Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 29:22 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಪ್ರತಿಷ್ಠೆಗಾಗಿ ಸಮರ್ಪಿಸಲ್ಪಟ್ಟ ಟಗರಾಗಿರುವುದರಿಂದ ಅದರ ಕೊಬ್ಬನ್ನೆಲ್ಲಾ ಅಂದರೆ ಬಾಲದ ಕೊಬ್ಬನ್ನು, ವಪೆಯನ್ನು, ಪಿತ್ತಕೋಶದ ಮೇಲಿರುವ ಕೊಬ್ಬನ್ನು, ಎರಡು ಮೂತ್ರಕೋಶಗಳನ್ನು ಅವುಗಳ ಮೇಲಿರುವ ಕೊಬ್ಬನ್ನು ಹಾಗೂ ಬಲತೊಡೆಯನ್ನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಪಟ್ಟಾಭಿಷೇಕಕ್ಕಾಗಿ ಸಮರ್ಪಿತವಾದ ಆ ಟಗರನ್ನೆಲ್ಲ, ಅಂದರೆ ಬಾಲದ ಕೊಬ್ಬನ್ನು, ವಪೆಯನ್ನು, ಕಾಳಿಜದ ಮೇಲಿರುವ ಕೊಬ್ಬನ್ನು, ಎರಡು ಮೂತ್ರಪಿಂಡಗಳನ್ನು, ಅವುಗಳ ಮೇಲಿರುವ ಕೊಬ್ಬನ್ನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಬಳಿಕ ಪಟ್ಟಾಭಿಷೇಕಕ್ಕಾಗಿ ಸಮರ್ಪಿಸಲ್ಪಟ್ಟ ಆ ಟಗರಿನ ಕೊಬ್ಬನ್ನೆಲ್ಲಾ ಅಂದರೆ ಬಾಲದ ಕೊಬ್ಬನ್ನೂ ವಪೆಯನ್ನೂ ಕಾಳಿಜದ ಮೇಲಿರುವ ಕೊಬ್ಬನ್ನೂ ಎರಡು ಹುರುಳಿಕಾಯಿಗಳನ್ನೂ ಅವುಗಳ ಮೇಲಿರುವ ಕೊಬ್ಬನ್ನೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 “ಬಳಿಕ ಟಗರಿನ ಕೊಬ್ಬನ್ನೂ ತೆಗೆದುಕೊ. (ಇದು ಆರೋನನನ್ನು ಮಹಾಯಾಜಕನನ್ನಾಗಿ ಮಾಡುವ ಆಚಾರವಿಧಿಯಲ್ಲಿ ಉಪಯೋಗಿಸಲ್ಪಡುವ ಟಗರು.) ಬಾಲದ ಸುತ್ತಲಿರುವ ಕೊಬ್ಬನ್ನು, ದೇಹದ ಒಳಗಿನ ಅಂಗಗಳನ್ನು ಮುಚ್ಚಿಕೊಂಡಿರುವ ಕೊಬ್ಬನ್ನು, ಪಿತ್ತಕೋಶದ ಸುತ್ತಲಿರುವ ಕೊಬ್ಬನ್ನು, ಎರಡು ಮೂತ್ರಪಿಂಡಗಳನ್ನು ಮತ್ತು ಬಲತೊಡೆಯನ್ನು ತೆಗೆದುಕೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 “ಇದಲ್ಲದೆ ಆ ಟಗರಿನ ಕೊಬ್ಬನ್ನೂ ಬಾಲವನ್ನೂ ಕರುಳುಗಳ ಮೇಲಿರುವ ಕೊಬ್ಬನ್ನೂ ಕಾಳಿಜದ ಮೇಲಿರುವ ಕೊಬ್ಬನ್ನೂ ಎರಡು ಮೂತ್ರ ಜನಕಾಂಗಗಳನ್ನೂ ಅವುಗಳ ಕೊಬ್ಬನ್ನೂ ಬಲದೊಡೆಯನ್ನೂ ತೆಗೆದುಕೊಳ್ಳಬೇಕು. ಏಕೆಂದರೆ ಅದು ಪ್ರತಿಷ್ಠೆಯ ಟಗರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 29:22
14 ತಿಳಿವುಗಳ ಹೋಲಿಕೆ  

ಅದರ ಪಿತ್ತಕೋಶದ ಮೇಲಿರುವ ಕೊಬ್ಬನ್ನೂ ಎರಡು ಮೂತ್ರಕೋಶಗಳನ್ನೂ ಅವುಗಳ ಮೇಲಿರುವ ಕೊಬ್ಬನ್ನೂ ತೆಗೆದುಕೊಂಡು ಯಜ್ಞವೇದಿಯ ಮೇಲೆ ಹೋಮ ಮಾಡಬೇಕು.


ಅವುಗಳ ಮಾಂಸವು ಸಮಾಧಾನಯಜ್ಞಗಳಲ್ಲಿ ನೈವೇದ್ಯವಾಗಿ ನಿವಾಳಿಸುವ ಎದೆಯ ಭಾಗದಂತೆಯೂ, ಬಲತೊಡೆಯಂತೆಯೂ ನಿನಗೇ ಸಲ್ಲಬೇಕು.


ನೀವು ನೈವೇದ್ಯ ಮಾಡಿದ ಎದೆಯ ಭಾಗವನ್ನು, ಯಾಜಕರಿಗೋಸ್ಕರ ಪ್ರತ್ಯೇಕಿಸಿದ ತೊಡೆಯನ್ನು ಯಾವುದಾದರೂ ಒಂದು ಶುದ್ಧಸ್ಥಳದಲ್ಲಿ ಊಟಮಾಡಬಹುದು. ನೀನೂ, ನಿನ್ನ ಗಂಡುಮಕ್ಕಳೂ ಹಾಗು ಹೆಣ್ಣುಮಕ್ಕಳೂ ಅದನ್ನು ತಿನ್ನಬಹುದು. ಏಕೆಂದರೆ ಇಸ್ರಾಯೇಲರು ಸಮರ್ಪಿಸುವ ಸಮಾಧಾನಯಜ್ಞದ್ರವ್ಯಗಳಲ್ಲಿ ಇವೇ ನಿನಗೂ ಮತ್ತು ನಿನ್ನ ಮಕ್ಕಳಿಗೂ ಸಲ್ಲಬೇಕೆಂದು ನೇಮಕವಾಗಿದೆ.


ಮೋಶೆಯು ಆಜ್ಞಾಪಿಸಿದಂತೆ ಆರೋನನು ಅವುಗಳ ಎದೆಯ ಭಾಗಗಳನ್ನು ಮತ್ತು ಬಲತೊಡೆಯನ್ನು ನೈವೇದ್ಯವಾಗಿ ಯೆಹೋವನ ಸನ್ನಿಧಿಯಲ್ಲಿ ನಿವಾಳಿಸಿದನು.


ಅವರು ಹೋರಿಯ ಕೊಬ್ಬನ್ನು, ಟಗರಿನ ಬಾಲದ ಕೊಬ್ಬನ್ನು, ಅಂಗಾಂಶದ ಕೊಬ್ಬನ್ನು, ಮೂತ್ರಪಿಂಡಗಳನ್ನು, ಕಳಿಜದ ಹತ್ತಿರವಿರುವ ಕೊಬ್ಬನ್ನು,


ಅವನು ಅದರ ಕೊಬ್ಬನ್ನೆಲ್ಲಾ ಅಂದರೆ,


ಆ ಸಮಾಧಾನಯಜ್ಞದ ಪಶುವಿನ ಕೊಬ್ಬನ್ನು ಯೆಹೋವನಿಗೋಸ್ಕರ ಹೋಮವಾಗಿ ಸಮರ್ಪಿಸಬೇಕು. ಹೇಗೆಂದರೆ, ಬಾಲದ ಕೊಬ್ಬನ್ನೆಲ್ಲಾ ಬೆನ್ನೆಲುಬಿನ ಬಳಿಯಿಂದ ತೆಗೆದುಬಿಟ್ಟು ಅದನ್ನು, ಅಂಗಾಂಶದ ಕೊಬ್ಬನ್ನು, ಕರುಳುಗಳ ಮೇಲಣ ಎಲ್ಲಾ ಕೊಬ್ಬನ್ನು,


ಅದಲ್ಲದೆ ನೀನು ಯಜ್ಞವೇದಿಯ ಮೇಲಿರುವ ರಕ್ತದಲ್ಲಿಯೂ, ಅಭಿಷೇಕ ತೈಲದಲ್ಲಿಯೂ ಸ್ವಲ್ಪವನ್ನು ತೆಗೆದುಕೊಂಡು ಆರೋನನ ಮತ್ತು ಅವನ ವಸ್ತ್ರಗಳ ಮೇಲೆಯೂ ಅವನ ಮಕ್ಕಳ ಮತ್ತು ಅವರ ವಸ್ತ್ರಗಳ ಮೇಲೆಯೂ ಚಿಮುಕಿಸಬೇಕು. ಹೀಗೆ ಅವನೂ ಮತ್ತು ಅವನ ಮಕ್ಕಳೂ ಅವರ ವಸ್ತ್ರಗಳ ಸಹಿತವಾಗಿ ಪರಿಶುದ್ಧರಾಗುವರು.


ಮತ್ತು ಯೆಹೋವನಿಗೆದುರಾಗಿ ಪುಟ್ಟಿಯಲ್ಲಿ ಇಟ್ಟಿದ್ದ ಹುಳಿಯಿಲ್ಲದ ಪದಾರ್ಥಗಳಲ್ಲಿ ಒಂದು ರೊಟ್ಟಿಯನ್ನು, ಎಣ್ಣೆ ಮಿಶ್ರವಾದ ಒಂದು ಹೋಳಿಗೆಯನ್ನು ಮತ್ತು ಒಂದು ಕಡುಬನ್ನು ತೆಗೆದುಕೊಂಡು,


ಸರ್ವಾಂಗಹೋಮ, ಧಾನ್ಯನೈವೇದ್ಯ, ದೋಷಪರಿಹಾರಕ ಯಜ್ಞ, ಪ್ರಾಯಶ್ಚಿತ್ತಯಜ್ಞ, ಯಾಜಕ ಪ್ರತಿಷ್ಠೆ ಮತ್ತು ಸಮಾಧಾನಯಜ್ಞ ಎಂಬ ಯಜ್ಞಗಳ ವಿಷಯದಲ್ಲಿ ಮೇಲೆ ಹೇಳಿದ ನಿಯಮಗಳನ್ನು ಅನುಸರಿಸಬೇಕು.


ಯಾಜಕನು ಆ ಟಗರುಗಳಲ್ಲಿ ಒಂದನ್ನು ಮತ್ತು ಆ ಒಂದು ಸೇರು ಎಣ್ಣೆಯನ್ನು ಪ್ರಾಯಶ್ಚಿತ್ತಯಜ್ಞವಾಗಿ ಸಮರ್ಪಿಸಬೇಕು. ಅವುಗಳನ್ನು ನೈವೇದ್ಯವಾಗಿ ಯೆಹೋವನ ಸನ್ನಿಧಿಯಲ್ಲಿ ನಿವಾಳಿಸಬೇಕು.


ಅವನು ಒಂದು ತೊಡೆಯ ಮಾಂಸವನ್ನೂ ಅದರ ಸಂಗಡ ಇದ್ದದ್ದನ್ನೂ ತಂದು ಸೌಲನ ಮುಂದಿಟ್ಟನು. ಆಗ ಸಮುವೇಲನು, “ಇಗೋ, ಇದು ನಿನಗೋಸ್ಕರ ಪ್ರತ್ಯೇಕಿಸಿದ್ದು; ಇದನ್ನು ತಿನ್ನು, ಯಾಕೆಂದರೆ ಜನರನ್ನು ಭೋಜನಕ್ಕೆ ಕರೆದಾಗಿನಿಂದ ಇದು ನಿನಗೋಸ್ಕರವಾಗಿಯೇ ಇಡಲ್ಪಟ್ಟಿತ್ತು” ಎಂದು ಸೌಲನಿಗೆ ಹೇಳಿದನು. ಸೌಲನು ಆ ದಿನ ಸಮುವೇಲನ ಸಂಗಡ ಊಟಮಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು