Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 28:27 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಮತ್ತು ಬೇರೆ ಎರಡು ಚಿನ್ನದ ಕೊಂಡಿಗಳನ್ನು ಮಾಡಿಸಿ ಏಫೋದ್ ಕವಚದ ಎರಡು ಹೆಗಲಿನ ಪಟ್ಟಿಗಳ ಮುಂಭಾಗದ ಕೆಳಗೆ ಕವಚವನ್ನು ಜೋಡಿಸಿರುವ ಸ್ಥಳದ ಹತ್ತಿರ ಕಸೂತಿ ಹಾಕಿಸಿದ ನಡುಕಟ್ಟಿನ ಮೇಲ್ಗಡೆಯಲ್ಲಿ ಇರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಬೇರೆ ಎರಡು ಚಿನ್ನದ ಉಂಗುರಗಳನ್ನು ಮಾಡಿಸಿ ಕವಚದ ಎರಡು ಹೆಗಲಿನ ಪಟ್ಟಿಗಳ ಮುಂಭಾಗದ ಕೆಳಗೆ, ಕವಚವನ್ನು ಜೋಡಿಸಿರುವ ಸ್ಥಳದ ಹತ್ತಿರ ಆ ಕಸೂತಿ ನಡುಕಟ್ಟಿನ ಮೇಲ್ಗಡೆಯಲ್ಲಿ ಇರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಮತ್ತು ಬೇರೆ ಎರಡು ಚಿನ್ನದ ಉಂಗುರಗಳನ್ನು ಮಾಡಿಸಿ ಕವಚದ ಎರಡು ಹೆಗಲಿನ ಪಟ್ಟಿಗಳ ಮುಂಭಾಗದ ಕೆಳಗೆ, ಕವಚವನ್ನು ಜೋಡಿಸಿರುವ ಸ್ಥಳದ ಹತ್ತಿರ, ಆ ವಿಚಿತ್ರವಾದ ನಡುಕಟ್ಟಿನ ಮೇಲ್ಗಡೆಯಲ್ಲಿ ಇರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಇನ್ನೆರಡು ಚಿನ್ನದ ಬಳೆಗಳನ್ನು ಮಾಡಿಸಿ ಅವುಗಳನ್ನು ಏಫೋದಿನ ಭುಜಪಟ್ಟಿಗಳ ಮುಂಭಾಗದ ಕೆಳಗೆ ಸಿಕ್ಕಿಸು. ಈ ಚಿನ್ನದ ಬಳೆಗಳನ್ನು ಏಫೋದಿನ ನಡುಕಟ್ಟಿನ ಮೇಲ್ಗಡೆ ಇರಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಚಿನ್ನದ ಬೇರೆ ಎರಡು ಉಂಗುರಗಳನ್ನು ಮಾಡಿ, ಏಫೋದಿನ ಮುಂಬದಿಯ ಕೆಳಗಿನ ಎರಡು ಹೆಗಲಿನ ಪಟ್ಟಿಗಳಲ್ಲಿ, ಏಫೋದಿನ ವಿಚಿತ್ರವಾದ ನಡುಕಟ್ಟಿನ ಮೇಲೆ ಅದನ್ನು ಜೋಡಿಸುವ ಸ್ಥಳಕ್ಕೆ ಎದುರಾಗಿ ಇರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 28:27
3 ತಿಳಿವುಗಳ ಹೋಲಿಕೆ  

ಕವಚದ ಮೇಲಿರುವ ಕಸೂತಿ ಕೆಲಸದ ನಡುಕಟ್ಟು ಏಕವಾಗಿದ್ದು ಅದರಂತೆಯೇ ನಯವಾಗಿ ಹೊಸೆದ ಹತ್ತಿಯ ದಾರದಿಂದ ಮಾಡಲ್ಪಟ್ಟು ಚಿನ್ನದ ದಾರದಿಂದಲೂ ನೀಲಿ, ನೇರಳೆ, ಕಡುಗೆಂಪು ವರ್ಣಗಳುಳ್ಳ ದಾರದಿಂದಲೂ ಅಲಂಕೃತವಾಗಿರಬೇಕು.


ಅದಲ್ಲದೆ ಎರಡು ಚಿನ್ನದ ಕೊಂಡಿಗಳನ್ನು ಮಾಡಿಸಿ ಎದೆ ಪದಕದ ಒಳಗಣ ಅಂಚಿನ ಮೂಲೆಗಳಲ್ಲಿ ಕವಚದ ಹತ್ತಿರದಲ್ಲೆ ಇಡಿಸಬೇಕು.


ಎದೆಯ ಪದಕವು ಕಸೂತಿಹಾಕಿದ ನಡುಕಟ್ಟಿನ ಮೇಲ್ಗಡೆಯಲ್ಲಿ ಬಿಗಿಯಾಗಿರುವಂತೆಯೂ, ಏಫೋದ್ ಕವಚದಿಂದ ಕಳಚಿಬೀಳದಂತೆಯೂ ಅದರ ಕೊಂಡಿಗಳನ್ನು ಏಫೋದ್ ಕವಚದ ಕೊಂಡಿಗಳಿಗೆ ನೀಲಿ ದಾರದಿಂದ ಕಟ್ಟಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು