Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 26:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಅದಲ್ಲದೆ ಐವತ್ತು ಚಿನ್ನದ ಕೊಂಡಿಗಳನ್ನು ಮಾಡಿಸಿ ಆ ಪರದೆಗಳನ್ನು ಒಂದಕ್ಕೊಂದು ಹೆಣೆದು ಒಂದೇ ಗುಡಾರವಾಗುವಂತೆ ಜೋಡಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಇದೂ ಅಲ್ಲದೆ ಐವತ್ತು ಚಿನ್ನದ ಕೊಂಡಿಗಳನ್ನು ಮಾಡಿಸಿ ಆ ಬಟ್ಟೆಗಳನ್ನು ಒಂದಕ್ಕೊಂದು ಕೂಡಿಸಬೇಕು. ಹೀಗೆ ಒಂದೇ ಗುಡಾರವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಅದಲ್ಲದೆ ಐವತ್ತು ಚಿನ್ನದ ಕೊಂಡಿಗಳನ್ನು ಮಾಡಿಸಿ ಆ ಬಟ್ಟೆಗಳನ್ನು ಒಂದಕ್ಕೊಂದು ಕೂಡಿಸಬೇಕು; ಹೀಗೆ ಒಂದೇ ಗುಡಾರವಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಬಳಿಕ ಪರದೆಗಳನ್ನು ಒಟ್ಟಾಗಿ ಜೋಡಿಸಲು ಅನುಕೂಲವಾಗುವಂತೆ ಐವತ್ತು ಚಿನ್ನದ ಕೊಂಡಿಗಳನ್ನು ಮಾಡಿಸಬೇಕು. ಹೀಗೆ ಒಂದೇ ಗುಡಾರವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಬಂಗಾರದ ಐವತ್ತು ಕೊಂಡಿಗಳನ್ನು ಮಾಡಿ, ಅವುಗಳಿಂದ ಪರದೆಗಳನ್ನು ಒಂದಕ್ಕೊಂದು ಜೋಡಿಸಬೇಕು. ಹೀಗೆ ಅದು ಒಂದೇ ಗುಡಾರವಾಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 26:6
11 ತಿಳಿವುಗಳ ಹೋಲಿಕೆ  

ದೇಹವೆಲ್ಲಾ ಆತನ ಮುಖಾಂತರ ಪ್ರತಿ ಕೀಲಿನಿಂದ ಬಿಗಿಯಾಗಿ ಜೋಡಿಸಲ್ಪಟ್ಟು ಐಕ್ಯವಾಗಿದ್ದು, ಪ್ರತಿಯೊಂದು ಅಂಗವು ತನ್ನ ಕೆಲಸವನ್ನು ಮಾಡುವುದರಿಂದ ದೇಹವು ಪ್ರೀತಿಯಲ್ಲಿ ಬೆಳೆದು ಕ್ಷೇಮಾಭಿವೃದ್ಧಿಯನ್ನು ಹೊಂದುತ್ತದೆ.


ಆಗ ಅವರು ಆ ದೇವದರ್ಶನ ಗುಡಾರವನ್ನು ಮೋಶೆಯ ಬಳಿಗೆ ತೆಗೆದುಕೊಂಡು ಬಂದರು. ಗುಡಾರವನ್ನು, ಅದಕ್ಕೆ ಸಂಬಂಧಪಟ್ಟ ಉಪಕರಣಗಳೆಲ್ಲವನ್ನೂ ಅಂದರೆ ಅದರ ಕೊಂಡಿಗಳನ್ನು, ಚೌಕಟ್ಟುಗಳನ್ನು, ಅಗುಳಿಗಳನ್ನು, ಕಂಬಗಳನ್ನು, ಮೆಟ್ಟುವಕಲ್ಲುಗಳನ್ನು,


ಒಂದೇ ಡೇರೆಯಾಗುವಂತೆ ಸಮಸ್ತವನ್ನು ಜೋಡಿಸುವುದಕ್ಕಾಗಿ ತಾಮ್ರದ ಐವತ್ತು ಕೊಂಡಿಗಳನ್ನು ಮಾಡಿದರು.


ಅದಲ್ಲದೆ ಐವತ್ತು ಚಿನ್ನದ ಕೊಂಡಿಗಳನ್ನು ಮಾಡಿ ಆ ಪರದೆಗಳನ್ನು ಒಂದಕ್ಕೊಂದು ಜೋಡಿಸಿದರು; ಹೀಗೆ ಅದು ಒಂದೇ ಗುಡಾರ ಆಯಿತು.


ಅವರು ಮಾಡಬೇಕಾದವುಗಳು ಯಾವುವೆಂದರೆ; ದೇವದರ್ಶನದ ಗುಡಾರ, ಅದರ ಮೇಲ್ಹೊದಿಕೆಗಳು, ಕೊಂಡಿಗಳು, ಚೌಕಟ್ಟುಗಳು, ಅಗುಳಿಗಳು, ಕಂಬಗಳು, ಗದ್ದಿಗೆಕಲ್ಲುಗಳು,


ಆ ಪರದೆಯನ್ನು ಕೊಂಡಿಗಳಿಗೆ ಸಿಕ್ಕಿಸಿದಾಗ ಅದರೊಳಗೆ ಆಜ್ಞಾಶಾಸನಗಳ ಮಂಜೂಷವನ್ನು ತರಿಸಿಡಬೇಕು. ಆ ಪರದೆಯು ಪವಿತ್ರಸ್ಥಾನವೆಂಬುದನ್ನೂ ಮತ್ತು ಮಹಾಪವಿತ್ರಸ್ಥಾನವನ್ನೂ ವಿಂಗಡಿಸುವುದು.


ತಾಮ್ರದ ಐವತ್ತು ಕೊಂಡಿಗಳನ್ನು ಮಾಡಿಸಿ ಆ ಕೊಂಡಿಗಳನ್ನು ಕುಣಿಕೆಗಳಲ್ಲಿ ಸಿಕ್ಕಿಸಿ ಸಮಸ್ತವು ಸೇರಿ ಒಂದೇ ಗುಡಾರವಾಗುವಂತೆ ಜೋಡಿಸಬೇಕು.


ಆ ಕುಣಿಕೆಗಳು ಐವತ್ತೈವತ್ತರ ಮೇರೆಗೆ ಒಂದಕ್ಕೊಂದು ಎದುರುಬದುರಾಗಿರಬೇಕು.


ಈ ಗುಡಾರದ ಮೇಲೆ ಹೊದಿಸುವುದಕ್ಕಾಗಿ ಆಡಿನ ರೋಮದಿಂದ ಹನ್ನೊಂದು ಪರದೆಗಳನ್ನು ಮಾಡಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು