Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 29:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಆ ನಂತರ ನೀನು ಆ ಟಗರನ್ನು ತುಂಡು ತುಂಡಾಗಿ ಕತ್ತರಿಸಿ ಅದರ ಕರಳುಗಳನ್ನೂ, ಕಾಲುಗಳನ್ನೂ ತೊಳೆದು ಅದರ ತುಂಡುಗಳನ್ನೂ, ತಲೆಯನ್ನೂ ಒಟ್ಟಿಗೆ ಇಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಆಮೇಲೆ ಆ ಟಗರನ್ನು ತುಂಡುತುಂಡಾಗಿ ಕಡಿದು ಅದರ ಕರುಳುಗಳನ್ನೂ ಕಾಲುಗಳನ್ನೂ ತೊಳೆಸಿ ಅವುಗಳನ್ನೂ ಆ ತುಂಡುಗಳನ್ನೂ ಹಾಗು ತಲೆಯನ್ನೂ ಒಟ್ಟಿಗೆ ಇಟ್ಟು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಆಗ ನೀನು ಆ ಟಗರನ್ನು ತುಂಡುತುಂಡಾಗಿ ಕಡಿದು ಅದರ ಕರುಳುಗಳನ್ನೂ ಕಾಲುಗಳನ್ನೂ ತೊಳಿಸಿ ಅವುಗಳನ್ನೂ ಆ ತುಂಡುಗಳನ್ನೂ ತಲೆಯನ್ನೂ ಒಟ್ಟಿಗೆ ಇಟ್ಟು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಬಳಿಕ ಟಗರನ್ನು ಅನೇಕ ತುಂಡುಗಳಾಗಿ ಕತ್ತರಿಸು. ಟಗರಿನ ಒಳಗಿನ ಎಲ್ಲಾ ಭಾಗಗಳನ್ನು ಮತ್ತು ಕಾಲುಗಳನ್ನು ತೊಳೆಯಬೇಕು. ಅವುಗಳನ್ನು ತಲೆಯ ಮತ್ತು ಟಗರಿನ ಇತರ ತುಂಡುಗಳೊಡನೆ ಇಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಇದಲ್ಲದೆ ಆ ಟಗರನ್ನು ತುಂಡುತುಂಡಾಗಿ ಕಡಿದು, ಅದರ ಕರುಳುಗಳನ್ನೂ ಕಾಲುಗಳನ್ನೂ ತೊಳೆದು, ಅದರ ತುಂಡುಗಳನ್ನು ತಲೆಯ ಸಂಗಡ ಇಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 29:17
9 ತಿಳಿವುಗಳ ಹೋಲಿಕೆ  

ಕುರುಡನಾದ ಫರಿಸಾಯನೇ, ಮೊದಲು ಪಾತ್ರೆ ಬಟ್ಟಲುಗಳ ಒಳಭಾಗವನ್ನು ಶುಚಿಮಾಡು, ಆಗ ಅವುಗಳ ಹೊರಭಾಗವೂ ಶುಚಿಯಾಗುವುದು.


ಯೆರೂಸಲೇಮೇ, ನಿನಗೆ ರಕ್ಷಣೆಯಾಗುವಂತೆ ನಿನ್ನ ಹೃದಯದ ಕೆಟ್ಟತನವನ್ನು ತೊಳೆದುಕೋ. ದುರಾಲೋಚನೆಗಳು ನಿನ್ನಲ್ಲಿ ಇನ್ನೆಷ್ಟರವರೆಗೆ ತಂಗಿರುವವು?


ಅದರ ಕರುಳುಗಳನ್ನು ಮತ್ತು ಕಾಲುಗಳನ್ನು ತೊಳೆದು ಯಜ್ಞವೇದಿಯಲ್ಲಿ ಸರ್ವಾಂಗಹೋಮದ್ರವ್ಯದ ಮೇಲಿಟ್ಟು ಹೋಮಮಾಡಿದನು.


ಅದರ ಕರುಳುಗಳನ್ನು ಮತ್ತು ಕಾಲುಗಳನ್ನು ನೀರಿನಿಂದ ತೊಳೆದು, ಮೋಶೆ ಆ ಟಗರನ್ನು ಯಜ್ಞವೇದಿಯ ಮೇಲೆ ಪೂರ್ತಿಯಾಗಿ ಹೋಮ ಮಾಡಿದನು. ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಅದು ಅಗ್ನಿಯ ಮೂಲಕ ಯೆಹೋವನಿಗೆ ಪರಿಮಳಯುಕ್ತ ಸರ್ವಾಂಗಹೋಮವಾಗಿತ್ತು.


ಅದರ ಕರುಳುಗಳನ್ನು ಹಾಗು ಕಾಲುಗಳನ್ನು ನೀರಿನಲ್ಲಿ ತೊಳೆದನಂತರ ಯಾಜಕನು ಅದನ್ನು ಪೂರ್ತಿಯಾಗಿ ಯಜ್ಞವೇದಿಯ ಮೇಲೆ ಸುಡಬೇಕು. ಅದು ಅಗ್ನಿಯ ಮೂಲಕ ಯೆಹೋವನಿಗೆ ಪರಿಮಳವನ್ನು ಉಂಟುಮಾಡುವ ಸರ್ವಾಂಗಹೋಮವಾಗಿದೆ.


ಅದರ ಕರುಳುಗಳನ್ನು ಮತ್ತು ಕಾಲುಗಳನ್ನು ನೀರಿನಲ್ಲಿ ತೊಳೆದನಂತರ ಯಾಜಕನು ಅದನ್ನು ಪೂರ್ತಿಯಾಗಿ ಯಜ್ಞವೇದಿಯ ಮೇಲೆ ಹೋಮಮಾಡಬೇಕು. ಅದು ಅಗ್ನಿಯ ಮೂಲಕ ಯೆಹೋವನಿಗೆ ಪರಿಮಳವನ್ನು ಉಂಟುಮಾಡುವ ಸರ್ವಾಂಗಹೋಮವಾಗುತ್ತದೆ.


ಅದನ್ನು ಹಸಿಯಾಗಿಯೂ ನೀರಿನಲ್ಲಿ ಬೇಯಿಸಿಯೂ ತಿನ್ನಕೂಡದು. ಅದರ ತಲೆ, ತೊಡೆ, ಹೊಟ್ಟೆ, ಇವುಗಳ ಸಹಿತವಾಗಿ ಬೆಂಕಿಯಲ್ಲೇ ಸುಟ್ಟು ತಿನ್ನಬೇಕು.


ನೀನು ಅದನ್ನು ವಧಿಸಿ ಅದರ ರಕ್ತವನ್ನು ಯಜ್ಞವೇದಿಯ ನಾಲ್ಕು ಕಡೆಗಳಿಗೆ ಚಿಮುಕಿಸಬೇಕು.


ಅದನ್ನೆಲ್ಲಾ ಯಜ್ಞವೇದಿಯ ಮೇಲೆ ಯೆಹೋವನಿಗೆ ಸರ್ವಾಂಗಹೋಮವಾಗಿ ಸಮರ್ಪಿಸಬೇಕು. ಇದು ಯೆಹೋವನಿಗೆ ಸುಗಂಧಹೋಮವಾಗಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು