Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 3:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ದೇವರು ಪುನಃ ಮೋಶೆಗೆ ಹೇಳಿದ್ದೇನೆಂದರೆ, “ನೀನು ಇಸ್ರಾಯೇಲರಿಗೆ, ನಿಮ್ಮ ಪೂರ್ವಿಕರಾದ ಅಬ್ರಹಾಮ್, ಇಸಾಕ್, ಯಾಕೋಬರ ದೇವರಾಗಿರುವ ಯೆಹೋವನು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾನೆ” ಎಂದು ಹೇಳಬೇಕು. ಇದು ಸದಾಕಾಲಕ್ಕೂ ಇರುವ ನನ್ನ ಹೆಸರು. ಇದು ತಲಾಂತರಕ್ಕೂ ನನ್ನನ್ನು ಸ್ಮರಿಸಬೇಕಾದ ನಾಮ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ದೇವರು ಮೋಶೆಗೆ ಮತ್ತೆ ಇಂತೆಂದರು: “ನೀನು ಇಸ್ರಯೇಲರಿಗೆ, ‘ನಿಮ್ಮ ಪೂರ್ವಜರಾದ ಅಬ್ರಹಾಮ, ಇಸಾಕ ಹಾಗು ಯಕೋಬರ ದೇವರಾಗಿರುವ ಸರ್ವೇಶ್ವರ ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾರೆ’ ಎಂದು ಹೇಳು. ಇದು ಸದಾಕಾಲಕ್ಕೂ ನನ್ನ ಹೆಸರು. ಈ ಹೆಸರಿನಿಂದಲೆ ತಲತಲಾಂತರಕ್ಕೂ ನನ್ನನ್ನು ಸ್ಮರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ದೇವರು ಮೋಶೆಗೆ ಮತ್ತೂ ಹೇಳಿದ್ದೇನಂದರೆ - ನೀನು ಇಸ್ರಾಯೇಲ್ಯರಿಗೆ ನಿಮ್ಮ ಪಿತೃಗಳಾದ ಅಬ್ರಹಾಮ ಇಸಾಕ ಯಾಕೋಬರ ದೇವರಾಗಿರುವ ಯೆಹೋವನು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾನೆ ಎಂದು ಹೇಳಬೇಕು. ಇದು ಸದಾಕಾಲಕ್ಕೂ ನನ್ನ ಹೆಸರು; ಇದು ತಲತಲಾಂತರಕ್ಕೂ ನನ್ನನ್ನು ಸ್ಮರಿಸಬೇಕಾದ ನಾಮ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಇದಲ್ಲದೆ ದೇವರು ಮೋಶೆಗೆ, “ನೀನು ಇಸ್ರೇಲರಿಗೆ, ‘ನಿಮ್ಮ ಪೂರ್ವಿಕರ ದೇವರೂ ಅಬ್ರಹಾಮನ ದೇವರೂ ಇಸಾಕನ ದೇವರೂ ಯಾಕೋಬನ ದೇವರೂ ಆಗಿರುವ ಯೆಹೋವನು ನಿಮ್ಮಲ್ಲಿಗೆ ನನ್ನನ್ನು ಕಳುಹಿಸಿದ್ದಾನೆ. ಇದೇ ನನ್ನ ಶಾಶ್ವತವಾದ ಹೆಸರು; ತಲತಲಾಂತರಕ್ಕೂ ನನ್ನನ್ನು ಸ್ಮರಿಸಬೇಕಾದ ಹೆಸರು ಇದೇ ಎಂದು ಹೇಳಬೇಕು’” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಮತ್ತೆ ದೇವರು ಮೋಶೆಗೆ, “ ‘ನಿಮ್ಮ ಪಿತೃಗಳ ದೇವರೂ ಅಬ್ರಹಾಮನ ದೇವರೂ ಇಸಾಕನ ದೇವರೂ ಯಾಕೋಬನ ದೇವರೂ ಆಗಿರುವ ಯೆಹೋವ ದೇವರು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾರೆ,’ ಎಂದು ಇಸ್ರಾಯೇಲರಿಗೆ ಹೇಳಬೇಕು, “ಇದೇ ಯುಗಯುಗಕ್ಕೆ ನನ್ನ ಹೆಸರೂ, ತಲತಲಾಂತರಕ್ಕೂ ನನ್ನನ್ನು ಸ್ಮರಿಸಬೇಕಾದ ಹೆಸರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 3:15
41 ತಿಳಿವುಗಳ ಹೋಲಿಕೆ  

ಯೇಸು ಕ್ರಿಸ್ತನು ನಿನ್ನೇ ಇದ್ದ ಹಾಗೆಯೇ, ಈ ಹೊತ್ತು, ನಿರಂತರವೂ ಇರುವನು.


“ಆದರೂ ಯೆಹೋವನಾದ ನಾನು ಮಾರ್ಪಟ್ಟಿಲ್ಲ. ಆದುದರಿಂದ ಯಾಕೋಬ ಸಂತತಿಯವರೇ ನೀವು ಅಳಿಯದೆ ಉಳಿದಿದ್ದೀರಿ.”


ಯೆಹೋವನೆಂಬುದೇ ಆತನನ್ನು ಸ್ಮರಿಸುವ ನಾಮಧೇಯ.


ಅನ್ಯಜನಾಂಗಗಳು ತಮ್ಮ ತಮ್ಮ ದೇವರುಗಳ ಹೆಸರಿನಲ್ಲಿ ನಡೆಯುತ್ತವೆ. ನಾವಾದರೋ ನಮ್ಮ ದೇವರಾದ ಯೆಹೋವನ ಹೆಸರಿನಲ್ಲಿ ಯುಗಯುಗಾಂತದವರೆಗೆ ನಡೆಯುವೆವು.


ಇದಲ್ಲದೆ ಆತನು ಅವನಿಗೆ, “ನಾನು ನಿನ್ನ ತಂದೆಯಾದ, ಅಬ್ರಹಾಮನ ದೇವರು, ಇಸಾಕನ ದೇವರು, ಯಾಕೋಬನ ದೇವರೂ ಆಗಿದ್ದೇನೆ” ಎಂದು ಹೇಳಿದನು. ಮೋಶೆಯು ದೇವರನ್ನು ನೋಡುವುದಕ್ಕೆ ಭಯಪಟ್ಟು ಮುಖವನ್ನು ಮುಚ್ಚಿಕೊಂಡನು.


ಒಂದು ಮಗು ನಮಗಾಗಿ ಹುಟ್ಟಿದೆಯಷ್ಟೆ, ವರದ ಮಗನು ನಮಗೆ ದೊರೆತನು; ಆಡಳಿತವು ಅವನ ಬಾಹುವಿನ ಮೇಲಿರುವುದು; ಅದ್ಭುತ ಸ್ವರೂಪನು, ಆಲೋಚನಾ ಕರ್ತನು, ಪರಾಕ್ರಮಿಯಾದ ದೇವರೂ, ನಿತ್ಯನಾದ ತಂದೆ, ಸಮಾಧಾನದ ಪ್ರಭು ಎಂಬುದು ಆತನ ಹೆಸರು.


ಯೆಹೋವನೇ, ನೀನಾದರೋ ಸದಾ ಸಿಂಹಾಸನಾರೂಢನಾಗಿರುವಿ; ನಿನ್ನ ನಾಮವು ತಲತಲಾಂತರಕ್ಕೂ ಸ್ಮರಿಸಲ್ಪಡುವುದು.


ಯೆಹೋವನೇ, ನಿನ್ನ ನಾಮವು ಶಾಶ್ವತವಾದದ್ದು; ಯೆಹೋವನೇ, ನೀನು ತಲತಲಾಂತರಕ್ಕೂ ಸ್ಮರಿಸಲು ಯೋಗ್ಯನಾಗಿರುತ್ತೀ.


‘ನಾನು ನಿನ್ನ ಪೂರ್ವಿಕರಾದ, ಅಬ್ರಹಾಮ ಇಸಾಕ ಯಾಕೋಬರ ದೇವರು’ ಎಂಬ ಕರ್ತನ ಶಬ್ದವುಂಟಾಯಿತು. ಆಗ ಮೋಶೆಯು ನಡುಗುತ್ತಾ ಸ್ಥಿರನಾಗಿ ನೋಡುವುದಕ್ಕೆ ಧೈರ್ಯವಿಲ್ಲದವನಾದನು.


ನೀವು ಈಗ ಇರುವುದಕ್ಕಿಂತಲೂ ಇನ್ನು ಸಾವಿರದಷ್ಟಾಗುವಂತೆ ನಿಮ್ಮ ಪೂರ್ವಿಕರ ದೇವರಾದ ಯೆಹೋವನು ನಿಮ್ಮನ್ನು ಹೆಚ್ಚಿಸಿ, ತಾನು ವಾಗ್ದಾನಮಾಡಿದ ಪ್ರಕಾರವೇ ನಿಮಗೆ ಶುಭಗಳನ್ನು ಅನುಗ್ರಹಿಸಲಿ.


ಆಗ ಯೆಹೋವನು ಅವನಿಗೆ, “ಇದರಿಂದ ಅವರು ತಮ್ಮ ಪೂರ್ವಿಕರಾದ ಅಬ್ರಹಾಮ್, ಇಸಾಕ್, ಯಾಕೋಬರ ದೇವರಾಗಿರುವ ಯೆಹೋವನು, ನಿನಗೆ ಕಾಣಿಸಿಕೊಂಡಿರುವುದು ನಿಜ ಎಂದು ನಂಬುವರು” ಎಂದು ಹೇಳಿದನು.


ಅವರ ಮಧ್ಯದಲ್ಲಿ ತನ್ನ ಪವಿತ್ರಾತ್ಮವನ್ನಿರಿಸಿ, ಮೋಶೆಯ ಬಲಗೈಯೊಂದಿಗೆ ತನ್ನ ಘನಹಸ್ತವನ್ನೂ ಮುಂದುವರೆಸುತ್ತಾ ತನ್ನ ಹೆಸರು ಶಾಶ್ವತವಾಗಿರಬೇಕೆಂದು ಅವರೆದುರಿಗೆ ಜಲರಾಶಿಯನ್ನು ಇಬ್ಭಾಗ ಮಾಡಿದಾತನು ಎಲ್ಲಿ?


ಆತನ ಪ್ರಭಾವವುಳ್ಳ ನಾಮಕ್ಕೆ ಸದಾಕಾಲಕ್ಕೂ ಸ್ತುತಿ ಇರಲಿ; ಭೂಮಂಡಲವೆಲ್ಲಾ ಆತನ ಪ್ರಭಾವದಿಂದ ತುಂಬಿರಲಿ. ಆಮೆನ್. ಆಮೆನ್.


ಅವನ ನಾಮವು ಸ್ಥಿರವಾಗಿರಲಿ; ಅವನ ಹೆಸರು ಸೂರ್ಯನಿರುವವರೆಗೆ ಇರಲಿ. ಎಲ್ಲಾ ಜನಾಂಗಗಳವರು ಅವನನ್ನು ಧನ್ಯನೆಂದು ಹೇಳಿ, ಅವನಿಗಿದ್ದ ಆಶೀರ್ವಾದವು ತಮಗೂ ಆಗಬೇಕೆಂದು ಕೋರುವವರಾಗಲಿ.


ಅಲ್ಲಿ ಯೆಹೋವನ ಒಬ್ಬ ಪ್ರವಾದಿಯಿದ್ದನು; ಅ ವನ ಹೆಸರು ಓದೇದ್. ಅವನು ಸಮಾರ್ಯಕ್ಕೆ ಬರುತ್ತಿದ್ದ ಸೈನ್ಯದವರನ್ನು ಎದುರುಗೊಂಡು ಅವರಿಗೆ, “ನಿಮ್ಮ ಪೂರ್ವಿಕರ ದೇವರಾದ ಯೆಹೋವನು ಯೆಹೂದ್ಯರ ಮೇಲೆ ಕೋಪಗೊಂಡು ಅವರನ್ನು ನಿಮ್ಮ ಕೈಗೆ ಒಪ್ಪಿಸಿಕೊಟ್ಟನಷ್ಟೆ. ಅವರನ್ನು ಸಂಹರಿಸುವುದರಲ್ಲಿ ನಿಮ್ಮ ರೌದ್ರವು ಆಕಾಶವನ್ನು ಮುಟ್ಟಿತು.


‘ನಾನು ಅಬ್ರಹಾಮನ ದೇವರು, ಇಸಾಕನ ದೇವರು, ಯಾಕೋಬನ ದೇವರು’ ಎಂದು ದೇವರು ನಿಮಗೆ ನುಡಿದಿದ್ದನ್ನು ನೀವು ಓದಲಿಲ್ಲವೇ. ಆತನು ಸತ್ತವರಿಗೆ ದೇವರಲ್ಲ, ಆದರೆ ಜೀವಿಸುವವರಿಗೆ ದೇವರಾಗಿದ್ದಾನೆ” ಎಂದು ಹೇಳಿದನು.


ಇಸ್ರಾಯೇಲರೇ ಕೇಳಿರಿ, ನೀವು ಜೀವದಿಂದ ಉಳಿದು ನಿಮ್ಮ ಪೂರ್ವಿಕರ ದೇವರಾದ ಯೆಹೋವನು ನಿಮಗೆ ಕೊಡುವ ದೇಶವನ್ನು ಸೇರಿ, ಸ್ವಾಧೀನಮಾಡಿಕೊಳ್ಳುವಂತೆ ಸಾಧ್ಯವಾಗಲು ನಾನು ಈಗ ಬೋಧಿಸುವ ಆಜ್ಞಾವಿಧಿಗಳನ್ನು ಗಮನಿಸಿ ಅನುಸರಿಸಬೇಕು.


ಆತನು, “ನಿಮ್ಮ ಪೂರ್ವಿಕರಿಗೆ ವಾಗ್ದಾನಮಾಡಿದ ಆ ಒಳ್ಳೇ ದೇಶವನ್ನು ಈ ದುಷ್ಟ ಸಂತತಿಯವರಲ್ಲಿ ಯಾರೂ ನೋಡುವುದಿಲ್ಲ” ಎಂದು ಪ್ರಮಾಣಮಾಡಿದನು.


ನಮ್ಮ ಪೂರ್ವಿಕರಾದ ಅಬ್ರಹಾಮ ಇಸಾಕ ಯಾಕೋಬರ ದೇವರು ತನ್ನ ಸೇವಕನಾದ ಯೇಸುವನ್ನು ಮಹಿಮೆಪಡಿಸಿದ್ದಾನೆ. ನೀವಂತೂ ಆತನನ್ನು ಪಿಲಾತನಿಗೆ ಹಿಡಿದುಕೊಟ್ಟಿರಿ; ಮತ್ತು ಪಿಲಾತನು ಆತನನ್ನು ಬಿಡಿಸಬೇಕೆಂದು ನಿರ್ಣಯಿಸಿದಾಗ, ಆತನ ಮುಂದೆ ಆತನನ್ನು ಧಿಕ್ಕರಿಸಿ ಬೇಡವೆಂದು ಕೂಗಿದ್ದೀರಿ.


ಆದರೆ ಅವರು ಪರಲೋಕವೆಂಬ ಉತ್ತಮ ದೇಶವನ್ನು ಹಾರೈಸುವವರು. ಆದ್ದರಿಂದ ದೇವರು ಅವರ ದೇವರೇ ಎನ್ನಿಸಿಕೊಳ್ಳುವುದಕ್ಕೆ ನಾಚಿಕೆಗೊಳ್ಳದೇ, ಅವರಿಗೋಸ್ಕರ ಪಟ್ಟಣವನ್ನು ಸಿದ್ಧಮಾಡಿದ್ದಾನೆ.


“ನನ್ನ ದಣಿಯಾದ ಅಬ್ರಹಾಮನ ದೇವರಾಗಿರುವ ಯೆಹೋವನೇ, ಈ ಹೊತ್ತು ನಾನು ಬಂದ ಕಾರ್ಯವನ್ನು ನೀನು ಸಫಲಪಡಿಸಿ ನನ್ನ ದಣಿಯಾದ ಅಬ್ರಹಾಮನಿಗೆ ದಯೆಯನ್ನು ತೋರಿಸಬೇಕೆಂದು ಬೇಡಿಕೊಳ್ಳುತ್ತೇನೆ.


ಅದಕ್ಕೆ ಮೋಶೆಯು ದೇವರಿಗೆ, “ನಾನು ಇಸ್ರಾಯೇಲರ ಬಳಿಗೆ ಹೋಗಿ, ‘ನಿಮ್ಮ ಪೂರ್ವಿಕರ ದೇವರು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾನೆ’ ಎಂದು ಹೇಳಿದಾಗ, ನನಗೆ ಒಂದು ವೇಳೆ ಅವರು, ಆತನ ಹೆಸರು ಏನು? ಎಂದು ಕೇಳಿದರೆ ನಾನೇನು ಉತ್ತರಕೊಡಬೇಕು” ಎಂದನು.


ಅದಕ್ಕೆ ಮೋಶೆಯು ಉತ್ತರವಾಗಿ, “ಅವರು ನನ್ನನ್ನು ನಂಬದೆ, ನನ್ನ ಮಾತಿಗೆ ಕಿವಿಗೊಡದೆ, ಯೆಹೋವನು ನಿನಗೆ ಕಾಣಿಸಿಕೊಂಡೇ ಇಲ್ಲ ಎಂದು ಹೇಳಬಹುದು?” ಎಂದನು.


ದೇವರು ಮೋಶೆಯ ಸಂಗಡ ಪುನಃ ಮಾತನಾಡಿ ಇಂತೆಂದನು, “ನಾನೇ ಯೆಹೋವನು,


ನನ್ನ ಬಲವೂ, ಕೀರ್ತನೆಯೂ ಯಾಹುವೇ. ಆತನಿಂದ ನನಗೆ ರಕ್ಷಣೆ ಉಂಟಾಯಿತು. ನಮ್ಮ ದೇವರು ಆತನೇ, ಆತನನ್ನು ಸ್ತುತಿಸುವೆನು, ನಮ್ಮ ಪೂರ್ವಿಕರ ದೇವರು ಆತನೇ, ಆತನ ಮಹಿಮೆಯನ್ನು ಪ್ರಖ್ಯಾತಿಪಡಿಸುವೆವು.


ಯೆಹೋವನು ಯುದ್ಧವೀರನು; ಯೆಹೋವ ಎಂಬುದು ಆತನ ನಾಮವಾಗಿದೆ.


ಅವನು ಯೆಹೋವನ ಹೆಸರನ್ನು ದೂಷಿಸಿ ಆತನನ್ನು ಶಪಿಸಿದ್ದರಿಂದ ಅವರು ಅವನನ್ನು ಮೋಶೆಯ ಬಳಿಗೆ ಹಿಡಿದು ಕರೆದುಕೊಂಡು ಬಂದರು. ಅವನ ತಾಯಿಯು ದಾನ್ ಕುಲದ ದಿಬ್ರೀಯ ಮಗಳಾದ ಶೆಲೋಮೀತ್ ಎಂಬುವವಳು.


ಯೆಹೋವನ ಭಕ್ತರೇ, ಆತನನ್ನು ಕೀರ್ತಿಸಿರಿ; ಆತನ ಪರಿಶುದ್ಧನಾಮವನ್ನು ಕೊಂಡಾಡಿರಿ.


ಯೆಹೋವನ ನಾಮವು ಬಲವಾದ ಬುರುಜು, ಶಿಷ್ಟನು ಅದರೊಳಕ್ಕೆ ಓಡಿಹೋಗಿ ಭದ್ರವಾಗಿರುವನು.


ಹೌದು, ಯೆಹೋವನೇ, ನಿನ್ನ ನ್ಯಾಯತೀರ್ಪಿನ ಮಾರ್ಗದಲ್ಲಿ ನಡೆಯುತ್ತಾ ನಿನಗಾಗಿ ಕಾದುಕೊಂಡಿದ್ದೇವೆ; ನಿನ್ನ ನಾಮಸ್ಮರಣೆಯು ನಮ್ಮ ಆತ್ಮಕ್ಕೆ ಇಷ್ಟವಾಗಿದೆ, ಹಿತವಾಗಿದೆ.


ನಾನೇ ಯೆಹೋವನು; ಇದೇ ನನ್ನ ನಾಮವು; ನನ್ನ ಮಹಿಮೆಯನ್ನು ಮತ್ತೊಬ್ಬನಿಗೆ ಸಲ್ಲಗೊಡಿಸೆನು, ನನ್ನ ಸ್ತೋತ್ರವನ್ನು ವಿಗ್ರಹಗಳ ಪಾಲು ಮಾಡೆನು.


“ಕಾರ್ಯವನ್ನು ಸಾಧಿಸಿಕೊಳ್ಳುವ, ಉದ್ದೇಶಿಸಿ ನೆರವೇರಿಸುವ ಯೆಹೋವನಾಮಾಂಕಿತನು ಇಂತೆನ್ನುತ್ತಾನೆ,


ನನ್ನ ಪೂರ್ವಿಕರ ದೇವರೇ, ನಿನ್ನನ್ನು ಸ್ತುತಿಸುತ್ತೇನೆ, ಕೊಂಡಾಡುತ್ತೇನೆ, ನೀನು ನನಗೆ ಜ್ಞಾನತ್ರಾಣಗಳನ್ನು ದಯಪಾಲಿಸಿ ನಾವು ಬೇಡಿದ್ದನ್ನು ನನಗೆ ತೋರ್ಪಡಿಸಿದ್ದಿಯಲ್ಲಾ; ಹೌದು, ರಾಜನ ರಹಸ್ಯವನ್ನು ನಮಗೆ ಪ್ರಕಟಪಡಿಸಿರುವೆ” ಎಂದನು.


ಆತನು ಆ ಒಡಂಬಡಿಕೆಯನ್ನು ಅಬ್ರಹಾಮನ ಸಂಗಡ ಮಾಡಿಕೊಂಡನು ಮತ್ತು ಇಸಾಕನಿಗಾಗಿ ವಾಗ್ದಾನ ಮಾಡಿ ಭರವಸೆ ನೀಡಿದನು.


ನಮ್ಮ ಪೂರ್ವಿಕರಾದ ಅಬ್ರಹಾಮ್, ಇಸಾಕ್ ಮತ್ತು ಇಸ್ರಾಯೇಲರ ದೇವರೇ, ಯೆಹೋವನೇ, ನಿನ್ನ ಪ್ರಜೆಗಳಲ್ಲಿ ಇಂಥಾ ಮನಸ್ಸು ಯಾವಾಗಲೂ ಇರುವಂತೆ ಮಾಡು. ನಿನ್ನಲ್ಲಿ ಭಯಭಕ್ತಿ ಉಳ್ಳವರಾಗಿರುವುದಕ್ಕೆ ಅವರಿಗೆ ಸ್ಥಿರಚಿತ್ತವನ್ನು ಅನುಗ್ರಹಿಸು.


ಆತನ ಕೋಪವು ಕ್ಷಣಮಾತ್ರವೇ; ಆತನ ಅನುಗ್ರಹವೋ ಜೀವಮಾನವೆಲ್ಲಾ ಇರುವುದು; ಸಂಜೆಗೆ ದುಃಖವೆಂಬುದು ಬಂದು ನಮ್ಮ ಬಳಿಯಲ್ಲಿ ಇಳಿದುಕೊಂಡರೂ, ಮುಂಜಾನೆ ಹರ್ಷಧ್ವನಿಯು ಕೇಳಿಸುವುದು.


ಪರಿಶುದ್ಧ ವಾಸಸ್ಥಾನದಲ್ಲಿರುವ ದೇವರು ದಿಕ್ಕಿಲ್ಲದವರಿಗೆ ತಂದೆಯೂ, ವಿಧವೆಯರಿಗೆ ಸಹಾಯಕನೂ ಆಗಿದ್ದಾನೆ.


ನೀನು ಎದ್ದು ಚೀಯೋನನ್ನು ಕರುಣಿಸುವಿ. ಅದಕ್ಕೆ ಕೃಪೆತೋರಿಸುವ ಸಮಯ ಇದೇ; ನಿಯಮಿತ ಕಾಲವು ಬಂದಿದೆ.


ಇಸ್ರಾಯೇಲೇ, ನೀನೂ ನಿನ್ನ ದೇವರ ಕಡೆಗೆ ತಿರುಗಿಕೋ; ನೀತಿ, ಪ್ರೀತಿಗಳನ್ನು ಅನುಸರಿಸಿ ನಿನ್ನ ದೇವರನ್ನು ಎಡೆಬಿಡದೆ ನಿರೀಕ್ಷಿಸಿಕೊಂಡಿರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು