Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 3:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಆಗ ಯೆಹೋವನು, “ಐಗುಪ್ತ ದೇಶದಲ್ಲಿರುವ ನನ್ನ ಜನರ ದುರವಸ್ಥೆಯನ್ನು ನಿಶ್ಚಯವಾಗಿ ನೋಡಿದ್ದೇನೆ. ಬಿಟ್ಟೀ ಕೆಲಸ ಮಾಡುವ ವಿಷಯದಲ್ಲಿ, ಅವರು ಇಟ್ಟ ಮೊರೆಯು ನನಗೆ ಕೇಳಿಸಿತು. ಅವರ ದುಃಖವನ್ನೆಲ್ಲಾ ನಾನು ಬಲ್ಲೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಆಗ ಸರ್ವೇಶ್ವರ, “ಈಜಿಪ್ಟಿನಲ್ಲಿರುವ ನನ್ನ ಜನರ ದುರವಸ್ಥೆಯನ್ನು ನಾನು ಕಣ್ಣಾರೆ ನೋಡಿದ್ದೇನೆ. ಬಿಟ್ಟೀ ಕೆಲಸ ಮಾಡಿಸಿಕೊಳ್ಳುವವರ ಬಗ್ಗೆ ಅವರು ಇಟ್ಟ ಮೊರೆ ನನಗೆ ಕೇಳಿಸಿದೆ. ಅವರ ಕಷ್ಟದುಃಖವನ್ನೆಲ್ಲಾ ನಾನು ಬಲ್ಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಆಗ ಯೆಹೋವನು - ಐಗುಪ್ತ ದೇಶದಲ್ಲಿರುವ ನನ್ನ ಜನರ ದುರವಸ್ಥೆಯನ್ನು ನೋಡೇ ನೋಡಿದ್ದೇನೆ. ಬಿಟ್ಟೀಮಾಡಿಸುವವರ ವಿಷಯದಲ್ಲಿ ಅವರು ಇಟ್ಟ ಮೊರೆಯು ನನಗೆ ಕೇಳಿಸಿತು; ಅವರ ದುಃಖವನ್ನೆಲ್ಲಾ ನಾನು ಬಲ್ಲೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಆಗ ಯೆಹೋವನು, “ನನ್ನ ಜನರು ಈಜಿಪ್ಟಿನಲ್ಲಿ ಅನುಭವಿಸುತ್ತಿರುವ ಕಷ್ಟಗಳನ್ನು ನೋಡಿದ್ದೇನೆ. ಅಧಿಕಾರಿಗಳು ಅವರನ್ನು ಹಿಂಸಿಸುವಾಗ ಅವರು ಇಟ್ಟ ಮೊರೆಯನ್ನು ಕೇಳಿದ್ದೇನೆ. ಅವರ ದುಃಖವನ್ನೆಲ್ಲಾ ಬಲ್ಲೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಆಗ ಯೆಹೋವ ದೇವರು, “ಈಜಿಪ್ಟಿನಲ್ಲಿರುವ ನನ್ನ ಜನರ ವ್ಯಥೆಯನ್ನು ವಾಸ್ತವವಾಗಿಯೂ ಕಂಡಿದ್ದೇನೆ. ಬಿಟ್ಟೀ ಮಾಡಿಸುವವರ ವಿಷಯದಲ್ಲಿ ಅವರು ಇಟ್ಟ ಮೊರೆಯು ನನಗೆ ಕೇಳಿಸಿತು. ಅವರ ದುಃಖವನ್ನು ಬಲ್ಲೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 3:7
31 ತಿಳಿವುಗಳ ಹೋಲಿಕೆ  

ತನ್ನಲ್ಲಿ ಭಯಭಕ್ತಿಯುಳ್ಳವರ ಇಷ್ಟವನ್ನು ನೆರವೇರಿಸುತ್ತಾನೆ, ಅವರ ಕೂಗನ್ನು ಕೇಳಿ ರಕ್ಷಿಸುತ್ತಾನೆ.


ಆದರೆ ಆತನು ಕಷ್ಟದಲ್ಲಿದ್ದ, ಅವರ ಮೊರೆಯನ್ನು ಕೇಳಿ ಪರಾಂಬರಿಸಿದನು.


ಕಷ್ಟದಲ್ಲಿದ್ದ ಈ ಮನುಷ್ಯನು ಮೊರೆಯಿಡಲು, ಯೆಹೋವನು ಕೇಳಿ ಎಲ್ಲಾ ಬಾಧೆಗಳಿಂದ ಬಿಡಿಸಿದನು.


ಐಗುಪ್ತ ದೇಶದಲ್ಲಿ ನಮ್ಮ ಪೂರ್ವಿಕರಿಗಿದ್ದ ಕಷ್ಟವನ್ನು ನೋಡಿ, ಕೆಂಪುಸಮುದ್ರದ ಬಳಿಯಲ್ಲಿ ಅವರು ಮೊರೆಯಿಟ್ಟಾಗ ನೀನು ಆಲಿಸಿದಿ.


ನೀವು ಇಂಥವರನ್ನು ತೊಂದರೆಪಡಿಸಿದರೆ ಅವರು ನನಗೆ ಮೊರೆಯಿಡುವರು ಆ ಮೊರೆಗೆ ನಾನು ಕಿವಿಗೊಡುವೆನೆಂದು ತಿಳಿದುಕೊಳ್ಳಿರಿ.


ಅವರು ಶ್ರಮೆಪಡುತ್ತಿರುವಾಗೆಲ್ಲಾ ಆತನೂ ಶ್ರಮೆಪಟ್ಟನು; ಆತನ ಸಮ್ಮುಖದ ದೂತನು ಅವರನ್ನು ರಕ್ಷಿಸಿದನು; ತನ್ನಲ್ಲಿನ ಮಮತೆಯಿಂದಲೂ ತಾಳ್ಮೆಯಿಂದಲೂ ಅವರನ್ನು ವಿಮೋಚಿಸಿ, ಪುರಾತನ ಕಾಲದಲ್ಲೆಲ್ಲಾ ಎತ್ತಿಕೊಂಡು ಹೊರುತ್ತಾ ಬಂದನು.


ನಾನು ಯೆಹೋವನ ಸನ್ನಿಧಿಯಲ್ಲಿ ಬೇಡಿಕೊಳ್ಳಲು, ಆತನು ಸದುತ್ತರವನ್ನು ಕೊಟ್ಟು ಎಲ್ಲಾ ಭೀತಿಯಿಂದ ನನ್ನನ್ನು ತಪ್ಪಿಸಿದನು.


ಅವರನ್ನು ಬಿಟ್ಟೀ ಕೆಲಸಗಳಿಂದ ಪೀಡಿಸುವುದಕ್ಕಾಗಿ, ಬಿಟ್ಟೀಕೆಲಸ ಮಾಡಿಸುವ ಅಧಿಕಾರಿಗಳನ್ನು ಅವರ ಮೇಲೆ ಇರಿಸಿದನು. ಅವರು ಫರೋಹನನಿಗೆ ಪಿತೋಮ್ ಮತ್ತು ರಾಮ್ಸೇಸ್ ಎಂಬ ಉಗ್ರಾಣ ಪಟ್ಟಣಗಳನ್ನು ಕಟ್ಟಿಸಿದನು.


ಲೇಯಳು ಗರ್ಭಿಣಿಯಾಗಿ ಗಂಡು ಮಗುವನ್ನು ಹೆತ್ತು, “ಯೆಹೋವನು ನನ್ನ ವ್ಯಥೆಯನ್ನು ನೋಡಿದ್ದಾನೆ, ಇನ್ನು ಮುಂದೆ ನನ್ನ ಗಂಡನು ನನ್ನನ್ನು ಪ್ರೀತಿಸುವನು ಎಂದು ಹೇಳಿ ಅದಕ್ಕೆ ‘ರೂಬೇನ್ ಎಂದು’ ಹೆಸರಿಟ್ಟಳು.”


ಆತನು ಕುಗ್ಗಿಹೋದವನ ದುರವಸ್ಥೆಯನ್ನು ತಿರಸ್ಕರಿಸಲಿಲ್ಲ, ಅದಕ್ಕೆ ಅಸಹ್ಯಪಡಲಿಲ್ಲ; ತನ್ನ ಮುಖವನ್ನು ಅವನಿಗೆ ಮರೆಮಾಡದೆ, ಅವನ ಪ್ರಾರ್ಥನೆಗೆ ಕಿವಿಗೊಟ್ಟನು.


“ನಾಳೆ ಇಷ್ಟು ಹೊತ್ತಿಗೆ ಬೆನ್ಯಾಮೀನ್ ದೇಶದ ಒಬ್ಬನನ್ನು ನಿನ್ನ ಬಳಿಗೆ ಬರಮಾಡುವೆನು. ನೀನು ಅವನನ್ನು ಇಸ್ರಾಯೇಲರ ನಾಯಕನನ್ನಾಗಿ ಅಭಿಷೇಕಿಸಬೇಕು. ಅವನು ನನ್ನ ಜನರನ್ನು ಫಿಲಿಷ್ಟಿಯರ ಕೈಯಿಂದ ಬಿಡಿಸಿ ಕಾಪಾಡುವನು. ಅವರ ಕೂಗು ನನಗೆ ಮುಟ್ಟಿತು; ಅವರನ್ನು ಕಟಾಕ್ಷಿಸಿದ್ದೇನೆ” ಎಂದು ತಿಳಿಸಿದ್ದನು.


ಏಕೆಂದರೆ ನಮಗಿರುವ ಮಹಾಯಾಜಕನು ನಮ್ಮ ಬಲಹೀನತೆಗಳಲ್ಲಿ ಅನುಕಂಪ ತೋರಿಸುವವನಾಗಿದ್ದಾನೆ. ಆತನು ಸರ್ವ ವಿಷಯಗಳಲ್ಲಿಯೂ ನಮ್ಮ ಹಾಗೆ ಶೋಧನೆಗೆ ಗುರಿಯಾದವನು, ಪಾಪ ಮಾತ್ರ ಮಾಡಲಿಲ್ಲವಷ್ಟೇ.


ನನ್ನ ಆತ್ಮವು ಕುಂದಿಹೋದಾಗ, ನೀನು ನನ್ನ ಮಾರ್ಗವನ್ನು ಬಲ್ಲವನಾಗಿರುತ್ತಿ, ನಾನು ಹೋಗಬೇಕಾದ ದಾರಿಯಲ್ಲಿ ಅವರು ಉರುಲನ್ನೊಡ್ಡಿದ್ದಾರೆ.


ನಾನು ಇಳಿದು ಹೋಗಿ, ನನಗೆ ಮುಟ್ಟಿದ ಮೊರೆಯಂತೆಯೇ ಅವರು ಮಾಡಿರುವರೋ ಇಲ್ಲವೋ ಎಂದು ನೋಡಿ ತಿಳಿದುಕೊಳ್ಳುತ್ತೇನೆ” ಎಂದನು.


ಐಗುಪ್ತದೇಶದಲ್ಲಿರುವ ನನ್ನ ಜನರ ದುರವಸ್ಥೆಯನ್ನು ನೋಡೇ ನೋಡಿದ್ದೇನೆ; ಅವರ ಮೊರೆಯನ್ನು ಕೇಳಿ ಅವರನ್ನು ಬಿಡಿಸುವುದಕ್ಕೆ ಇಳಿದುಬಂದಿದ್ದೇನೆ; ಈಗ ನಿನ್ನನ್ನು ಐಗುಪ್ತದೇಶಕ್ಕೆ ಕಳುಹಿಸುತ್ತೇನೆ, ಬಾ’ ಎಂದು ಹೇಳಿದನು.


ಯೆಹೋವನ ದೂತನು ಅವಳಿಗೆ, “ನೀನು ಗರ್ಭಿಣಿಯಾಗಿದಿಯಾ; ನಿನಗೆ ಮಗನು ಹುಟ್ಟುವನು; ಯೆಹೋವನು ನಿನ್ನ ಕಷ್ಟದ ಕೂಗಿಗೆ ಕಿವಿಗೊಟ್ಟಿದ್ದರಿಂದ ಆ ಮಗನಿಗೆ ಇಷ್ಮಾಯೇಲ್ ಎಂದು ಹೆಸರಿಡಬೇಕು.


ಆ ಹುಡುಗನ ಮೊರೆಯು ದೇವರಿಗೆ ಕೇಳಿಸಿತು; ದೇವದೂತನು ಆಕಾಶದಿಂದ ಹಾಗರಳನ್ನು ಕರೆದು ಆಕೆಗೆ, “ಹಾಗರಳೇ, ನಿನಗೇನಾಯಿತು? ಹೆದರಬೇಡ; ಆ ಹುಡುಗನ ಕೂಗು ದೇವರಿಗೆ ಕೇಳಿಸಿತು;


ಆತನು ನನಗೆ, ‘ಲಾಬಾನನು ನಿನ್ನ ವಿಷಯದಲ್ಲಿ ನಡೆದುಕೊಂಡ ರೀತಿಯನ್ನು ನಾನು ನೋಡಿದ್ದೇನೆ, ಆದುದರಿಂದ ನೀನು ಕಣ್ಣೆತ್ತಿ ಕುರಿಗಳೊಂದಿಗೆ ಸಂಗಮಿಸುವ ಆಡುಗಳನ್ನು ನೋಡು. ರೇಖೆಯೂ, ಚುಕ್ಕೆಯೂ, ಮಚ್ಚೆಯೂ ಉಳ್ಳವುಗಳಾಗಿವೆ.


ನನ್ನ ತಂದೆಯ ದೇವರೂ, ಅಬ್ರಹಾಮನ ದೇವರೂ, ಇಸಾಕನು ಭಯಭಕ್ತಿಯಿಂದ ಸೇವಿಸಿದ ದೇವರು ನನ್ನೊಂದಿಗೆ ಇಲ್ಲದೆ ಹೋಗಿದ್ದರೆ, ನಿಶ್ಚಯವಾಗಿ ನೀನು ನನ್ನನ್ನು ಬರಿಗೈಯಿಂದ ಕಳುಹಿಸಿಬಿಡುತ್ತಿದ್ದೆ, ದೇವರು ನನ್ನ ಕಷ್ಟವನ್ನೂ ನಾನು ಪಟ್ಟ ಪ್ರಯಾಸ ಗೊತ್ತಿದ್ದರಿಂದಲೇ ನಿನ್ನೆಯ ರಾತ್ರಿ ನಿನ್ನನ್ನು ಗದರಿಸಿದನು” ಎಂದನು.


ಆ ದಿನದಲ್ಲಿ ಫರೋಹನು ಬಿಟ್ಟೀಮಾಡಿಸುವವರನ್ನು ಮತ್ತು ಅವರ ಅಧಿಕಾರಿಗಳನ್ನು ಕರೆಯಿಸಿ,


ಆಗ ಬಿಟ್ಟೀಕೆಲಸವನ್ನು ಮಾಡಿಸುವವರೂ ಮತ್ತು ಅಧಿಕಾರಿಗಳೂ ಹೊರಗೆ ಹೋಗಿ ಆ ಜನರಿಗೆ, “ನಿಮಗೆ ಹುಲ್ಲನ್ನು ಕೊಡಬಾರದೆಂದು ಫರೋಹನ ಅಪ್ಪಣೆಯಾಗಿದೆ.


ನನ್ನ ಮೇಲೆ ದಯೆಯಿರುವುದಾದರೆ ನಿನ್ನ ಮಾರ್ಗವನ್ನು ನನಗೆ ತೋರಿಸು ನಾನು ನಿನ್ನನ್ನು ಅರಿತುಕೊಳ್ಳುವಂತೆ ನಿನ್ನ ಕೃಪೆಯನ್ನು ನನಗೆ ದಯಪಾಲಿಸು ಆಗ ನಿನ್ನ ದಯೆ ನನಗೆ ದೊರೆಯಿತೆಂದು ನನಗೆ ತಿಳಿಯುವುದು. ಈ ಜನಾಂಗವು ನಿನ್ನ ಪ್ರಜೆಯೆಂಬುದನ್ನು ನೆನಪುಮಾಡಿಕೋ” ಎಂದು ಅರಿಕೆಮಾಡಿದನು.


ನಾವು ಯೆಹೋವನಿಗೆ ಮೊರೆಯಿಡಲಾಗಿ, ಆತನು ನಮ್ಮ ಪ್ರಾರ್ಥನೆಯನ್ನು ಕೇಳಿ ದೂತನನ್ನು ಕಳುಹಿಸಿ, ನಮ್ಮನ್ನು ಐಗುಪ್ತ ದೇಶದಿಂದ ಬಿಡುಗಡೆಮಾಡಿದನು. ಈಗ ನಾವು ನಮ್ಮ ರಾಜ್ಯದ ಗಡಿಯಲ್ಲಿರುವ ಕಾದೇಶ್ ಎಂಬ ಊರಿನಲ್ಲಿದ್ದೇವೆ.


ದೀನರನ್ನು ಉದ್ಧರಿಸುತ್ತಿ. ಹಮ್ಮಿನವರನ್ನು ಕಂಡುಹಿಡಿದು ತಗ್ಗಿಸಿಬಿಡುತ್ತಿ.


ಯೆಹೋವಾಹಾಜನು ಯೆಹೋವನಿಗೆ ಮೊರೆಯಿಟ್ಟನು. ಯೆಹೋವನು ಅವನ ಮೊರೆಯನ್ನು ಲಾಲಿಸಿದನು.ಅಲ್ಲದೆ ಅವರು ಅರಾಮ್ಯರ ಅರಸನಿಂದ ಬಹಳವಾಗಿ ಬಾಧಿಸಲ್ಪಟ್ಟರುವುದನ್ನು ನೋಡಿ,


ಯೆಹೋವನೇ, ನೀನೇ ನೋಡಿದಿಯಲ್ಲವೇ; ಸುಮ್ಮನಿರಬೇಡ; ನನ್ನ ಒಡೆಯನೇ, ನನ್ನಿಂದ ದೂರವಾಗಿರುವುದೇಕೆ?


ತರುವಾಯ ಯೋಸೇಫನನ್ನು ಅರಿಯದ ಹೊಸ ಅರಸನು ಐಗುಪ್ತದೇಶದ ಆಳ್ವಿಕೆಗೆ ಬಂದನು.


“ನೀನು ಹಿಂದಿರುಗಿ ಹೋಗಿ, ನನ್ನ ಜನಗಳ ಪ್ರಭುವಾಗಿರುವ ಹಿಜ್ಕೀಯನಿಗೆ, ‘ನಿನ್ನ ಪಿತೃವಾದ ದಾವೀದನ ದೇವರಾದ ಯೆಹೋವನು ಹೇಳಿದ್ದೇನೆಂದರೆ, ನಾನು ನಿನ್ನ ಪ್ರಾರ್ಥನೆಯನ್ನು ಕೇಳಿದ್ದೇನೆ, ನಿನ್ನ ಕಣ್ಣೀರನ್ನು ನೋಡಿದ್ದೇನೆ. ನೀನು ಗುಣಹೊಂದಿ ಮೂರನೆಯ ದಿನ ನನ್ನ ಆಲಯಕ್ಕೆ ಬರುವೆ.


ಆಗ ನಾನು ನಿನ್ನ ಸ್ತೋತ್ರವನ್ನು ಪ್ರಸಿದ್ಧಪಡಿಸುವೆನು; ನಿನ್ನಿಂದಾದ ರಕ್ಷಣೆಗಾಗಿ ಚೀಯೋನೆಂಬ ಕುಮಾರಿಯ ಬಾಗಿಲುಗಳಲ್ಲಿ ಹರ್ಷಿಸುವೆನು.


ಯೆಹೋವನ ಮಾತುಗಳು ಯಥಾರ್ಥವಾದವುಗಳೇ; ಅವು ಏಳು ಸಾರಿ ಪುಟಕ್ಕೆ ಹಾಕಿದ ಚೊಕ್ಕ ಬೆಳ್ಳಿಯೋಪಾದಿಯಲ್ಲಿವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು