Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 28:20 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ನಾಲ್ಕನೆಯ ಸಾಲಿನಲ್ಲಿ ಪೀತರತ್ನ, ಬೆರುಲ್ಲ, ವೈಡೂರ್ಯಗಳನ್ನೂ ಚಿನ್ನದ ಮಣಿಗಳಲ್ಲಿ ಸೇರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ನಾಲ್ಕನೆಯ ಸಾಲಿನಲ್ಲಿ ಪೀತರತ್ನ, ಬೆರುಲ್ಲ ಹಾಗು ವೈಢೂರ್ಯಗಳನ್ನು ಚಿನ್ನದ ಜವೆಯ ಕಲ್ಲುಗಳಲ್ಲಿ ಸೇರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ನಾಲ್ಕನೆಯ ಸಾಲಿನಲ್ಲಿ ಪೀತರತ್ನ ಬೆರುಲ್ಲ ವೈಡೂರ್ಯಗಳನ್ನೂ ಚಿನ್ನದ ಜವೆಯ ಕಲ್ಲಿಗಳಲ್ಲಿ ಸೇರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ನಾಲ್ಕನೆಯ ಸಾಲಿನಲ್ಲಿ ಪೀತರತ್ನ ಮತ್ತು ಬೆರುಲ್ಲ ವಜ್ರಗಳಿರಬೇಕು. ಈ ಎಲ್ಲಾ ರತ್ನಗಳನ್ನು ಚಿನ್ನದ ಜವೆಯ ಕಲ್ಲುಗಳಲ್ಲಿ ಸೇರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ನಾಲ್ಕನೆಯ ಸಾಲಿನಲ್ಲಿ ಪೀತರತ್ನ, ಗೋಮೇಧಿಕ, ಸೂರ್ಯಕಾಂತ ಶಿಲೆ ಇವುಗಳನ್ನು ಬಂಗಾರದ ಜವೆಯ ಕಲ್ಲುಗಳಲ್ಲಿ ಸೇರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 28:20
9 ತಿಳಿವುಗಳ ಹೋಲಿಕೆ  

ಅದು ದೇವರ ತೇಜಸ್ಸಿನಿಂದ ಕೂಡಿತ್ತು. ಪಟ್ಟಣವು ಅಮೂಲ್ಯ ರತ್ನದ ಪ್ರಕಾಶಕ್ಕೆ ಸಮಾನವಾಗಿತ್ತು, ಸ್ವಚ್ಛವಾದ ಸ್ಫಟಿಕದಂತೆ ಶುಭ್ರವಾಗಿತ್ತು.


ಕುಳಿತಿದ್ದವನು ಕಣ್ಣಿಗೆ ಸೂರ್ಯಕಾಂತಿ ಪದ್ಮರಾಗ ಮಣಿಗಳಂತೆ ಕಾಣುತ್ತಿದ್ದನು. ಸಿಂಹಾಸನದ ಸುತ್ತಲೂ ಪಚ್ಚೆಯಂತೆ ತೋರುತ್ತಿದ್ದ ಕಾಮನಬಿಲ್ಲು ಇತ್ತು.


ಅವನ ಶರೀರವು ಪೀತರತ್ನದ ಹಾಗೆ ಕಂಗೊಳಿಸಿತು, ಅವನ ಮುಖವು ಮಿಂಚಿನಂತೆ ಹೊಳೆಯಿತು, ಅವನ ಕಣ್ಣುಗಳು ಉರಿಯುವ ಪಂಜುಗಳೋಪಾದಿಯಲ್ಲಿ ನಿಗಿನಿಗಿಸಿದವು, ಅವನ ಕೈಕಾಲುಗಳು ಬೆಳಗಿದ ತಾಮ್ರದ ಹಾಗೆ ಥಳಥಳಿಸಿದವು, ಅವನ ಮಾತಿನ ಶಬ್ದವು ಜನಸಂದಣಿಯ ಕೋಲಾಹಲದಂತೆ ಕೇಳಿಸಿತು.


ಇಗೋ, ನಾನು ನೋಡಲಾಗಿ ಆ ಕೆರೂಬಿಗಳ ಪಕ್ಕಗಳಲ್ಲಿ, ಒಂದೊಂದು ಕೆರೂಬಿಯ ಪಕ್ಕದಲ್ಲಿ ಒಂದೊಂದು ಚಕ್ರದಂತೆ ನಾಲ್ಕು ಚಕ್ರಗಳಿದ್ದವು; ಆ ಚಕ್ರಗಳ ಬಣ್ಣವು ಪೀತರತ್ನದ ಹಾಗೆ ಹೊಳೆಯುತ್ತಿತ್ತು.


ಆ ಚಕ್ರಗಳ ವರ್ಣವೂ, ರಚನೆಯೂ ಹೇಗಿದ್ದವೆಂದರೆ, ಅವುಗಳ ವರ್ಣವು ಪೀತರತ್ನದ ಹಾಗೆ ಥಳಥಳಿಸುತ್ತಿತ್ತು. ಒಂದು ಚಕ್ರದೊಳಗೆ ಇನ್ನೊಂದು ಚಕ್ರವು ಅಡ್ಡವಾಗಿ ರಚಿಸಿದಂತಿತ್ತು; ಆ ನಾಲ್ಕು ಚಕ್ರಗಳು ಒಂದೇ ಮಾದರಿಯಾಗಿದ್ದವು.


ಮೂರನೆಯ ಸಾಲಿನಲ್ಲಿ ಸುವರ್ಣರತ್ನ, ಸುಗಂಧಿ ಮತ್ತು ಪದ್ಮರಾಗಗಳು ಇರಬೇಕು.


ಇಸ್ರಾಯೇಲರ ಕುಲಗಳ ಸಂಖ್ಯೆಗೆ ಅನುಗುಣವಾಗಿ ಹನ್ನೆರಡು ರತ್ನಗಳಿರಬೇಕು. ಮುದ್ರೆಗಳನ್ನು ಕೆತ್ತುವ ರೀತಿಯಲ್ಲಿ ಒಂದೊಂದು ರತ್ನದಲ್ಲಿ ಒಂದೊಂದು ಕುಲದ ಹೆಸರನ್ನು ಕೆತ್ತಿಸಬೇಕು.


ಅವನ ಕೈಗಳು ಪೀತರತ್ನ ಖಚಿತವಾದ ಬಂಗಾರದ ಸಲಾಕಿಗಳೋಪಾದಿಯಲ್ಲಿವೆ, ಅವನ ಮೈ ಇಂದ್ರನೀಲಮಯವಾದ ದಂತಫಲಕದ ಹಾಗಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು