ವಿಮೋಚನಕಾಂಡ 25:37 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201937 ಅದಕ್ಕೆ ಏಳು ಹಣತೆಗಳನ್ನು ಮಾಡಿಸಬೇಕು. ಆ ಹಣತೆಗಳ ಬೆಳಕು ಎದುರಿನಿಂದ ಬೀಳುವಂತೆ ಅವುಗಳನ್ನು ಹಚ್ಚಿರಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)37 ಅದಕ್ಕೆ ಏಳು ಹಣತೆಗಳನ್ನು ಮಾಡಿಸಬೇಕು. ಆ ಹಣತೆಗಳಲ್ಲಿ ದೀಪಹಚ್ಚಿದಾಗ ಅವುಗಳ ಬೆಳಕು ಮುಂಭಾಗದಲ್ಲಿ ಪ್ರಕಾಶಿಸುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)37 ಅದಕ್ಕೆ ಏಳು ಹಣತೆಗಳನ್ನು ಮಾಡಿಸಬೇಕು; ಆ ಹಣತೆಗಳಲ್ಲಿ ದೀಪಹಚ್ಚಲು ಎದುರಾಗಿ ಬೆಳಕು ಉಂಟಾಗುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್37 ಅದಕ್ಕೆ ಏಳು ಹಣತೆಗಳನ್ನು ಮಾಡಿಸಬೇಕು. ಈ ಹಣತೆಗಳು ದೀಪಸ್ತಂಭದ ಮುಂದಿರುವ ಪ್ರದೇಶಕ್ಕೆ ಬೆಳಕು ಕೊಡುವುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ37 “ಅದರ ಏಳು ದೀಪಗಳನ್ನು ಮಾಡಿ ಅವು ಮುಂದುಗಡೆಯಲ್ಲಿ ಪ್ರಕಾಶಕೊಡುವಂತೆ ಅವುಗಳನ್ನು ಹೊತ್ತಿಸಬೇಕು. ಅಧ್ಯಾಯವನ್ನು ನೋಡಿ |
ಈ ಯಾಜಕರು ಪ್ರತಿದಿನ ಬೆಳಿಗ್ಗೆ ಹಾಗು ಸಾಯಂಕಾಲ ಯೆಹೋವನಿಗೋಸ್ಕರ ಸರ್ವಾಂಗಹೋಮಗಳನ್ನು ಸಮರ್ಪಿಸುತ್ತಾ ಸುಗಂಧದ್ರವ್ಯ ಧೂಪವನ್ನು ಹಾಕುತ್ತಾ ಶುದ್ಧ ಬಂಗಾರದ ಮೇಜಿನ ಮೇಲೆ ನೈವೇದ್ಯವಾದ ರೊಟ್ಟಿಗಳನ್ನಿಡುತ್ತಾ ಪ್ರತಿ ಸಾಯಂಕಾಲದಲ್ಲಿ ಬಂಗಾರದ ದೀಪಸ್ತಂಭದ ದೀಪಗಳನ್ನು ಹಚ್ಚುತ್ತಾ ಇರುತ್ತಾರೆ. ಹೀಗೆ ನಾವು ನಮ್ಮ ದೇವರಾದ ಯೆಹೋವನ ಕಟ್ಟಳೆಗಳನ್ನು ಕೈಕೊಳ್ಳುತ್ತೇವೆ; ನೀವಾದರೋ ಆತನನ್ನು ಬಿಟ್ಟವರು.