ವಿಮೋಚನಕಾಂಡ 28:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ನ್ಯಾಯತೀರ್ಪಿನ ಎದೆಯ ಪದಕದ ಕವಚವನ್ನು ಕಸೂತಿ ಕೆಲಸದಿಂದ ಮಾಡಿಸಬೇಕು. ಅದನ್ನು ಏಫೋದ್ ಅನ್ನು ಮಾಡಿಸಿದ ಹಾಗೆಯೇ ಚಿನ್ನದ ದಾರದಿಂದಲೂ ನೀಲಿ, ನೇರಳೆ, ಕಡುಗೆಂಪು ವರ್ಣಗಳುಳ್ಳ ದಾರದಿಂದಲೂ ನಯವಾಗಿ ಹೊಸೆದ ಹತ್ತಿಯ ದಾರದಿಂದ ಮಾಡಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 “ದೈವನಿರ್ಣಯದ ಚೀಲವುಳ್ಳ ಎದೆಫಲಕವನ್ನು ಕಸೂತಿ ಕೆಲಸದಿಂದ ಮಾಡಿಸು. ಅದನ್ನು ಏಫೋದ್ ಕವಚದ ಕೆಲಸದಂತೆಯೇ ಚಿನ್ನದ ದಾರದಿಂದಲೂ, ನೀಲಿ, ಊದ ಹಾಗು ಕಡುಗೆಂಪು ವರ್ಣಗಳುಳ್ಳ ದಾರದಿಂದಲೂ ಹುರಿನಾರಿನ ಬಟ್ಟೆಯಿಂದ ಮಾಡಿಸು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಮತ್ತು ದೈವನಿರ್ಣಯದ ಚೀಲದ ಪದಕವನ್ನು ಬುಟೇದಾರಿ ಕೆಲಸದಿಂದ ಮಾಡಿಸಬೇಕು. ಅದನ್ನು ಕವಚದ ಕೆಲಸದಂತೆಯೆ ಚಿನ್ನದ ದಾರದಿಂದಲೂ ನೀಲಿ ಧೂಮ್ರ ರಕ್ತವರ್ಣಗಳುಳ್ಳ ದಾರದಿಂದಲೂ ಹುರಿನಾರಿನ ಬಟ್ಟೆಯಲ್ಲಿ ಮಾಡಿಸಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 “ಮಹಾಯಾಜಕನಿಗೆ ದೈವನಿರ್ಣಯದ ಪದಕವನ್ನು ಮಾಡಿಸು. ಏಫೋದನ್ನು ಮಾಡಿಸಿದಂತೆ ನಿಪುಣರಾದ ಕೆಲಸಗಾರರಿಂದ ಇದನ್ನು ಮಾಡಿಸಬೇಕು. ಚಿನ್ನದ ದಾರಗಳು, ಉತ್ಕೃಷ್ಟವಾದ ನಾರುಬಟ್ಟೆ, ನೀಲಿ, ನೇರಳೆ ಮತ್ತು ಕೆಂಪು ದಾರಗಳನ್ನು ಉಪಯೋಗಿಸಿ ಇದನ್ನು ಮಾಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 “ದೇವನಿರ್ಣಯ ಮಾಡುವ ಆತನ ಎದೆಪದಕವನ್ನು ಕೌಶಲ್ಯ ಕೆಲಸದಿಂದ ಎಂದರೆ ಏಫೋದಿನ ಕೆಲಸದ ಹಾಗೆಯೇ ಬಂಗಾರ, ನೀಲಿ, ಧೂಮ್ರ, ರಕ್ತವರ್ಣದ ದಾರಿನಿಂದ ಮತ್ತು ನಯವಾದ ನಾರಿನಿಂದ ಹೊಸೆದು ಮಾಡಿಸಬೇಕು. ಅಧ್ಯಾಯವನ್ನು ನೋಡಿ |