ವಿಮೋಚನಕಾಂಡ 26:32 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019
32 ಜಾಲೀಮರದಿಂದ ನಾಲ್ಕು ಕಂಬಗಳನ್ನು ಮಾಡಿಸಿ, ಚಿನ್ನದ ತಗಡುಗಳನ್ನು ಹೊದಿಸಿ, ನಾಲ್ಕು ಬೆಳ್ಳಿಯ ಗದ್ದಿಗೆ ಕಲ್ಲುಗಳನ್ನು ಮೇಲೆ ನಿಲ್ಲಿಸಿ ಚಿನ್ನದ ಕೊಂಡಿಗಳಿಂದ ಆ ಪರದೆಯನ್ನು ಆ ನಾಲ್ಕು ಕಂಬಗಳಿಗೆ ಸಿಕ್ಕಿಸಬೇಕು.
32 ಜಾಲೀಮರದಿಂದ ನಾಲ್ಕು ಕಂಬಗಳನ್ನು ಮಾಡಿಸಿ, ಚಿನ್ನದ ತಗಡುಗಳನ್ನು ಹೊದಿಸಿ, ನಾಲ್ಕು ಬೆಳ್ಳಿಯ ಗದ್ದಿಗೇ ಕಲ್ಲುಗಳ ಮೇಲೆ ನಿಲ್ಲಿಸಿ ಚಿನ್ನದ ಕೊಂಡಿಗಳಿಂದ ಆ ತೆರೆಯನ್ನು ಆ ನಾಲ್ಕು ಕಂಬಗಳಿಗೆ ಸಿಕ್ಕಿಸಬೇಕು.
32 ಜಾಲೀಮರದಿಂದ ನಾಲ್ಕು ಕಂಬಗಳನ್ನು ಮಾಡಿಸಿ ಚಿನ್ನದ ತಗಡುಗಳನ್ನು ಹೊದಿಸಿ ನಾಲ್ಕು ಬೆಳ್ಳಿಯ ಗದ್ದಿಗೇ ಕಲ್ಲುಗಳ ಮೇಲೆ ನಿಲ್ಲಿಸಿ ಚಿನ್ನದ ಕೊಂಡಿಗಳಿಂದ ಆ ತೆರೆಯನ್ನು ಆ ನಾಲ್ಕು ಕಂಬಗಳಿಗೆ ಸಿಕ್ಕಿಸಬೇಕು.
32 ಜಾಲೀಮರದಿಂದ ನಾಲ್ಕು ಕಂಬಗಳನ್ನು ಮಾಡಿಸಿ ಅವುಗಳನ್ನು ಚಿನ್ನದಿಂದ ಹೊದಿಸಬೇಕು. ನಾಲ್ಕು ಕಂಬಗಳ ಮೇಲೆ ಚಿನ್ನದಿಂದ ಮಾಡಿದ ಕೊಂಡಿಗಳನ್ನು ಹಾಕಿಸಬೇಕು. ಕಂಬಗಳ ಕೆಳಗೆ ಬೆಳ್ಳಿಯ ಗದ್ದಿಗೇಕಲ್ಲುಗಳನ್ನು ಹಾಕಿಸಬೇಕು. ಬಳಿಕ ಚಿನ್ನದ ಕೊಂಡಿಗಳಲ್ಲಿ ಪರದೆಯನ್ನು ತೂಗುಹಾಕಿಸಬೇಕು.
32 ಜಾಲಿ ಮರದ ನಾಲ್ಕು ಸ್ತಂಭಗಳನ್ನು ಮಾಡಿ, ಬಂಗಾರ ತಗಡುಗಳಿಂದ ಅವುಗಳನ್ನು ಹೊದಿಸಿದರು. ಅವುಗಳಿಗೆ ಬಂಗಾರದ ಕೊಂಡಿಗಳನ್ನು ಮಾಡಿ, ಬೆಳ್ಳಿಯ ನಾಲ್ಕು ಗದ್ದಿಗೇ ಕಲ್ಲುಗಳ ಮೇಲೆ ಊರಿಕೊಂಡಿರುವ ಜಾಲಿ ಮರದ ಸ್ತಂಭಗಳಲ್ಲಿ ಅದನ್ನು ತೂಗು ಹಾಕಬೇಕು.
ಆ ತೋಟದ ಆವರಣವು ಬಿಳೀ ನೂಲಿನ ಬಟ್ಟೆಗಳೂ, ನೀಲಿಬಟ್ಟೆಗಳೂ, ಧೂಮ್ರವರ್ಣವುಳ್ಳ ನಾರಿನ ದಾರಗಳು ಮತ್ತು ಅಮೃತಶಿಲೆಯ ಕಲ್ಲುಕಂಬಗಳಿಗೆ ಕಟ್ಟಲಾದ ಬೆಳ್ಳಿಯ ಉಂಗುರ ಇವುಗಳಿಂದ ಅಲಂಕೃತವಾಗಿತ್ತು. ಜರತಾರಿ ಕಸೂತಿ ಹಾಕಿರುವ ಬೆಳ್ಳಿ ಬಂಗಾರದ ಸುಖಾಸನಗಳು, ಅವುಗಳನ್ನು ಕೆಂಪು, ಬಿಳಿ, ಹಳದಿ ಮತ್ತು ಕಪ್ಪು ಬಣ್ಣಗಳುಳ್ಳ ಅಮೃತಶಿಲೆಗಳ ಕಲ್ಲುಗಳಿಂದ ರಚಿತವಾದ ನೆಲಗಟ್ಟಿನ ಮೇಲೆ ಇಡಲಾಗಿತ್ತು.
ಆ ಪರದೆಯನ್ನು ತೂಗು ಹಾಕುವುದಕ್ಕಾಗಿ ಐದು ಕಂಬಗಳನ್ನೂ ಅವುಗಳ ಕೊಂಡಿಗಳನ್ನೂ ಮಾಡಿ ಅವುಗಳ ಸುತ್ತಲ ಮೆಟ್ಟಿಲುಗಳಿಗೂ, ಕಟ್ಟುಗಳಿಗೂ ಚಿನ್ನದ ತಗಡುಗಳನ್ನು ಹೊದಿಸಿದರು. ಅವುಗಳ ಐದು ತಳಭಾಗಗಳನ್ನು ತಾಮ್ರದಿಂದ ಮಾಡಿದರು.
ಆ ಪರದೆ ತೂಗಿಸುವುದಕ್ಕಾಗಿ ಜಾಲೀಮರದಿಂದ ಐದು ಕಂಬಗಳನ್ನು ಮಾಡಿಸಿ ಚಿನ್ನದ ತಗಡುಗಳನ್ನು ಹೊದಿಸಬೇಕು. ಅವುಗಳ ಕೊಂಡಿಗಳನ್ನು ಚಿನ್ನದಿಂದ ಮಾಡಿಸಿ ಅವುಗಳಿಗಾಗಿ ಐದು ತಾಮ್ರದ ಗದ್ದಿಗೆ ಕಲ್ಲುಗಳನ್ನು ಮಾಡಿಸಬೇಕು.