Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 28:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಅದರ ಮುಂಭಾಗದಲ್ಲಿ ನಾಲ್ಕು ಸಾಲುಗಳಾಗಿ ರತ್ನಗಳನ್ನು ಹೆಚ್ಚಿಸಿರಬೇಕು. ಮೊದಲನೆಯ ಸಾಲಿನಲ್ಲಿ ಮಾಣಿಕ್ಯ, ಪುಷ್ಯರಾಗ ಮತ್ತು ಸ್ಫಟಿಕಗಳು ಇರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಅದರ ಮುಂಭಾಗದಲ್ಲಿ ನಾಲ್ಕು ಸಾಲುಗಳಾಗಿ ಜವೆಯ ಕಲ್ಲುಗಳಲ್ಲಿ ರತ್ನಗಳನ್ನು ಸೇರಿಸಬೇಕು. ಮೊದಲನೆಯ ಸಾಲಿನಲ್ಲಿ ಮಾಣಿಕ್ಯ, ಪುಷ್ಯರಾಗ ಹಾಗು ಸ್ಫಟಿಕಗಳನ್ನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಅದರ ಮುಂಭಾಗದಲ್ಲಿ ನಾಲ್ಕು ಸಾಲುಗಳಾಗಿ ಜವೆಯ ಕಲ್ಲಿಗಳಲ್ಲಿ ರತ್ನಗಳನ್ನು ಸೇರಿಸಬೇಕು. ಮೊದಲನೆಯ ಸಾಲಿನಲ್ಲಿ ಮಾಣಿಕ್ಯ ಪುಷ್ಯರಾಗ ಸ್ಫಟಿಕಗಳನ್ನೂ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಅದರ ಮೇಲೆ ಅಂದವಾದ ರತ್ನಗಳನ್ನು ನಾಲ್ಕು ಸಾಲುಗಳಾಗಿ ಹಾಕಿಸಬೇಕು. ರತ್ನಗಳ ಮೊದಲಿನ ಸಾಲಿನಲ್ಲಿ ಮಾಣಿಕ್ಯ, ಪುಷ್ಪರಾಗ, ಸ್ಪಟಿಕಗಳಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ನಂತರ ಅದರಲ್ಲಿ ನಾಲ್ಕು ಸಾಲುಗಳಾಗಿ ರತ್ನಗಳನ್ನು ಜೋಡಿಸಬೇಕು. ಮೊದಲನೆಯ ಸಾಲಿನಲ್ಲಿ ಮಾಣಿಕ್ಯ, ಪುಷ್ಯರಾಗ ಮತ್ತು ಸ್ಫಟಿಕಗಳಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 28:17
15 ತಿಳಿವುಗಳ ಹೋಲಿಕೆ  

ದೇವರ ಉದ್ಯಾನವನವಾದ ಏದೆನಿನಲ್ಲಿ ನೀನಿದ್ದೆ; ಮಾಣಿಕ್ಯ, ಪುಷ್ಯರಾಗ, ಪಚ್ಚೆ, ಪೀತರತ್ನ, ವಜ್ರ, ವೈಡೂರ್ಯ, ನೀಲ ಗೋಮೇಧಿಕ, ಕೆಂಪು ಸ್ಫಟಿಕ, ಚಿನ್ನ ಈ ಅಮೂಲ್ಯ ರತ್ನಗಳಿಂದ ಭೂಷಿತವಾಗಿದ್ದೆ. ನಿನ್ನಲ್ಲಿರುವ ಈ ರತ್ನಗಳು ನಿನ್ನ ಸೃಷ್ಟಿಯ ದಿನದಲ್ಲಿ ಸಿದ್ಧವಾದವು.


ಜ್ಞಾನವು ಹವಳಕ್ಕಿಂತಲೂ ಶ್ರೇಷ್ಠ, ಇಷ್ಟವಸ್ತುಗಳೆಲ್ಲವೂ ಅದಕ್ಕೆ ಸಮವಲ್ಲ.


ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ನಾನು ಕಾರ್ಯಸಾಧಿಸುವ ದಿನದಲ್ಲಿ ಅವರು ನನಗೆ ಸ್ವಕೀಯ ಜನರಾಗಿರುವರು; ಒಬ್ಬನು ತನ್ನನ್ನು ಸೇವಿಸುವ ಸ್ವಂತ ಮಗನನ್ನು ಕರುಣಿಸುವಂತೆ ನಾನು ಅವರನ್ನು ಕರುಣಿಸುವೆನು” ಇದು ಸೇನಾಧೀಶ್ವರನಾದ ಯೆಹೋವನ ನುಡಿ.


ಆ ಪ್ರಜೆಯಲ್ಲಿನ ಮಹನೀಯರು ಹಿಮಕ್ಕಿಂತ ಶುಭ್ರವಾಗಿಯೂ, ಹಾಲಿಗಿಂತ ಬಿಳುಪಾಗಿಯೂ ಇದ್ದರು. ಅವರ ದೇಹದ ಬಣ್ಣವು ಹವಳವನ್ನು ಮೀರಿತ್ತು, ಅವರ ರೂಪವು ಇಂದ್ರನೀಲಮಣಿಯಷ್ಟು ಅಂದವಾಗಿತ್ತು.


ಗುಣವತಿಯಾದ ಸತಿಯು ಎಲ್ಲಿ ಸಿಕ್ಕುವಳು? ಆಕೆಯು ಹವಳಕ್ಕಿಂತಲೂ ಬಹೂ ಅಮೂಲ್ಯಳು.


ಹೊನ್ನು ಉಂಟು, ಹವಳದ ರಾಶಿ ಉಂಟು, ಆದರೆ ಜ್ಞಾನದ ತುಟಿಗಳೇ ಅಮೂಲ್ಯವಾದ ಆಭರಣ.


ಅದರ ಬೆಲೆಯು ಹವಳಕ್ಕಿಂತಲೂ ಹೆಚ್ಚು, ನಿನ್ನ ಇಷ್ಟವಸ್ತುಗಳೆಲ್ಲವೂ ಅದಕ್ಕೆ ಸಮವಲ್ಲ.


ಮುದ್ರೆಗಳನ್ನು ಕೆತ್ತುವ ಹಾಗೆ ಆ ಶಿಲ್ಪಿಗರಿಂದ ಎರಡೂ ರತ್ನಗಳಲ್ಲಿ ಇಸ್ರಾಯೇಲರ ಕುಲಗಳ ಹೆಸರುಗಳನ್ನು ಕೆತ್ತಿಸಿ, ಅದಕ್ಕೆ ಚಿನ್ನವನ್ನು ಆ ಮುದ್ರೆಗಳ ಮೇಲೆ ಇರಿಸಬೇಕು.


ಮತ್ತು ನೀನು ಎರಡು ಗೋಮೇಧಕ ಅಮೂಲ್ಯರತ್ನಗಳನ್ನು ತೆಗೆದುಕೊಂಡು ಅವುಗಳಲ್ಲಿ ಇಸ್ರಾಯೇಲರ ಕುಲಗಳ ಹೆಸರುಗಳನ್ನು ಕೆತ್ತಿಸಬೇಕು.


ಅದು ಒಂದು ಗೇಣುದ್ದವಾಗಿಯೂ ಮತ್ತು ಒಂದು ಗೇಣಗಲವಾಗಿಯೂ ಎರಡು ಪದರುಳ್ಳದ್ದಾಗಿ ಚಚ್ಚೌಕವಾಗಿರಬೇಕು.


ಎರಡನೆಯ ಸಾಲಿನಲ್ಲಿ ಪಚ್ಚೆ, ನೀಲರತ್ನ ಮತ್ತು ವಜ್ರಗಳಿರಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು