Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 3:22 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ನಿಮ್ಮಲ್ಲಿನ ಪ್ರತಿಯೊಬ್ಬ ಸ್ತ್ರೀಯು ನೆರೆಹೊರೆಯ ಹೆಂಗಸರಿಂದಲೂ, ನಿಮ್ಮ ಮನೆಗಳ ಅತಿಥಿಗಳಾಗಿ ತಂಗಿರುವ ಹೆಂಗಸರಿಂದಲೂ ಬೆಳ್ಳಿ ಬಂಗಾರದ ಒಡವೆಗಳನ್ನೂ, ಬಟ್ಟೆಗಳನ್ನೂ ಕೇಳಿಕೊಳ್ಳಲಿ. ನೀವು ಅವುಗಳನ್ನು ನಿಮ್ಮ ಗಂಡು ಹೆಣ್ಣು ಮಕ್ಕಳಿಗೆ ತೊಡಿಸಿರಿ. ಹೀಗೆ ನೀವು ಐಗುಪ್ತ್ಯರನ್ನು ಸುಲಿಗೆ ಮಾಡಿಹೊರಟು ಬರುವಿರಿ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ನಿಮ್ಮ ಪ್ರತಿಯೊಬ್ಬ ಮಹಿಳೆ ನೆರೆಹೊರೆಯ ಮಹಿಳೆಯರಿಂದಲೂ ನಿಮ್ಮ ಮನೆಯಲ್ಲೇ ತಂಗಿರುವ ಮಹಿಳೆಯರಿಂದಲೂ ಬೆಳ್ಳಿಬಂಗಾರದ ಒಡವೆಗಳನ್ನು ಹಾಗು ಬಟ್ಟೆಬರೆಗಳನ್ನು ಕೇಳಿಕೊಳ್ಳಲಿ. ಅವುಗಳನ್ನು ನಿಮ್ಮ ಮಕ್ಕಳುಮರಿಗಳಿಗೆ ತೊಡಿಸಿರಿ. ಹೀಗೆ ಈಜಿಪ್ಟರನ್ನು ಸೂರೆಮಾಡಿ ಹೊರಡುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ನಿಮ್ಮಲ್ಲಿ ಪ್ರತಿ ಸ್ತ್ರೀಯು ನೆರೇ ಹೆಂಗಸರಿಂದಲೂ ನಿಮ್ಮ ಮನೆಯಲ್ಲಿ ಇಳುಕೊಂಡ ಹೆಂಗಸರಿಂದಲೂ ಬೆಳ್ಳಿ ಬಂಗಾರದ ಒಡವೆಗಳನ್ನೂ ಬಟ್ಟೆಗಳನ್ನೂ ಕೇಳಿಕೊಳ್ಳಲಿ. ನೀವು ಅವುಗಳನ್ನು ನಿಮ್ಮ ಗಂಡು ಹೆಣ್ಣು ಮಕ್ಕಳಿಗೆ ಇಡಿರಿ; ಇದರಿಂದ ಐಗುಪ್ತ್ಯರನ್ನು ಸೂರೆ ಮಾಡುವಿರಿ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 “ಪ್ರತಿಯೊಬ್ಬ ಇಬ್ರಿಯ ಸ್ತ್ರೀಯು ಈಜಿಪ್ಟಿನ ನೆರೆಯವರನ್ನಾಗಲಿ ಅಥವಾ ತನ್ನ ಮನೆಯಲ್ಲಿ ವಾಸಿಸುತ್ತಿರುವ ಯಾವುದೇ ಸ್ತ್ರೀಯನ್ನಾಗಲಿ ಕೇಳಿದರೆ ಅವರು ಆಕೆಗೆ ಉಡುಗೊರೆಗಳನ್ನು ಕೊಡುವರು. ನಿನ್ನ ಜನರು ಬೆಳ್ಳಿಬಂಗಾರಗಳನ್ನು, ಶ್ರೇಷ್ಠವಾದ ಬಟ್ಟೆಗಳನ್ನು ಪಡೆಯುವರು. ನೀವು ಈಜಿಪ್ಟನ್ನು ಬಿಡುವಾಗ ಆ ಉಡುಗೊರೆಗಳನ್ನು ನಿಮ್ಮ ಮಕ್ಕಳಿಗೆ ತೊಡಿಸುವಿರಿ. ಈ ರೀತಿಯಲ್ಲಿ ನೀವು ಈಜಿಪ್ಟಿನವರ ಐಶ್ವರ್ಯವನ್ನು ತೆಗೆದುಕೊಂಡು ಹೋಗುವಿರಿ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಆದರೆ ಪ್ರತಿ ಸ್ತ್ರೀಯು ತನ್ನ ಮನೆಯಲ್ಲಿ ಇಳಿದುಕೊಂಡಿರುವ ಸ್ತ್ರೀಯಿಂದಲೂ ನೆರೆಯವಳಿಂದಲೂ ಬೆಳ್ಳಿಬಂಗಾರದ ಒಡವೆಗಳನ್ನು ಮತ್ತು ವಸ್ತ್ರಗಳನ್ನು ಕೇಳಿಕೊಳ್ಳಲಿ. ಅವುಗಳನ್ನು ನಿಮ್ಮ ಪುತ್ರಪುತ್ರಿಯರ ಮೇಲೆ ಹಾಕಿರಿ. ಹೀಗೆ ನೀವು ಈಜಿಪ್ಟಿನವರನ್ನು ಸೂರೆಮಾಡುವಿರಿ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 3:22
9 ತಿಳಿವುಗಳ ಹೋಲಿಕೆ  

ಅದಕ್ಕಾಗಿ ಅವರು ಕಾಡಿನಿಂದ ಸೌದೆಯನ್ನು ತರಬೇಕಾಗುವುದಿಲ್ಲ, ವನದಲ್ಲಿ ಮರವನ್ನು ಕಡಿಯಬೇಕಾಗುವುದಿಲ್ಲ; ಆಯುಧಗಳನ್ನೇ ಸೌದೆಯನ್ನಾಗಿ ಉರಿಸುವರು; ತಮ್ಮನ್ನು ಸೂರೆಮಾಡಿದವರನ್ನು ತಾವು ಸೂರೆಮಾಡುವರು, ತಮ್ಮನ್ನು ಕೊಳ್ಳೆಹೊಡೆದವರನ್ನು ತಾವು ಕೊಳ್ಳೆಹೊಡೆಯುವರು” ಇದು ಕರ್ತನಾದ ಯೆಹೋವನ ನುಡಿ.


ಇಸ್ರಾಯೇಲರನ್ನು ಬೆಳ್ಳಿ, ಬಂಗಾರಗಳ ಸಹಿತವಾಗಿ ಹೊರಗೆ ಬರಮಾಡಿದನು; ಅವರ ಕುಲಗಳಲ್ಲಿ ಎಡವುವವನು ಒಬ್ಬನಾದರೂ ಇರಲಿಲ್ಲ.


ಆದುದರಿಂದ ಸ್ತ್ರೀಪುರುಷರೆಲ್ಲರೂ ತಮ್ಮ ತಮ್ಮ ನೆರೆಹೊರೆಯವರಿಂದ ಬೆಳ್ಳಿಬಂಗಾರದ ಒಡವೆಗಳನ್ನು ಕೇಳಿಕೊಳ್ಳಬೇಕೆಂಬುದಾಗಿ ಜನರಿಗೆ ಸ್ಪಷ್ಟವಾಗಿ ಹೇಳು” ಎಂದನು.


ಸೂರೆಯಾಗದಿದ್ದರೂ ಸೂರೆಮಾಡಿದಿ! ಬಾಧೆಪಡದಿದ್ದರೂ ಬಾಧಿಸಿದಿ! ನಿನ್ನ ಗತಿಯನ್ನು ಏನು ಹೇಳಲಿ; ನೀನು ಸೂರೆಮಾಡಿ ಬಿಟ್ಟ ಮೇಲೆ ನೀನೂ ಸೂರೆಯಾಗುವಿ. ಬಾಧಿಸಿ ಬಿಟ್ಟ ಮೇಲೆ ನಿನ್ನನ್ನೂ ಬಾಧಿಸುವರು.


ಒಳ್ಳೆಯವನ ಆಸ್ತಿ ಸಂತತಿಯವರಿಗೆ ಬಾಧ್ಯ, ಪಾಪಿಯ ಸೊತ್ತು ಸಜ್ಜನರಿಗೆ ಗಂಟು.


ಅವರನ್ನು ದಾಸರನ್ನಾಗಿ ಮಾಡಿಸಿಕೊಂಡ ಜನಾಂಗವನ್ನು ನಾನು ದಂಡಿಸಿದ ನಂತರ ಅವರು ಬಹಳ ಸಂಪತ್ತುಳ್ಳವರಾಗಿ ಆ ದೇಶದಿಂದ ಬಿಡುಗಡೆಯಾಗಿ ಹೊರಟು ಬರುವರು.


ಆ ಮೇಲೆ ತಾನು ತಂದಿದ್ದ ಬೆಳ್ಳಿ ಬಂಗಾರದ ಒಡವೆಗಳನ್ನೂ, ವಸ್ತ್ರಗಳನ್ನೂ ತೆಗೆದು ರೆಬೆಕ್ಕಳಿಗೆ ಕೊಟ್ಟನು. ಆಕೆಯ ಅಣ್ಣನಿಗೂ ತಾಯಿಗೂ ಸಹ ಬೆಲೆಯುಳ್ಳ ವಸ್ತುಗಳನ್ನು ಕೊಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು