Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 27:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯಜ್ಞವೇದಿಯನ್ನು ಜಾಲೀಮರದಿಂದ ಐದು ಮೊಳ ಉದ್ದವಾಗಿಯೂ, ಐದು ಮೊಳ ಅಗಲವಾಗಿಯೂ ಚಚ್ಚೌಕವಾಗಿ ಮಾಡಿಸಬೇಕು. ಅದರ ಎತ್ತರವು ಮೂರು ಮೊಳವಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 “ಬಲಿಪೀಠವನ್ನು ಜಾಲೀಮರದಿಂದ ಮಾಡಿಸಬೇಕು. ಅದು ಐದು ಮೊಳ ಉದ್ದ, ಐದು ಮೊಳ ಅಗಲ ಹಾಗು ಮೂರು ಮೊಳ ಎತ್ತರವಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಯಜ್ಞವೇದಿಯನ್ನು ಜಾಲೀಮರದಿಂದ ಐದು ಮೊಳ ಉದ್ದವಾಗಿಯೂ ಐದು ಮೊಳ ಅಗಲವಾಗಿಯೂ ಚಚ್ಚೌಕವಾಗಿ ಮಾಡಿಸಬೇಕು; ಅದರ ಎತ್ತರ ಮೂರು ಮೊಳವಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಯೆಹೋವನು ಮೋಶೆಗೆ, “ಜಾಲೀಮರದಿಂದ ಯಜ್ಞವೇದಿಕೆಯನ್ನು ಮಾಡಿಸಬೇಕು. ಈ ಯಜ್ಞವೇದಿಕೆಯು ಚೌಕವಾಗಿರಬೇಕು. ಅದು ಐದು ಮೊಳ ಉದ್ದ, ಐದು ಮೊಳ ಅಗಲ ಮತ್ತು ಮೂರು ಮೊಳ ಎತ್ತರ ಇರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 “ಇದಲ್ಲದೆ ಜಾಲಿ ಮರದಿಂದ ಬಲಿಪೀಠವನ್ನು ಮಾಡಬೇಕು. ಅದರ ಎತ್ತರವು ಸುಮಾರು ಒಂದು ಮೀಟರ್ ಇರಬೇಕು. ಅದರ ಉದ್ದ ಮತ್ತು ಅಗಲವು ಸುಮಾರು ಎರಡೂವರೆ ಮೀಟರ್ ಚಚ್ಚೌಕವಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 27:1
20 ತಿಳಿವುಗಳ ಹೋಲಿಕೆ  

ನಮಗೊಂದು ಯಜ್ಞವೇದಿ ಉಂಟು ಈ ಯಜ್ಞವೇದಿಯ ಪದಾರ್ಥಗಳನ್ನು ತಿನ್ನುವುದಕ್ಕೆ ಗುಡಾರದಲ್ಲಿ ಸೇವೆ ನಡೆಸುವವರಿಗೆ ಹಕ್ಕಿಲ್ಲ.


ಇದಲ್ಲದೆ ಸೊಲೊಮೋನನು ತಾಮ್ರದ ಯಜ್ಞವೇದಿಯನ್ನು ಮಾಡಿಸಿದನು. ಅದರ ಉದ್ದ ಇಪ್ಪತ್ತು ಮೊಳ, ಅಗಲ ಇಪ್ಪತ್ತು ಮೊಳ, ಎತ್ತರ ಹತ್ತು ಮೊಳವು ಆಗಿತ್ತು.


ಅದೇ ದಿನದಲ್ಲಿ ಗಾದನು ದಾವೀದನ ಬಳಿಗೆ ಬಂದು ಅವನಿಗೆ, “ನೀನು ಹೋಗಿ ಯೆಬೂಸಿಯನಾದ ಅರೌನನ ಕಣದಲ್ಲಿ ಯೆಹೋವನಿಗೋಸ್ಕರ ಒಂದು ಯಜ್ಞವೇದಿಯನ್ನು ಕಟ್ಟಿಸು” ಎಂದು ಹೇಳಿದನು.


ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ದೇವದರ್ಶನದ ಗುಡಾರದ ಬಾಗಿಲಿನ ಮುಂದೆ ಸರ್ವಾಂಗಹೋಮ ಯಜ್ಞವೇದಿಯನ್ನು ಇಟ್ಟು ಅದರ ಮೇಲೆ ಸರ್ವಾಂಗಹೋಮವನ್ನು ಮತ್ತು ಧಾನ್ಯಸಮರ್ಪಣೆಯನ್ನೂ ಮಾಡಿದನು.


ಯಜ್ಞವೇದಿಯನ್ನೂ ಅದರ ಉಪಕರಣಗಳನ್ನೂ ಅಭಿಷೇಕಿಸಿ ಸರ್ವಾಂಗಹೋಮ ಯಜ್ಞವೇದಿಯನ್ನು ಪ್ರತಿಷ್ಠಿಸಬೇಕು; ಆ ಯಜ್ಞವೇದಿ ಅತ್ಯಂತ ಪರಿಶುದ್ಧವಾಗಿರಬೇಕು.


ಮೋಶೆಯು ಯೆಹೋವನ ಆಜ್ಞೆಗಳನ್ನೆಲ್ಲಾ ಬರೆದಿಟ್ಟನು. ಬೆಳಿಗ್ಗೆ ಎದ್ದು ಆ ಬೆಟ್ಟದ ತಪ್ಪಲಲ್ಲಿ ಯಜ್ಞವೇದಿಯನ್ನು ಕಟ್ಟಿಸಿ ಇಸ್ರಾಯೇಲರ ಹನ್ನೆರಡು ಕುಲಗಳಿಗೆ ಸರಿಯಾಗಿ ಹನ್ನೆರಡು ಕಲ್ಲಿನ ಕಂಬಗಳನ್ನು ಸ್ಥಾಪನೆಮಾಡಿಸಿದನು.


ಯಜ್ಞವೇದಿ, ಅದರ ತಾಮ್ರದ ಜಾಳಿಗೆ, ಕಂಬಗಳು, ಉಪಕರಣಗಳು, ಬೋಗುಣಿ, ಅದರ ಪೀಠ,


ಅವರು ನೋಡಿಕೊಳ್ಳಬೇಕಾದವುಗಳು ಯಾವುದೆಂದರೆ: ಮಂಜೂಷವು, ಮೇಜು, ದೀಪಸ್ತಂಭಗಳು, ಯಜ್ಞವೇದಿಗಳು, ದೇವಸ್ಥಾನದ ಸೇವೆಯ ಉಪಕರಣಗಳು, ಒಳಗಣ ತೆರೆಗಳು ಇವುಗಳೇ. ಇವುಗಳ ಸಕಲವಿಧವಾದ ಸೇವಕಾರ್ಯವನ್ನು ಅವರು ಮಾಡಬೇಕು.


ಅವರು ಯಜ್ಞವೇದಿಯ ಬೂದಿಯನ್ನು ತೆಗೆದುಬಿಟ್ಟು ಆ ಯಜ್ಞವೇದಿಯ ಮೇಲೆ ನೇರಳೆ ವರ್ಣದ ಬಟ್ಟೆಯನ್ನು ಹಾಸಿದರು.


ಇದಲ್ಲದೆ, ಯೆಹೋವನ ಆಲಯಕ್ಕೂ, ತನ್ನ ವೇದಿಗೂ ಮಧ್ಯದಲ್ಲಿದ್ದು ಆ ವರೆಗೂ ಯೆಹೋವನ ಸೇವೆಗೆ ಉಪಯೋಗಿಸಲ್ಪಡುತ್ತಿದ್ದ ತಾಮ್ರ ಯಜ್ಞವೇದಿಯನ್ನೂ ಆಲಯದ ಎದುರಿನಿಂದ ತೆಗೆಯಿಸಿ, ತನ್ನ ಯಜ್ಞವೇದಿಯ ಉತ್ತರ ದಿಕ್ಕಿನಲ್ಲಿಡಿಸಿದನು.


ದೇವರ ಸೇವಕನಾದ ಮೋಶೆಯ ಎಲ್ಲಾ ಆಜ್ಞೆಗಳಿಗೆ ಅನುಸಾರವಾಗಿ ಆರೋನನೂ, ಅವನ ಮಕ್ಕಳೂ ಇಸ್ರಾಯೇಲರಿಗೋಸ್ಕರ ಯಜ್ಞವೇದಿ, ಧೂಪವೇದಿ ಇವುಗಳ ಮೇಲೆ ಹೋಮ ಮಾಡುತ್ತಾ, ಧೂಪ ಹಾಕುತ್ತಾ, ದೇವಾಲಯದ ಅತಿಪರಿಶುದ್ಧ ಸ್ಥಳದ ಎಲ್ಲಾ ಸೇವೆಯನ್ನು ಮಾಡುತ್ತಾ, ದೋಷಪರಿಹಾರ ಮಾಡುತ್ತಾ ಇದ್ದರು.


ಆಗ ದೇವರ ಮನುಷ್ಯನಾದ ಮೋಶೆಯ ಧರ್ಮಶಾಸ್ತ್ರದಲ್ಲಿ ಬರೆದಿರುವ ಪ್ರಕಾರ ಸರ್ವಾಂಗಹೋಮಗಳನ್ನು ಸಮರ್ಪಿಸುವುದಕ್ಕಾಗಿ ಯೋಚಾದಾಕನ ಮಗನಾದ ಯೇಷೂವನೂ, ಯಾಜಕರಾದ ಅವನ ಬಂಧುಗಳೂ, ಶೆಯಲ್ತೀಯೇಲನ ಮಗನಾದ ಜೆರುಬ್ಬಾಬೆಲನೂ ಮತ್ತು ಅವನ ಬಂಧುಗಳೂ ಇಸ್ರಾಯೇಲ್ ದೇವರ ಯಜ್ಞವೇದಿಯನ್ನು ಪುನಃ ಕಟ್ಟುವುದಕ್ಕೆ ಪ್ರಾರಂಭಿಸಿದರು.


ಆ ಸ್ಥಳದಲ್ಲಿ ಮೋಶೆಯು ಯಜ್ಞವೇದಿಯನ್ನು ಕಟ್ಟಿಸಿ ಅದಕ್ಕೆ “ಯೆಹೋವ ನಿಸ್ಸಿ” ಎಂದು ಹೆಸರಿಟ್ಟನು.


ಧೂಪವೇದಿ, ಯಜ್ಞವೇದಿ ಅದರ ಉಪಕರಣಗಳು, ನೀರಿನ ತೊಟ್ಟಿ ಅದರ ಪೀಠ,


ತಾಮ್ರದ ಯಜ್ಞವೇದಿಯನ್ನು, ಅದರ ತಾಮ್ರದ ಜಾಲರಿಯನ್ನು, ಅದರ ಕೋಲುಗಳನ್ನು, ಉಪಕರಣಗಳನ್ನು,


ದೇವದರ್ಶನ ಗುಡಾರದ ಬಾಗಿಲಿನ ಮುಂದೆ ಸರ್ವಾಂಗಹೋಮ ಯಜ್ಞವೇದಿಯನ್ನು ಇರಿಸಬೇಕು.


ಅದಕ್ಕೆ ಸಂಬಂಧಪಟ್ಟ ಅಗ್ಗಿಷ್ಟಿಕೆಗಳು, ಮುಳ್ಳುಗಳು, ಸಲಿಕೆಗಳು, ಬೋಗುಣಿಗಳು ಮುಂತಾದ ಉಪಕರಣಗಳನ್ನೆಲ್ಲಾ ಮೇಲೆ ಇಟ್ಟು ಹಸನಾದ ತೊಗಲನ್ನು ಹೊದಿಸಿ ಹೊರುವ ಕೋಲುಗಳನ್ನು ಹಾಕಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು