Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 3:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಆಗ ಮೋಶೆಯು ದೇವರಿಗೆ, “ಫರೋಹನ ಬಳಿಗೆ ಹೋಗುವುದಕ್ಕೂ ಮತ್ತು ಇಸ್ರಾಯೇಲರನ್ನು ಐಗುಪ್ತದೇಶದಿಂದ ಕರೆದುಕೊಂಡು ಬರುವುದಕ್ಕೂ ನಾನು ಎಷ್ಟರವನು?” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಮೋಶೆ ದೇವರಿಗೆ, “ಫರೋಹನ ಸನ್ನಿಧಾನಕ್ಕೆ ಹೋಗುವುದಕ್ಕಾಗಲಿ ಇಸ್ರಯೇಲರನ್ನು ಈಜಿಪ್ಟಿನಿಂದ, ಕರೆದುಕೊಂಡು ಬರುವುದಕ್ಕಾಗಲಿ ನಾನು ಎಷ್ಟರವನು?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಮೋಶೆ ದೇವರಿಗೆ - ಫರೋಹನ ಸನ್ನಿಧಾನಕ್ಕೆ ಹೋಗುವದಕ್ಕೂ ಇಸ್ರಾಯೇಲ್ಯರನ್ನು ಐಗುಪ್ತದೇಶದಿಂದ ಕರೆದುಕೊಂಡುಬರುವದಕ್ಕೂ ನಾನು ಎಷ್ಟರವನು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಅದಕ್ಕೆ ಮೋಶೆಯು ಯೆಹೋವನಿಗೆ, “ನಾನು ಮಹಾ ವ್ಯಕ್ತಿಯೇನಲ್ಲ! ಫರೋಹನ ಸನ್ನಿಧಾನಕ್ಕೆ ಹೋಗುವುದಕ್ಕೂ ಇಸ್ರೇಲರನ್ನು ಈಜಿಪ್ಟಿನಿಂದ ಬಿಡಿಸಿಕೊಂಡು ಬರುವುದಕ್ಕೂ ನಾನೆಷ್ಟರವನು?” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಆಗ ಮೋಶೆಯು ದೇವರಿಗೆ, “ಫರೋಹನ ಬಳಿಗೆ ಹೋಗಿ, ಇಸ್ರಾಯೇಲರನ್ನು ಈಜಿಪ್ಟಿನೊಳಗಿಂದ ಹೊರಗೆ ತರುವುದಕ್ಕೆ ನಾನು ಎಷ್ಟರವನು?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 3:11
13 ತಿಳಿವುಗಳ ಹೋಲಿಕೆ  

ಅದಕ್ಕೆ ದಾವೀದನು “ಅರಸನ ಅಳಿಯನಾಗುವುದಕ್ಕೆ ನಾನು ಎಷ್ಟರವನು? ಇಸ್ರಾಯೇಲರಲ್ಲಿ ನನ್ನ ತಂದೆಯ ಕುಟುಂಬವೂ ಸಮಾನವೇ?” ಎಂದನು.


ನಮ್ಮಿಂದಲೇ ಏನಾದರೂ ಉಂಟಾಯಿತೆಂದು ತೀರ್ಮಾನಿಸಿಕೊಳ್ಳುವುದಕ್ಕೆ ನಮಗೆ ನಾವೇ ಯೋಗ್ಯರಲ್ಲ ನಮಗಿರುವ ಯೋಗ್ಯತೆಯೂ ದೇವರಿಂದಲೇ ಬಂದದ್ದು.


ಅದಕ್ಕೆ ಮೋಶೆ ಯೆಹೋವನ ಸನ್ನಿಧಿಯಲ್ಲಿ, “ಇಗೋ, ಇಸ್ರಾಯೇಲರೇ ನನ್ನ ಮಾತುಗಳನ್ನು ಕೇಳುತ್ತಿಲ್ಲ; ಹೀಗಿರುವಾಗ ತೊದಲು ಮಾತನಾಡುವ ನನ್ನ ಮಾತುಗಳಿಗೆ ಫರೋಹನು ಕಿವಿಗೊಟ್ಟಾನೇ?” ಅಂದನು.


ಅದಕ್ಕೆ ನಾನು, “ಅಯ್ಯೋ, ಕರ್ತನಾದ ಯೆಹೋವನೇ, ನಾನು ಮಾತು ಬಲ್ಲವನಲ್ಲ, ಬಾಲಕನು” ಎಂದು ಅರಿಕೆ ಮಾಡಿದೆನು.


ನಾವು ವಿನಾಶಮಾರ್ಗದಲ್ಲಿರುವವರಿಗೆ ಮೃತ್ಯುಕಾರಕ ಗಂಧ; ರಕ್ಷಣಾಮಾರ್ಗದಲ್ಲಿರುವವರಿಗೆ ಸಜೀವದಾಯಕ ಸುಗಂಧ. ಇಂಥ ಕಾರ್ಯಗಳಿಗೆ ಯಾರು ಯೋಗ್ಯರು?


ಆದುದರಿಂದ ಅವರನ್ನು ಆಳುವುದಕ್ಕೂ, ನ್ಯಾಯ ಅನ್ಯಾಯಗಳನ್ನು ಕಂಡುಹಿಡಿಯುವುದಕ್ಕೂ ನನಗೆ ವಿವೇಕವನ್ನು ದಯಪಾಲಿಸು. ಈ ಮಹಾ ಜನಾಂಗವನ್ನು ಆಳಬಲ್ಲ ಸಮರ್ಥರು ಯಾರಿದ್ದಾರೆ?” ಎಂದು ಬೇಡಿಕೊಂಡನು.


ನನ್ನ ದೇವರಾದ ಯೆಹೋವನೇ, ನನ್ನ ತಂದೆಗೆ ಬದಲಾಗಿ ನಿನ್ನಿಂದ ಅರಸನಾಗಿ ನೇಮಿಸಲ್ಪಟ್ಟ ನಿನ್ನ ಸೇವಕನಾದ ನಾನು ಇನ್ನೂ ಚಿಕ್ಕವನು. ವ್ಯವಹಾರ ಜ್ಞಾನವಿಲ್ಲದವನು.


ಅನಂತರ ದಾವೀದನು ಹೋಗಿ ಯೆಹೋವನ ಸನ್ನಿಧಿಯಲ್ಲಿ ಕುಳಿತುಕೊಂಡು, “ಕರ್ತನಾದ, ಯೆಹೋವನೇ, ನಾನೆಷ್ಟರವನು? ನನ್ನ ಮನೆ ಎಷ್ಟರದು? ನೀನು ನನ್ನನ್ನು ಇಲ್ಲಿಯವರೆಗೂ ತಂದಿದ್ದಿಯಲ್ಲಾ.


ಆಗ ಗಿದ್ಯೋನನು ಆತನಿಗೆ, “ಕರ್ತನೇ, ನಾನು ಇಸ್ರಾಯೇಲ್ಯರನ್ನು ರಕ್ಷಿಸುವುದು ಹೇಗೆ? ಮನಸ್ಸೆ ಕುಲದಲ್ಲಿ ನನ್ನ ಮನೆಯು ಕನಿಷ್ಠವಾದದ್ದು; ಮತ್ತು ನಾನು ನಮ್ಮ ಕುಟುಂಬದಲ್ಲಿ ಅಲ್ಪನು” ಅಂದನು.


ನಾವು ಸ್ವ ಇಚ್ಛೆಯಿಂದ ನಿನಗೆ ಕಾಣಿಕೆಗಳನ್ನು ಸಮರ್ಪಿಸಲು ನಾನಾಗಲಿ, ನನ್ನ ಪ್ರಜೆಗಳಾಗಲಿ ಸಮರ್ಥರಲ್ಲ. ಸಮಸ್ತವೂ ನಿನ್ನಿಂದಲೇ ಸಾಧ್ಯವಾಯಿತು, ನೀನು ಕೊಟ್ಟದ್ದನ್ನೇ ನಿನಗೆ ಕೊಟ್ಟೆವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು