ವಿಮೋಚನಕಾಂಡ 26:31 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201931 ನೀಲಿ, ನೆರಳೆ, ಕಡುಗೆಂಪು ವರ್ಣಗಳು ಹಾಗೂ ನಯವಾಗಿ ಹೊಸೆದ ಹತ್ತಿಯ ನೂಲಿನಿಂದ ಪರದೆಯನ್ನು ಮಾಡಿಸಿ, ಅದಕ್ಕೆ ಕೆರೂಬಿಗಳಿಗಾಗಿ ಕೌಶಲ್ಯಪೂರ್ಣವಾಗಿ ಕಸೂತಿ ಹಾಕಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)31 ಹುರಿನಾರಿನ ಬಟ್ಟೆಯಲ್ಲಿ ನೀಲಿ, ಧೂಮ್ರ, ರಕ್ತವರ್ಣಗಳುಳ್ಳ ದಾರದಿಂದ ಕೆರೂಬಿಗಳನ್ನು ಕಲಾತ್ಮಕವಾಗಿ ಕಸೂತಿಹಾಕಿ ಒಂದು ತೆರೆಯ ಚಿತ್ರವನ್ನು ಮಾಡಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)31 ಹುರಿನಾರಿನ ಬಟ್ಟೆಯಲ್ಲಿ ನೀಲಿ ಧೂಮ್ರ ರಕ್ತವರ್ಣಗಳುಳ್ಳ ದಾರದಿಂದ ಕೆರೂಬಿಗಳನ್ನು ಚಮತ್ಕಾರವಾಗಿ ಕಸೂತಿಹಾಕಿ ಒಂದು ತೆರೆಯನ್ನು ಮಾಡಿಸಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್31 “ಪವಿತ್ರಗುಡಾರದ ಒಳಭಾಗವನ್ನು ವಿಂಗಡಿಸಲು ಉತ್ತಮವಾದ ಹುರಿನಾರಿನ ಬಟ್ಟೆಯಿಂದ ಒಂದು ವಿಶೇಷ ಪರದೆಯನ್ನು ಮಾಡಿಸಬೇಕು. ನೀಲಿ, ನೇರಳೆ ಮತ್ತು ಕೆಂಪು ದಾರಗಳಿಂದ ಪರದೆಯ ಮೇಲೆ ಕೆರೂಬಿಗಳ ಚಿತ್ರಗಳನ್ನು ಕಸೂತಿಹಾಕಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ31 “ಪರದೆಯನ್ನು ನೀಲಿ, ಧೂಮ್ರ, ರಕ್ತವರ್ಣದ ದಾರದಿಂದ ಮತ್ತು ನಯವಾದ ನಾರಿನಿಂದ ಹೊಸೆದು ಮಾಡಬೇಕು. ಅದರ ಮೇಲೆ ಕೌಶಲ್ಯದಿಂದ ಕಸೂತಿಹಾಕಿ ಮಾಡಿದ ಕೆರೂಬಿಗಳುಳ್ಳದ್ದನ್ನಾಗಿ ಅದನ್ನು ಮಾಡಬೇಕು. ಅಧ್ಯಾಯವನ್ನು ನೋಡಿ |