ವಿಮೋಚನಕಾಂಡ 27:18 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಅಂಗಳವು ನೂರು ಮೊಳ ಉದ್ದವಾಗಿಯೂ ಸುತ್ತಲೂ ಐವತ್ತು ಮೊಳ ಅಗಲವಾಗಿಯೂ ಇರಬೇಕು. ಅದರ ಸುತ್ತಲಿರುವ ಪರದೆಯು ನಯವಾಗಿ ಹೊಸೆದ ಹತ್ತಿಯ ನೂಲಿನಿಂದ ಬಟ್ಟೆಯಿಂದ ಮಾಡಿದ್ದು ಅದಕ್ಕೆ ಐದು ಮೊಳ ಎತ್ತರವಿರಬೇಕು. ಅದಕ್ಕೆ ತಾಮ್ರದ ಗದ್ದಿಗೆ ಕಲ್ಲುಗಳಿರಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಅಂಗಳವು ಮೂರು ಮೊಳ ಉದ್ದ ಹಾಗು ಐವತ್ತು ಮೊಳ ಅಗಲವಿರಬೇಕು. ಅದಕ್ಕೆ ಅದರ ಸುತ್ತಲಿರುವ ಪರದೆ ಹುರಿನಾರಿನ ಬಟ್ಟೆಯಿಂದ ಮಾಡಿದ್ದಾಗಿ ಐದು ಮೊಳ ಎತ್ತರವಿರಬೇಕು. ಅದಕ್ಕೆ ಸೇರಿದ ಗದ್ದಿಗೇ ಕಲ್ಲುಗಳು ತಾಮ್ರದವುಗಳಾಗಿರಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಅಂಗಳವು ನೂರು ಮೊಳ ಉದ್ದವಾಗಿಯೂ ಐವತ್ತು ಮೊಳ ಅಗಲವಾಗಿಯೂ ಇರಬೇಕು. ಅದರ ಸುತ್ತಲಿರುವ ಪರದೆಯು ಹುರಿನಾರಿನ ಬಟ್ಟೆಯಿಂದುಂಟಾಗಿ ಐದು ಮೊಳ ಎತ್ತರವಿರಬೇಕು. ಅದಕ್ಕೆ ಸೇರಿದ ಗದ್ದಿಗೇಕಲ್ಲುಗಳು ತಾಮ್ರದವುಗಳಾಗಿರಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಅಂಗಳವು ನೂರು ಮೊಳ ಉದ್ದ ಮತ್ತು ಐವತ್ತು ಮೊಳ ಅಗಲ ಇರಬೇಕು. ಅಂಗಳದ ಸುತ್ತಲಿರುವ ಪರದೆಗಳ ಗೋಡೆಯು ಐದು ಮೊಳ ಎತ್ತರವಿರಬೇಕು. ಪರದೆಗಳನ್ನು ಉತ್ತಮ ನಾರುಬಟ್ಟೆಯಿಂದ ಮಾಡಿಸಬೇಕು. ಕಂಬಗಳ ಕೆಳಗಿರುವ ಗದ್ದಿಗೇಕಲ್ಲುಗಳನ್ನು ತಾಮ್ರದಿಂದ ಮಾಡಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಅಂಗಳದ ಉದ್ದ ಸುಮಾರು ನಲವತ್ತೈದು ಮೀಟರ್, ಅಗಲ ಸುಮಾರು ಇಪ್ಪತ್ತಮೂರು ಮೀಟರ್, ಅದರ ಎತ್ತರ ಸುಮಾರು ಎರಡು ಮೀಟರ್ ಇರಬೇಕು. ಪರದೆಗಳು ನಯವಾದ ನಾರಿನಿಂದ ಹೊಸೆದದ್ದಾಗಿದ್ದು, ಅವುಗಳ ಕುಳಿಗಳನ್ನು ಕಂಚಿನಿಂದ ಮಾಡಿಸಬೇಕು. ಅಧ್ಯಾಯವನ್ನು ನೋಡಿ |