ವಿಮೋಚನಕಾಂಡ 29:41 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201941 ಸಾಯಂಕಾಲದಲ್ಲಿ ಎರಡನೆಯ ಕುರಿಯನ್ನು ಹೋಮಮಾಡುವಾಗ ಹೊತ್ತಾರೆಯಲ್ಲಿ ಮಾಡಿದ ಪ್ರಕಾರವೇ ಅದರೊಂದಿಗೆ ಭೋಜನ ನೈವೇದ್ಯವನ್ನೂ, ಪಾನದ್ರವ್ಯವನ್ನೂ ಸರ್ವಾಂಗಹೋಮವಾಗಿ ಸಮರ್ಪಿಸಬೇಕು. ಅದು ಯೆಹೋವನಿಗೆ ಸುವಾಸನೆಯ ಹೋಮವಾಗಿರುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)41 ಸಂಜೆ ಎರಡನೆಯ ಕುರಿಯನ್ನು ಬಲಿದಾನ ಮಾಡುವಾಗ ಬೆಳಿಗ್ಗೆ ಮಾಡಿದಂತೆಯೇ ಅದರೊಂದಿಗೆ ಧಾನ್ಯವನ್ನೂ ಪಾನವನ್ನೂ ಸಮರ್ಪಿಸಬೇಕು. ಅದು ಸರ್ವೇಶ್ವರನಾದ ನನಗೆ ಪ್ರಿಯವಾದ ಸುಗಂಧ ದಹನಬಲಿಯಾಗಿರುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)41 ಸಾಯಂಕಾಲದಲ್ಲಿ ಎರಡನೆಯ ಕುರಿಯನ್ನು ಹೋಮಮಾಡುವಾಗ ಹೊತ್ತಾರೆಯಲ್ಲಿ ಮಾಡಿದ ಪ್ರಕಾರವೇ ಅದರೊಂದಿಗೆ ಧಾನ್ಯವನ್ನೂ ಪಾನದ್ರವ್ಯವನ್ನೂ ಸಮರ್ಪಿಸಬೇಕು. ಅದು ಯೆಹೋವನಿಗೆ ಸುಗಂಧ ಹೋಮವಾಗಿರುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್41 ನೀನು ಸಾಯಂಕಾಲದಲ್ಲಿ ಮತ್ತೊಂದು ಕುರಿಮರಿಯನ್ನು ವಧಿಸುವಾಗಲೂ ಮೂರು ಸೇರು ಶ್ರೇಷ್ಠ ಗೋಧಿಯನ್ನೂ ಅರ್ಧ ಸೇರು ದ್ರಾಕ್ಷಾರಸವನ್ನೂ ಸಮರ್ಪಿಸು. ಇದು ಯೆಹೋವನಿಗೆ ಸುಗಂಧಹೋಮವಾಗಿರುವುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ41 ಇನ್ನೊಂದು ಕುರಿಮರಿಯನ್ನು ಸಂಜೆಯಲ್ಲಿ ಅರ್ಪಿಸಬೇಕು. ಬೆಳಿಗ್ಗೆ ಮಾಡಿದಂತೆಯೇ ಅದರ ಧಾನ್ಯ ಸಮರ್ಪಣೆಯನ್ನೂ ಪಾನದ ಅರ್ಪಣೆಯನ್ನೂ ಯೆಹೋವ ದೇವರಿಗೆ ಸುವಾಸನೆಯಾಗಿರುವಂತೆ ಬೆಂಕಿಯಿಂದ ಅರ್ಪಿಸಬೇಕು. ಅಧ್ಯಾಯವನ್ನು ನೋಡಿ |
ಅರಸನಾದ ಆಹಾಜನು ಯಾಜಕನಾದ ಊರೀಯನಿಗೆ, “ಉದಯಕಾಲದಲ್ಲಿ ಸರ್ವಾಂಗಹೋಮವನ್ನೂ, ಸಾಯಂಕಾಲದಲ್ಲಿ ಧಾನ್ಯನೈವೇದ್ಯವನ್ನೂ, ಅರಸನು ತರುವ ಸರ್ವಾಂಗಹೋಮದ್ರವ್ಯ, ಧಾನ್ಯನೈವೇದ್ಯ ಇವುಗಳನ್ನೂ, ಜನರು ತರುವ ಸರ್ವಾಂಗಹೋಮದ್ರವ್ಯ, ಧಾನ್ಯನೈವೇದ್ಯ, ಪಾನದ್ರವ್ಯ ಇವುಗಳನ್ನೂ ಈ ಮಹಾವೇದಿಯ ಮೇಲೆ ಸಮರ್ಪಿಸಬೇಕು ಮತ್ತು ಸರ್ವಾಂಗಹೋಮಯಜ್ಞಗಳಿಗಾಗಿ ವಧಿಸುವ ಪಶುಗಳ ರಕ್ತವನ್ನು ಇದರ ಮೇಲೆಯೇ ಚಿಮುಕಿಸಬೇಕು. ತಾಮ್ರ ಯಜ್ಞವೇದಿಯನ್ನು ಕುರಿತಾಗಿ ನಾನೇ ಆಲೋಚಿಸಿ ನೋಡಿಕೊಳ್ಳುವೆನು” ಎಂದು ಹೇಳಿದನು.