Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 28:37 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

37 ಅದನ್ನು ಮುಂಡಾಸಕ್ಕೆ ಬಿಗಿಯುವುದಕ್ಕಾಗಿ ನೀಲಿ ದಾರವನ್ನು ಅದಕ್ಕೆ ಕಟ್ಟಿಸಬೇಕು. ಅದು ಮುಂಡಾಸದ ಮುಂಭಾಗದಲ್ಲಿ ಇರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

37 ಅದನ್ನು ಪೇಟಕ್ಕೆ ಬಿಗಿಯುವುದಕ್ಕಾಗಿ ನೀಲಿದಾರವನ್ನು ಅದಕ್ಕೆ ಕಟ್ಟಿಸಬೇಕು. ಅದು ಪೇಟದ ಮುಂಭಾಗದಲ್ಲಿ ಇರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

37 ಅದನ್ನು ಮುಂಡಾಸಕ್ಕೆ ಬಿಗಿಯುವದಕ್ಕಾಗಿ ನೀಲಿದಾರವನ್ನು ಅದಕ್ಕೆ ಕಟ್ಟಿಸಬೇಕು; ಅದು ಮುಂಡಾಸದ ಮುಂಭಾಗದಲ್ಲಿ ಇರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

37 ಚಿನ್ನದ ಪಟ್ಟಿಯನ್ನು ನೀಲಿದಾರಕ್ಕೆ ಬಿಗಿಯಾಗಿ ಕಟ್ಟಿಸಬೇಕು. ನೀಲಿದಾರವನ್ನು ಮುಂಡಾಸದ ಸುತ್ತಲೂ ಅದರಲ್ಲಿ ಕೆತ್ತಿಸಬೇಕು. ಚಿನ್ನದ ಪಟ್ಟಿಯು ಮುಂಡಾಸದ ಮುಂಭಾಗದಲ್ಲಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

37 ಅದು ಮುಂಡಾಸದ ಮುಂಭಾಗದಲ್ಲಿರುವಂತೆ ಅದನ್ನು ನೀಲಿ ದಾರಿನಿಂದ ಕಟ್ಟಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 28:37
10 ತಿಳಿವುಗಳ ಹೋಲಿಕೆ  

“ಇವನ ತಲೆಗೆ ಶುಭ್ರವಾದ ಮುಂಡಾಸವನ್ನು ಸುತ್ತಿರಿ” ಎಂದು ನಾನು ಅಪ್ಪಣೆಕೊಡಲು ಅವರು ಅವನ ತಲೆಗೆ ಶುಭ್ರವಾದ ಮುಂಡಾಸವನ್ನು ಸುತ್ತಿ ಅವನಿಗೆ ವಸ್ತ್ರಗಳನ್ನು ತೊಡಿಸಿದರು, ಆಗ ಯೆಹೋವನ ದೂತನು ಎದ್ದು ನಿಂತನು.


“ನೀನು ಇಸ್ರಾಯೇಲರ ಸಂತತಿಯವರ ಸಂಗಡ ಮಾತನಾಡಿ, ಅವರು ತಮ್ಮ ವಸ್ತ್ರಗಳ ಮೂಲೆಗಳಲ್ಲಿ ಗೊಂಡೆಗಳನ್ನು ಕಟ್ಟಿಕೊಳ್ಳಬೇಕು, ಪ್ರತಿಯೊಂದು ಗೊಂಡೆಯೂ ಒಂದೊಂದು ನೀಲಿ ದಾರದಿಂದ ಕಟ್ಟಿರಬೇಕು ಎಂದು ಅವರಿಗೆ ಆಜ್ಞಾಪಿಸು.


ಅವನ ತಲೆಗೆ ಪೇಟವನ್ನು ಇಟ್ಟು, ಅದರ ಮುಂಭಾಗದಲ್ಲಿ ಬಂಗಾರದ ಪಟ್ಟಿಯನ್ನು ಕಟ್ಟಿದನು; ಅದೇ ಅವನಿಗೆ ಪರಿಶುದ್ಧವಾದ ಕಿರೀಟದಂತೆ ಇತ್ತು. ಯೆಹೋವನು ಆಜ್ಞಾಪಿಸಿದಂತೆಯೇ ಮೋಶೆಯು ಮಾಡಿದನು.


ಅವನ ತಲೆಗೆ ಮುಂಡಾಸವನ್ನು ಹಾಕಿಸಿ, ಮುಂಡಾಸದ ಮೇಲೆ ಪವಿತ್ರ ಪಟ್ಟವನ್ನು ಕಟ್ಟಿಸಿ,


ಮಹಾಯಾಜಕನು ಏಫೋದ್ ಕವಚದ ಸಂಗಡ ಧರಿಸಿಕೊಳ್ಳಬೇಕಾದ ಮೇಲಂಗಿಯನ್ನು ನೀನು ನೀಲಿಬಣ್ಣದ ಬಟ್ಟೆಯಿಂದಲೇ ಮಾಡಿಸಬೇಕು.


ಎದೆಯ ಪದಕವು ಕಸೂತಿಹಾಕಿದ ನಡುಕಟ್ಟಿನ ಮೇಲ್ಗಡೆಯಲ್ಲಿ ಬಿಗಿಯಾಗಿರುವಂತೆಯೂ, ಏಫೋದ್ ಕವಚದಿಂದ ಕಳಚಿಬೀಳದಂತೆಯೂ ಅದರ ಕೊಂಡಿಗಳನ್ನು ಏಫೋದ್ ಕವಚದ ಕೊಂಡಿಗಳಿಗೆ ನೀಲಿ ದಾರದಿಂದ ಕಟ್ಟಿಸಬೇಕು.


ಅವರು ಮಾಡಬೇಕಾದ ವಸ್ತ್ರಗಳು ಯಾವುವೆಂದರೆ; ಎದೆಯ ಪದಕದ ಚೀಲ, ಏಫೋದ್, ನಿಲುವಂಗಿ, ಕಸೂತಿ ಕೆಲಸದ ಮೇಲಂಗಿ, ಮುಂಡಾಸ ಹಾಗೂ ನಡುಕಟ್ಟು ಇವುಗಳೇ. ನಿನ್ನ ಸಹೋದರನಾದ ಆರೋನನೂ ಅವನ ಮಕ್ಕಳೂ ನನ್ನ ಯಾಜಕರಾಗುವುದಕ್ಕೆ ಅವರಿಗೋಸ್ಕರ ಈ ದೀಕ್ಷಾವಸ್ತ್ರಗಳನ್ನು ಮಾಡಿಸಬೇಕು.


ಚೊಕ್ಕ ಬಂಗಾರದಿಂದ ಒಂದು ಪಟ್ಟಿಯನ್ನು ಮಾಡಿಸಿ ಮುದ್ರೆಯನ್ನು ಕೆತ್ತಿಸುವ ರೀತಿಯಲ್ಲಿ ಅದರ ಮೇಲೆ “ಯೆಹೋವನಿಗೆ ಮೀಸಲು” ಎಂಬ ಲಿಪಿಯನ್ನು ಕೆತ್ತಿಸಬೇಕು.


ಇಸ್ರಾಯೇಲ್ಯರು ಕಾಣಿಕೆಯಾಗಿ ಸಮರ್ಪಿಸುವ ದೇವರ ಎಲ್ಲಾ ಪವಿತ್ರವಸ್ತುಗಳ ವಿಷಯದಲ್ಲಿ ದೋಷವೇನಾದರೂ ಇದ್ದರೆ ಆರೋನನು ಆ ಪಟ್ಟವನ್ನು ಯಾವಾಗಲೂ ಹಣೆಯ ಮೇಲೆ ಧರಿಸಿ ಆ ದೋಷ ಫಲವನ್ನು ವಹಿಸಿಕೊಳ್ಳುವುದರಿಂದ ಅವರು ಯೆಹೋವನಿಗೆ ಮೆಚ್ಚಿಕೆಯುಳ್ಳವರಾಗಿರುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು