ವಿಮೋಚನಕಾಂಡ 29:38 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201938 ಯಜ್ಞವೇದಿಯ ಮೇಲೆ ನಿತ್ಯವೂ ಸಮರ್ಪಿಸಬೇಕಾದವುಗಳು, ಒಂದು ವರ್ಷದ ಎರಡು ಕುರಿಮರಿಗಳನ್ನು ಪ್ರತಿದಿನವೂ ಹೋಮಮಾಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)38 ಬಲಿಪೀಠದ ಮೇಲೆ ಅನುದಿನವೂ ಸಮರ್ಪಿಸಬೇಕಾದುವುಗಳು ಇವು: ಒಂದು ವರ್ಷದ ಎರಡು ಕುರಿಗಳನ್ನು ದಿನಂಪ್ರತಿ ಬಲಿದಾನ ಮಾಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)38 ಯಜ್ಞವೇದಿಯ ಮೇಲೆ ನಿತ್ಯವೂ ಸಮರ್ಪಿಸಬೇಕಾದದ್ದೇನಂದರೆ - ಒಂದು ವರುಷದ ಎರಡು ಕುರಿಗಳನ್ನು ದಿನಂಪ್ರತಿಯೂ ಹೋಮಮಾಡಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್38 “ಯಜ್ಞವೇದಿಕೆಯ ಮೇಲೆ ಪ್ರತಿದಿನ ಯಜ್ಞವನ್ನು ಸಮರ್ಪಿಸಬೇಕು. ಒಂದು ವರ್ಷದ ಎರಡು ಕುರಿಮರಿಗಳನ್ನು ನೀನು ವಧಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ38 “ಬಲಿಪೀಠದ ಮೇಲೆ ನೀನು ಅರ್ಪಿಸಬೇಕಾದದ್ದು ಇದೇ: ಒಂದು ವರ್ಷದ ಎರಡು ಕುರಿಮರಿಗಳನ್ನು ಪ್ರತಿದಿನ ಬಿಟ್ಟುಬಿಡದೆ ದಹನಬಲಿಯಾಗಿ ಅರ್ಪಿಸಬೇಕು. ಅಧ್ಯಾಯವನ್ನು ನೋಡಿ |
ಈ ಯಾಜಕರು ಪ್ರತಿದಿನ ಬೆಳಿಗ್ಗೆ ಹಾಗು ಸಾಯಂಕಾಲ ಯೆಹೋವನಿಗೋಸ್ಕರ ಸರ್ವಾಂಗಹೋಮಗಳನ್ನು ಸಮರ್ಪಿಸುತ್ತಾ ಸುಗಂಧದ್ರವ್ಯ ಧೂಪವನ್ನು ಹಾಕುತ್ತಾ ಶುದ್ಧ ಬಂಗಾರದ ಮೇಜಿನ ಮೇಲೆ ನೈವೇದ್ಯವಾದ ರೊಟ್ಟಿಗಳನ್ನಿಡುತ್ತಾ ಪ್ರತಿ ಸಾಯಂಕಾಲದಲ್ಲಿ ಬಂಗಾರದ ದೀಪಸ್ತಂಭದ ದೀಪಗಳನ್ನು ಹಚ್ಚುತ್ತಾ ಇರುತ್ತಾರೆ. ಹೀಗೆ ನಾವು ನಮ್ಮ ದೇವರಾದ ಯೆಹೋವನ ಕಟ್ಟಳೆಗಳನ್ನು ಕೈಕೊಳ್ಳುತ್ತೇವೆ; ನೀವಾದರೋ ಆತನನ್ನು ಬಿಟ್ಟವರು.
ಈಗ ನಾನು ನನ್ನ ದೇವರಾದ ಯೆಹೋವನ ಹೆಸರಿಗಾಗಿ ಒಂದು ಆಲಯವನ್ನು ಕಟ್ಟಿಸಿ, ಇಸ್ರಾಯೇಲರಿಗಿರುವ ಶಾಶ್ವತ ನಿಯಮದ ಪ್ರಕಾರ, ಆತನ ಸನ್ನಿಧಿಯಲ್ಲಿ ಸುಗಂಧದ್ರವ್ಯಗಳಿಂದ ಧೂಪಹಾಕುವುದಕ್ಕೂ, ಪ್ರತಿನಿತ್ಯ ನೈವೇದ್ಯದ ರೊಟ್ಟಿಗಳನ್ನಿಡುವುದಕ್ಕೂ, ಉದಯಕಾಲದಲ್ಲಿಯೂ, ಸಾಯಂಕಾಲದಲ್ಲಿಯೂ, ಸಬ್ಬತ್ ದಿನಗಳಲ್ಲಿಯೂ, ಅಮಾವಾಸ್ಯೆಯ ದಿನಗಳಲ್ಲಿಯೂ, ನಮ್ಮ ದೇವರಾದ ಯೆಹೋವನ ಹಬ್ಬಗಳಲ್ಲಿಯೂ ಇವುಗಳಲ್ಲಿ ಸರ್ವಾಂಗಹೋಮವನ್ನರ್ಪಿಸುವುದಕ್ಕೂ ಈ ಆಲಯವನ್ನು ಆತನಿಗೋಸ್ಕರ ಪ್ರತಿಷ್ಠಿಸಬೇಕೆಂದಿದ್ದೇನೆ.