ವಿಮೋಚನಕಾಂಡ 28:43 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201943 ಆರೋನನೂ, ಅವನ ಮಕ್ಕಳೂ ದೇವದರ್ಶನ ಗುಡಾರದೊಳಗೆ ಹೋಗುವಾಗಲೂ, ಪವಿತ್ರಸ್ಥಾನದಲ್ಲಿ ಸೇವೆಮಾಡುವುದಕ್ಕೆ ಯಜ್ಞವೇದಿಯ ಹತ್ತಿರಕ್ಕೆ ಬರುವಾಗಲೂ ಇವುಗಳನ್ನು ಧರಿಸಿಕೊಂಡಿರಬೇಕು. ಇಲ್ಲವಾದರೆ ಅವರು ಆ ಅಪರಾಧದ ಫಲವನ್ನು ಅನುಭವಿಸಿ ಸತ್ತಾರು. ಅವನಿಗೂ ಅವನ ವಂಶಸ್ಥರಿಗೂ ಇದು ಶಾಶ್ವತವಾದ ನಿಯಮವಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)43 ಆರೋನನು ಮತ್ತು ಅವನ ಮಕ್ಕಳು ದೇವದರ್ಶನದ ಗುಡಾರದೊಳಗೆ ಬರುವಾಗ ಹಾಗು ಪವಿತ್ರಸ್ಥಾನದಲ್ಲಿ ಸೇವೆ ಮಾಡಲು ಬಲಿಪೀಠದ ಹತ್ತಿರ ಬರುವಾಗ ಇವುಗಳನ್ನು ಹಾಕಿಕೊಂಡಿರಲಿ. ಇಲ್ಲವಾದರೆ ಅವರು ಆ ಅಪರಾಧದ ನಿಮಿತ್ತ ಸಾಯುವರು. ಆರೋನನಿಗೂ ಅವನ ವಂಶಸ್ಥರಿಗೂ ಇದು ಶಾಶ್ವತವಾದ ನಿಯಮ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)43 ಆರೋನನೂ ಅವನ ಮಕ್ಕಳೂ ದೇವದರ್ಶನದ ಗುಡಾರದೊಳಗೆ ಹೋಗುವಾಗಲೂ ಪವಿತ್ರಸ್ಥಾನದಲ್ಲಿ ಸೇವೆಮಾಡುವದಕ್ಕೆ ಯಜ್ಞವೇದಿಯ ಹತ್ತಿರಕ್ಕೆ ಬರುವಾಗಲೂ ಇವುಗಳನ್ನು ಹಾಕಿಕೊಂಡಿರಬೇಕು. ಇಲ್ಲವಾದರೆ ಅವರು ಆ ಅಪರಾಧದ ಫಲವನ್ನು ಅನುಭವಿಸಿ ಸತ್ತಾರು. ಅವನಿಗೂ ಅವನ ವಂಶಸ್ಥರಿಗೂ ಇದು ಶಾಶ್ವತವಾದ ನಿಯಮ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್43 ಆರೋನನು ಮತ್ತು ಅವನ ಗಂಡುಮಕ್ಕಳು ದೇವದರ್ಶನ ಗುಡಾರದೊಳಗೆ ಪ್ರವೇಶಿಸುವಾಗಲೆಲ್ಲಾ ಈ ಉಡುಪುಗಳನ್ನು ಧರಿಸಿಕೊಳ್ಳಬೇಕು. ಪವಿತ್ರಸ್ಥಳದಲ್ಲಿ ಯಾಜಕರಾಗಿ ಸೇವೆಮಾಡಲು ಯಜ್ಞವೇದಿಕೆಯ ಬಳಿಗೆ ಬರುವಾಗ ಅವರು ಈ ಬಟ್ಟೆಗಳನ್ನು ಧರಿಸಿಕೊಂಡಿರಬೇಕು. ಅವರು ಈ ಉಡುಪುಗಳನ್ನು ಧರಿಸಿಕೊಳ್ಳದಿದ್ದರೆ, ದೋಷಿಗಳಾಗಿ ಸಾಯುವರು. ಇವುಗಳೆಲ್ಲಾ ಆರೋನನಿಗೂ ಅವನ ನಂತರ ಅವನ ಕುಟುಂಬಸ್ಥರೆಲ್ಲರಿಗೂ ಶಾಶ್ವತವಾದ ಕಟ್ಟಳೆಯಾಗಿವೆ.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ43 ಆರೋನನೂ ಅವನ ಪುತ್ರರೂ ದೇವದರ್ಶನದ ಗುಡಾರಕ್ಕೆ ಬರುವ ಸಮಯದಲ್ಲಿಯೂ ಪರಿಶುದ್ಧ ಸ್ಥಳದಲ್ಲಿ ಸೇವೆ ಮಾಡುವುದಕ್ಕೆ ಬಲಿಪೀಠದ ಸಮೀಪಕ್ಕೆ ಬರುವ ಸಮಯದಲ್ಲಿಯೂ ದೋಷವನ್ನು ಹೊತ್ತು ಸಾಯದ ಹಾಗೆ ಇವುಗಳನ್ನು ಹಾಕಿಕೊಂಡಿರಬೇಕು. “ಇದೇ ಆರೋನನಿಗೂ ಅವನ ತರುವಾಯ ಅವನ ಸಂತತಿಯವರಿಗೂ ಇರಬೇಕಾದ ನಿತ್ಯವಾದ ಕಟ್ಟಳೆ. ಅಧ್ಯಾಯವನ್ನು ನೋಡಿ |