Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 28:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಅವರು ಮಾಡಬೇಕಾದ ವಸ್ತ್ರಗಳು ಯಾವುವೆಂದರೆ; ಎದೆಯ ಪದಕದ ಚೀಲ, ಏಫೋದ್, ನಿಲುವಂಗಿ, ಕಸೂತಿ ಕೆಲಸದ ಮೇಲಂಗಿ, ಮುಂಡಾಸ ಹಾಗೂ ನಡುಕಟ್ಟು ಇವುಗಳೇ. ನಿನ್ನ ಸಹೋದರನಾದ ಆರೋನನೂ ಅವನ ಮಕ್ಕಳೂ ನನ್ನ ಯಾಜಕರಾಗುವುದಕ್ಕೆ ಅವರಿಗೋಸ್ಕರ ಈ ದೀಕ್ಷಾವಸ್ತ್ರಗಳನ್ನು ಮಾಡಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ತಯಾರಿಸಬೇಕಾದ ವಸ್ತ್ರಗಳು ಇವು: ಎದೆಕವಚ, ಏಫೋದ್ ಕವಚ, ಮೇಲಂಗಿ, ಕಸೂತಿ ನಿಲುವಂಗಿ, ಗುರುಪೇಟ ಮತ್ತು ನಡುಕಟ್ಟು, ನಿನ್ನ ಅಣ್ಣ ಆರೋನನು ಮತ್ತು ಅವನ ಮಕ್ಕಳು ನನ್ನ ಯಾಜಕರಾಗಿ ಸೇವೆ ಮಾಡುವಂತೆ ಅವರಿಗೆ ಈ ದೀಕ್ಷಾವಸ್ತ್ರಗಳನ್ನು ಮಾಡಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಮಾಡಬೇಕಾದ ವಸ್ತ್ರಗಳು ಯಾವವಂದರೆ - ಪದಕದ ಚೀಲ ಮಹಾಯಾಜಕ ಕವಚ ಮೇಲಂಗಿ ವಿಚಿತ್ರವಾದ ನಿಲುವಂಗಿ ಮುಂಡಾಸ ನಡುಕಟ್ಟು ಇವುಗಳೇ. ನಿನ್ನ ಅಣ್ಣನಾದ ಆರೋನನೂ ಅವನ ಮಕ್ಕಳೂ ನನ್ನ ಯಾಜಕರಾಗುವದಕ್ಕೆ ಅವರಿಗೋಸ್ಕರ ಈ ದೀಕ್ಷಾವಸ್ತ್ರಗಳನ್ನು ಮಾಡಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಅವರು ಮಾಡತಕ್ಕ ಬಟ್ಟೆಗಳು ಯಾವುವೆಂದರೆ: ದೈವನಿರ್ಣಯಕ ಪದಕ, ಏಫೋದು, ನೀಲಿಯ ನಿಲುವಂಗಿ, ಹೆಣೆದ ಬಿಳಿಯ ನಿಲುವಂಗಿ, ಮುಂಡಾಸು ಮತ್ತು ನಡುಕಟ್ಟು. ನಿನ್ನ ಅಣ್ಣನಾದ ಆರೋನನಿಗೂ ಅವನ ಗಂಡುಮಕ್ಕಳಿಗೂ ಈ ವಿಶೇಷ ಬಟ್ಟೆಗಳನ್ನು ಅವರು ಮಾಡಬೇಕು. ಆಗ ಆರೋನನೂ ಅವನ ಗಂಡುಮಕ್ಕಳೂ ಯಾಜಕರಾಗಿ ನನ್ನ ಸೇವೆಮಾಡಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಅವರು ಮಾಡಬೇಕಾದ ವಸ್ತ್ರಗಳು ಇವು: ಎದೆಪದಕವು, ಏಫೋದ್, ನಿಲುವಂಗಿ, ಕಸೂತಿಯ ಕೆಲಸದ ಮೇಲಂಗಿ, ಮುಂಡಾಸ, ನಡುಕಟ್ಟು. ನಿನ್ನ ಸಹೋದರನಾದ ಆರೋನನೂ ಅವನ ಪುತ್ರರೂ ನನ್ನ ಯಾಜಕರಾಗಿ ಸೇವೆ ಮಾಡುವುದಕ್ಕೆ ಅವರಿಗಾಗಿ ಪರಿಶುದ್ಧ ವಸ್ತ್ರಗಳನ್ನು ಮಾಡಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 28:4
20 ತಿಳಿವುಗಳ ಹೋಲಿಕೆ  

ನಾನು ದರ್ಶನದಲ್ಲಿ ಕಂಡ ಕುದುರೆಗಳ ಮತ್ತು ಸವಾರರ ವಿವರಣೆ ಹೇಗಿತ್ತೆಂದರೆ, ಸವಾರರ ಕವಚಗಳ ಬಣ್ಣವು ಬೆಂಕಿ, ಹೊಗೆ, ಗಂಧಕ ಇವುಗಳ ಬಣ್ಣದ ಹಾಗಿತ್ತು ಕುದುರೆಗಳ ತಲೆಗಳು ಸಿಂಹಗಳ ತಲೆಗಳಂತಿದ್ದವು.


ಸತ್ಯವೆಂಬ ನಡುಕಟ್ಟನ್ನು ಸೊಂಟಕ್ಕೆ ಕಟ್ಟಿಕೊಂಡು, ನೀತಿಯೆಂಬ ಎದೆಕವಚವನ್ನು ಧರಿಸಿಕೊಂಡು,


ನಾವಾದರೋ ಹಗಲಿನವರಾಗಿರಲಾಗಿ ನಂಬಿಕೆ ಪ್ರೀತಿಗಳೆಂಬ ಎದೆಕವಚವನ್ನೂ, ರಕ್ಷಣೆಯ ನಿರೀಕ್ಷೆಯೆಂಬ ಶಿರಸ್ತ್ರಾಣವನ್ನೂ ಧರಿಸಿಕೊಂಡು ಸ್ವಸ್ಥಚಿತ್ತರಾಗಿರೋಣ.


ಅವನು ನೀತಿಯನ್ನು ವಜ್ರಕವಚವನ್ನಾಗಿ ಹಾಕಿಕೊಂಡು, ರಕ್ಷಣೆಯೆಂಬ ಶಿರಸ್ತ್ರಾಣವನ್ನು ಧರಿಸಿಕೊಂಡನು; ರೋಷವೆಂಬ ವಸ್ತ್ರವನ್ನು ಉಡುಪುಮಾಡಿಕೊಂಡು, ಸೇಡನ್ನು ನಿಲುವಂಗಿಯನ್ನಾಗಿ ಹಾಕಿಕೊಂಡನು.


ಧರ್ಮವೇ ಅವನಿಗೆ ನಡುಕಟ್ಟು, ಪ್ರಾಮಾಣಿಕತೆಯೇ ಸೊಂಟಪಟ್ಟಿ.


ದಾವೀದನು ನಾರಿನ ಏಫೋದನ್ನು ಧರಿಸಿಕೊಂಡವನಾಗಿ, ಯೆಹೋವನ ಸನ್ನಿಧಿಯಲ್ಲಿ ಪೂರ್ಣಾಸಕ್ತಿಯಿಂದ ಕುಣಿದಾಡಿದನು.


ಅಹೀಮೆಲೆಕನ ಮಗನಾದ ಎಬ್ಯಾತಾರನಿಗೆ, “ದಯವಿಟ್ಟು ಏಫೋದನ್ನು ಇಲ್ಲಿಗೆ ತೆಗೆದುಕೊಂಡು ಬಾ” ಎಂದು ಹೇಳಲು ಅವನು ತಂದನು.


ದಾವೀದನ ಬಳಿಗೆ ಓಡಿಬಂದಿದ್ದ ಅಹೀಮೆಲೆಕನ ಮಗನಾದ ಎಬ್ಯಾತಾರನು ಕೆಯೀಲಕ್ಕೆ ಬರುವಾಗ ಏಫೋದನ್ನು ತಂದಿದ್ದನು,


ಆದ್ದರಿಂದ ಸೌಲನು ಎದೋಮ್ಯನಾದ ದೋಯೇಗನಿಗೆ, “ನೀನು ಹೋಗಿ ಅವರನ್ನು ಕೊಲ್ಲು” ಎಂದು ಆಜ್ಞಾಪಿಸಲು, ಅವನು ನಾರು ಬಟ್ಟೆಯ ಎಪೋದನ್ನು ಧರಿಸಿಕೊಂಡಿದ್ದ ಎಂಭತ್ತೈದು ಯಾಜಕರನ್ನು ಆ ದಿನ ಕೊಂದುಹಾಕಿದನು.


ಆದರೆ ಬಾಲಕನಾದ ಸಮುವೇಲನು ಏಫೋದೆಂಬ ನಾರು ಮಡಿಯಂಗಿಯನ್ನು ತೊಟ್ಟುಕೊಂಡು ಯೆಹೋವನ ಸೇವೆ ಮಾಡುತ್ತಿದ್ದನು.


ನಯವಾದ ನಾರಿನಿಂದ ಮಹಾಯಾಜಕನ ಮುಂಡಾಸವನ್ನು, ಯಾಜಕರ ಅಲಂಕಾರವಾದ ಮುಂಡಾಸಗಳನ್ನು ಹಾಗೂ ಚಡ್ಡಿಗಳನ್ನು,


ಮಹಾಯಾಜಕನ ಕವಚಕ್ಕೆ ಹಾಗೂ ಎದೆಗೆ ಧರಿಸುವ ಪದಕದ ಮೇಲೆ ಇರಿಸಲು ಬೇಕಾಗಿರುವ ಗೋಮೇಧಕರತ್ನಗಳು ಹಾಗೂ ಇತರ ರತ್ನಗಳೂ ಇವೇ.


ಅವನ ತಲೆಗೆ ಮುಂಡಾಸವನ್ನು ಹಾಕಿಸಿ, ಮುಂಡಾಸದ ಮೇಲೆ ಪವಿತ್ರ ಪಟ್ಟವನ್ನು ಕಟ್ಟಿಸಿ,


ಇದರಂತೆ ರಾಜಮುಖಂಡ, ಯಜ್ಞ, ಸ್ತಂಭ, ಏಫೋದು, ವಿಗ್ರಹಗಳಿಲ್ಲದೆ ಇಸ್ರಾಯೇಲರು ಬಹಳ ದಿನಗಳು ತಾಳಿಕೊಂಡಿರುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು