Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 28:38 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

38 ಇಸ್ರಾಯೇಲ್ಯರು ಕಾಣಿಕೆಯಾಗಿ ಸಮರ್ಪಿಸುವ ದೇವರ ಎಲ್ಲಾ ಪವಿತ್ರವಸ್ತುಗಳ ವಿಷಯದಲ್ಲಿ ದೋಷವೇನಾದರೂ ಇದ್ದರೆ ಆರೋನನು ಆ ಪಟ್ಟವನ್ನು ಯಾವಾಗಲೂ ಹಣೆಯ ಮೇಲೆ ಧರಿಸಿ ಆ ದೋಷ ಫಲವನ್ನು ವಹಿಸಿಕೊಳ್ಳುವುದರಿಂದ ಅವರು ಯೆಹೋವನಿಗೆ ಮೆಚ್ಚಿಕೆಯುಳ್ಳವರಾಗಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

38 ಇಸ್ರಯೇಲರನ್ನು ಪರಿಶುದ್ಧಗೊಳಿಸುವ ಪವಿತ್ರವಸ್ತುಗಳಲ್ಲಿ ಹಾಗು ಅವರು ಕಾಣಿಕೆಯಾಗಿ ಸಮರ್ಪಿಸುವ ಸಮಸ್ತವಸ್ತುಗಳಲ್ಲಿ ದೋಷವೇನಾದರು ಇದ್ದರೆ ಆರೋನನು ಆ ಪಟ್ಟಿಯನ್ನು ತಲೆಯ ಮೇಲೆ ಧರಿಸಿ ಆ ದೋಷವನ್ನು ತಾನೇ ವಹಿಸಿಕೊಳ್ಳುತ್ತಾನೆ. ಆದ್ದರಿಂದ ಅವರು ಸರ್ವೇಶ್ವರನಾದ ನನ್ನ ಸನ್ನಿಧಿಯಲ್ಲಿ ಅಂಗೀಕೃತರಾಗುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

38 ಇಸ್ರಾಯೇಲ್ಯರು ಕಾಣಿಕೆಯಗಿ ಸಮರ್ಪಿಸುವ ದೇವರ ಎಲ್ಲಾ ವಸ್ತುಗಳ ವಿಷಯದಲ್ಲಿ ದೋಷವೇನಾದರೂ ಇದ್ದರೆ ಆರೋನನು ಆ ಪಟ್ಟವನ್ನು ಯಾವಾಗಲೂ ಹಣೆಯ ಮೇಲೆ ಧರಿಸಿ ಆ ದೋಷವನ್ನು ವಹಿಸಿಕೊಂಡದರಿಂದ ಅವರು ಯೆಹೋವನ ಸನ್ನಿಧಿಯಲ್ಲಿ ಅಂಗೀಕರಿಸಲ್ಪಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

38 ಆರೋನನು ಇದನ್ನು ತನ್ನ ಹಣೆಯ ಮೇಲೆ ಧರಿಸಿಕೊಳ್ಳುವನು. ಹೀಗೆ, ಇಸ್ರೇಲರು ಅರ್ಪಿಸಿದ ಕಾಣಿಕೆಗಳಲ್ಲಿ ದೋಷವೇನಾದರೂ ಇದ್ದರೆ ಅವನು ಅದನ್ನು ತನ್ನ ಮೇಲೆ ತೆಗೆದುಕೊಂಡು ತಾನೇ ಅದನ್ನು ವಹಿಸಿಕೊಳ್ಳುವನು. ಇವು ಜನರು ಯೆಹೋವನಿಗೆ ಸಮರ್ಪಿಸುವ ಕಾಣಿಕೆಗಳಾಗಿವೆ. ಜನರ ಕಾಣಿಕೆಗಳನ್ನು ಯೆಹೋವನು ಅಂಗೀಕರಿಸುವಂತೆ ಆರೋನನು ಇದನ್ನು ಯಾವಾಗಲೂ ತನ್ನ ಶಿರದಲ್ಲಿ ಧರಿಸಿಕೊಂಡಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

38 ಇಸ್ರಾಯೇಲರು ತಮ್ಮ ಪರಿಶುದ್ಧ ದಾನಗಳನ್ನೆಲ್ಲಾ ಪರಿಶುದ್ಧ ಮಾಡುವ ಪರಿಶುದ್ಧ ಕಾರ್ಯಗಳ ದೋಷವನ್ನು ಆರೋನನು ಹೊರುವ ಹಾಗೆ ಅದು ಆರೋನನ ಹಣೆಯ ಮೇಲಿರಬೇಕು. ಯೆಹೋವ ದೇವರ ಮುಂದೆ ಅವುಗಳೆಲ್ಲಾ ಅಂಗೀಕಾರವಾಗುವ ಹಾಗೆ ಅದು ಯಾವಾಗಲೂ ಅವನ ಹಣೆಯ ಮೇಲೆ ಇರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 28:38
21 ತಿಳಿವುಗಳ ಹೋಲಿಕೆ  

ನಾವು ಪಾಪದ ಪಾಲಿಗೆ ಸತ್ತು ನೀತಿವಂತರಾಗಿ ಜೀವಿಸುವಂತೆ ಆತನು ನಮ್ಮ ಪಾಪಗಳನ್ನು ತಾನೇ ತನ್ನ ದೇಹದಲ್ಲಿ ಹೊತ್ತುಕೊಂಡು ಶಿಲುಬೆಯನ್ನು ಏರಿ ಮರಣ ಹೊಂದಿದನು. ಆತನ ಬಾಸುಂಡೆಗಳಿಂದ ನಮಗೆ ಗುಣವಾಯಿತು.


ಆಗ ಯೆಹೋವನು ಆರೋನನಿಗೆ, “ದೇವದರ್ಶನದ ಗುಡಾರದ ವಿಷಯದಲ್ಲಿ ಅಕ್ರಮವೇನಾದರೂ ನಡೆದರೆ ನೀನೂ, ನಿನ್ನ ಸಂತತಿಯವರೂ, ನಿನ್ನ ಕುಲದವರೆಲ್ಲರೂ ಆ ದೋಷದ ಫಲವನ್ನು ಅನುಭವಿಸಬೇಕು. ಯಾಜಕತ್ವದ ವಿಷಯದಲ್ಲಿ ಅಕ್ರಮವೇನಾದರೂ ನಡೆದರೆ ನೀನೂ, ನಿನ್ನ ಸಂತತಿಯವರು ಮಾತ್ರವೇ ಆ ದೋಷದ ಫಲವನ್ನು ಅನುಭವಿಸಬೇಕು.


“ಆ ದೋಷಪರಿಹಾರಕ ಯಜ್ಞದ್ರವ್ಯವು ಮಹಾಪರಿಶುದ್ಧವಾದದ್ದಲ್ಲವೇ? ನೀವು ಜನಸಮೂಹದ ಪಾಪಗಳನ್ನು ಪರಿಹಾರಮಾಡುವಂತೆಯೂ, ಅವರಿಗೋಸ್ಕರ ಯೆಹೋವನ ಸನ್ನಿಧಿಯಲ್ಲಿ ದೋಷಪರಿಹಾರವನ್ನು ಮಾಡುವಂತೆಯೂ ಅದು ನಿಮ್ಮ ಭಾಗವಾಗಿ ನೇಮಕವಾಗಿದೆಯಲ್ಲಾ. ನೀವು ಯಾಕೆ ಅದನ್ನು ಪವಿತ್ರಸ್ಥಳದೊಳಗೆ ಊಟಮಾಡಲಿಲ್ಲ?


ಹಾಗೆಯೇ ಕ್ರಿಸ್ತನು ಸಹ ಬಹು ಜನರ ಪಾಪಗಳನ್ನು ಹೊತ್ತು ಕೊಳ್ಳುವುದಕ್ಕೊಸ್ಕರ ಒಂದೇ ಸಾರಿ ಸಮರ್ಪಿತನಾದನು. ಆತನು ಎರಡನೆಯ ಸಾರಿ ಪ್ರತ್ಯಕ್ಷನಾಗುವಂಥದ್ದು ಪಾಪವನ್ನು ಪರಿಹರಿಸುವುದಕ್ಕಾಗಿಯಲ್ಲ ತನ್ನನ್ನು ನಿರೀಕ್ಷಿಸಿಕೊಂಡಿರುವವರಿಗೆ ರಕ್ಷಣೆಯನ್ನು ಉಂಟುಮಾಡುವುದಕ್ಕಾಗಿಯೇ.


ಮರುದಿನ ಯೋಹಾನನು ತನ್ನ ಕಡೆಗೆ ಬರುತ್ತಿದ್ದ ಯೇಸುವನ್ನು ನೋಡಿ, “ಅಗೋ, ಲೋಕದ ಪಾಪವನ್ನು ನಿವಾರಣೆ ಮಾಡಲು ದೇವರು ನೇಮಿಸಿದ ಯಜ್ಞದಕುರಿಮರಿ.


ನೀವು ಸಹ ಜೀವವುಳ್ಳ ಕಲ್ಲುಗಳಾಗಿದ್ದು ಆತ್ಮೀಕವಾದ ಮಂದಿರವಾಗುವುದಕ್ಕೆ ಕಟ್ಟಲ್ಪಡುತ್ತಾ ಇದ್ದೀರಿ. ಯೇಸು ಕ್ರಿಸ್ತನ ಮೂಲಕ ದೇವರಿಗೆ ಸಮರ್ಪಕವಾದ ಆತ್ಮೀಕ ಯಜ್ಞಗಳನ್ನು ಸಮರ್ಪಿಸುವುದಕ್ಕೆ ಪವಿತ್ರ ಯಾಜಕ ವರ್ಗದವರಾಗಿದ್ದೀರಿ.


ಪಾಪವನ್ನೇ ಅರಿಯದ ಕ್ರಿಸ್ತ ಯೇಸುವನ್ನು ದೇವರು ನಮಗೋಸ್ಕರ ಪಾಪಸ್ವರೂಪಿಯನ್ನಾಗಿಸಿದರು. ಕ್ರಿಸ್ತ ಯೇಸುವಿನಲ್ಲಿ ನಾವು ನೀತಿವಂತರಾಗಬೇಕೆಂದು ದೇವರು ಹೀಗೆ ಮಾಡಿದರು.


ಅವರೆಲ್ಲರನ್ನೂ ನಾನು ನನ್ನ ಪವಿತ್ರಪರ್ವತಕ್ಕೆ ಬರಮಾಡಿ ನನ್ನ ಪ್ರಾರ್ಥನಾಲಯದಲ್ಲಿ ಉಲ್ಲಾಸಗೊಳಿಸುವೆನು; ನನ್ನ ಯಜ್ಞವೇದಿಯಲ್ಲಿ ಅವರು ಅರ್ಪಿಸುವ ಸರ್ವಾಂಗಹೋಮಗಳೂ, ಯಜ್ಞಗಳೂ ನನಗೆ ಮೆಚ್ಚಿಗೆಯಾಗುವವು; ನನ್ನ ಆಲಯವು ಎಲ್ಲಾ ಜನಾಂಗಗಳಿಗೂ ಪ್ರಾರ್ಥನಾಲಯ ಎನಿಸಿಕೊಳ್ಳುವುದು.


ನೀವು ದೇವರಿಗೆ ಅಂಗೀಕಾರವಾಗುವಂತೆ ಯಾಜಕನು ಅದನ್ನು ಯೆಹೋವನ ಸನ್ನಿಧಿಯಲ್ಲಿ ನೈವೇದ್ಯವಾಗಿ ನಿವಾಳಿಸಿ ಸಮರ್ಪಿಸುವನು. ಸಬ್ಬತ್ ದಿನದ ಮರು ದಿನದಲ್ಲಿಯೇ ಅದನ್ನು ನಿವಾಳಿಸಬೇಕು.


“ಕರುವಾಗಲಿ, ಕುರಿಮರಿಯಾಗಲಿ ಅಥವಾ ಆಡುಮರಿಯಾಗಲಿ ಹುಟ್ಟಿದಾಗ ಅದು ಏಳು ದಿನಗಳ ವರೆಗೆ ತಾಯಿಯ ಬಳಿಯಲ್ಲಿ ಇರಬೇಕು. ಎಂಟನೆಯ ದಿನದಿಂದ ಅದನ್ನು ಯೆಹೋವನಿಗೆ ಹೋಮವಾಗಿ ಸಮರ್ಪಿಸಿದರೆ ಅದು ಅಂಗೀಕಾರವಾಗುವುದು.


ಯಾಜಕರು ಈ ನನ್ನ ಆಜ್ಞೆಗಳನ್ನು ಅನುಸರಿಸಿ ನಡೆಯಬೇಕು. ಇವುಗಳನ್ನು ಮೀರಿ ನನ್ನ ನೈವೇದ್ಯವನ್ನು ಅಪವಿತ್ರಪಡಿಸಿದರೆ ಆ ದೋಷದ ಫಲವನ್ನು ಅನುಭವಿಸಿ ಸತ್ತಾರು. ಅವರನ್ನು ನನ್ನ ಸೇವೆಗೆ ಪ್ರತಿಷ್ಠಿಸಿಕೊಂಡ ಯೆಹೋವನು ನಾನು.


ಅವನು ಆ ಯಜ್ಞ ಪಶುವಿನ ತಲೆಯ ಮೇಲೆ ಕೈಯಿಡಬೇಕು; ಆಗ ಅದು ಅವನಿಗೋಸ್ಕರ ದೋಷಪರಿಹಾರವನ್ನು ಮಾಡುವುದಕ್ಕಾಗಿ ಅಂಗೀಕಾರವಾಗುವುದು.


ಕ್ರಿಸ್ತನು ಸಹ ನೀತಿವಂತನಾಗಿದ್ದು ಅನೀತಿವಂತರಿಗೋಸ್ಕರ ಪ್ರಾಣ ಕೊಟ್ಟು ನಮ್ಮನ್ನು ದೇವರ ಬಳಿಗೆ ಸೇರಿಸುವುದಕ್ಕಾಗಿ ಒಂದೇ ಸಾರಿ ಪಾಪನಿವಾರಣೆಗೋಸ್ಕರ ಬಾಧೆಪಟ್ಟು ಸತ್ತನು. ಆತನು ಶರೀರಸಂಬಂಧವಾಗಿ ಕೊಲ್ಲಲ್ಪಟ್ಟು, ಆತ್ಮ ಸಂಬಂಧವಾಗಿ ತಿರುಗಿ ಬದುಕುವವನಾದನು.


ತನ್ನ ಪ್ರಿಯನಲ್ಲಿಯೇ ನಮಗೆ ಉಚಿತವಾಗಿ ಅನುಗ್ರಹಿಸಿರುವ ತನ್ನ ಮಹಿಮೆಯುಳ್ಳ ಕೃಪೆಯ ಸ್ತುತಿಗಾಗಿ ಇದೆಲ್ಲಾವನ್ನು ಮಾಡಿದನು.


ಕೇದಾರಿನ ಹಿಂಡುಗಳೆಲ್ಲಾ ನಿನ್ನಲ್ಲಿ ಕೂಡುವವು; ನೆಬಾಯೋತಿನ ಟಗರುಗಳು ನೀನು ಮಾಡುವ ಯಜ್ಞಕ್ಕೆ ಅನುಕೂಲಿಸುವವು. ಅವು ನನ್ನ ಯಜ್ಞವೇದಿಯ ಮೇಲೆ ಸಮರ್ಪಕವಾಗಿ ಒಯ್ಯಲ್ಪಡುವವು; ಮಹಿಮೆಯಿಂದ ಕೂಡಿದ ನನ್ನ ಆಲಯವನ್ನು ಘನಪಡಿಸುವೆನು.


ನಾವೆಲ್ಲರೂ ಕುರಿಗಳಂತೆ ದಾರಿತಪ್ಪಿ ಹೋಗಿದ್ದೆವು, ಪ್ರತಿಯೊಬ್ಬನೂ ತನ್ನ ತನ್ನ ದಾರಿಯನ್ನು ಹಿಡಿಯುತ್ತಿದ್ದನು; ನಮ್ಮೆಲ್ಲರ ದೋಷಫಲವನ್ನೂ ಯೆಹೋವನು ಅವನ ಮೇಲೆ ಹಾಕಿದನು.


ಹಾಗೆ ಎಣಿಸಿದರೆ ತಾವು ಆ ನೈವೇದ್ಯಪದಾರ್ಥಗಳನ್ನು ಊಟಮಾಡುವುದರಿಂದ ಪಾಪಕ್ಕೆ ಒಳಗಾಗಿ ಶಿಕ್ಷೆಹೊಂದುವರು. ನನ್ನ ಸೇವೆಗೆ ಅವರನ್ನು ಪ್ರತಿಷ್ಠಿಸಿಕೊಂಡ ಯೆಹೋವನು ನಾನು’” ಎಂದು ಹೇಳಿದನು.


ಆರೋನನೂ, ಅವನ ಮಕ್ಕಳೂ ದೇವದರ್ಶನ ಗುಡಾರದೊಳಗೆ ಹೋಗುವಾಗಲೂ, ಪವಿತ್ರಸ್ಥಾನದಲ್ಲಿ ಸೇವೆಮಾಡುವುದಕ್ಕೆ ಯಜ್ಞವೇದಿಯ ಹತ್ತಿರಕ್ಕೆ ಬರುವಾಗಲೂ ಇವುಗಳನ್ನು ಧರಿಸಿಕೊಂಡಿರಬೇಕು. ಇಲ್ಲವಾದರೆ ಅವರು ಆ ಅಪರಾಧದ ಫಲವನ್ನು ಅನುಭವಿಸಿ ಸತ್ತಾರು. ಅವನಿಗೂ ಅವನ ವಂಶಸ್ಥರಿಗೂ ಇದು ಶಾಶ್ವತವಾದ ನಿಯಮವಾಗಿದೆ.


ಅದನ್ನು ಮುಂಡಾಸಕ್ಕೆ ಬಿಗಿಯುವುದಕ್ಕಾಗಿ ನೀಲಿ ದಾರವನ್ನು ಅದಕ್ಕೆ ಕಟ್ಟಿಸಬೇಕು. ಅದು ಮುಂಡಾಸದ ಮುಂಭಾಗದಲ್ಲಿ ಇರಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು