Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 27:21 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ದೇವದರ್ಶನ ಗುಡಾರದಲ್ಲಿ ಆಜ್ಞಾಶಾಸನಗಳ ಮಂಜೂಷದ ಮುಂದಿರುವ ಪರದೆಯ ಹೊರಗೆ ಆರೋನನೂ, ಅವನ ಮಕ್ಕಳೂ ಅದನ್ನು ಸಾಯಂಕಾಲದಿಂದ ಉದಯದವರೆಗೆ ಯೆಹೋವನ ಸನ್ನಿಧಿಯಲ್ಲಿ ಆ ದೀಪವು ಉರಿಯುತ್ತಿರುವಂತೆ ಸರಿಪಡಿಸುತ್ತಿರಬೇಕು. ಇಸ್ರಾಯೇಲ್ಯರು ಅವರ ಸಂತತಿಯವರು ಈ ನಿಯಮವನ್ನು ತಲತಲಾಂತರದವರೆಗೆ ಶಾಶ್ವತವಾಗಿ ಅನುಸರಿಸಬೇಕು. ಅದು ಅವರಿಗೆ ನಿತ್ಯ ನಿಯಮವಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ದೇವದರ್ಶನದ ಗುಡಾರದಲ್ಲಿ, ಆಜ್ಞಾಶಾಸನಗಳ ಮಂಜೂಷದ ಮುಂದಿರುವ ತೆರೆಯ ಹೊರಗೆ, ಆರೋನನು ಮತ್ತು ಅವನ ಮಕ್ಕಳು ಸಂಜೆಯಿಂದ ಮುಂಜಾನೆಯವರೆಗೆ ಸರ್ವೇಶ್ವರನಾದ ನನ್ನ ಸನ್ನಿಧಿಯಲ್ಲಿ ಆ ದೀಪವನ್ನು ಸರಿಪಡಿಸುತ್ತಾ ಉರಿಸುತ್ತಿರಬೇಕು. ಈ ನಿಯಮವನ್ನು ಇಸ್ರಯೇಲರು ಮತ್ತು ಅವರ ಸಂತತಿಯವರು ತಲತಲಾಂತರದವರೆಗೂ ಅನುಸರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ದೇವದರ್ಶನದ ಗುಡಾರದಲ್ಲಿ ಆಜ್ಞಾಶಾಸನಗಳ ಮಂಜೂಷದ ಮುಂದಿರುವ ತೆರೆಯ ಹೊರಗೆ ಆರೋನನೂ ಅವನ ಮಕ್ಕಳೂ ಸಾಯಂಕಾಲದಿಂದ ಉದಯದವರೆಗೂ ಯೆಹೋವನ ಸನ್ನಿಧಿಯಲ್ಲಿ ಆ ದೀಪವನ್ನು ಸರಿಪಡಿಸುತ್ತಿರಬೇಕು. ಇಸ್ರಾಯೇಲ್ಯರೂ ಅವರ ಸಂತತಿಯವರೂ ಈ ನಿಯಮವನ್ನು ಶಾಶ್ವತವಾಗಿ ಅನುಸರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಆರೋನ ಮತ್ತು ಅವನ ಗಂಡುಮಕ್ಕಳಿಗೆ ದೀಪವನ್ನು ನೋಡಿಕೊಳ್ಳುವ ಕೆಲಸವಿರುವುದು. ಅವರು ದೇವದರ್ಶನಗುಡಾರದ ಮೊದಲಿನ ಕೋಣೆಯೊಳಗೆ ಹೋಗುವರು. ಇದು ಎರಡು ಕೋಣೆಗಳನ್ನು ಪ್ರತ್ಯೇಕಿಸುವ ಪರದೆಯ ಹಿಂದೆ ಒಪ್ಪಂದವಿರುವ ಕೋಣೆಯ ಹೊರಗೆ ಇರುತ್ತದೆ. ಈ ಸ್ಥಳದಲ್ಲಿ ದೀಪವು ಯೆಹೋವನ ಮುಂದೆ ಸಾಯಂಕಾಲದಿಂದ ಮುಂಜಾನೆಯವರೆಗೆ ಯಾವಾಗಲೂ ಉರಿಯುತ್ತಿರುವಂತೆ ಅವರು ನೋಡಿಕೊಳ್ಳುವರು. ಇಸ್ರೇಲರು ಮತ್ತು ಅವರ ಸಂತತಿಯವರು ಈ ನಿಯಮಕ್ಕೆ ಶಾಶ್ವತವಾಗಿ ವಿಧೇಯರಾಗಬೇಕು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ದೇವದರ್ಶನದ ಗುಡಾರದಲ್ಲಿ ಒಡಂಬಡಿಕೆಯ ಮಂಜೂಷದ ಮುಂದೆ ಇರುವ ಪರದೆಯ ಹೊರಗೆ, ಆರೋನನು ಮತ್ತು ಅವನ ಮಕ್ಕಳು ಸಂಜೆಯಿಂದ ಉದಯದವರೆಗೆ ಯೆಹೋವ ದೇವರ ಮುಂದೆ ದೀಪವನ್ನು ಸರಿಪಡಿಸುತ್ತಾ ಉರಿಸುತ್ತಿರಬೇಕು. ಈ ನಿಯಮವು ಇಸ್ರಾಯೇಲರಿಗೆ ಮತ್ತು ಅವರ ಸಂತತಿಯವರಿಗೆ ಶಾಶ್ವತವಾದ ನಿಯಮವಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 27:21
44 ತಿಳಿವುಗಳ ಹೋಲಿಕೆ  

“ಇದು ಇಸ್ರಾಯೇಲರಿಗೆ ಶಾಶ್ವತ ನಿಯಮವಾಗಿರುವುದು. ಶುದ್ಧೀಕರಣದ ಆ ನೀರನ್ನು ಚಿಮಿಕಿಸಿದವನು ತನ್ನ ಬಟ್ಟೆಗಳನ್ನು ಒಗೆದುಕೊಳ್ಳಬೇಕು ಮತ್ತು ಆ ನೀರು ಯಾರಿಗೆ ಸೋಂಕುವುದೋ ಅವನು ಆ ದಿನದ ಸಾಯಂಕಾಲದವರೆಗೆ ಅಶುದ್ಧನಾಗಿರಬೇಕು.


ಲೇವಿಯರೇ ದೇವದರ್ಶನದ ಗುಡಾರದ ಸೇವಾಕಾರ್ಯವನ್ನು ಮಾಡಬೇಕು. ಅದರ ಸಂಬಂಧವಾಗಿ ಅವರು ಮಾಡುವ ಪಾಪಫಲವನ್ನು ತಾವೇ ಅನುಭವಿಸಬೇಕು. ಇದು ನಿಮಗೂ, ನಿಮ್ಮ ಸಂತತಿಯವರಿಗೂ ಶಾಶ್ವತ ನಿಯಮವಾಗಿರಬೇಕು. ಆದರೆ ಇಸ್ರಾಯೇಲರ ಮಧ್ಯದಲ್ಲಿ ಲೇವಿಯರಿಗೆ ಸ್ವಂತವಾದ ಸ್ವತ್ತು ಇರುವುದಿಲ್ಲ.


ಈ ಯಾಜಕರು ಪ್ರತಿದಿನ ಬೆಳಿಗ್ಗೆ ಹಾಗು ಸಾಯಂಕಾಲ ಯೆಹೋವನಿಗೋಸ್ಕರ ಸರ್ವಾಂಗಹೋಮಗಳನ್ನು ಸಮರ್ಪಿಸುತ್ತಾ ಸುಗಂಧದ್ರವ್ಯ ಧೂಪವನ್ನು ಹಾಕುತ್ತಾ ಶುದ್ಧ ಬಂಗಾರದ ಮೇಜಿನ ಮೇಲೆ ನೈವೇದ್ಯವಾದ ರೊಟ್ಟಿಗಳನ್ನಿಡುತ್ತಾ ಪ್ರತಿ ಸಾಯಂಕಾಲದಲ್ಲಿ ಬಂಗಾರದ ದೀಪಸ್ತಂಭದ ದೀಪಗಳನ್ನು ಹಚ್ಚುತ್ತಾ ಇರುತ್ತಾರೆ. ಹೀಗೆ ನಾವು ನಮ್ಮ ದೇವರಾದ ಯೆಹೋವನ ಕಟ್ಟಳೆಗಳನ್ನು ಕೈಕೊಳ್ಳುತ್ತೇವೆ; ನೀವಾದರೋ ಆತನನ್ನು ಬಿಟ್ಟವರು.


ಸಮುವೇಲನು ಯೆಹೋವನ ಮಂದಿರದಲ್ಲಿ ದೇವರ ಮಂಜೂಷವಿದ್ದ ಸ್ಥಳದಲ್ಲಿ ಮಲಗಿದ್ದನು. ಆಗ ದೇವದೀಪವು ಇನ್ನೂ ಉರಿಯುತ್ತಿತ್ತು.


ಇಸ್ರಾಯೇಲರ ಎಲ್ಲಾ ದೋಷಗಳನ್ನು ನಿವಾರಣೆಮಾಡುವುದಕ್ಕಾಗಿ ಅವರಿಗೋಸ್ಕರ ವರ್ಷಕ್ಕೆ ಒಂದಾವರ್ತಿ ದೋಷಪರಿಹಾರವನ್ನು ಮಾಡಬೇಕೆಂಬುದೇ ನಿಮಗೆ ಶಾಶ್ವತನಿಯಮ” ಎಂದು ಹೇಳಿದನು. ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಆರೋನನು ಮಾಡಿದನು.


ಕೊಬ್ಬನ್ನಾಗಲಿ ಅಥವಾ ರಕ್ತವನ್ನಾಗಲಿ ತಿನ್ನಬಾರದೆಂಬುದು ನಿಮಗೂ ಮತ್ತು ನಿಮ್ಮ ಸಂತತಿಯವರಿಗೂ ನೀವು ವಾಸಿಸುವ ಎಲ್ಲಾ ಸ್ಥಳಗಳಲ್ಲಿಯೂ ಶಾಶ್ವತವಾದ ನಿಯಮವಾಗಿದೆ’” ಅಂದನು.


ಸಾಯಂಕಾಲದಲ್ಲಿ ದೀಪಗಳನ್ನು ಹೊತ್ತಿಸುವಾಗಲೂ ಅದರ ಮೇಲೆ ಸುಗಂಧದ್ರವ್ಯಗಳಿಂದ ಧೂಪವನ್ನು ಹಾಕಬೇಕು. ಹೀಗೆ ನಿಮ್ಮಿಂದಲೂ ನಿಮ್ಮ ಸಂತತಿಯವರಿಂದಲೂ ಯೆಹೋವನ ಸನ್ನಿಧಿಯಲ್ಲಿ ನಿರಂತರವಾದ ಧೂಪ ಸಮರ್ಪಣೆಯು ನಡೆಯುತ್ತಿರಬೇಕು.


ಇದಲ್ಲದೆ ಪ್ರವಾದನವಾಕ್ಯವು ನಮಗೆ ಬಹುದೃಢವಾಗಿ ದೊರೆತಿದೆ. ಆ ದಿನವು ಅರುಣೋದಯವಾಗುವರೆಗೆ ಮತ್ತು ಉದಯ ನಕ್ಷತ್ರವು ನಿಮ್ಮ ಹೃದಯಗಳಲ್ಲಿ ಮೂಡುವತನಕ ಅದನ್ನು ಕತ್ತಲೆಯಾದ ಸ್ಥಳದಲ್ಲಿ ಪ್ರಕಾಶಿಸುವ ದೀಪವೆಂದೆಣಿಸಿ ಅದಕ್ಕೆ ಲಕ್ಷ್ಯಕೊಟ್ಟರೆ ಒಳ್ಳೆಯದು.


ಯೋಹಾನನು ಉರಿಯುವ ದೀಪದಂತೆ ಪ್ರಕಾಶಿಸಿದನು. ಅವನು ಕೊಡುವ ಬೆಳಕಿನಲ್ಲಿ ಸ್ವಲ್ಪ ಕಾಲ ಅತ್ಯಾನಂದಪಡುವುದಕ್ಕೆ ಮನಸ್ಸು ಮಾಡಿದಿರಿ.


ದಾವೀದನು ಇಸ್ರಾಯೇಲರಲ್ಲಿ ಇದನ್ನು ಕಟ್ಟಳೆಯಾಗಿ ನೇಮಿಸಿದ್ದರಿಂದ ಇಂದಿನವರೆಗೂ ಹಾಗೆಯೇ ನಡೆಯುತ್ತಾ ಬಂದಿದೆ.


ಆರೋನನೂ, ಅವನ ಮಕ್ಕಳೂ ದೇವದರ್ಶನ ಗುಡಾರದೊಳಗೆ ಹೋಗುವಾಗಲೂ, ಪವಿತ್ರಸ್ಥಾನದಲ್ಲಿ ಸೇವೆಮಾಡುವುದಕ್ಕೆ ಯಜ್ಞವೇದಿಯ ಹತ್ತಿರಕ್ಕೆ ಬರುವಾಗಲೂ ಇವುಗಳನ್ನು ಧರಿಸಿಕೊಂಡಿರಬೇಕು. ಇಲ್ಲವಾದರೆ ಅವರು ಆ ಅಪರಾಧದ ಫಲವನ್ನು ಅನುಭವಿಸಿ ಸತ್ತಾರು. ಅವನಿಗೂ ಅವನ ವಂಶಸ್ಥರಿಗೂ ಇದು ಶಾಶ್ವತವಾದ ನಿಯಮವಾಗಿದೆ.


“ಎಫೆಸದಲ್ಲಿರುವ ಸಭೆಯ ದೂತನಿಗೆ ಬರೆ, ಏಳು ನಕ್ಷತ್ರಗಳನ್ನು ತನ್ನ ಬಲಗೈಯಲ್ಲಿ ಹಿಡಿದುಕೊಂಡು ಏಳು ಚಿನ್ನದ ದೀಪಸ್ತಂಭಗಳ ಮಧ್ಯದಲ್ಲಿ ಸಂಚರಿಸುವಾತನು ಹೇಳುವುದೇನಂದರೆ,


ಯಾಕೆಂದರೆ “ಕತ್ತಲೆಯೊಳಗಿನಿಂದ ಬೆಳಕು ಪ್ರಕಾಶಿಸಲಿ” ಎಂದು ಹೇಳಿದ ದೇವರು ತಾನೇ ಯೇಸು ಕ್ರಿಸ್ತನ ಮುಖದಲ್ಲಿ ತೋರುವ ದೇವಮಹಿಮೆಯ ಜ್ಞಾನವೆಂಬ ಪ್ರಕಾಶವು ಅನೇಕರಿಗೆ ಉಂಟಾಗುವುದಕ್ಕಾಗಿ ನಮ್ಮ ಹೃದಯಗಳಲ್ಲಿ ಪ್ರಕಾಶಿಸಿದನು.


“ನಿಮ್ಮ ನಡುಗಳು ಕಟ್ಟಿರಲಿ. ನಿಮ್ಮ ದೀಪಗಳು ಆರದಂತೆ ಉರಿಯುತ್ತಾ ಇರಲಿ.


ಹೀಗೆ ಕತ್ತಲಲ್ಲಿ ವಾಸಿಸಿದ ಈ ಸೀಮೆಯ ಜನರಿಗೆ ಮಹಾ ಬೆಳಕು ಕಾಣಿಸಿತು; ಮರಣದ ಛಾಯೆ ನೆರೆದ ಪ್ರದೇಶಗಳಲ್ಲಿ ವಾಸಿಸುವವರಿಗೆ ಬೆಳಕು ಉದಯವಾಯಿತು” ಎಂಬುದು.


ಜ್ಞಾನಾನುಸಾರವಾಗಿ ಮಾತನಾಡುವುದು ಯಾಜಕನ ತುಟಿಗಳ ಧರ್ಮವಷ್ಟೆ; ಅವನು ಸೇನಾಧೀಶ್ವರನಾದ ಯೆಹೋವನ ದೂತನಾಗಿರುವ ಕಾರಣ ಜನರು ಅವನ ಬಾಯಿಂದ ಧರ್ಮೋಪದೇಶವನ್ನು ಕೇಳುವುದು ಧರ್ಮ. ನೀವೋ ದಾರಿತಪ್ಪಿದ್ದೀರಿ;


ರಾತ್ರಿಯಲ್ಲಿ ಯೆಹೋವನ ಮಂದಿರದಲ್ಲಿರುವ ಆತನ ಸರ್ವಸೇವಕರೇ, ಬನ್ನಿರಿ, ಯೆಹೋವನನ್ನು ಕೊಂಡಾಡಿರಿ.


ಆಗ ನೀನು ಲೇವಿಯರನ್ನು ದೇವದರ್ಶನ ಗುಡಾರದ ಮುಂದೆ ಕರೆದುಕೊಂಡು ಬಂದು ಇಸ್ರಾಯೇಲರ ಸಮೂಹವನ್ನೆಲ್ಲಾ ಕೂಡಿಸಬೇಕು.


ಅವು ಆರೋನನಿಗೂ ಮತ್ತು ಅವನ ಸಂತತಿಯವರಿಗೂ ಸಲ್ಲಬೇಕು. ಮಹಾಪರಿಶುದ್ಧವಾದ ಅವುಗಳನ್ನು ದೇವಸ್ಥಾನದ ಪ್ರಾಕಾರದಲ್ಲಿಯೇ ತಿನ್ನಬೇಕು. ಅವು ಯೆಹೋವನಿಗೆ ಸಮರ್ಪಿತವಾದ ಹೋಮದ್ರವ್ಯಗಳಿಗೆ ಸೇರಿದವುಗಳಾದುದರಿಂದ ಶಾಶ್ವತನಿಯಮದ ಪ್ರಕಾರ ಯಾಜಕರಿಗೇ ಸಲ್ಲಬೇಕು” ಅಂದನು.


ದೇವದರ್ಶನದ ಗುಡಾರದಲ್ಲಿ ಆಜ್ಞಾಶಾಸನಗಳ ಮಂಜೂಷದ ಪೆಟ್ಟಿಗೆಯ ಮುಂದಣ ತೆರೆಯ ಹೊರಗೆ, ಆ ದೀಪಗಳು ಯೆಹೋವನ ಸನ್ನಿಧಿಯಲ್ಲಿ ಸಾಯಂಕಾಲದಿಂದ ಬೆಳಗಿನ ಜಾವದ ವರೆಗೂ ಉರಿಯುತ್ತಿರುವಂತೆ ಆರೋನನು ಅವುಗಳನ್ನು ಸರಿಪಡಿಸಬೇಕು. ಇದು ನಿಮಗೂ ಮತ್ತು ನಿಮ್ಮ ಸಂತತಿಯವರಿಗೂ ಶಾಶ್ವತನಿಯಮ.


ಅವನು ಅದರ ತಲೆಯ ಮೇಲೆ ಕೈಯನ್ನಿಟ್ಟು ದೇವದರ್ಶನದ ಗುಡಾರದ ಎದುರಾಗಿ ಅದನ್ನು ವಧಿಸಬೇಕು. ಆರೋನನ ವಂಶದವರಾದ ಯಾಜಕರು ಅದರ ರಕ್ತವನ್ನು ಯಜ್ಞವೇದಿಯ ಸುತ್ತಲೂ ಎರಚಬೇಕು.


ಆಜ್ಞಾಶಾಸನಗಳ ಮಂಜೂಷವನ್ನು ಅದರಲ್ಲಿ ಇಟ್ಟು ಆ ಮಂಜೂಷವನ್ನು ಪರದೆಯಿಂದ ಮರೆಮಾಡಬೇಕು.


ಅದರಲ್ಲಿ ಸ್ವಲ್ಪವನ್ನು ಪುಡಿಮಾಡಿಸಿ ದೇವದರ್ಶನದ ಗುಡಾರದೊಳಗೆ ಆಜ್ಞಾಶಾಸನಗಳ ಮಂಜೂಷದ ಎದುರಾಗಿ ನಾನು ನಿನಗೆ ದರ್ಶನ ಕೊಡುವ ಸ್ಥಳದಲ್ಲಿ ಇರಿಸಬೇಕು. ಅದು ಅತಿ ಪರಿಶುದ್ಧವಾದದ್ದೆಂದು ನೀವು ಭಾವಿಸಬೇಕು.


ನಾನು ದೇವದರ್ಶನದ ಗುಡಾರವನ್ನೂ ಯಜ್ಞವೇದಿಯನ್ನೂ ಪರಿಶುದ್ಧಗೊಳಿಸುವೆನು. ಆರೋನನನ್ನೂ ಮತ್ತು ಅವನ ಮಕ್ಕಳನ್ನೂ ನನಗೆ ಯಾಜಕ ಸೇವೆ ಮಾಡುವಂತೆ ಶುದ್ಧೀಕರಿಸುವೆನು.


ಈ ಸರ್ವಾಂಗಹೋಮವನ್ನು ನೀವೂ ನಿಮ್ಮ ಸಂತತಿಯವರು ಪ್ರತಿನಿತ್ಯ ಯೆಹೋವನ ಸನ್ನಿಧಿಯಲ್ಲಿ ದೇವದರ್ಶನದ ಗುಡಾರದ ಬಾಗಿಲಿನ ಎದುರಿನಲ್ಲಿ ಮಾಡಬೇಕು. ಆ ಗುಡಾರದಲ್ಲಿ ನಾನು ನಿಮ್ಮೊಂದಿಗೆ ಮಾತನಾಡುವೆನು.


ಶಾಶ್ವತ ನಿಯಮವಾಗಿ ಇಸ್ರಾಯೇಲರು ಅವುಗಳನ್ನು ಆರೋನನಿಗೂ ಅವನ ವಂಶಸ್ಥರಿಗೂ ಕೊಡತಕ್ಕದ್ದು. ಅವು ಯಾಜಕರ ಭಾಗಕ್ಕಾಗಿ ಪ್ರತ್ಯೇಕಿಸಲ್ಪಟ್ಟಿವೆ. ಇಸ್ರಾಯೇಲರು ಸಮಾಧಾನ ಯಜ್ಞಕ್ಕಾಗಿ ಪಶುಗಳನ್ನು ವಧಿಸಿ ಯೆಹೋವನಿಗೆ ನೈವೇದ್ಯ ಮಾಡುವಾಗೆಲ್ಲಾ ಆ ಭಾಗಗಳನ್ನು ಯಾಜಕರಿಗಾಗಿ ಪ್ರತ್ಯೇಕಿಸಬೇಕು.


ಆ ಮಂಜೂಷದಲ್ಲಿ ನಾನು ನಿನಗೆ ಕೊಡುವ ಆಜ್ಞಾಶಾಸನವನ್ನು ಇಡಬೇಕು.


ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆ, ಆರೋನನು ಆಜ್ಞಾಶಾಸನ ಮಂಜೂಷದ ಪಕ್ಕದಲ್ಲಿ ಅದನ್ನು ಇರಿಸಿದನು.


ದೇವರು ಆ ಗುಮ್ಮಟಕ್ಕೆ “ಆಕಾಶ” ಎಂದು ಹೆಸರಿಟ್ಟನು. ಹೀಗೆ ಸಾಯಂಕಾಲವೂ ಉದಯಕಾಲವೂ ಆಗಿ ಎರಡನೆಯ ದಿನವಾಯಿತು.


ದೇವರು ಬೆಳಕನ್ನೂ ಕತ್ತಲನ್ನೂ ಬೇರ್ಪಡಿಸಿ ಬೆಳಕಿಗೆ “ಹಗಲು” ಎಂದೂ, ಕತ್ತಲೆಗೆ “ಇರುಳು” ಎಂದೂ ಹೆಸರಿಟ್ಟನು. ಹೀಗೆ ಸಾಯಂಕಾಲವೂ ಉದಯಕಾಲವೂ ಆಗಿ ಮೊದಲನೆಯ ದಿನವಾಯಿತು.


“ದೇವಸ್ಥಾನದಲ್ಲಿನ ದೀಪಗಳನ್ನು ಪ್ರತಿನಿತ್ಯವೂ ಉರಿಸುವುದಕ್ಕಾಗಿ ಇಸ್ರಾಯೇಲರು ಎಣ್ಣೆಮರದ ಕಾಯಿಗಳನ್ನು ಕುಟ್ಟಿ ತೆಗೆದ ನಿರ್ಮಲವಾದ ಎಣ್ಣೆಯನ್ನು ನಿನಗೆ ತಂದುಕೊಡಬೇಕೆಂದು ಅವರಿಗೆ ಆಜ್ಞಾಪಿಸು.


ಇನ್ನು ಮುಂದೆ ಇಸ್ರಾಯೇಲರ ಮೇಲೆ ದೇವರ ಕೋಪವುಂಟಾಗದಂತೆ, ನೀವೇ ದೇವಸ್ಥಾನದ ವಸ್ತುಗಳನ್ನೂ, ಯಜ್ಞವೇದಿಯನ್ನೂ ನೋಡಿಕೊಳ್ಳಬೇಕು.


ಈ ದಿನವು ನಿಮಗೆ ಜ್ಞಾಪಕಾರ್ಥವಾಗಿರುವುದು. ಯೆಹೋವನ ಘನಕ್ಕಾಗಿ ಆ ಹಬ್ಬವನ್ನು ತಲತಲಾಂತರಕ್ಕೂ ಆಚರಿಸಬೇಕು. ಅದನ್ನು ಶಾಶ್ವತನಿಯಮವೆಂದು ಎಂದೆಂದಿಗೂ ಆಚರಿಸಬೇಕು.


ತೊಳೆದುಕೊಳ್ಳದೆ ಬಂದರೆ ಮರಣ ಶಿಕ್ಷೆಯಾಗುವುದು. ಇದು ಅವನಿಗೂ ಮತ್ತು ಅವನ ಸಂತತಿಯವರಿಗೂ ಶಾಶ್ವತ ನಿಯಮವಾಗಿರಬೇಕು.”


ಅವರಲ್ಲಿ ಒಬ್ಬನು ನೈವೇದ್ಯವಾದದ್ದನ್ನು ಸೂಚಿಸುವುದಕ್ಕಾಗಿ ಎಣ್ಣೆ ಹೊಯ್ದ ಹಿಟ್ಟಿನಲ್ಲಿ ಒಂದು ಹಿಡಿಯನ್ನು ಮತ್ತು ಅದರ ಮೇಲಿರುವ ಧೂಪವೆಲ್ಲವನ್ನು ತೆಗೆದುಕೊಂಡು ಯಜ್ಞವೇದಿಯ ಮೇಲೆ ಹೋಮಮಾಡಿ ಯೆಹೋವನಿಗೆ ಪರಿಮಳವನ್ನು ಉಂಟುಮಾಡಬೇಕು.


ಇಸ್ರಾಯೇಲರು ಇವುಗಳನ್ನು ಯಾಜಕರಿಗೆ ಸಲ್ಲಿಸಬೇಕೆಂದು ಯೆಹೋವನು ಮೋಶೆಯ ಮುಖಾಂತರ ಕೈಯಿಂದ ಅವರನ್ನು ಪ್ರತಿಷ್ಠಿಸಿ ಅಭಿಷೇಕಿಸಿದ ದಿನದಲ್ಲೇ ನೇಮಿಸಿದನು.


“ನೀನೂ ಹಾಗು ನಿನ್ನ ಮಕ್ಕಳೂ ದ್ರಾಕ್ಷಾರಸವನ್ನಾಗಲಿ ಅಥವಾ ಮದ್ಯವನ್ನಾಗಲಿ ಕುಡಿದು ದೇವದರ್ಶನದ ಗುಡಾರದೊಳಗೆ ಬರಬಾರದು; ಹಾಗೆ ಬಂದರೆ ಸಾಯುವಿರಿ. ಇದು ನಿನಗೂ ಮತ್ತು ನಿನ್ನ ಸಂತತಿಯವರೆಲ್ಲರಿಗೂ ಶಾಶ್ವತನಿಯಮ.


ಅವರು ಇದುವರೆಗೆ ಪೂಜಿಸುತ್ತಿದ್ದ ಅಜದೇವತೆಗಳಿಗೆ ಇನ್ನು ಮುಂದೆ ಬಲಿಕೊಟ್ಟು ದೇವದ್ರೋಹಿಗಳಾಗಬಾರದು. ಅವರಿಗೂ ಮತ್ತು ಅವರ ಸಂತತಿಯವರಿಗೂ ಇದು ಶಾಶ್ವತನಿಯಮ.’


ನೀವು ನಿಮ್ಮ ದೇವರಿಗೆ ಸಲ್ಲಿಸಬೇಕಾದದ್ದನ್ನು ತಂದು ಕೊಡುವವರೆಗೂ ಆ ವರ್ಷದ ಬೆಳೆಯ ರೊಟ್ಟಿಯನ್ನಾಗಲಿ, ಸುಟ್ಟ ತೆನೆಗಳನ್ನಾಗಲಿ ಅಥವಾ ಹಸಿತೆನೆಗಳನ್ನಾಗಲಿ ತಿನ್ನಲೇಬಾರದು. ನಿಮಗೂ, ನಿಮ್ಮ ಸಂತತಿಯವರಿಗೂ ಮತ್ತು ನಿಮ್ಮ ಎಲ್ಲಾ ವಾಸಸ್ಥಾನಗಳಲ್ಲಿಯೂ ಇದು ಶಾಶ್ವತನಿಯಮ.


ಆ ದಿನದಲ್ಲಿ ದೇವಾರಾಧನೆಗಾಗಿ ಸಭೆಸೇರಬೇಕೆಂಬುದಾಗಿ ಪ್ರಕಟಪಡಿಸಬೇಕು. ಆ ದಿನದಲ್ಲಿ ಯಾವ ಉದ್ಯೋಗವನ್ನು ನಡೆಸಬಾರದು. ಇದು ನಿಮಗೂ, ನಿಮ್ಮ ಸಂತತಿಯವರಿಗೂ ಮತ್ತು ನಿಮ್ಮ ಎಲ್ಲಾ ನಿವಾಸಗಳಲ್ಲಿ ಶಾಶ್ವತನಿಯಮ.


“‘ನೀವೂ, ನಿಮ್ಮ ಸಂತತಿಯವರೂ ನಿಮ್ಮ ಎಲ್ಲಾ ವಾಸಸ್ಥಳಗಳಲ್ಲಿ ಈ ಮಾತುಗಳಿಗೆ ಅನುಸಾರವಾಗಿ ನ್ಯಾಯತೀರಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು