ತಿತು.


ಹತ್ತು ಮೇಜುಗಳನ್ನು ಮಾಡಿಸಿ, ದೇವಾಲಯದೊಳಗೆ ಬಲಗಡೆಯಲ್ಲಿ ಐದನ್ನೂ, ಎಡಗಡೆಯಲ್ಲಿ ಐದನ್ನೂ ಇರಿಸಿ ನೂರು ಬಂಗಾರದ ಬೋಗುಣಿಗಳನ್ನು ಮಾಡಿಸಿದನು.


ಸೊಲೊಮೋನನು ಯೆಹೋವನ ಆಲಯಕ್ಕೋಸ್ಕರ ಮಾಡಿಸಿದ ಒಳಗಿನ ಸಾಮಾನುಗಳು ಯಾವುವೆಂದರೆ - ಬಂಗಾರದ ಧೂಪವೇದಿಯು ನೈವೇದ್ಯವಾದ ರೊಟ್ಟಿಗಳನ್ನಿಡುವುದಕ್ಕಾಗಿ ಬಂಗಾರದ ಮೇಜು,


ಸೊಲೊಮೋನನು ಯೆಹೋವನ ದೇವಾಲಯಕ್ಕಾಗಿ ಮಾಡಿಸಿದ ಒಳಗಿನ ಸಾಮಾನುಗಳು ಯಾವುದೆಂದರೆ: ಬಂಗಾರದ ಧೂಪವೇದಿ, ನೈವೇದ್ಯ ರೊಟ್ಟಿಗಳನ್ನಿಡುವ ಮೇಜುಗಳು,


ಮೀಸಲು ರೊಟ್ಟಿಗಳನ್ನಿಡುವ ಬಟ್ಟಲುಗಳು ಹಾಗೂ ಪ್ರತಿಯೊಂದು ಮೇಜಿಗೆ ಉಪಯೋಗಿಸಬೇಕಾದ ಬಂಗಾರದ ತೂಕ, ಬೆಳ್ಳಿಯ ಮೇಜುಗಳ ಬೆಳ್ಳಿಯ ತೂಕ,


ಅವರು ನೋಡಿಕೊಳ್ಳಬೇಕಾದವುಗಳು ಯಾವುದೆಂದರೆ: ಮಂಜೂಷವು, ಮೇಜು, ದೀಪಸ್ತಂಭಗಳು, ಯಜ್ಞವೇದಿಗಳು, ದೇವಸ್ಥಾನದ ಸೇವೆಯ ಉಪಕರಣಗಳು, ಒಳಗಣ ತೆರೆಗಳು ಇವುಗಳೇ. ಇವುಗಳ ಸಕಲವಿಧವಾದ ಸೇವಕಾರ್ಯವನ್ನು ಅವರು ಮಾಡಬೇಕು.


ಅವುಗಳನ್ನು ಆರಾರು ರೊಟ್ಟಿಗಳ ಮೇರೆಗೆ ಎರಡು ರಾಶಿಗಳಾಗಿ, ಚೊಕ್ಕಬಂಗಾರದ ಮೇಜಿನ ಮೇಲೆ ಯೆಹೋವನ ಸನ್ನಿಧಿಯಲ್ಲಿ ಇಡಬೇಕು.


ಮೇಜು, ಅದರ ಕಂಬಗಳು, ಅದರ ಉಪಕರಣಗಳು, ಅದರ ಮೇಲೆ ಇಡತಕ್ಕ ನೈವೇದ್ಯದ ರೊಟ್ಟಿಗಳು,


ಅಲ್ಲಿ ಮರದ ವೇದಿಕೆಯೊಂದಿತ್ತು. ಅದರ ಎತ್ತರ ಮೂರು ಮೊಳ, ಉದ್ದ ಎರಡು ಮೊಳವಾಗಿತ್ತು. ಅದರ ಮೂಲೆಗಳೂ, ಪೀಠವೂ, ಪಕ್ಕಗಳೂ ಮರದ್ದೇ ಆಗಿದ್ದವು. ಆ ಪುರುಷನು ನನಗೆ, “ಇದು ಯೆಹೋವನ ಸಮ್ಮುಖದ ಮೇಜು” ಎಂದು ಹೇಳಿದನು.


ಮೇಜು ಅದರ ಉಪಕರಣಗಳು, ಚೊಕ್ಕ ಬಂಗಾರದ ದೀಪಸ್ತಂಭ ಅದರ ಉಪಕರಣಗಳು,


ಇವೆಲ್ಲವುಗಳ ಮೇಲೆ ಅವರು ಕಡುಗೆಂಪಾದ ಬಟ್ಟೆಯನ್ನು ಹಾಸಿ, ಹಸನಾದ ತೊಗಲನ್ನು ಹೊದಿಸಿ ಹೊರುವ ಕೋಲುಗಳನ್ನು ಸೇರಿಸಬೇಕು.


ಮಹಾಪರಿಶುದ್ಧಸ್ಥಳದ ಎದುರಿಗೆ ಎಡಗಡೆಯಲ್ಲಿಯೂ, ಬಲಗಡೆಯಲ್ಲಿಯೂ ಇಡುವುದಕ್ಕಾಗಿ ಐದೈದರಂತೆ ಇಡುವುದಕ್ಕೋಸ್ಕರ ಚೊಕ್ಕ ಬಂಗಾರದಿಂದ ಮಾಡಿದ ಪುಷ್ಪಾಲಂಕಾರವುಳ್ಳ ಹತ್ತು ದೀಪಸ್ತಂಭಗಳು, ಬಂಗಾರದ ಹಣತೆ, ಇಕ್ಕಳಗಳು, ಚೊಕ್ಕ ಬಂಗಾರದ ಬಟ್ಟಲುಗಳು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು