Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 28:18 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಎರಡನೆಯ ಸಾಲಿನಲ್ಲಿ ಪಚ್ಚೆ, ನೀಲರತ್ನ ಮತ್ತು ವಜ್ರಗಳಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಎರಡನೆಯ ಸಾಲಿನಲ್ಲಿ ಕೆಂಪರಲು ಹಾಗು ನೀಲಿ ಪಚ್ಚೆಗಳನ್ನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಎರಡನೆಯ ಸಾಲಿನಲ್ಲಿ ಕೆಂಪರಲು ನೀಲ ಪಚ್ಚೆಗಳನ್ನೂ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಎರಡನೆಯ ಸಾಲಿನಲ್ಲಿ ಕೆಂಪರಲು, ನೀಲ, ಪಚ್ಚೆಗಳಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಎರಡನೆಯ ಸಾಲಿನಲ್ಲಿ ಕೆಂಪರಲು, ನೀಲ ಮತ್ತು ಪಚ್ಚೆಗಳಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 28:18
13 ತಿಳಿವುಗಳ ಹೋಲಿಕೆ  

ಕುಳಿತಿದ್ದವನು ಕಣ್ಣಿಗೆ ಸೂರ್ಯಕಾಂತಿ ಪದ್ಮರಾಗ ಮಣಿಗಳಂತೆ ಕಾಣುತ್ತಿದ್ದನು. ಸಿಂಹಾಸನದ ಸುತ್ತಲೂ ಪಚ್ಚೆಯಂತೆ ತೋರುತ್ತಿದ್ದ ಕಾಮನಬಿಲ್ಲು ಇತ್ತು.


ದೇವರ ಉದ್ಯಾನವನವಾದ ಏದೆನಿನಲ್ಲಿ ನೀನಿದ್ದೆ; ಮಾಣಿಕ್ಯ, ಪುಷ್ಯರಾಗ, ಪಚ್ಚೆ, ಪೀತರತ್ನ, ವಜ್ರ, ವೈಡೂರ್ಯ, ನೀಲ ಗೋಮೇಧಿಕ, ಕೆಂಪು ಸ್ಫಟಿಕ, ಚಿನ್ನ ಈ ಅಮೂಲ್ಯ ರತ್ನಗಳಿಂದ ಭೂಷಿತವಾಗಿದ್ದೆ. ನಿನ್ನಲ್ಲಿರುವ ಈ ರತ್ನಗಳು ನಿನ್ನ ಸೃಷ್ಟಿಯ ದಿನದಲ್ಲಿ ಸಿದ್ಧವಾದವು.


“ನಿನ್ನ ಕೈಕೆಲಸದ ವಸ್ತುಗಳು ಅಪಾರವಾಗಿದ್ದುದರಿಂದ ಅರಾಮಿನವರೂ ನಿನ್ನವರಾಗಿ ವ್ಯಾಪಾರಮಾಡಿ, ಕೆಂಪರಲು, ರಕ್ತಾಂಬರ, ಕಸೂತಿಯ ವಸ್ತ್ರ, ನಾರುಬಟ್ಟೆ, ಹವಳ, ಮಾಣಿಕ್ಯ ಮೊದಲಾದ ಸರಕುಗಳನ್ನು ನಿನಗೆ ತಂದು ಸುರಿದರು.


ಇಗೋ, ನಾನು ನೋಡಲಾಗಿ ಕೆರೂಬಿಗಳ ತಲೆಗಳ ಮೇಲಣ ಗಗನಮಂಡಲದ ಮೇಲ್ಗಡೆ ಇಂದ್ರನೀಲಮಣಿಯಂತೆ ಹೊಳೆಯುವ ಸಿಂಹಾಸನದ ಆಕಾರವು ನನಗೆ ಕಾಣಿಸಿತು.


ಅವುಗಳ ತಲೆಗಳ ಮೇಲ್ಗಡೆಯ ಗಗನಮಂಡಲ ಮೇಲೆ ಇಂದ್ರನೀಲಮಣಿಯಂತೆ ಹೊಳೆಯುವ ಸಿಂಹಾಸನಾಕಾರವು ಕಾಣಿಸಿತು; ಅದರ ಮೇಲೆ ನರರೂಪದಂಥ ರೂಪವುಳ್ಳ ಒಬ್ಬಾತನು ಆಸೀನನಾಗಿದ್ದನು.


ಯೆಹೂದದ ಪಾಪವು ಉಕ್ಕಿನ ಕಂಠದಿಂದಲೂ ಹಾಗೂ ವಜ್ರದ ಮೊನೆಯಿಂದಲೂ ಲಿಖಿತವಾಗಿದೆ. ಅದು ಅವರ ಹೃದಯದ ಹಲಗೆಯಲ್ಲಿಯೂ, ಅವರ ಯಜ್ಞವೇದಿಗಳ ಕೊಂಬುಗಳಲ್ಲಿಯೂ ಕೆತ್ತಿದೆ.


ಅವನ ಕೈಗಳು ಪೀತರತ್ನ ಖಚಿತವಾದ ಬಂಗಾರದ ಸಲಾಕಿಗಳೋಪಾದಿಯಲ್ಲಿವೆ, ಅವನ ಮೈ ಇಂದ್ರನೀಲಮಯವಾದ ದಂತಫಲಕದ ಹಾಗಿದೆ.


ಓಫೀರ್ ದೇಶದ ಅಪರಂಜಿ, ಅಮೂಲ್ಯ ಗೋಮೇಧಿಕ, ಇಂದ್ರನೀಲ, ಇವುಗಳಿಂದ ಜ್ಞಾನದ ಬೆಲೆ ಇಷ್ಟೆಂದು ಗೊತ್ತು ಮಾಡುವುದಕ್ಕೆ ಆಗದು.


ಅದರ ಕಲ್ಲುಗಳಲ್ಲಿ ಇಂದ್ರನೀಲ ಮಣಿಗಳು ಸಿಕ್ಕುವವು, ಅದರಲ್ಲಿ ಚಿನ್ನದ ಪುಡಿಯೂ ಇರುವುದು.


ಎರಡನೆಯ ಸಾಲಿನಲ್ಲಿ ಪಚ್ಚೆ, ನೀಲಮಣಿ ಮತ್ತು ವಜ್ರಗಳು.


ಅವರಿಗೆ ಇಸ್ರಾಯೇಲರ ದೇವರ ದರ್ಶನವಾಯಿತು. ಅವರು ದೇವರನ್ನು ನೋಡಿದರು. ಆಕಾಶಮಂಡಲದಂತೆ ಅತಿ ನಿರ್ಮಲವಾದ ಇಂದ್ರನೀಲಮಣಿಯ ನೆಲಗಟ್ಟು ಆತನ ಪಾದಪೀಠವಾಗಿತ್ತು.


ಅದರ ಮುಂಭಾಗದಲ್ಲಿ ನಾಲ್ಕು ಸಾಲುಗಳಾಗಿ ರತ್ನಗಳನ್ನು ಹೆಚ್ಚಿಸಿರಬೇಕು. ಮೊದಲನೆಯ ಸಾಲಿನಲ್ಲಿ ಮಾಣಿಕ್ಯ, ಪುಷ್ಯರಾಗ ಮತ್ತು ಸ್ಫಟಿಕಗಳು ಇರಬೇಕು.


ಮೂರನೆಯ ಸಾಲಿನಲ್ಲಿ ಸುವರ್ಣರತ್ನ, ಸುಗಂಧಿ ಮತ್ತು ಪದ್ಮರಾಗಗಳು ಇರಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು