Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 28:33 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ನಿಲುವಂಗಿಯ ಅಂಚಿನ ಸುತ್ತಲೂ ನೀಲಿ, ನೇರಳೆ, ಕಡುಗೆಂಪು ವರ್ಣಗಳುಳ್ಳ ದಾರದಿಂದ ದಾಳಿಂಬ ಹಣ್ಣುಗಳನ್ನು ಅವುಗಳ ನಡುವೆ ಚಿನ್ನದ ಗೆಜ್ಜೆಗಳನ್ನು ಹಾಕಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

33 ಮೇಲಂಗಿಯ ಅಂಚಿನ ಸುತ್ತಲೂ ನೀಲಿ, ಊದ ಹಾಗು ಕಡುಗೆಂಪು ರಕ್ತವರ್ಣಗಳುಳ್ಳ ದಾರದಿಂದ ದಾಳಿಂಬೆ ಹಣ್ಣಿನಂತೆ ಚೆಂಡುಗಳನ್ನೂ ಅವುಗಳ ನಡುವೆ ಗೆಜ್ಜೆಗಳನ್ನೂ ತಗಲಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

33 ಮೇಲಂಗಿಯ ಅಂಚಿನ ಸುತ್ತಲೂ ನೀಲಿ ಧೂಮ್ರ ರಕ್ತವರ್ಣಗಳುಳ್ಳ ದಾರದಿಂದ ದಾಳಿಂಬ ಹಣ್ಣಿನಂತೆ ಚಂಡುಗಳನ್ನೂ ಅವುಗಳ ನಡುವೆ ಚಿನ್ನದ ಗೆಜ್ಜೆಗಳನ್ನೂ ತಗಲಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

33 ಬಟ್ಟೆಯ ಅಂಚಿನ ಸುತ್ತಲೂ ದಾಳಿಂಬೆ ಹಣ್ಣುಗಳನ್ನು ಮಾಡಲು ನೀಲಿ, ನೇರಳೆ ಮತ್ತು ಕೆಂಪುದಾರಗಳನ್ನು ಉಪಯೋಗಿಸಬೇಕು. ಆ ದಾಳಿಂಬೆ ಹಣ್ಣಿನ ಚೆಂಡುಗಳನ್ನು ನಿಲುವಂಗಿಯ ಕೆಳಅಂಚಿನಲ್ಲಿ ಸುತ್ತಲೂ ನೇತಾಡುವಂತೆ ಸಿಕ್ಕಿಸಬೇಕು. ದಾಳಿಂಬೆ ಹಣ್ಣಿನ ಚೆಂಡುಗಳ ನಡುವೆ ಚಿನ್ನದ ಗೆಜ್ಜೆಗಳನ್ನು ಸಿಕ್ಕಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

33 ನಿಲುವಂಗಿಯ ಅಂಚಿನ ಮೇಲೆ ನೀಲಿ, ಧೂಮ್ರ, ರಕ್ತವರ್ಣದ ದಾರದಿಂದ ದಾಳಿಂಬೆ ಹಣ್ಣಿನಂತೆ ಅದರ ಅಂಚಿನ ಸುತ್ತಲೂ ಮಾಡಿ, ಅವುಗಳ ಮಧ್ಯದಲ್ಲಿ ಬಂಗಾರದ ಗಂಟೆಗಳನ್ನೂ ಸುತ್ತಲೂ ಇರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 28:33
7 ತಿಳಿವುಗಳ ಹೋಲಿಕೆ  

ಆ ದಿನದಲ್ಲಿ, “ಯೆಹೋವನಿಗೆ ಮೀಸಲು” ಎಂಬ ಲಿಪಿಯು ಕುದುರೆಗಳ ಘಂಟೆಗಳ ಮೇಲೂ ಕೆತ್ತಿರುವುದು; ಯೆಹೋವನ ಆಲಯದ ಪಾತ್ರೆಗಳೆಲ್ಲವೂ ಯಜ್ಞವೇದಿಯ ಪಕ್ಕದ ಬೋಗುಣಿಗಳಂತೆ ಪರಿಶುದ್ಧವಾಗಿರುವವು.


ಪ್ರತಿಯೊಂದು ಕಂಬವು ಹದಿನೆಂಟು ಮೊಳ ಎತ್ತರವಿತ್ತು. ಪ್ರತಿಯೊಂದರ ಮೇಲೆ ಮೂರು ಮೊಳ ಎತ್ತರವಾದ ಒಂದು ತಾಮ್ರದ ಕುಂಭವಿತ್ತು. ಆ ಕುಂಭಗಳ ಮೇಲೆ ಸುತ್ತಲೂ ತಾಮ್ರದ ಜಾಲರಿಯೂ ದಾಳಿಂಬೆ ಹಣ್ಣುಗಳೂ ಇದ್ದವು.


ಇದಲ್ಲದೆ ಅವನು ತಾಮ್ರದ ದಾಳಿಂಬೆಹಣ್ಣುಗಳನ್ನು ಮಾಡಿ, ಅವುಗಳನ್ನು ಕಂಬಗಳ ಮೇಲಣ ಪ್ರತಿಯೊಂದು ಕುಂಭದ ಜಾಲರಿಯ ಸುತ್ತಲೂ ಎರಡೆರಡು ಸಾಲಾಗಿ ಸಿಕ್ಕಿಸಿದನು.


ತಲೆತೂರಿಸುವುದಕ್ಕೆ ಅದರಲ್ಲಿ ಸಂದು ಇರಬೇಕು. ಅದು ಹರಿಯದಂತೆ ಆ ಸಂದಿನ ಸುತ್ತಲೂ ನೇಯಿಗೆ ಕಸೂತಿಯನ್ನು ಅದರೊಂದಿಗೆ ಒಂದು ಪಟ್ಟಿಯನ್ನು ಹಾಕಿಸಬೇಕು.


ಚಿನ್ನದ ಗೆಜ್ಜೆಯೂ ದಾಳಿಂಬೆಯೂ ಒಂದಾದ ಮೇಲೆ ಒಂದು ಆ ನಿಲುವಂಗಿಯ ಅಂಚಿನ ಸುತ್ತಲೂ ಇರಬೇಕು.


ಅದು ಆರೋನನ ತಲೆಯ ಮೇಲೆ ಹಾಕಲ್ಪಟ್ಟು, ಅವನ ಗಡ್ಡದ ಮೇಲೆಯೂ, ಅವನ ಅಂಗಿಗಳ ಕೊರಳ ಪಟ್ಟಿಯವರೆಗೂ ಹರಿದು ಬರುವ ಶ್ರೇಷ್ಠ ತೈಲದಂತೆಯೂ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು