Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 3:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಅದಕ್ಕೆ ದೇವರು, “ನಿಶ್ಚಯವಾಗಿ ನಾನು ನಿನ್ನ ಸಂಗಡ ಇರುವೆನು. ನೀನು ನನ್ನ ಜನರನ್ನು ಐಗುಪ್ತದೇಶದಿಂದ ಹೊರಗೆ ತಂದಾಗ ನೀವು ಈ ಬೆಟ್ಟದಲ್ಲೇ ನನ್ನನ್ನು ಆರಾಧಿಸುವಿರಿ. ನಿನ್ನನ್ನು ಕಳುಹಿಸಿದವನು ನಾನೇ ಎಂಬುವುದಕ್ಕೆ ಇದು ನಿನಗೆ ಗುರುತಾಗಿರುವುದು” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಅದಕ್ಕೆ ದೇವರು, “ನಾನೇ ನಿನ್ನ ಸಂಗಡ ಇರುವೆನು; ನೀನು ನನ್ನ ಜನರನ್ನು ಈಜಿಪ್ಟಿನಿಂದ ಹೊರಗೆ ತಂದಾಗ ನೀವು ಈ ಬೆಟ್ಟದಲ್ಲೇ ದೇವರನ್ನು ಆರಾಧಿಸುವಿರಿ. ನಿನ್ನನ್ನು ಕಳಿಸಿದವನು ನಾನೇ ಎಂಬುದಕ್ಕೆ ಇದೇ ನಿನಗೆ ಗುರುತಾಗಿ ಇರುವುದು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಅದಕ್ಕೆ ದೇವರು - ನಾನೇ ನಿನ್ನ ಸಂಗಡ ಇರುವೆನು; ಮತ್ತು ನೀನು ನನ್ನ ಜನರನ್ನು ಐಗುಪ್ತದೇಶದಿಂದ ಹೊರಗೆ ತಂದಾಗ ನೀವು ಈ ಬೆಟ್ಟದಲ್ಲೇ ದೇವರನ್ನು ಆರಾಧಿಸುವಿರಿ; ನಿನ್ನನ್ನು ಕಳುಹಿಸಿದವನು ನಾನೇ ಎಂಬದಕ್ಕೆ ಇದೇ ನಿನಗೆ ಗುರುತಾಗಿರುವದು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಅದಕ್ಕೆ ದೇವರು “ನೀನು ಇದನ್ನು ಮಾಡಬಹುದು; ಯಾಕೆಂದರೆ ನಾನೇ ನಿನ್ನೊಂದಿಗೆ ಇರುವೆನು. ನಿನ್ನನ್ನು ಕಳುಹಿಸಿದವನು ನಾನೇ ಎಂಬುದಕ್ಕೆ ಇದೇ ಸಾಕ್ಷಿಯಾಗಿರುವುದು. ನೀನು ಇಸ್ರೇಲರನ್ನು ಈಜಿಪ್ಟಿನಿಂದ ಬಿಡಿಸಿಕೊಂಡು ಬಂದಮೇಲೆ, ನೀವು ಈ ಬೆಟ್ಟದ ಬಳಿ ನನ್ನನ್ನು ಆರಾಧಿಸುವಿರಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಆಗ ದೇವರು, “ನಿಶ್ಚಯವಾಗಿ ನಾನು ನಿನ್ನ ಸಂಗಡ ಇರುವೆನು. ನೀನು ಜನರನ್ನು ಈಜಿಪ್ಟಿನೊಳಗಿಂದ ಹೊರಗೆ ತಂದ ತರುವಾಯ ನೀವು ಈ ಬೆಟ್ಟದ ಮೇಲೆ ದೇವರಾದ ನನ್ನನ್ನು ಆರಾಧಿಸುವಿರಿ. ನಾನು ನಿನ್ನನ್ನು ಕಳುಹಿಸಿದವನು ಎಂಬುದಕ್ಕೆ ಇದೇ ನಿನಗೆ ಗುರುತಾಗಿ ಇರುವುದು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 3:12
43 ತಿಳಿವುಗಳ ಹೋಲಿಕೆ  

ನಿನ್ನ ಜೀವಮಾನದಲ್ಲೆಲ್ಲಾ ಒಬ್ಬನೂ ನಿನ್ನ ಮುಂದೆ ನಿಲ್ಲನು; ನಾನು ಮೋಶೆಯ ಸಂಗಡ ಇದ್ದ ಹಾಗೆ ನಿನ್ನ ಸಂಗಡವೂ ಇರುವೆನು.


ಹಾಗಾದರೆ ಈ ವಿಷಯಗಳಲ್ಲಿ ನಾವು ಏನು ಹೇಳೋಣ? ದೇವರು ನಮ್ಮ ಜೊತೆಯಲ್ಲಿ ಇದ್ದರೆ ನಮ್ಮನ್ನು ಎದುರಿಸುವವರು ಯಾರು?


ನೀನಂತು ಹೆದರಬೇಡ, ನಾನೇ ನಿನ್ನೊಂದಿಗಿದ್ದೇನೆ, ದಿಗ್ಭ್ರಮೆಗೊಳ್ಳದಿರು, ನಾನೇ ನಿನ್ನ ದೇವರು. ನಾನು ನಿನ್ನನ್ನು ಬಲಪಡಿಸುತ್ತೇನೆ. ಹೌದು, ನಿನಗೆ ಸಹಾಯಮಾಡುತ್ತೇನೆ. ನನ್ನ ಧರ್ಮದ ಬಲಗೈಯನ್ನು ನಿನಗೆ ಆಧಾರಮಾಡುತ್ತೇನೆ.


ಆಗ ಯೆಹೋವನು ನೂನನ ಮಗನಾದ ಯೆಹೋಶುವನಿಗೆ, “ನಾನು ಇಸ್ರಾಯೇಲರಿಗೆ ಪ್ರಮಾಣಮಾಡಿಕೊಟ್ಟ ದೇಶದಲ್ಲಿ ನೀನೇ ಅವರನ್ನು ಸೇರಿಸಬೇಕು; ಆದುದರಿಂದ ಶೂರನಾಗಿ ಧೈರ್ಯದಿಂದಿರು; ನಾನೇ ನಿನ್ನ ಸಂಗಡ ಇರುವೆನು” ಎಂದು ಆಜ್ಞಾಪಿಸಿದನು.


ಮತ್ತು ಯೆಹೋವನು ಯಾಕೋಬನಿಗೆ, “ನೀನು ನಿನ್ನ ತಂದೆಯ ದೇಶಕ್ಕೂ ನಿನ್ನ ಬಂಧುಗಳ ಬಳಿಗೂ ಹಿಂತಿರುಗಿ ಹೋಗು, ನಾನು ನಿನ್ನೊಂದಿಗೆ ಇರುವೆನು” ಎಂದು ಹೇಳಿದನು.


ನೀನು ಅವನ ಸಂಗಡ ಮಾತನಾಡಿ ಹೇಳಬೇಕಾದ ಮಾತುಗಳನ್ನು ಅವನಿಗೆ ತಿಳಿಸಿಕೊಡು. ನಿನ್ನ ಬಾಯಿಗೂ ಅವನ ಬಾಯಿಗೂ ಸಹಾಯವಾಗಿದ್ದು ನೀವು ಮಾಡಬೇಕಾದದ್ದನ್ನು ಬೋಧಿಸುವೆನು.


ಹಾಗಾದರೆ ಈಗಲೇ ನೀನು ಹೊರಡು, ನಾನು ನಿನ್ನಗೆ ಮಾತನಾಡಲು ಬೇಕಾದ ಸಾಮರ್ಥ್ಯವನ್ನು ಕೊಡುತ್ತಾ, ನೀನು ಮಾತನಾಡಬೇಕಾದದ್ದನ್ನು ನಿನಗೆ ಬೋಧಿಸುವೆನು” ಎಂದು ಹೇಳಿದನು.


ನಾನು ನಿಮಗೆ ಆಜ್ಞಾಪಿಸಿದ ಎಲ್ಲವನ್ನು ಅನುಸರಿಸುವುದಕ್ಕೆ ಅವರಿಗೆ ಉಪದೇಶ ಮಾಡಿರಿ. ಹಾಗು ಇಗೋ, ನಾನು ಯುಗದ ಸಮಾಪ್ತಿಯವರೆಗೂ ಎಲ್ಲಾ ದಿನವೂ ನಿಮ್ಮ ಸಂಗಡ ಇರುತ್ತೇನೆ” ಎಂದು ಹೇಳಿದನು.


ನೀನು ಜಲರಾಶಿಯನ್ನು ಹಾದು ಹೋಗುವಾಗ ನಾನು ನಿನ್ನ ಸಂಗಡ ಇರುವೆನು, ನದಿಗಳನ್ನು ದಾಟುವಾಗ ಅವು ನಿನ್ನನ್ನು ಮುಳುಗಿಸುವುದಿಲ್ಲ, ಬೆಂಕಿಯಲ್ಲಿ ನಡೆಯುವಾಗ ನೀನು ಸುಟ್ಟುಹೋಗುವುದಿಲ್ಲ, ಜ್ವಾಲೆಯು ನಿನ್ನನ್ನು ದಹಿಸದು.


ಕರ್ತನ ಹಸ್ತವು ಅವರೊಂದಿಗಿದ್ದ ಕಾರಣ ಬಹು ಜನರು ನಂಬಿ ಕರ್ತನ ಕಡೆಗೆ ತಿರುಗಿಕೊಂಡರು.


ಅನಂತರ ಅವರು ಹೊರಟುಹೋಗಿ ಎಲ್ಲಾ ಕಡೆಗಳಲ್ಲಿಯೂ ಸುವಾರ್ತೆಯನ್ನು ಸಾರಿದರು; ಮತ್ತು ಕರ್ತನು ಅವರ ಸಂಗಡ ಕೆಲಸ ಮಾಡುತ್ತಾ ಸೂಚಕಕಾರ್ಯಗಳಿಂದ ಸುವಾರ್ತೆಯ ವಾಕ್ಯವನ್ನು ದೃಢಪಡಿಸುತ್ತಾ ಇದ್ದನು.


ಹಣದಾಸೆಯಿಂದ ದೂರವಿರಿ. ನಿಮಗಿರುವವುಗಳಲ್ಲಿ ತೃಪ್ತರಾಗಿರಿ. “ನಾನು ನಿಮ್ಮನ್ನು ಎಂದಿಗೂ ಕೈಬಿಡುವುದಿಲ್ಲ, ಎಂದಿಗೂ ತೊರೆಯುವುದಿಲ್ಲ” ಎಂದು ದೇವರು ತಾನೇ ಹೇಳಿದ್ದಾನೆ.


ಆದಕಾರಣ ಕರ್ತನು ತಾನೇ ನಿಮಗೆ ಒಂದು ಗುರುತನ್ನು ಕೊಡುವನು. ಇಗೋ ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಒಬ್ಬ ಮಗನನ್ನು ಹಡೆದು ಅವನಿಗೆ ಇಮ್ಮಾನುವೇಲ್ ಎಂದು ಹೆಸರಿಡುವರು.


ನನಗಾಗಿ ಒಂದು ಶುಭಸೂಚನೆಯನ್ನು ತೋರಿಸು; ನನ್ನ ಶತ್ರುಗಳು ನೋಡಿ, “ಯೆಹೋವನು ಸಹಾಯಕನಾಗಿ ಇವನನ್ನು ಸಂತೈಸಿದ್ದಾನೆ” ಎಂದು ನಾಚಿಕೆಪಡಲಿ.


ಈ ಮಾತುಗಳು ನೆರವೇರುವುದು ಎಂಬುದಕ್ಕೆ, ನೀವು ಈ ವರ್ಷದಲ್ಲಿ ಕೂಳೆಬೆಳೆಯನ್ನೂ, ಮುಂದಿನ ವರ್ಷದಲ್ಲಿ ತನ್ನಷ್ಟಕ್ಕೆ ತಾನೇ ಬೆಳೆದದ್ದನ್ನೂ, ಮೂರನೆಯ ವರ್ಷ ಹೊಲಗಳಲ್ಲಿ ಬಿತ್ತಿ ಕೊಯ್ದದ್ದನ್ನೂ, ದ್ರಾಕ್ಷಿತೋಟಗಳಲ್ಲಿ ವ್ಯವಸಾಯಮಾಡಿ ಕೂಡಿಸಿದ್ದನ್ನೂ ಅನುಭವಿಸುವುದೇ ಗುರುತಾಗಿರುವುದು.


ಆಗ ಅವರ ಮೇಲೆ ಬೀಳುವುದಕ್ಕೆ ನಿನಗೆ ಧೈರ್ಯಬರುವುದು” ಅಂದನು. ಗಿದ್ಯೋನನು ಅದರಂತೆಯೇ ತನ್ನ ಸೇವಕನಾದ ಪುರನ ಸಂಗಡ ಶತ್ರುಸೈನಿಕರ ಪಾಳೆಯದ ಕಡೇ ಭಾಗಕ್ಕೆ ಹೋದನು.


ಅನಂತರ ಯೆಹೋವನ ದೂತನು ತನ್ನ ಕೈಕೋಲನ್ನು ಚಾಚಿ ಅದರ ತುದಿಯನ್ನು ಆ ರೊಟ್ಟಿಗಳಿಗೂ, ಮಾಂಸಕ್ಕೂ ಮುಟ್ಟಿಸಲು ಬಂಡೆಯಿಂದ ಬೆಂಕಿಯೆದ್ದು ಅವೆರಡನ್ನೂ ದಹಿಸಿಬಿಟ್ಟಿತು; ಯೆಹೋವನ ದೂತನು ಅದೃಶ್ಯನಾದನು.


ಅವನು ಆತನಿಗೆ, “ಕರ್ತನೇ, ದಯವಿರಲಿ; ನನ್ನೊಂದಿಗೆ ಮಾತನಾಡುತ್ತಿರುವವರು ತಾವೇ ಆಗಿದ್ದೀರೆಂಬುದಕ್ಕೆ ನನಗೊಂದು ಗುರುತನ್ನು ಅನುಗ್ರಹಿಸಬೇಕು.


ಈ ಸಂಗತಿಗಳು ನಡೆದ ಮೇಲೆ ಅಬ್ರಾಮನಿಗೆ ದರ್ಶನದಲ್ಲಿ ಯೆಹೋವನ ವಾಕ್ಯವುಂಟಾಗಿ ಹೇಳಿದೇನೆಂದರೆ, “ಅಬ್ರಾಮನೇ, ಭಯಪಡಬೇಡ, ನಾನು ನಿನಗೆ ಗುರಾಣಿಯಾಗಿದ್ದೇನೆ ಮತ್ತು ನಿನಗೆ ಅತ್ಯಧಿಕ ಬಹುಮಾನವು ದೊರೆಯುವುದು.”


“ಕರ್ತನಾದ ಯೆಹೋವನೇ, ನಾನು ಇದನ್ನು ಬಾಧ್ಯವಾಗಿ ಹೊಂದುವೆನೆಂದು ತಿಳಿದುಕೊಳ್ಳುವುದು ಹೇಗೆ?” ಎಂದು ಕೇಳಿದನು.


ಮತ್ತು ‘ನಿನ್ನ ಸಂತಾನದವರು ದಾಸರಾಗಿ ಸೇವೆಸಲ್ಲಿಸುವ ಅನ್ಯಜನರಿಗೆ ನಾನೇ ನ್ಯಾಯತೀರಿಸುವೆನು. ಆ ಮೇಲೆ ಅವರು ಹೊರಟುಬಂದು ಈ ಸ್ಥಳದಲ್ಲಿ ನನ್ನನ್ನು ಆರಾಧಿಸುವರು’ ಎಂಬುದೇ.


ಮೋಶೆಯು ತನ್ನ ಮಾವನಾದ, ಮಿದ್ಯಾನ್ಯರ ಯಾಜಕನಾದ ಇತ್ರೋನನ ಮಂದೆಯನ್ನು ಮೇಯಿಸುತ್ತಿರಲಾಗಿ ಆ ಮಂದೆಯನ್ನು ಅಡವಿಯ ಮತ್ತೊಂದುಭಾಗಕ್ಕೆ ನಡಿಸಿಕೊಂಡು ಹೋಗುತ್ತಾ, “ಹೋರೇಬ್” ಎಂಬ ದೇವರ ಬೆಟ್ಟಕ್ಕೆ ಬಂದನು.


ಅದಕ್ಕೆ ಮೋಶೆಯು ದೇವರಿಗೆ, “ನಾನು ಇಸ್ರಾಯೇಲರ ಬಳಿಗೆ ಹೋಗಿ, ‘ನಿಮ್ಮ ಪೂರ್ವಿಕರ ದೇವರು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾನೆ’ ಎಂದು ಹೇಳಿದಾಗ, ನನಗೆ ಒಂದು ವೇಳೆ ಅವರು, ಆತನ ಹೆಸರು ಏನು? ಎಂದು ಕೇಳಿದರೆ ನಾನೇನು ಉತ್ತರಕೊಡಬೇಕು” ಎಂದನು.


ಮೋಶೆಯ ಮಾವನಾದ ಇತ್ರೋವನು ಮೋಶೆಯ ಮಕ್ಕಳನ್ನು, ಹೆಂಡತಿಯನ್ನು ಕರೆದುಕೊಂಡು ಮರುಭೂಮಿಯಲ್ಲಿ ದೇವರ ಬೆಟ್ಟದ ಹತ್ತಿರ ಇಳಿದುಕೊಂಡಿದ್ದ ಮೋಶೆಯ ಬಳಿಗೆ ಬಂದನು.


ಅದಕ್ಕೆ ಯೆಹೋವನು, “ನನ್ನ ಪ್ರಸನ್ನತೆಯು ನಿನ್ನ ಜೊತೆಯಲ್ಲಿ ಬರುವುದು, ನಾನು ನಿಮಗೆ ವಿಶ್ರಾಂತಿಯನ್ನು ನೀಡುವೆನು” ಅಂದನು.


ಆಗ ಮೋಶೆ ಜನರಿಗೆ, “ಈ ಕಾರ್ಯಗಳೆಲ್ಲಾ ನನ್ನ ಆಲೋಚನೆಯಿಂದ ಆಗಲಿಲ್ಲವೆಂದೂ ಮತ್ತು ಯೆಹೋವನೇ ಇವುಗಳನ್ನು ನಡಿಸುವುದಕ್ಕೆ ನನ್ನನ್ನು ಕಳುಹಿಸಿದನೆಂದೂ ನೀವೇ ತಿಳಿದುಕೊಳ್ಳುವಿರಿ.


ಈ ಯಾಕೋಬನಲ್ಲಿ ಯಾವ ಆಪತ್ತಿನ ಸೂಚನೆಯೂ ಕಾಣುವುದಿಲ್ಲ ಅಥವಾ ಇಸ್ರಾಯೇಲರಿಗೆ ಯಾವ ವಿಪತ್ತಿನ ಸೂಚನೆಯೂ ತೋರುವುದಿಲ್ಲ. ಅವರಿಗೆ ದೇವರಾಗಿರುವ ಯೆಹೋವನು ಅವರ ಸಂಗಡ ಇದ್ದಾನೆ, ಅವರು ತಮ್ಮ ಅರಸನಿಗಾಗಿ ಮಾಡುವ ಜಯ ಘೋಷವು ಕೇಳಿಸುತ್ತ ಇದೆ.


ಯೆಹೋವನು ಅವನಿಗೆ, “ನಾನು ನಿನ್ನ ಸಂಗಡ ಇರುವುದರಿಂದ ನೀನು ಮಿದ್ಯಾನ್ಯರನ್ನೂ ಒಬ್ಬ ಮನುಷ್ಯನನ್ನೋ ಎಂಬಂತೆ ಸಂಹರಿಸಿಬಿಡುವಿ” ಅಂದನು.


ಈ ಮಾತುಗಳು ನೆರವೇರುವವು ಎಂಬುದಕ್ಕೆ ನೀವು ಈ ವರ್ಷದಲ್ಲಿ ತನ್ನಷ್ಟಕ್ಕೆ ತಾನೇ ಬೆಳೆದದ್ದನ್ನೂ ಮುಂದಿನ ವರ್ಷದಲ್ಲಿ ಮಿಕ್ಕಿರುವ ಬೆಳೆಯನ್ನೂ, ಮೂರನೆಯ ವರ್ಷ ನೀವು ಹೊಲಗಳಲ್ಲಿ ಬಿತ್ತಿ ಬೆಳೆದದ್ದನ್ನು, ದ್ರಾಕ್ಷಿತೋಟಗಳಲ್ಲಿ ವ್ಯವಸಾಯ ಮಾಡಿ ಕೂಡಿಸಿದ್ದನ್ನೂ ಅನುಭವಿಸುವುದೇ ಗುರುತಾಗಿರುವುದು.


ಅವರಿಗೆ ಅಂಜಬೇಡ; ನಿನ್ನನ್ನು ಉದ್ಧರಿಸಲು ನಾನೇ ನಿನ್ನೊಂದಿಗಿರುವೆನು, ಇದು ಯೆಹೋವನಾದ ನನ್ನ ಮಾತು” ಎಂದು ಹೇಳಿದನು.


ನೀನು ಈ ದೇಶದಲ್ಲಿ ಪ್ರವಾಸಿಯಾಗಿರು; ನಾನು ನಿನ್ನ ಬಳಿಯಲ್ಲಿದ್ದು ನಿನ್ನನ್ನು ಅಭಿವೃದ್ಧಿಪಡಿಸಿ ನಿನಗೂ, ನಿನ್ನ ಸಂತತಿಯವರಿಗೂ ಈ ಪ್ರದೇಶಗಳನ್ನೆಲ್ಲಾ ಕೊಡುವೆನು. ಹೀಗೆ ನಿನ್ನ ತಂದೆಯಾದ ಅಬ್ರಹಾಮನಿಗೆ ಮಾಡಿದ ವಾಗ್ದಾನವನ್ನು ನೆರವೇರಿಸುವೆನು,


ನಾವು ಅರಣ್ಯದಲ್ಲಿ ಮೂರು ದಿನಗಳ ಪ್ರಯಾಣ ಮಾಡಿ ನಮ್ಮ ದೇವರಾದ ಯೆಹೋವನು ಆಜ್ಞಾಪಿಸುವ ಪ್ರಕಾರ ಯಜ್ಞಮಾಡಬೇಕು” ಎಂದನು.


ಯೆಹೋವನ ದೂತನು ಗಿದ್ಯೋನನಿಗೆ ಪ್ರತ್ಯಕ್ಷನಾಗಿ ಅವನಿಗೆ, “ಪರಾಕ್ರಮಶಾಲಿಯೇ, ಯೆಹೋವನು ನಿನ್ನ ಸಂಗಡ ಇದ್ದಾನೆ” ಅಂದನು.


ಆದರೆ ಅವರು, ‘ಮೇಲೆ ಹತ್ತಿ ನಮ್ಮ ಬಳಿಗೆ ಬನ್ನಿರಿ’ ಎಂದು ನಮ್ಮನ್ನು ಕರೆದರೆ ಯೆಹೋವನು ಅವರನ್ನು ನಮ್ಮ ಕೈಗೆ ಒಪ್ಪಿಸಿದ್ದಾನೆ ಎಂಬುದಕ್ಕೆ ಇದೇ ಗುರುತು ಎಂದು ತಿಳಿದು ಮೇಲೆ ಹೋಗೋಣ” ಎಂದನು.


ಆಗ ಎಲ್ಲಾಜಾರನ ಮಗನಾದ ಫೀನೆಹಾಸನು ಅವರ ನಾಯಕನಾಗಿದ್ದನು. ಯೆಹೋವನು ಇವನ ಸಂಗಡ ಇದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು