ವಿಮೋಚನಕಾಂಡ 29:33 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201933 ಅವರನ್ನು ಯಾಜಕ ಸೇವೆಗೆ ನೇಮಿಸುವುದಕ್ಕೂ ದೇವರ ಪವಿತ್ರ ಸೇವೆಗೆ ಪ್ರತಿಷ್ಠಿಸುವುದಕ್ಕೂ ಯಾವ ಪದಾರ್ಥಗಳು ದೋಷಪರಿಹಾರಕ್ಕಾಗಿ ಸಮರ್ಪಿಸಲ್ಪಟ್ಟವೋ ಅವುಗಳನ್ನು ಅವರು ತಿನ್ನಬೇಕೇ ಹೊರತು ಇತರರು ತಿನ್ನಬಾರದು ಏಕೆಂದರೆ ಅವು ಪರಿಶುದ್ಧವಾದವುಗಳಾಗಿ ಮೀಸಲಾದುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)33 ಅವರನ್ನು ಯಾಜಕ ಪದವಿಗೆ ಸೇರಿಸುವುದಕ್ಕೂ ದೇವರ ಸೇವೆಗೆ ಪ್ರತಿಷ್ಠಿಸುವುದಕ್ಕೂ ಯಾವ ಪದಾರ್ಥಗಳನ್ನು ಪಾಪಪರಿಹಾರಕ್ಕಾಗಿ ಸಮರ್ಪಿಸಲಾದುವೋ ಅವುಗಳನ್ನು ಅವರೇ ಭೋಜನ ಮಾಡಬೇಕು. ಇತರರು ಅವುಗಳನ್ನು ತಿನ್ನಕೂಡದು. ಏಕೆಂದರೆ ಅವು ಮೀಸಲಾದುವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)33 ಅವರನ್ನು ಯಾಜಕೋದ್ಯೋಗಕ್ಕೆ ಸೇರಿಸುವದಕ್ಕೂ ದೇವರ ಸೇವೆಗೆ ಪ್ರತಿಷ್ಠಿಸುವದಕ್ಕೂ ಯಾವ ಪದಾರ್ಥಗಳು ದೋಷಪರಿಹಾರಕ್ಕಾಗಿ ಸಮರ್ಪಿಸಲ್ಪಟ್ಟವೋ ಅವುಗಳನ್ನು ಅವರೇ ಭೋಜನಮಾಡಬೇಕೇ ಹೊರತು ಇತರರು ತಿನ್ನಕೂಡದು; ಅವು ಮೀಸಲು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್33 ಅವರು ಯಾಜಕರಾಗಿ ಮಾಡಲ್ಪಟ್ಟಾಗ ಅವರ ಪಾಪನಿವಾರಣೆಗಾಗಿ ಇವುಗಳನ್ನು ಸಮರ್ಪಿಸಲಾಗಿತ್ತು. ಆದ್ದರಿಂದ ಆ ಸಮರ್ಪಣೆಗಳನ್ನು ಅವರು ಮಾತ್ರ ತಿನ್ನಬೇಕೇ ಹೊರತು ಬೇರೆಯವರು ತಿನ್ನಬಾರದು; ಯಾಕೆಂದರೆ ಅವು ಪರಿಶುದ್ಧವಾಗಿವೆ ಮತ್ತು ಪ್ರತ್ಯೇಕಿಸಲ್ಪಟ್ಟವುಗಳಾಗಿವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ33 ಅವರನ್ನು ಪ್ರತಿಷ್ಠೆ ಮಾಡುವುದಕ್ಕೋಸ್ಕರ ಮತ್ತು ಪರಿಶುದ್ಧ ಮಾಡುವುದಕ್ಕೋಸ್ಕರ ಅವರಿಗಾಗಿ ಪ್ರಾಯಶ್ಚಿತ್ತ ಮಾಡಿದವುಗಳನ್ನು ಅವರೇ ಊಟಮಾಡಬೇಕು. ಇತರರು ಅದನ್ನು ಉಣ್ಣಬಾರದು. ಏಕೆಂದರೆ ಅವು ಪರಿಶುದ್ಧವಾದವುಗಳು. ಅಧ್ಯಾಯವನ್ನು ನೋಡಿ |