Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 3:18 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಅವರು ನಿನ್ನ ಮಾತಿಗೆ ಕಿವಿಗೊಡುವರು. ನೀನು ಮತ್ತು ಇಸ್ರಾಯೇಲರ ಹಿರಿಯರು ಐಗುಪ್ತದೇಶದ ಅರಸನ ಬಳಿಗೆ ಹೋಗಿ ಅವನಿಗೆ, “ಇಬ್ರಿಯರ ದೇವರಾಗಿರುವ ಯೆಹೋವನು ನಮಗೆ ಪ್ರತ್ಯಕ್ಷನಾದನು. ಆದುದರಿಂದ ನಾವು ಮರುಭೂಮಿಯಲ್ಲಿ ಮೂರು ದಿನದ ಪ್ರಯಾಣದಷ್ಟು ದೂರ ಹೋಗಿ ನಮ್ಮ ದೇವರಾಗಿರುವ ಯೆಹೋವನಿಗಾಗಿ ಯಜ್ಞಮಾಡಬೇಕಾಗಿದೆ, ಅದಕ್ಕೆ ಅಪ್ಪಣೆಯಾಗಬೇಕು” ಎಂದು ಕೇಳಿಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 “ಅವರು ನಿನ್ನ ಮಾತಿಗೆ ಕಿವಿಗೊಡುವರು. ನೀನು ಮತ್ತು ಇಸ್ರಯೇಲಿನ ಹಿರಿಯರು ಈಜಿಪ್ಟ್ ದೇಶದ ಅರಸನ ಬಳಿಗೆ ಹೋಗಿ ಅವನಿಗೆ, “ಹಿಬ್ರಿಯರ ದೇವರಾಗಿರುವ ಸರ್ವೇಶ್ವರ ನಮಗೆ ಪ್ರತ್ಯಕ್ಷರಾದರು. ಆದುದರಿಂದ ನಾವು ಮರುಭೂಮಿಯಲ್ಲಿ ಮೂರು ದಿನದ ಪ್ರಯಾಣದಷ್ಟು ದೂರ ಹೋಗಿ ನಮ್ಮ ದೇವರಾದ ಸರ್ವೇಶ್ವರನಿಗೆ ಬಲಿಯೊಪ್ಪಿಸಬೇಕಾಗಿದೆ, ಅಪ್ಪಣೆಯಾಗಬೇಕು’ ಎಂದು ಕೇಳಿಕೊಳ್ಳಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಅವರು ನಿನ್ನ ಮಾತಿಗೆ ಕಿವಿಗೊಡುವರು. ನೀನೂ ಇಸ್ರಾಯೇಲ್ಯರ ಹಿರಿಯರೂ ಐಗುಪ್ತದೇಶದ ಅರಸನ ಬಳಿಗೆ ಹೋಗಿ ಅವನಿಗೆ - ಇಬ್ರಿಯರ ದೇವರಾಗಿರುವ ಯೆಹೋವನು ನಮಗೆ ಪ್ರತ್ಯಕ್ಷನಾದನು; ಆದದರಿಂದ ನಾವು ಅರಣ್ಯದಲ್ಲಿ ಮೂರು ದಿನದ ಪ್ರಯಾಣದಷ್ಟು ದೂರ ಹೋಗಿ ನಮ್ಮ ದೇವರಾದ ಯೆಹೋವನಿಗೋಸ್ಕರ ಯಜ್ಞಮಾಡಬೇಕಾಗಿದೆ, ಅಪ್ಪಣೆಯಾಗಬೇಕೆಂದು ಕೇಳಿಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 “ಹಿರಿಯರು ನಿನಗೆ ಕಿವಿಗೊಡುವರು. ಆಗ ನೀನು ಮತ್ತು ಹಿರಿಯರು ಈಜಿಪ್ಟಿನ ರಾಜನ ಬಳಿಗೆ ಹೋಗಿ, ‘ಇಬ್ರಿಯರ ದೇವರಾದ ಯೆಹೋವನು ನಮಗೆ ಕಾಣಿಸಿಕೊಂಡನು. ಆದ್ದರಿಂದ ನಾವು ಮರುಭೂಮಿಯಲ್ಲಿ ಮೂರು ದಿನ ಪ್ರಯಾಣ ಮಾಡಿ ನಮ್ಮ ದೇವರಾದ ಯೆಹೋವನಿಗೆ ಯಜ್ಞಗಳನ್ನು ಸಮರ್ಪಿಸಬೇಕು’ ಎಂದು ಹೇಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 “ಇಸ್ರಾಯೇಲರ ಹಿರಿಯರು ನಿನ್ನ ಮಾತನ್ನು ಕೇಳುವರು. ಆಗ ನೀನು ಇಸ್ರಾಯೇಲ್ ಜನರ ಹಿರಿಯರ ಸಹಿತವಾಗಿ ಈಜಿಪ್ಟಿನ ಅರಸನ ಬಳಿಗೆ ಹೋಗಿ ಅವನಿಗೆ, ‘ಹಿಬ್ರಿಯರ ದೇವರಾಗಿರುವ ಯೆಹೋವ ದೇವರು ನಮಗೆ ಪ್ರತ್ಯಕ್ಷನಾಗಿದ್ದಾರೆ. ಆದ್ದರಿಂದ ನಾವು ಮರುಭೂಮಿಯಲ್ಲಿ ಮೂರು ದಿನ ಪ್ರಯಾಣಮಾಡಿ, ನಮ್ಮ ಯೆಹೋವ ದೇವರಿಗೆ ಯಜ್ಞಮಾಡಬೇಕಾಗಿದೆ. ಅದಕ್ಕಾಗಿ ನಮ್ಮನ್ನು ಬಿಡು ಎಂದು ಬೇಡಿಕೊಳ್ಳುತ್ತೇವೆ,’ ಎಂದು ಹೇಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 3:18
40 ತಿಳಿವುಗಳ ಹೋಲಿಕೆ  

ತರುವಾಯ ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ, “ನೀನು, ಫರೋಹನ ಬಳಿಗೆ ಹೋಗಿ ಅವನಿಗೆ, ‘ಇಬ್ರಿಯರ ದೇವರಾದ ಯೆಹೋವನು ತನ್ನನ್ನು ಆರಾಧಿಸುವಂತೆ ತನ್ನ ಜನರಿಗೆ ಅಪ್ಪಣೆಕೊಡಬೇಕೆಂಬುದಾಗಿ ಹೇಳಿದ್ದಾನೆ.


‘ಇಬ್ರಿಯರ ದೇವರಾದ ಯೆಹೋವನು ನನ್ನನ್ನು ನಿನ್ನ ಬಳಿಗೆ ಕಳುಹಿಸಿ, ಅರಣ್ಯದಲ್ಲಿ ತನ್ನನ್ನು ಆರಾಧಿಸುವಂತೆ ತನ್ನ ಜನರಿಗೆ ಅಪ್ಪಣೆಕೊಡಬೇಕೆಂದು ನಿನಗೆ ಆಜ್ಞಾಪಿಸಿದ್ದಾನಷ್ಟೇ. ಈ ವರೆಗೂ ನೀನು ಅದನ್ನು ಲಕ್ಷ್ಯಕ್ಕೆ ತರಲಿಲ್ಲ.


ಮೋಶೆ ಮತ್ತು ಆರೋನರು ಫರೋಹನ ಬಳಿಗೆ ಹೋಗಿ ಅವನಿಗೆ, “ಇಬ್ರಿಯರ ದೇವರಾಗಿರುವ ಯೆಹೋವನು ಆಜ್ಞಾಪಿಸುವುದೇನೆಂದರೆ, ‘ನೀನು ನನ್ನ ಮುಂದೆ ತಗ್ಗಿಸಿಕೊಳ್ಳದೆ ಇರುವುದು ಇನ್ನು ಎಲ್ಲಿಯವರೆಗೆ? ನನ್ನನ್ನು ಆರಾಧಿಸುವಂತೆ ನನ್ನ ಜನರಿಗೆ ಅಪ್ಪಣೆ ಕೊಡು.


ತರುವಾಯ ಯೆಹೋವನು ಮೋಶೆಗೆ, “ನೀನು ಬೆಳಿಗ್ಗೆ ಎದ್ದು ಫರೋಹನ ಮುಂದೆ ನಿಂತುಕೊಂಡು ಅವನಿಗೆ, ‘ಇಬ್ರಿಯರ ದೇವರಾದ ಯೆಹೋವನು ಆಜ್ಞಾಪಿಸುವುದೇನೆಂದರೆ, ನನ್ನನ್ನು ಆರಾಧಿಸುವಂತೆ ನನ್ನ ಜನರಿಗೆ ಅಪ್ಪಣೆಕೊಡಬೇಕು.


ನೀನು ಸೈನ್ಯವನ್ನು ಕೂಡಿಸುವ ದಿನದಲ್ಲಿ, ನಿನ್ನ ಪ್ರಜೆಗಳು ಸಂತೋಷದಿಂದ ತಾವಾಗಿಯೇ ಸೇರಿಕೊಳ್ಳುವರು. ಪರಿಶುದ್ಧ ವಸ್ತ್ರಭೂಷಿತರಾದ ನಿನ್ನ ಯುವ ಸೈನಿಕರು, ಉದಯಕಾಲದ ಇಬ್ಬನಿಯಂತಿರುವರು.


ಯೆಹೂದ್ಯರಾದರೋ ದೇವರ ಕೃಪಾಹಸ್ತದಿಂದ ಪ್ರೇರಣೆಹೊಂದಿ ಏಕ ಮನಸ್ಸುಳ್ಳವರಾಗಿ, ಯೆಹೋವನ ವಾಕ್ಯಕ್ಕೆ ಅನುಸಾರವಾಗಿ ಅರಸನಿಂದಲೂ, ಪದಾಧಿಕಾರಿಗಳಿಂದಲೂ ಹೊರಟ ಆಜ್ಞೆಯನ್ನು ಕೈಕೊಂಡರು.


ನಾವು ಮೋಶೆಯ ಎಲ್ಲಾ ಮಾತುಗಳಿಗೆ ವಿಧೇಯರಾದ ಹಾಗೆ ನಿನ್ನ ಮಾತುಗಳಿಗೂ ವಿಧೇಯರಾಗುವೆವು. ನಿನ್ನ ದೇವರಾದ ಯೆಹೋವನು ಮೋಶೆಯ ಸಂಗಡ ಇದ್ದ ಹಾಗೆ ನಿನ್ನ ಸಂಗಡವೂ ಇರಲಿ.


ನೀನು ಆ ಕೋಲುಗಳನ್ನು ದೇವದರ್ಶನದ ಗುಡಾರದಲ್ಲಿ ಆಜ್ಞಾಶಾಸನಗಳ ಮುಂದೆ ನಾನು ನಿಮಗೆ ದರ್ಶನಕೊಡುವ ಸ್ಥಳದಲ್ಲಿ ಇಡಬೇಕು.


ಆಜ್ಞಾಶಾಸನವಿರುವ ಮಂಜೂಷದ ಮುಂದಣ ಪರದೆಗೆ ಎದುರಾಗಿ, ಅಂದರೆ ಆಜ್ಞಾಶಾಸನವಿರುವ ಮಂಜೂಷದ ಮೇಲಿರುವಂಥ ಮತ್ತು ನಾನು ನಿನಗೆ ದರ್ಶನ ಕೊಡುವಂಥ ಕೃಪಾಸನದ ಮುಂದೆ ಅದನ್ನು ಇಡಬೇಕು.


ಅಲ್ಲಿಯೇ ನಾನು ನಿನಗೆ ದರ್ಶನವನ್ನು ಕೊಡುವೆನು. ಕೃಪಾಸನದ ಮೇಲೆ ಆಜ್ಞಾಶಾಸನಗಳನ್ನು ಇಟ್ಟಿರುವ ಮಂಜೂಷದ ಮೇಲಣ ಎರಡು ಕೆರೂಬಿಗಳ ನಡುವೆಯೇ ನಾನು ಇದ್ದು ನಿನ್ನ ಸಂಗಡ ಮಾತನಾಡಿ ನೀನು ಇಸ್ರಾಯೇಲರಿಗೆ ಆಜ್ಞಾಪಿಸಬೇಕಾಗಿರುವ ಎಲ್ಲಾ ಸಂಗತಿಗಳನ್ನು ತಿಳಿಸುವೆನು.


ಇಸ್ರಾಯೇಲರು ಐಗುಪ್ತ ದೇಶದಿಂದ ಹೊರಟ ಮೂರನೆಯ ತಿಂಗಳಿನ ಅದೇ ದಿನದಲ್ಲಿ ಸೀನಾಯಿ ಮರುಭೂಮಿಗೆ ಬಂದರು.


ಜನರು ನಂಬಿದರು. ಯೆಹೋವನು ಇಸ್ರಾಯೇಲರನ್ನು ಕಟಾಕ್ಷಿಸಿ ತಮ್ಮ ದುರವಸ್ಥೆಯನ್ನು ಮನಸ್ಸಿಗೆ ತಂದುಕೊಂಡನೆಂಬುದನ್ನು, ಇಸ್ರಾಯೇಲರು ಕೇಳಿದಾಗ ತಲೆಬಾಗಿಸಿ ಆರಾಧಿಸಿದರು.


ಇದಲ್ಲದೆ ಮೋಶೆಯು ಹೋಗುವ ದಾರಿಯಲ್ಲಿ, ಛತ್ರದಲ್ಲಿದ್ದಾಗ ಯೆಹೋವನು ಅವನೆದುರಿಗೆ ಬಂದು ಅವನ ಪ್ರಾಣವನ್ನು ತೆಗೆಯಬೇಕೆಂದಿದ್ದನು.


ಆತನು, ನೀನು ಹೋಗಿ ಇಸ್ರಾಯೇಲರ ಹಿರಿಯರನ್ನು ಒಟ್ಟಾಗಿ ಸೇರಿಸಿ ಅವರಿಗೆ, “ನಿಮ್ಮ ಪೂರ್ವಿಕರ ದೇವರು ಅಂದರೆ ಅಬ್ರಹಾಮ್, ಇಸಾಕ್, ಯಾಕೋಬರ ದೇವರು ಆಗಿರುವ ಯೆಹೋವನು ನನಗೆ ದರ್ಶನಕೊಟ್ಟು ನಿಮ್ಮನ್ನು ಕಟಾಕ್ಷಿಸಿ ಐಗುಪ್ತದೇಶದಲ್ಲಿ ನಿಮಗೆ ಸಂಭವಿಸಿದ್ದನ್ನೆಲ್ಲಾ ನಿಶ್ಚಯವಾಗಿ ನಾನು ನೋಡಿದ್ದೇನೆ.


ಅದಕ್ಕೆ ದೇವರು, “ನಿಶ್ಚಯವಾಗಿ ನಾನು ನಿನ್ನ ಸಂಗಡ ಇರುವೆನು. ನೀನು ನನ್ನ ಜನರನ್ನು ಐಗುಪ್ತದೇಶದಿಂದ ಹೊರಗೆ ತಂದಾಗ ನೀವು ಈ ಬೆಟ್ಟದಲ್ಲೇ ನನ್ನನ್ನು ಆರಾಧಿಸುವಿರಿ. ನಿನ್ನನ್ನು ಕಳುಹಿಸಿದವನು ನಾನೇ ಎಂಬುವುದಕ್ಕೆ ಇದು ನಿನಗೆ ಗುರುತಾಗಿರುವುದು” ಅಂದನು.


ಯಾಕೋಬನು, ಯೋಸೇಫನಿಗೆ, “ಸರ್ವಶಕ್ತನಾದ ದೇವರು ಕಾನಾನ್ ದೇಶದ ಲೂಜ್ ಎಂಬಲ್ಲಿ ನನಗೆ ದರ್ಶನ ಕೊಟ್ಟು ಆಶೀರ್ವದಿಸಿದನು.


ಅಬ್ರಾಮನು ತೊಂಭತೊಂಭತ್ತು ವರ್ಷದವನಾದಾಗ ಯೆಹೋವನು ಅವನಿಗೆ ದರ್ಶನದಲ್ಲಿ, “ನಾನು ಸರ್ವಶಕ್ತನಾದ ದೇವರು; ನನ್ನೆದುರಿನಲ್ಲಿ ದೋಷ ಇಲ್ಲದವನಾಗಿ ನಡೆದುಕೊ.


ಈ ಸಂಗತಿಗಳು ನಡೆದ ಮೇಲೆ ಅಬ್ರಾಮನಿಗೆ ದರ್ಶನದಲ್ಲಿ ಯೆಹೋವನ ವಾಕ್ಯವುಂಟಾಗಿ ಹೇಳಿದೇನೆಂದರೆ, “ಅಬ್ರಾಮನೇ, ಭಯಪಡಬೇಡ, ನಾನು ನಿನಗೆ ಗುರಾಣಿಯಾಗಿದ್ದೇನೆ ಮತ್ತು ನಿನಗೆ ಅತ್ಯಧಿಕ ಬಹುಮಾನವು ದೊರೆಯುವುದು.”


ಯೆಹೋವನು ಅಬ್ರಾಮನಿಗೆ, “ನೀನು, ನಿನ್ನ ಸ್ವದೇಶವನ್ನೂ, ಬಂಧುಬಳಗವನ್ನೂ, ತಂದೆಯ ಮನೆಯನ್ನೂ ಬಿಟ್ಟು ನಾನು ತೋರಿಸುವ ದೇಶಕ್ಕೆ ಹೊರಟು ಹೋಗು.


ನಿಮ್ಮ ಬಳಿಗೆ ನಾನು ತಪ್ಪದೆ ಕಳುಹಿಸುತ್ತಾ ಬಂದಿರುವ ನನ್ನ ಸೇವಕರಾದ ಪ್ರವಾದಿಗಳ ಮಾತುಗಳನ್ನು ಕೇಳದೆಯೂ ಇದ್ದರೆ,


‘ನಮ್ಮನ್ನು ಐಗುಪ್ತ ದೇಶದೊಳಗಿಂದ ಬರಮಾಡಿ ಕಾಡಾಗಿಯೂ, ಹಳ್ಳಕೊಳ್ಳವಾಗಿಯೂ, ನಿರ್ಜಲವಾಗಿಯೂ, ಘೋರಾಂಧಕಾರವಾಗಿಯೂ, ಯಾರೂ ಹಾದುಹೋಗದೆಯೂ, ಯಾರೂ ವಾಸಿಸದೆಯೂ ಇರುವ ಅರಣ್ಯದಲ್ಲಿ ನಡೆಸಿದ ಯೆಹೋವನು ಎಲ್ಲಿ?’ ಎಂದು ಅವರು ಅಂದುಕೊಳ್ಳಲಿಲ್ಲವಲ್ಲ.


“ನೀನು ಹೋಗಿ ಯೆರೂಸಲೇಮಿನ ಕಿವಿಗೆ ಮುಟ್ಟುವಂತೆ ಈ ಮಾತುಗಳನ್ನು ಸಾರು, ‘ಯೆಹೋವನು ಹೀಗೆನ್ನುತ್ತಾನೆ, ನೀನು ಯೌವನದಲ್ಲಿ ನನ್ನ ಮೇಲೆ ಇಟ್ಟಿದ್ದ ಪ್ರೀತಿಯನ್ನೂ, ವಿವಾಹಕಾಲದ ನಿನ್ನ ಪ್ರೇಮವನ್ನೂ, ನೀನು ಬಿತ್ತನೆ ಮಾಡದ ಅರಣ್ಯದಲ್ಲಿ ನನ್ನನ್ನು ಹಿಂಬಾಲಿಸಿದ ನಿನ್ನ ಪಾತಿವ್ರತ್ಯವನ್ನೂ ನಿನ್ನ ಹಿತಕ್ಕಾಗಿ ಜ್ಞಾಪಕದಲ್ಲಿಟ್ಟಿದ್ದೇನೆ.


ಧರ್ಮವನ್ನು ಅನುಸರಿಸಲು ಸಂತೋಷಪಟ್ಟು ನಿನ್ನ ಮಾರ್ಗದಲ್ಲಿ ನಡೆಯುತ್ತಾ ನಿನ್ನನ್ನು ಸ್ಮರಿಸುವವರಿಗೆ ಪ್ರಸನ್ನನಾಗಿದ್ದಿ; ನಮ್ಮ ಮೇಲಾದರೋ ರೋಷಗೊಂಡಿದ್ದಿ; ಆದರೂ ಪಾಪದಲ್ಲಿ ಮುಳುಗಿರುವ ನಮಗೆ ರಕ್ಷಣೆಯಾದೀತೇ?


ಅದರಲ್ಲಿ ಸ್ವಲ್ಪವನ್ನು ಪುಡಿಮಾಡಿಸಿ ದೇವದರ್ಶನದ ಗುಡಾರದೊಳಗೆ ಆಜ್ಞಾಶಾಸನಗಳ ಮಂಜೂಷದ ಎದುರಾಗಿ ನಾನು ನಿನಗೆ ದರ್ಶನ ಕೊಡುವ ಸ್ಥಳದಲ್ಲಿ ಇರಿಸಬೇಕು. ಅದು ಅತಿ ಪರಿಶುದ್ಧವಾದದ್ದೆಂದು ನೀವು ಭಾವಿಸಬೇಕು.


ತಪ್ಪಿಸಿಕೊಂಡವನೊಬ್ಬನು, ಇಬ್ರಿಯನಾದ ಅಬ್ರಾಮನ ಬಳಿಗೆ ಬಂದು ಈ ಸಂಗತಿಯನ್ನು ತಿಳಿಸಿದನು. ಅಬ್ರಾಮನು ಅಮೋರಿಯನಾದ ಮಮ್ರೆಯನ ಮೋರೆ ತೋಪಿನ ಬಳಿಯಲ್ಲಿ ವಾಸವಾಗಿದ್ದನು. ಮಮ್ರೆಯನಿಗೆ ಎಷ್ಕೋಲ ಮತ್ತು ಆನೇರ ಎಂಬ ಸಹೋದರರಿದ್ದರು; ಇವರಿಬ್ಬರಿಗೂ ಅಬ್ರಾಮನಿಗೂ ಒಡಂಬಡಿಕೆಯಿತ್ತು.


ಅದಕ್ಕೆ ಮೋಶೆಯು ಉತ್ತರವಾಗಿ, “ಅವರು ನನ್ನನ್ನು ನಂಬದೆ, ನನ್ನ ಮಾತಿಗೆ ಕಿವಿಗೊಡದೆ, ಯೆಹೋವನು ನಿನಗೆ ಕಾಣಿಸಿಕೊಂಡೇ ಇಲ್ಲ ಎಂದು ಹೇಳಬಹುದು?” ಎಂದನು.


ಬಳಿಕ ಮೋಶೆ ಮತ್ತು ಆರೋನರು ಫರೋಹನ ಸನ್ನಿಧಿಗೆ ಹೋಗಿ, “ಇಸ್ರಾಯೇಲರ ದೇವರಾದ ಯೆಹೋವನು, ನನ್ನ ಜನರು ನನಗಾಗಿ ಅರಣ್ಯದೊಳಗೆ ಜಾತ್ರೆ ನಡೆಸುವಂತೆ ಅವರಿಗೆ ಅಪ್ಪಣೆ ಕೊಡಬೇಕು ಎಂದು ಹೇಳಿದ್ದಾನೆ” ಅಂದರು.


ಆಗ ಅವರು, “ಇಬ್ರಿಯರ ದೇವರು ನಮ್ಮನ್ನು ಎದುರುಗೊಂಡನು. ಅಪ್ಪಣೆಯಾದರೆ ನಾವು ಮರುಭೂಮಿಯಲ್ಲಿ ಮೂರು ದಿನ ಪ್ರಯಾಣಮಾಡಿ, ನಮ್ಮ ದೇವರಾದ ಯೆಹೋವನಿಗೋಸ್ಕರ ಯಜ್ಞಮಾಡಿ ಬರುವೆವು. ಇಲ್ಲವಾದರೆ ಆತನು ನಮ್ಮನ್ನು ವ್ಯಾಧಿಯಿಂದಾದರೂ, ಕತ್ತಿಯಿಂದಾದರೂ ಸಂಹಾರಮಾಡುವನು” ಎಂದು ಹೇಳಿದರು.


ನಂತರ ಯೆಹೋವನು ಮೋಶೆಯ ಸಂಗಡ ಮಾತನಾಡಿ ಅವನಿಗೆ, “ನೀನು ಫರೋಹನ ಬಳಿಗೆ ಹೋಗಿ ಹೀಗೆ ಹೇಳಬೇಕು, ‘ಯೆಹೋವನು ಆಜ್ಞಾಪಿಸುವುದೇನೆಂದರೆ: ನನ್ನನ್ನು ಆರಾಧಿಸುವುದಕ್ಕೆ ನನ್ನ ಜನರಿಗೆ ಅಪ್ಪಣೆಕೊಡಬೇಕು.


ತರುವಾಯ ಯೆಹೋವನು ಮೋಶೆಗೆ, “ನೀನು ಬೆಳಿಗ್ಗೆ ಎದ್ದು ಫರೋಹನ ಮುಂದೆ ನಿಂತುಕೋ. ಅವನು ಹೊರಗೆ ನದಿಯ ಬಳಿಗೆ ಬರುತ್ತಾನೆ. ನೀನು ಅವನಿಗೆ ಹೀಗೆಂದು ಹೇಳು, ‘ಯೆಹೋವನು ಆಜ್ಞಾಪಿಸುವುದೇನೆಂದರೆ, ನನ್ನನ್ನು ಆರಾಧಿಸುವಂತೆ ನನ್ನ ಜನರಿಗೆ ಅಪ್ಪಣೆಕೊಡಬೇಕು.


ಅದಕ್ಕೆ ಯೆಹೋವನು ಮೋಶೆಗೆ, “ನೀನು ನೈಲ್ ನದಿಯನ್ನು ಹೊಡೆದ ಕೋಲನ್ನು ಕೈಯಲ್ಲಿ ಹಿಡಿದುಕೊಂಡು ಇಸ್ರಾಯೇಲರ ಹಿರಿಯರಲ್ಲಿ ಕೆಲವರನ್ನು ಕರೆದುಕೊಂಡು ಜನರ ಮುಂದೆ ಹೊರಟು, ನಾನು ತೋರಿಸುವ ಸ್ಥಳಕ್ಕೆ ಹೋಗು.


ಹಾಗೂ ನನ್ನ ಮಗನು ನಿನ್ನ ದೇಶದಿಂದ ಹೊರಟು ನನ್ನನ್ನು ಆರಾಧಿಸುವುದಕ್ಕೆ ಅವನಿಗೆ ಅಪ್ಪಣೆಕೊಡಬೇಕು. ಅದಕ್ಕೆ ನೀನು ಒಪ್ಪದೇ ಹೋದರೆ, ನಾನು ನಿನಗಿರುವ ಚೊಚ್ಚಲಮಗನನ್ನು ಸಾಯಿಸುವೆನೆಂದು ಯೆಹೋವನು ಹೇಳುತ್ತಾನೆ’” ಎಂದು ತಿಳಿಸಬೇಕು.


ಹೀಗೆ ನನ್ನ ಜನಕ್ಕೂ, ನಿನ್ನ ಜನಕ್ಕೂ ನಡುವೆ ವ್ಯತ್ಯಾಸವನ್ನುಂಟು ಮಾಡುವೆನು. ನಾಳೆಯೇ ಈ ಮಹತ್ಕಾರ್ಯ ಉಂಟಾಗುವುದು’ ಎಂದು ಹೇಳಬೇಕು” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು