ಅರಸನಾದ ಆಹಾಜನು ಯಾಜಕನಾದ ಊರೀಯನಿಗೆ, “ಉದಯಕಾಲದಲ್ಲಿ ಸರ್ವಾಂಗಹೋಮವನ್ನೂ, ಸಾಯಂಕಾಲದಲ್ಲಿ ಧಾನ್ಯನೈವೇದ್ಯವನ್ನೂ, ಅರಸನು ತರುವ ಸರ್ವಾಂಗಹೋಮದ್ರವ್ಯ, ಧಾನ್ಯನೈವೇದ್ಯ ಇವುಗಳನ್ನೂ, ಜನರು ತರುವ ಸರ್ವಾಂಗಹೋಮದ್ರವ್ಯ, ಧಾನ್ಯನೈವೇದ್ಯ, ಪಾನದ್ರವ್ಯ ಇವುಗಳನ್ನೂ ಈ ಮಹಾವೇದಿಯ ಮೇಲೆ ಸಮರ್ಪಿಸಬೇಕು ಮತ್ತು ಸರ್ವಾಂಗಹೋಮಯಜ್ಞಗಳಿಗಾಗಿ ವಧಿಸುವ ಪಶುಗಳ ರಕ್ತವನ್ನು ಇದರ ಮೇಲೆಯೇ ಚಿಮುಕಿಸಬೇಕು. ತಾಮ್ರ ಯಜ್ಞವೇದಿಯನ್ನು ಕುರಿತಾಗಿ ನಾನೇ ಆಲೋಚಿಸಿ ನೋಡಿಕೊಳ್ಳುವೆನು” ಎಂದು ಹೇಳಿದನು.