ವಿಮೋಚನಕಾಂಡ 29:26 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಮತ್ತು ಆರೋನನ ಪಟ್ಟಾಭೀಷೇಕಕ್ಕಾಗಿ ಪ್ರತಿಷ್ಠಿಸಿದ ಟಗರಿನ ಎದೆಯ ಭಾಗವನ್ನು ತೆಗೆದುಕೊಂಡು ಅದನ್ನು ನೈವೇದ್ಯವಾಗಿ ಯೆಹೋವನ ಸನ್ನಿಧಿಯಲ್ಲಿ ನಿವಾಳಿಸಬೇಕು. ಅದು ನಿನಗೇ ಸಲ್ಲತಕ್ಕ ಪಾಲಾಗಿರುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 “ಆರೋನನ ಪಟ್ಟಾಭಿಷೇಕಕ್ಕಾಗಿ ಸಮರ್ಪಿಸಿದ ಟಗರಿನ ಎದೆಯ ಭಾಗವನ್ನು ತೆಗೆದುಕೊಂಡು ಅದನ್ನು ಕೂಡ ಕಾಣಿಕೆಯಾಗಿ ಸರ್ವೇಶ್ವರನಾದ ನನ್ನ ಸನ್ನಿಧಿಯಲ್ಲಿ ಆರತಿ ಮಾಡಿಸು. ಅದು ನಿನಗೇ ಸಲ್ಲತಕ್ಕ ಪಾಲು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26 ಮತ್ತು ಆರೋನನ ಪಟ್ಟಾಭಿಷೇಕಕ್ಕಾಗಿ ಸಮರ್ಪಿಸಿದ ಟಗರಿನ ಎದೆಯ ಭಾಗವನ್ನು ತೆಗೆದುಕೊಂಡು ಅದನ್ನೂ ನೈವೇದ್ಯವಾಗಿ ಯೆಹೋವನ ಸನ್ನಿಧಿಯಲ್ಲಿ ನಿವಾಳಿಸಬೇಕು. ಅದು ನಿನಗೇ ಸಲ್ಲತಕ್ಕ ಪಾಲು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್26 “ತರುವಾಯ ಟಗರಿನ ಎದೆಯ ಭಾಗವನ್ನು ತೆಗೆದುಕೊ. (ಆರೋನನನ್ನು ಮಹಾಯಾಜಕನನ್ನಾಗಿ ಮಾಡುವ ಆಚಾರವಿಧಿಯಲ್ಲಿ ಉಪಯೋಗಿಸಲ್ಪಡುವ ಟಗರು ಇದಾಗಿದೆ.) ಟಗರಿನ ಎದೆಯ ಭಾಗವನ್ನು ವಿಶೇಷ ಸಮರ್ಪಣೆಯಾಗಿ ಯೆಹೋವನ ಮುಂದೆ ನಿವಾಳಿಸಬೇಕು. ಪಶುವಿನ ಈ ಭಾಗವು ನಿನಗೆ ಸಲ್ಲತಕ್ಕ ಪಾಲು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 ಇದಲ್ಲದೆ ಆರೋನನು ಪ್ರತಿಷ್ಠೆಯ ಟಗರಿನ ಎದೆಯ ಭಾಗವನ್ನು ತೆಗೆದುಕೊಂಡು, ನೈವೇದ್ಯವಾಗಿ ಯೆಹೋವ ದೇವರ ಸನ್ನಿಧಿಯಲ್ಲಿ ನಿವಾಳಿಸಬೇಕು. ಅದು ನಿನ್ನ ಪಾಲಾಗಿರುವುದು. ಅಧ್ಯಾಯವನ್ನು ನೋಡಿ |