ವಿಮೋಚನಕಾಂಡ 29:27 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ಆರೋನನನ್ನೂ ಅವನ ಮಕ್ಕಳನ್ನೂ ಪ್ರತಿಷ್ಠೆ ಮಾಡುವಾಗ ಸಮರ್ಪಿಸಿದ ಟಗರಿನ ಮಾಂಸದಲ್ಲಿ ನೈವೇದ್ಯವಾಗಿ ನಿವಾಳಿಸಿದ ಎದೆಯ ಭಾಗವನ್ನೂ ಯಾಜಕರ ಭಾಗಕ್ಕೆ ಪ್ರತ್ಯೇಕಿಸಿದ ತೊಡೆಯನ್ನೂ ದೇವರದೆಂದು ಭಾವಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 ಆರೋನನಿಗೂ ಅವನ ಮಕ್ಕಳಿಗೂ ಯಾಜಕದೀಕ್ಷೆಯನ್ನು ಕೊಡುವಾಗ ಸಮರ್ಪಿಸಿದ ಟಗರಿನ ಮಾಂಸದಲ್ಲಿ ಕಾಣಿಕೆಯಾಗಿ ಆರತಿ ಮಾಡಿಸಿದ ಎದೆಯ ಭಾಗವನ್ನು ಮತ್ತು ಯಾಜಕರ ಭಾಗಕ್ಕೆ ಪ್ರತ್ಯೇಕಿಸಿದ ಅದರ ತೊಡೆಯನ್ನು ದೇವರದೆಂದು ಭಾವಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)27 ಆರೋನನಿಗೂ ಅವನ ಮಕ್ಕಳಿಗೂ ಯಾಜಕದೀಕ್ಷೆಯನ್ನು ಕೊಡುವಾಗ ಸಮರ್ಪಿಸಿದ ಟಗರಿನ ಮಾಂಸದಲ್ಲಿ ನೈವೇದ್ಯವಾಗಿ ನಿವಾಳಿಸಿದ ಎದೆಯ ಭಾಗವನ್ನೂ ಯಾಜಕರ ಭಾಗಕ್ಕೆ ಪ್ರತ್ಯೇಕಿಸಿದ ತೊಡೆಯನ್ನೂ ದೇವರದೆಂದು ಭಾವಿಸಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್27 ಬಳಿಕ ಆರೋನನನ್ನು ಮಹಾಯಾಜಕನನ್ನಾಗಿ ಮಾಡಲು ನಿವಾಳಿಸಲ್ಪಟ್ಟ ಟಗರಿನ ಎದೆಯ ಭಾಗವನ್ನೂ ಯಾಜಕರ ಭಾಗವಾದ ನಿವಾಳಿಸಲ್ಪಟ್ಟ ಟಗರಿನ ತೊಡೆಯನ್ನೂ ತೆಗೆದುಕೊ. ಅವುಗಳನ್ನು ಆರೋನನಿಗೂ ಅವನ ಪುತ್ರರಿಗೂ ಕೊಡು. ಇದು ಕಾಣಿಕೆಯ ವಿಶೇಷ ಭಾಗವಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ27 “ನೀನು ನೈವೇದ್ಯ ಮಾಡಿದ ಎದೆಯ ಭಾಗವನ್ನೂ, ಅರ್ಪಣೆ ಮಾಡಿದ ಬಲದ ಮುಂದೊಡೆಯನ್ನೂ, ಆರೋನನ, ಅವನ ಪುತ್ರರಿಗೆ ಸಲ್ಲಬೇಕಾದ ಪ್ರತಿಷ್ಠಿತ ಟಗರಿನ ಭಾಗವನ್ನು ಪ್ರತಿಷ್ಠಿಸು. ಅಧ್ಯಾಯವನ್ನು ನೋಡಿ |