Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 29:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಗೋದಿಯ ಹಿಟ್ಟಿನಿಂದ ಮಾಡಿಸಿ ಒಂದೇ ಪುಟ್ಟಿಯಲ್ಲಿ ತುಂಬಿಸಬೇಕು. ಆ ನಂತರ ಆ ಪುಟ್ಟಿಯನ್ನು, ಹೋರಿಯನ್ನು ಮತ್ತು ಎರಡು ಟಗರುಗಳೊಂದಿಗೆ ತರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಆಮೇಲೆ ಆ ಪುಟ್ಟಿಯನ್ನು, ಆ ಹೋರಿಯನ್ನು ಹಾಗು ಟಗರುಗಳನ್ನು ತಂದಿಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಆಮೇಲೆ ಆ ಪುಟ್ಟಿಯನ್ನೂ ಆ ಹೋರಿಯನ್ನೂ ಟಗರುಗಳನ್ನೂ ತಂದಿಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಬಳಿಕ ಆ ಬುಟ್ಟಿಯನ್ನು ಆರೋನನಿಗೂ ಮತ್ತು ಅವನ ಪುತ್ರರಿಗೂ ಕೊಡು. ಅದೇ ಸಮಯದಲ್ಲಿ ಹೋರಿಯನ್ನು ಮತ್ತು ಎರಡು ಟಗರುಗಳನ್ನು ಅವರಿಗೆ ಕೊಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಇವುಗಳನ್ನು ಒಂದೇ ಬುಟ್ಟಿಯಲ್ಲಿ ಇಟ್ಟುಕೊಂಡು ಹೋರಿ ಮತ್ತು ಎರಡು ಟಗರುಗಳ ಸಂಗಡ ತೆಗೆದುಕೊಂಡು ಬರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 29:3
6 ತಿಳಿವುಗಳ ಹೋಲಿಕೆ  

ಆ ಟಗರನ್ನೂ, ಪುಟ್ಟಿ ತುಂಬಾ ಹುಳಿಯಿಲ್ಲದ ರೊಟ್ಟಿಗಳನ್ನೂ, ಯಾಜಕನು ಯೆಹೋವನಿಗೆ ಸಮಾಧಾನಯಜ್ಞವಾಗಿ ಸಮರ್ಪಿಸಬೇಕು. ಅವನು ತಂದ ಧಾನ್ಯದ್ರವ್ಯ ಪಾನದ್ರವ್ಯಗಳನ್ನೂ ನೈವೇದ್ಯಮಾಡಬೇಕು.


ಮೋಶೆ ಆರೋನನಿಗೂ ಮತ್ತು ಅವನ ಮಕ್ಕಳಿಗೂ, “ಮಾಂಸವನ್ನು ನೀವು ದೇವದರ್ಶನದ ಗುಡಾರದ ಬಾಗಿಲಿನ ಹತ್ತಿರ ಬೇಯಿಸಿ ಅದನ್ನು ಮತ್ತು ಪಟ್ಟಾಭಿಷೇಕಕ್ಕಾಗಿ ಪುಟ್ಟಿಯಲ್ಲಿ ಇಟ್ಟಿರುವ ಭಕ್ಷ್ಯಗಳನ್ನು ಅಲ್ಲೇ ಊಟಮಾಡಬೇಕು. ‘ಆರೋನನೂ ಅವನ ಮಕ್ಕಳೂ ಅದನ್ನು ತಿನ್ನಬೇಕು’ ಎಂಬುದೇ ನನಗಾದ ಅಪ್ಪಣೆ.


ಯೆಹೋವನ ಸನ್ನಿಧಿಯಲ್ಲಿ ಪುಟ್ಟಿಯಲ್ಲಿ ಇಟ್ಟಿದ್ದ ಹುಳಿಯಿಲ್ಲದ ಭಕ್ಷ್ಯಗಳಲ್ಲಿ ಒಂದು ರೊಟ್ಟಿಯನ್ನು, ಎಣ್ಣೆಮಿಶ್ರವಾದ ಒಂದು ಹೋಳಿಗೆಯನ್ನು ಹಾಗು ಒಂದು ಕಡುಬನ್ನು ತೆಗೆದುಕೊಂಡು ಈ ಭಕ್ಷ್ಯಗಳನ್ನು ಆ ಕೊಬ್ಬಿನ ಮತ್ತು ಬಲದೊಡೆಯ ಮೇಲೆ ಇಟ್ಟನು.


“ನೀನು ಆರೋನನನ್ನು ಮತ್ತು ಅವನ ಗಂಡು ಮಕ್ಕಳನ್ನು ಕರೆದುಕೊಂಡು ಅವರಿಗೆ ಬೇಕಾದ ದೀಕ್ಷಾವಸ್ತ್ರಗಳನ್ನು ಮತ್ತು ಅಭಿಷೇಕತೈಲವನ್ನು, ದೋಷಪರಿಹಾರಕ್ಕಾಗಿ ಸಮರ್ಪಿಸಬೇಕಾದ ಹೋರಿಯನ್ನು, ಎರಡು ಟಗರುಗಳನ್ನು ಮತ್ತು ಹುಳಿಯಿಲ್ಲದ ಭಕ್ಷ್ಯಗಳು ತುಂಬಿರುವ ಪುಟ್ಟಿಯನ್ನು ತೆಗೆದುಕೊಂಡುಬಂದು,


ಮತ್ತು ಹುಳಿಯಿಲ್ಲದ ರೊಟ್ಟಿಗಳನ್ನು, ಎಣ್ಣೆ ಮಿಶ್ರಿತವಾದ ಹುಳಿಯಿಲ್ಲದ ಹೋಳಿಗೆಗಳನ್ನು, ಎಣ್ಣೆ ಸವರಿದ ಹುಳಿಯಿಲ್ಲದ ಕಡಬುಗಳನ್ನೂ,


ಆಗ ಆರೋನನನ್ನೂ ಮತ್ತು ಅವನ ಮಕ್ಕಳನ್ನೂ ದೇವದರ್ಶನದ ಗುಡಾರದ ಬಾಗಿಲಿಗೆ ಕರೆದುಕೊಂಡು ಬಂದು ನೀರಿನಲ್ಲಿ ಸ್ನಾನಮಾಡಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು