Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 27:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಆ ಜಾಲರಿಯು ಯಜ್ಞವೇದಿಯ ಸುತ್ತಲಿರುವ ಕಟ್ಟೆಯ ಕೆಳಗಿನವರೆಗೆ ಇದ್ದು ಯಜ್ಞವೇದಿಯ ಅಡಿಯಿಂದ ನಡುವಿನ ತನಕ ಇರುವಂತೆ ಹಾಕಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಆ ಜಾಳಿಗೆಯು ಪೀಠದ ಸುತ್ತಲಿರುವ ಕಟ್ಟಿಗೆಯ ಕಟ್ಟೆಯ ಕೆಳಗೆ ಇದ್ದು, ಪೀಠದ ಬುಡದಿಂದ ನಡುವಿನ ತನಕ ಇರುವಂತೆ ಹಾಕಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಆ ಜಾಳಿಗೆಯು ವೇದಿಯ ಸುತ್ತಲಿರುವ ಕಟ್ಟೆಯ ಕೆಳಗೆ ಇದ್ದು, ವೇದಿಯ ಬುಡದಿಂದ ನಡುವಿನ ತನಕ ಇರುವಂತೆ ಹಾಕಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಆ ಜಾಳಿಗೆಯು ಯಜ್ಞವೇದಿಕೆಯ ಸುತ್ತಲಿರುವ ಕಟ್ಟೆಯ ಕೆಳಗೆ ಇದ್ದು ಯಜ್ಞವೇದಿಕೆಯ ಬುಡದಿಂದ ಅರ್ಧದಷ್ಟು ಮೇಲಕ್ಕೆ ಇರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಆ ಜಾಳಿಗೆಯು ಬಲಿಪೀಠದ ಸುತ್ತಲಿರುವ ಕಟ್ಟಿಗೆಯ ಕಟ್ಟೆಯ ಕೆಳಗೆ ಇದ್ದು, ಅದನ್ನು ಬಲಿಪೀಠದ ಕೆಳಭಾಗದಿಂದ ಮಧ್ಯದವರೆಗೆ ಇರುವಂತೆ ಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 27:5
4 ತಿಳಿವುಗಳ ಹೋಲಿಕೆ  

ಯಜ್ಞವೇದಿಗೆ ಹೆಣಿಗೆ ಕೆಲಸದಿಂದ ತಾಮ್ರದ ಜಾಲರಿಯನ್ನು ಮಾಡಿಸಿದನು. ಅದು ಯಜ್ಞವೇದಿಯ ಸುತ್ತಲಿರುವ ಕಟ್ಟೆಯ ಕೆಳಗೆ ಯಜ್ಞವೇದಿಯ ಬುಡದಿಂದ ನಡುವಿನ ತನಕ ಇರುವಂತೆ ಹಾಕಿದನು.


ಯಜ್ಞವೇದಿಗೆ ಹೆಣಿಗೆ ಕೆಲಸದಿಂದ ತಾಮ್ರದ ಜಾಲರಿಯನ್ನು ಮಾಡಿಸಬೇಕು, ಆ ಜಾಲರಿಯ ನಾಲ್ಕು ಮೂಲೆಗಳಿಗೆ ತಾಮ್ರದ ಬಳೆಗಳನ್ನು ಹಾಕಿಸಬೇಕು.


ಯಜ್ಞವೇದಿಯನ್ನು ಹೊರುವ ಕೋಲುಗಳನ್ನು ಜಾಲೀಮರದಿಂದ ಮಾಡಿಸಿ, ತಾಮ್ರದ ತಗಡುಗಳನ್ನು ಹೊದಿಸಬೇಕು.


ನೆಲದ ಮೇಲೆ ಅಂದರೆ ಕೆಳಭಾಗದ ಮೇಲೆ ಕೆಳಗಿನ ಅಂತಸ್ತಿನ ಎತ್ತರ ಎರಡು ಮೊಳ, ಅದರ ಮೇಲಣ ಅಂಚಿನ ಅಗಲ ಒಂದು ಮೊಳ; ಆ ಚಿಕ್ಕ ಅಂತಸ್ತಿನ ಮೇಲೆ ದೊಡ್ಡ ಅಂತಸ್ತಿನ ಎತ್ತರ ನಾಲ್ಕು ಮೊಳ, ಮೇಲಣ ಅಂಚಿನ ಅಗಲವು ಒಂದು ಮೊಳ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು