Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 27:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಆ ಯಜ್ಞವೇದಿಯನ್ನು ಹಲಗೆಗಳಿಂದ ಟೊಳ್ಳಾದ ಪೆಟ್ಟಿಗೆಯಂತೆ ಮಾಡಿಸಬೇಕು. ನಾನು ಬೆಟ್ಟದಲ್ಲಿ ನಿನಗೆ ತೋರಿಸಿದಂತೆ ಅದನ್ನು ಮಾಡಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಆ ಬಲಿಪೀಠವನ್ನು ಹಲಗೆಗಳಿಂದ ಪೆಟ್ಟಿಗೆಯಂತೆ ಮಾಡಿಸಬೇಕು. ನಾನು ಬೆಟ್ಟದಲ್ಲಿ ನಿನಗೆ ತೋರಿಸಿದಂತೆಯೇ ಅದನ್ನು ಮಾಡಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಆ ವೇದಿಯನ್ನು ಹಲಿಗೆಗಳಿಂದ ಪೆಟ್ಟಿಗೆಯಂತೆ ಮಾಡಿಸಬೇಕು. ನಾನು ಬೆಟ್ಟದಲ್ಲಿ ನಿನಗೆ ತೋರಿಸಿದಂತೆಯೇ ಅದನ್ನು ಮಾಡಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಯಜ್ಞವೇದಿಕೆಯ ಪಾರ್ಶ್ವಗಳನ್ನು ಹಲಗೆಗಳಿಂದ ಮಾಡಿಸಬೇಕು. ನಾನು ಬೆಟ್ಟದ ಮೇಲೆ ನಿನಗೆ ತೋರಿಸಿದ ಪ್ರಕಾರವೇ ಯಜ್ಞವೇದಿಕೆಯನ್ನು ಮಾಡಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಬಲಿಪೀಠವನ್ನು ಚೌಕಟ್ಟುಗಳಿಂದ ಪೊಳ್ಳಾಗಿರುವಂತೆ ಮಾಡಬೇಕು. ಬೆಟ್ಟದಲ್ಲಿ ನಿನಗೆ ತೋರಿಸಿದಂತೆ ಅದನ್ನು ಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 27:8
9 ತಿಳಿವುಗಳ ಹೋಲಿಕೆ  

ನೋಡು, ಬೆಟ್ಟದಲ್ಲಿ ನಾನು ನಿನಗೆ ತೋರಿಸಿದ ಮಾದರಿಯಲ್ಲಿಯೇ ಎಲ್ಲವನ್ನು ಎಚ್ಚರಿಕೆಯಿಂದ ಮಾಡಿಸಬೇಕು.”


ನಾನು ನಿನಗೆ ತೋರಿಸುವ ಮಾದರಿಯಲ್ಲಿಯೇ ಗುಡಾರವನ್ನೂ ಅದರಲ್ಲಿರುವ ಎಲ್ಲಾ ಸಾಮಾನುಗಳನ್ನೂ ಮಾಡಿಸಬೇಕು.


ಮೋಶೆಯು ಗುಡಾರವನ್ನು ಕಟ್ಟುವುದಕ್ಕಿದ್ದಾಗ, “ನೋಡು, ನಾನು ಬೆಟ್ಟದಲ್ಲಿ ನಿನಗೆ ತೋರಿಸಿದ ಮಾದರಿಯ ಪ್ರಕಾರವೇ ಎಲ್ಲವನ್ನೂ ಮಾಡಬೇಕು” ಎಂದು ದೇವರಿಂದ ಎಚ್ಚರಿಸಲ್ಪಟ್ಟಂತೆಯೇ ಪರಲೋಕದಲ್ಲಿರುವವುಗಳ ಪ್ರತಿರೂಪವೂ, ಛಾಯೆಯೂ ಆಗಿರುವ ಆಲಯದಲ್ಲಿ ಅವರು ಸೇವೆ ಸಲ್ಲಿಸುತ್ತಿದ್ದಾರೆ.


ಮನುಷ್ಯರು ಕಲ್ಪಿಸಿದ ಕಟ್ಟಳೆಗಳನ್ನೇ ಅವರು ಉಪದೇಶವಾಗಿ ಬೋಧಿಸುತ್ತಿರುವುದರಿಂದ ನನ್ನನ್ನು ವ್ಯರ್ಥವಾಗಿ ಆರಾಧಿಸುವರು” ಎಂಬುದೇ.


ಆ ನಕ್ಷೆಯಲ್ಲಿ ಸೂಚಿಸಿದ ಎಲ್ಲಾ ಕೆಲಸಗಳ ವಿವರವಾದ ಜ್ಞಾನವು ತನಗೆ ಯೆಹೋವನು ಸೂಚಿಸಿದಂತೆ ಪ್ರಾಪ್ತವಾಯಿತೆಂದು ಹೇಳಿದನು.


ತರುವಾಯ ದಾವೀದನು ತನ್ನ ಮಗನಾದ ಸೊಲೊಮೋನನಿಗೆ ದೇವಾಲಯದ ಮಂಟಪ, ಕಟ್ಟಡಗಳು, ಭಂಡಾರಗಳು, ಮೇಲುಪ್ಪರಿಗೆಗಳು, ಒಳಗಣ ಕೋಣೆಗಳು, ಕೃಪಾಸನ ಮಂದಿರ ಇವುಗಳ ನಕ್ಷೆಯನ್ನು ಕೊಟ್ಟನು.


“ದೇವದರ್ಶನ ಗುಡಾರವು ಮರುಭೂಮಿಯಲ್ಲಿ ನಮ್ಮ ಪೂರ್ವಿಕರ ಬಳಿಯಲ್ಲಿ ಇತ್ತು. ಮೋಶೆಯ ಸಂಗಡ ಮಾತನಾಡಿದವನು, ನೀನು ನೋಡಿದ ಮಾದರಿಯ ಪ್ರಕಾರವೇ ಅದನ್ನು ಮಾಡಿಸಬೇಕೆಂದು ಆಜ್ಞಾಪಿಸಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು