Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 29:30 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಅವನ ಮಕ್ಕಳಲ್ಲಿ ಅವನಿಗೆ ಬದಲಾಗಿ ಮಹಾಯಾಜಕನಾಗುವವನು ಪವಿತ್ರಸ್ಥಾನದಲ್ಲಿ ದೇವರ ಸೇವೆಯನ್ನು ನಡೆಸುವುದಕ್ಕೆ ದೇವದರ್ಶನದ ಗುಡಾರದೊಳಗೆ ಪ್ರವೇಶಿಸಿದಂದಿನಿಂದ ಏಳು ದಿನಗಳವರೆಗೆ ಆ ವಸ್ತ್ರಗಳನ್ನು ಧರಿಸಿಕೊಂಡಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ಅವನ ಮಕ್ಕಳಲ್ಲಿ ಅವನಿಗೆ ಪ್ರತಿಯಾಗಿ ಮಹಾಯಾಜಕನಾಗುವವನು ಪವಿತ್ರಸ್ಥಾನದಲ್ಲಿ ದೇವರ ಸೇವೆಯನ್ನು ನಡೆಸುವುದಕ್ಕೆ ದೇವದರ್ಶನದ ಗುಡಾರದೊಳಗೆ ಪ್ರವೇಶಿಸಿದ ದಿನದಿಂದ ಏಳು ದಿವಸಗಳವರೆಗೆ ಆ ವಸ್ತ್ರಗಳನ್ನು ತೊಟ್ಟುಕೊಂಡಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ಅವನ ಮಕ್ಕಳಲ್ಲಿ ಅವನಿಗೆ ಪ್ರತಿಯಾಗಿ ಮಹಾಯಾಜಕನಾಗುವವನು ಪವಿತ್ರಸ್ಥಾನದಲ್ಲಿ ದೇವರ ಸೇವೆಯನ್ನು ನಡಿಸುವದಕ್ಕೆ ದೇವದರ್ಶನದ ಗುಡಾರದೊಳಗೆ ಪ್ರವೇಶಿಸಿದಂದಿನಿಂದ ಏಳು ದಿವಸಗಳವರೆಗೆ ಆ ವಸ್ತ್ರಗಳನ್ನು ಧರಿಸಿಕೊಂಡಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ಆರೋನನ ತರುವಾಯ ಅವನ ಮಗನು ಮಹಾಯಾಜಕನಾಗುವನು. ಅವನು ಪವಿತ್ರಸ್ಥಳದಲ್ಲಿ ಸೇವೆಮಾಡಲು ದೇವದರ್ಶನಗುಡಾರಕ್ಕೆ ಪ್ರವೇಶಿಸಿದಂದಿನಿಂದ ಏಳು ದಿನಗಳವರೆಗೆ ಆ ವಸ್ತ್ರಗಳನ್ನು ಧರಿಸಿಕೊಂಡಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ಅವನ ಬದಲಾಗಿ ಅವನ ಮಗನು ಯಾಜಕತ್ವವನ್ನು ನಡೆಸಿ, ಪರಿಶುದ್ಧ ಸ್ಥಳದಲ್ಲಿ ಸೇವೆಮಾಡುವಂತೆ ದೇವದರ್ಶನದ ಗುಡಾರದೊಳಗೆ ಪ್ರವೇಶಿಸಿದ ದಿನದಿಂದ ಅವುಗಳನ್ನು ಏಳು ದಿನಗಳವರೆಗೆ ತೊಟ್ಟುಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 29:30
17 ತಿಳಿವುಗಳ ಹೋಲಿಕೆ  

ಮೋಶೆ ಆರೋನನ ವಸ್ತ್ರಗಳನ್ನು ತೆಗೆದು ಅವನ ಮಗನಾದ ಎಲ್ಲಾಜಾರನಿಗೆ ತೊಡಿಸಿದನು. ಆರೋನನು ಅಲ್ಲೇ ಬೆಟ್ಟದ ತುದಿಯಲ್ಲಿ ಸತ್ತುಹೋದನು. ತರುವಾಯ ಮೋಶೆಯೂ ಮತ್ತು ಎಲ್ಲಾಜಾರನೂ ಬೆಟ್ಟದಿಂದ ಇಳಿದು ಬಂದರು.


ಇಂಥವನೇ ನಮಗೆ ಬೇಕಾಗಿರುವ ಮಹಾಯಾಜಕನು, ಈತನು ಪರಿಶುದ್ಧನೂ, ನಿರ್ದೋಷಿಯೂ, ನಿಷ್ಕಳಂಕನೂ, ಪಾಪಿಗಳಲ್ಲಿ ಸೇರದೆ ಪ್ರತ್ಯೇಕವಾಗಿರುವವನು, ಆಕಾಶಮಂಡಲಗಳಿಗಿಂತ ಉನ್ನತದಲ್ಲಿರುವವನೂ ಆಗಿರುವನು.


ಹೀಗೆ ಏಳು ದಿನ ಯಜ್ಞವೇದಿಯ ದೋಷವನ್ನು ಪರಿಹರಿಸುತ್ತಾ ಅದನ್ನು ಶುದ್ಧಿ ಮಾಡಿ ಪ್ರತಿಷ್ಠಿಸಬೇಕು.


ಏಳನೆಯ ದಿನದಲ್ಲಿ ಯಾಜಕನು ಅವನನ್ನು ಪರೀಕ್ಷಿಸುವಾಗ ಆ ಮಚ್ಚೆ ದೇಹದ ಚರ್ಮದಲ್ಲಿ ಹರಡಿಕೊಳ್ಳದೆ ಮೊದಲು ಇದ್ದಂತೆಯೇ ಕಾಣಿಸಿದರೆ ಯಾಜಕನು ಇನ್ನು ಏಳು ದಿನಗಳ ವರೆಗೂ ಅವನನ್ನು ಪ್ರತ್ಯೇಕವಾಗಿ ಇರಿಸಬೇಕು.


ಆರೋನನು ಯಜ್ಞವೇದಿಯ ಹತ್ತಿರಕ್ಕೆ ಹೋಗಿ ತನಗೋಸ್ಕರ ದೋಷಪರಿಹಾರಕ ಯಜ್ಞದ ಹೋರಿಯನ್ನು ವಧಿಸಿದನು.


ಎಂಟನೆಯ ದಿನದಲ್ಲಿ ಮೋಶೆ ಆರೋನನನ್ನು, ಅವನ ಮಕ್ಕಳನ್ನು ಮತ್ತು ಇಸ್ರಾಯೇಲರ ಹಿರಿಯರನ್ನು ಕರೆದನು.


ನಾನು ನಿನಗೆ ಆಜ್ಞಾಪಿಸಿದ ರೀತಿಯಲ್ಲಿ ಏಳು ದಿನಗಳ ಕಾಲ ಹೀಗೆ ಅವರನ್ನು ಪ್ರತ್ಯೇಕಿಸಿ ಪ್ರತಿಷ್ಠಿಸಬೇಕು. ಆರೋನನನ್ನೂ ಅವನ ಮಕ್ಕಳನ್ನೂ ಸೇವೆಗೆ ಪ್ರತಿಷ್ಠಿಸಬೇಕು.


“‘ಏಳು ದಿನಗಳವರೆಗೆ ನೀವು ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. ಮೊದಲನೆಯ ದಿನದಲ್ಲಿಯೇ ಹುಳಿಹಿಟ್ಟನ್ನು ನಿಮ್ಮ ಮನೆಯೊಳಗಿಂದ ತೆಗೆದುಬಿಡಬೇಕು. ಏಕೆಂದರೆ ಮೊದಲನೆಯ ದಿನದಿಂದ ಏಳನೆಯ ದಿನದವರೆಗೆ ಹುಳಿರೊಟ್ಟಿಯನ್ನು ತಿನ್ನುವವನು ಇಸ್ರಾಯೇಲಿನೊಳಗಿಂದ ತೆಗೆದುಹಾಕಲ್ಪಡಬೇಕು.


ಮತ್ತೆ ಏಳು ದಿನದ ಮೇಲೆ ಪಾರಿವಾಳವನ್ನು ಬಿಡಲು ಅದು ಅವನ ಬಳಿಗೆ ಹಿಂತಿರುಗಿ ಬರಲೇ ಇಲ್ಲ.


ಅವನು ಇನ್ನೂ ಏಳು ದಿನಗಳ ನಂತರ ಪಾರಿವಾಳವನ್ನು ತಿರುಗಿ ಹೊರಕ್ಕೆ ಬಿಟ್ಟನು.


ಆರೋನನ ಪವಿತ್ರವಾದ ಯಾಜಕದೀಕ್ಷಾವಸ್ತ್ರಗಳು ಅವನ ತರುವಾಯ ಅವನ ವಂಶಸ್ಥರಿಗೂ ಉಪಯೋಗವಾಗಬೇಕು. ಅವರು ಅದರಲ್ಲಿಯೇ ನನಗಾಗಿ ಅಭಿಷೇಕಿಸಿ ಪ್ರತಿಷ್ಠಿಸಬೇಕು.


ಆರೋನನು ಪ್ರತಿಷ್ಠೆಗಾಗಿ ಸಮರ್ಪಿಸಿದ ಟಗರಿನ ಮಾಂಸವನ್ನು ದೇವದರ್ಶನದ ಗುಡಾರದ ಅಂಗಳದಲ್ಲಿ ಬೇಯಿಸಬೇಕು.


“ಆರೋನನ ವಂಶದವರಲ್ಲಿ ಯಾವನಿಗೆ ಪಿತೃಸ್ಥಾನದಲ್ಲಿ ಮಹಾಯಾಜಕನ ಸೇವಾವೃತ್ತಿಯನ್ನು ನಡೆಸುವುದಕ್ಕೆ ಪಟ್ಟಾಭಿಷೇಕವಾಗುವುದೋ ಅವನೇ ಈ ದೋಷಪರಿಹಾರ ಕಾರ್ಯವನ್ನು ಆಚರಿಸಬೇಕು. ಅವನೇ ಆ ಪರಿಶುದ್ಧವಾದ ನಾರುಮಡಿಗಳನ್ನು ಧರಿಸಿಕೊಳ್ಳಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು