ವಿಮೋಚನಕಾಂಡ 28:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಮತ್ತು ನೀನು ಎರಡು ಗೋಮೇಧಕ ಅಮೂಲ್ಯರತ್ನಗಳನ್ನು ತೆಗೆದುಕೊಂಡು ಅವುಗಳಲ್ಲಿ ಇಸ್ರಾಯೇಲರ ಕುಲಗಳ ಹೆಸರುಗಳನ್ನು ಕೆತ್ತಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಎರಡು ಗೋಮೇಧಕ ರತ್ನಗಳನ್ನು ತೆಗೆದುಕೊಂಡು ಅವುಗಳಲ್ಲಿ ಇಸ್ರಯೇಲರ ಕುಲಗಳ ಹೆಸರುಗಳನ್ನು ಕೆತ್ತಿಸು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಮತ್ತು ನೀನು ಎರಡು ಗೋಮೇಧಕರತ್ನಗಳನ್ನು ತೆಗೆದುಕೊಂಡು ಅವುಗಳಲ್ಲಿ ಇಸ್ರಾಯೇಲ್ಯರ ಕುಲಗಳ ಹೆಸರುಗಳನ್ನು ಕೆತ್ತಿಸಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 “ಎರಡು ಗೋಮೇಧಕ ರತ್ನಗಳನ್ನು ತೆಗೆದುಕೊ. ಈ ರತ್ನಗಳ ಮೇಲೆ ಇಸ್ರೇಲನ ಹನ್ನೆರಡು ಗಂಡುಮಕ್ಕಳ ಹೆಸರನ್ನು ಬರೆಸು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 “ನೀನು ಎರಡು ಗೋಮೇಧಿಕ ರತ್ನಗಳನ್ನು ತೆಗೆದುಕೊಂಡು ಇಸ್ರಾಯೇಲರ ಮಕ್ಕಳ ಹೆಸರುಗಳನ್ನು ಅವುಗಳ ಮೇಲೆ ಕೆತ್ತಬೇಕು. ಅಧ್ಯಾಯವನ್ನು ನೋಡಿ |
ಹೀಗಿರಲು ಬಂಗಾರ, ಬೆಳ್ಳಿ, ತಾಮ್ರ, ಕಬ್ಬಿಣ, ಇವುಗಳ ಕೆಲಸ ಮಾಡುವುದರಲ್ಲಿಯೂ, ರಕ್ತವರ್ಣ, ಕಡುಗೆಂಪುವರ್ಣ, ನೀಲವರ್ಣಗಳ ಬಟ್ಟೆಯನ್ನು ನೇಯುವುದರಲ್ಲಿಯೂ ಚಿತ್ರ ಕೆತ್ತುವುದರಲ್ಲಿಯೂ ನಿಪುಣನಾದ ಒಬ್ಬ ವ್ಯಕ್ತಿಯನ್ನು ನನ್ನ ಬಳಿಗೆ ಕಳುಹಿಸು; ನನ್ನ ತಂದೆಯಾದ ದಾವೀದನು ಗೊತ್ತುಮಾಡಿದಂಥ ಮತ್ತು ನನ್ನೊಡನೆ ಯೆಹೂದದಲ್ಲಿಯೂ, ಯೆರೂಸಲೇಮಿನಲ್ಲಿಯೂ, ಇರುವಂಥ ಕುಶಲಕರ್ಮಿಗಳೊಂದಿಗೆ ಅವನು ಕೆಲಸ ಮಾಡಲಿ.
ನಾನು ನನ್ನಿಂದಾಗುವಷ್ಟು ಪ್ರಯಾಸಪಟ್ಟು ಬಂಗಾರದ ಕೆಲಸಕ್ಕಾಗಿ ಬೇಕಾಗುವ ಬಂಗಾರ, ಬೆಳ್ಳಿಯ ಕೆಲಸಕ್ಕಾಗಿ ಬೇಕಾಗುವ ಬೆಳ್ಳಿ, ತಾಮ್ರದ ಕೆಲಸಕ್ಕಾಗಿ ಬೇಕಾಗುವ ತಾಮ್ರ, ಕಬ್ಬಿಣದ ಕೆಲಸಕ್ಕಾಗಿ ಬೇಕಾಗುವ ಕಬ್ಬಿಣ, ಮರದ ಕೆಲಸಕ್ಕಾಗಿ ಬೇಕಾಗುವ ಮರ ಇವುಗಳನ್ನೂ, ಗೋಮೇಧಿಕ ರತ್ನ, ಕೆತ್ತುವುದಕ್ಕೆ ಬೇಕಾಗುವ ರತ್ನ, ಕೆಂಪು ಹರಳು, ವಿಚಿತ್ರ ವರ್ಣದ ಕಲ್ಲು, ಎಲ್ಲಾ ತರದ ಮಣಿ, ಚಂದ್ರಕಾಂತಶಿಲೆ ಇವುಗಳನ್ನೂ ನನ್ನ ದೇವರ ಮಂದಿರಕ್ಕೋಸ್ಕರ ರಾಶಿ ರಾಶಿಯಾಗಿ ಸಂಗ್ರಹಿಸಿದ್ದೇನೆ.